ಹೆದ್ದಾರಿ ಬಳಿಯ ಅನಧಿಕೃತ ಕಟ್ಟಡ ತೆರವು

ಬೆಳ್ಳಂಬೆಳಗ್ಗೆ ಹಿರೇಕೆರೆ ವೃತ್ತದಲ್ಲಿ ಜೆಸಿಬಿ ರೌದ್ರನರ್ತನ 29ಕ್ಕೂ ಹೆಚ್ಚು ಕಟ್ಟಡ-ಶೆಡ್‌ಗಳು ನೆಲಸಮ

Team Udayavani, May 29, 2020, 1:13 PM IST

29-May-10

ಹರಪನಹಳ್ಳಿ: ಪಟ್ಟಣದ ಹಿರೇಕೆರೆ ವೃತ್ತದಲ್ಲಿ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಲಾಯಿತು

ಹರಪನಹಳ್ಳಿ: ಹೊಸಪೇಟೆ-ಶಿವಮೊಗ್ಗ ರಾಜ್ಯ ಹೆದ್ದಾರಿ ಹಿರೇಕೆರೆ ವೃತ್ತದ ಬಳಿ ಗುರುವಾರ ಬೆಳಂಬೆಳಿಗ್ಗೆ ಜೆಸಿಬಿ ಯಂತ್ರಗಳ ರೌದ್ರನರ್ತನ ಮೊಳಗಿದ್ದು, ರಸ್ತೆ ಬದಿಯಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ ಕಟ್ಟಡಗಳು ಹಾಗೂ ಶೆಡ್‌ಗಳನ್ನು ತೆರವುಗೊಳಿಸಲಾಯಿತು.

ಲೊಕೋಪಯೋಗಿ ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ನಿರ್ದೇಶನದಂತೆ ಗುರುವಾರ ಬೆಳಗ್ಗೆ 5 ಗಂಟೆ ಸಮಯದಲ್ಲಿ ಜನರು ಸಿಹಿ ನಿದ್ರೆಯಲ್ಲಿರುವಾಗಲೇ ಪುರಸಭೆ ವತಿಯಿಂದ ಕಾರ್ಯಚರಣೆ ಶುರುವಾಗಿದ್ದು, ರಸ್ತೆಗೆ ಹೊಂದಿಕೊಂಡಂತೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಮಾರ್ಬಲ್‌, ಗ್ಯಾರೇಜ್‌, ಟೀ ಅಂಗಡಿ, ಆಟೋಮೊಬೈಲ್‌ ಅಂಗಡಿ, ಗೂಡಂಗಡಿ ಸೇರಿದಂತೆ 29ಕ್ಕೂ ಹೆಚ್ಚು ಕಟ್ಟಡ-ಶೆಡ್‌ಗಳನ್ನು ಮೂರು ಜೆಸಿಬಿ ಯಂತ್ರಗಳು ಧರೆಗುರುಳಿಸಿದವು.

ಲೊಕೋಪಯೋಗಿ ಇಲಾಖೆ ವತಿಯಿಂದ 2.5 ಕೋಟಿ ರೂ. ವೆಚ್ಚದಲ್ಲಿ ನಡೆಯುತ್ತಿರುವ ಹೊಸಪೇಟೆ-ಶಿವಮೊಗ್ಗ ರಾಜ್ಯ ಹೆದ್ದಾರಿಯ ರಸ್ತೆ ಅಗಲೀಕರಣ ಕಾಮಗಾರಿಗೆ ಅಪಘಾತ ವಲಯವೆಂದು ಗುರುತಿಸಿರುವ ಪ್ರದೇಶದಲ್ಲಿ ಬರುವ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸುವಂತೆ ಪುರಸಭೆ ಅಧಿಕಾರಿಗಳಿಗೆ ಲೊಕೋಪಯೋಗಿ ಇಲಾಖೆ ಅಧಿಕಾರಿಗಳು ವಿನಂತಿಸಿಕೊಂಡಿದ್ದರು. ಹೀಗಾಗಿ ಹಿರೇಕೆರೆ ವೃತ್ತದ ಸುತ್ತಮುತ್ತಲಿನ ರಸ್ತೆಯ ಇಕ್ಕೆಲದಲ್ಲಿರುವ ಅನಧಿಕೃತ ಕಟ್ಟಡ ಹಾಗೂ ಶೆಡ್‌ಗಳನ್ನು ಪುರಸಭೆ ಆಡಳಿತಾಧಿಕಾರಿ, ಉಪವಿಭಾಗಾಧಿಕಾರಿ ವಿ.ಕೆ. ಪ್ರಸನ್ನಕುಮಾರ್‌ ನಿರ್ದೇಶನದಂತೆ ತೆರವು ಕಾರ್ಯಚರಣೆ ನಡೆಸಲಾಗಿದೆ.

ಪಟ್ಟಣದ ಹೊಸಪೇಟೆಯಿಂದ ಶಿವಮೊಗ್ಗ ರಾಜ್ಯ ಹೆದ್ದಾರಿ 25ರ ರಸ್ತೆ ಸರಪಳಿ 77.8ರಿಂದ 79.00ರವರೆಗೆ ಹಾದು ಹೋಗುವ ಪ್ರದೇಶ ಅಪಘಾತ ವಲಯವೆಂದು ಗುರುತಿಸಲಾಗಿದ್ದು, ಈ ರಸ್ತೆ ಮಧ್ಯ ಭಾಗದಿಂದ 21.5 ಮೀಟರ್‌ನ ವಿಸ್ತೀರ್ಣದಲ್ಲಿ ರಸ್ತೆಗಳಿರಬೇಕು. ಆದರೆ ಹಿರೇಕೆರೆ ವೃತ್ತದಲ್ಲಿ ರಸ್ತೆಗೆ ಹೊಂದಿಕೊಂಡಂತೆ ಕಟ್ಟಡ ಹಾಗೂ ಶೆಡ್‌ಗಳ ಹಾಕಿಕೊಳ್ಳಲಾಗಿತ್ತು. ಮಾಲೀಕರಿಗೆ ತೆರವುಗೊಳಿಸುವಂತೆ ಅನೇಕ ಭಾರಿ ಮೌಖೀಕವಾಗಿ ತಿಳಿಸಿದ್ದರೂ ಸಹ ತೆರವುಗೊಳಿಸದ ಹಿನ್ನೆಲೆ ಪೊಲೀಸ್‌ ಇಲಾಖೆ ಸಹಯೋಗದೊಂದಿಗೆ ತೆರವುಗೊಳಿಸಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಬಿ.ಆರ್‌. ನಾಗರಾಜ ನಾಯ್ಕ ತಿಳಿಸಿದರು.

ತೆರವು ಕಾರ್ಯಾಚರಣೆ ಮಾಹಿತಿ ಪಡೆದುಕೊಂಡಿದ್ದ ಅಂಗಡಿಗಳ ಮಾಲೀಕರು ಸ್ವಯಂ ಆಗಿ ಸಾಮಗ್ರಿಗಳನ್ನು ತೆಗೆದುಕೊಂಡಿದ್ದರು. ಕಣ್ಣೇದುರಲ್ಲಿಯೇ ಕಟ್ಟಡಗಳು ನೆಲಸಮವಾದರೂ ಯಾರು ವಿರೋಧ ವ್ಯಕ್ತಪಡಿಸಲಿಲ್ಲ. ರಸ್ತೆ ಬದಿಯಲ್ಲಿದ್ದ ಕೆಲವೊಂದು ಮರಗಳನ್ನು ಧರೆಗುರುಳಿಸಲಾಯಿತು. ಡಿವೈಎಸ್ಪಿ ಮಲ್ಲೇಶ್‌ ದೊಡ್ಮನಿ, ಸಿಪಿಐ ಕೆ.ಕುಮಾರ್‌, ಪಿಎಸ್‌ಐ ಸಿ. ಪ್ರಕಾಶ್‌ ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದರು. ಪೊಲೀಸ್‌ ಹಾಗೂ ಗೃಹರಕ್ಷಕ ದಳ ತಂಡ ಒಳಗೊಂಡು ಪೊಲೀಸ್‌ ಸರ್ಪಗಾವಲು ಹಾಕಲಾಗಿತ್ತು. ಬೆಸ್ಕಾಂ ಇಲಾಖೆಯ ಎಇಇ ಎಸ್‌. ಭೀಮಪ್ಪ, ಎಇ ಕೆ.ಮಾರುತೇಶ್‌, ಇಂಜಿನಿಯರ್‌ ಕುಬೇಂದ್ರನಾಯ್ಕ, ಪುರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಪಿ. ಮಂಜುನಾಥ್‌, ಸಮುದಾಯ ಸಂಘಟನಾಧಿಕಾರಿ ಸಿ. ಲೋಕ್ಯಾನಾಯ್ಕ ಸೇರಿದಂತೆ ಪೌರಕಾರ್ಮಿಕ ಸಿಬ್ಬಂದಿ ಹಾಜರಿದ್ದರು.

ಟಾಪ್ ನ್ಯೂಸ್

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

Untitled-1

ಕನ್ನಡದಲ್ಲೇ ಸಹಿ ಮಾಡುವ ಅಭ್ಯಾಸ ಬೆಳೆಸಿ ಕೊಳ್ಳೋಣ: ಸಚಿವ ಸುನಿಲ್‌ ಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ballari news

ನಾಲ್ಕು ದಿನಗಳ ಆಮರಣಾಂತ ಸತ್ಯಾಗ್ರಹ ಅಂತ್ಯ

23-bly-1

ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ಒತ್ತಾಯ: ನಾಲ್ಕು ದಿನಗಳ ಆಮರಣಾಂತ ಸತ್ಯಾಗ್ರಹ ಅಂತ್ಯ

12m

ಡಿಸಿ ಕಚೇರಿ ಎದುರು 3ನೇ ದಿನ ಮುಂದುವರಿದ ಸತ್ಯಾಗ್ರಹ

ಹೊಸಪೇಟೆ: ಸೀರೆ ಖರೀದಿ ನೆಪದಲ್ಲಿ ಮನೆಗೆ ನುಗ್ಗಿ ವೃದ್ಧೆ ಕೊಲೆಗೈದು ಪರಾರಿಯಾದ ದರೋಡೆಕೋರರು.!

ಹೊಸಪೇಟೆ: ಸೀರೆ ಖರೀದಿ ನೆಪದಲ್ಲಿ ಮನೆಗೆ ನುಗ್ಗಿ ವೃದ್ಧೆ ಕೊಲೆಗೈದು ಪರಾರಿಯಾದ ದರೋಡೆಕೋರರು.!

hampi news

ಹಂಪಿ ಸ್ಮಾರಕಕ್ಕೆ ಬೆಳಕಿನ ಚಿತ್ತಾರ

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.