ಬಿಎಸ್‌ವೈ ಕೊಟ್ಟ ಮಾತು ಹುಸಿಯಾಗದಿರಲಿ

ಸಮಾಜಕ್ಕೆ  ಬಸವಣ್ಣನ ಶಾಂತಿ-ಚನ್ನಮ್ಮಳ ಹೋರಾಟ ಎರಡೂ ಗೊತ್ತು

Team Udayavani, Jan 22, 2021, 5:48 PM IST

Hosapete Ballary

ಹೊಸಪೇಟೆ: ಪಂಚಮಸಾಲಿ ಸಮಾಜಕ್ಕೆ 2ಎಮೀಸಲಾತಿ ಸೌಲಭ್ಯ ಕಲ್ಪಿಸುವ ವಿಚಾರದಲ್ಲಿ ಸಿಎಂ ಯಡಿಯೂರಪ್ಪ ಅವರು ಮಠಾಧಿಧೀಶರಿಗೆ ನೀಡಿರುವ ಭರವಸೆ ಹುಸಿಗೊಳಿಸಬಾರದು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ನಗರದ ಹೊರವಲಯದಲ್ಲಿರುವ ಗುಂಡಾ ಸಸ್ಯೋದ್ಯಾನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೆ ಮಾಜಿ ಸಿಎಂ ಕುಮಾರಸ್ವಾಮಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಒದಗಿಸುವ ಭರವಸೆ ನೀಡಿ ವಚನಭ್ರಷ್ಟ ಆರೋಪ ಹೊತ್ತುಕೊಂಡರು. ಅದೇ ರೀತಿ ಯಡಿಯೂರಪ್ಪ ಕೊಟ್ಟ ಮಾತನ್ನು ಮೀರಬಾರದು. ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಒದಗಿಸಬೇಕು. ಲಿಂಗಾಯತರ ಪ್ರಥಮ ಪಾದಯಾತ್ರೆ ಇದಾಗಿದ್ದು, ಈ ಪಾದಯಾತ್ರೆ ಲಿಂಗಾಯತರ ಒಳಿತಿಗಾಗಿ, ಮಕ್ಕಳ ಶೈಕ್ಷಣಿಕ ಏಳ್ಗೆಗಾಗಿ ಮಾಡಲಾಗುತ್ತಿದೆ. 26 ವರ್ಷಗಳಿಂದ ಶಾಂತಿ, ಸಹನೆಯಿಂದಮೀಸಲಾತಿಗಾಗಿ ಮನವಿ ನೀಡುತ್ತಿದ್ದೇವೆ. ಇದಕ್ಕೆ ಯಾವುದೇ ಸ್ಪಂದನೆ ಸಿಕ್ಕಿಲ್ಲ. ನಮಗೆ ಬಸವಣ್ಣರ ಶಾಂತಿ ಹಾಗೂ ಚನ್ನಮ್ಮರಂತೆ ಹೋರಾಡುವುದು ಗೊತ್ತು. ವಿಧಾನಸೌಧದ ಕಡೆಗೆ ಪಾದಯಾತ್ರೆ ಹೊರಟಿದ್ದು, ಸರ್ಕಾರ ಕೂಡಲೇ ತನ್ನ ನಿಲುವು ಪ್ರಕಟಿಸಬೇಕು ಎಂದರು. ಸರ್ಕಾರ ಮೀಸಲಾತಿ ಹೋರಾಟವನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಸಂಪುಟ ರಚನೆಯಲ್ಲೇ ಕಾಲ ಕಳೆಯಲಾಗುತ್ತಿದೆ. ಈ ಕೂಡಲೇ ವರದಿ ತರಿಸಿಕೊಂಡು ಪರಿಶೀಲಿಸಿ ಕಲ್ಯಾಣ ಕರ್ನಾಟಕದ ಗಡಿ ಭಾಗವಾದ ಹರಪನಹಳ್ಳಿಯಲ್ಲಿ ಪಾದಯಾತ್ರೆ ಮುಗಿಸುವುದರೊಳಗೆ ಮುಖ್ಯಮಂತ್ರಿಗಳು ನಮಗೆ ಸಿಹಿ ಸುದ್ದಿ ನೀಡಬೇಕು. ಪಂಚಮಸಾಲಿ ಸಮಾಜದ 15 ಶಾಸಕರು ಸದ್ಯ ಬಿಜೆಪಿಯಲ್ಲಿದ್ದಾರೆ. ಉತ್ತರ ಕರ್ನಾಟದಲ್ಲಿ ಬಿಜೆಪಿ ಪ್ರಬಲವಾಗಲು ಪಂಚಮಸಾಲಿ ಸಮುದಾಯವೇ ಕಾರಣ. ಯಡಿಯೂರಪ್ಪನವರು ನಂಬಿಕೆ ಉಳಿಸಿಕೊಳ್ಳಬೇಕು. ಈ ಹಿಂದೆ ಕುಮಾರಸ್ವಾಮಿ ಅವರು ಕೊಟ್ಟ ಮಾತಿಗೆ ವಿರುದ್ಧವಾಗಿ ನಡೆದುಕೊಂಡು ಅಧಿ ಕಾರ ಕಳೆದುಕೊಂಡರೋ ಹಾಗೇ ಯಡಿಯೂರಪ್ಪನವರ ವಿಷಯದಲ್ಲಿ ಆಗಬಾರದು ಎಂದು ಎಚ್ಚರಿಸಿದರು.

ಇದನ್ನೂ ಓದಿ : ಯಶವಂತಪುರ ರೈಲುಗಾಡಿ ದಾವಣಗೆರೆಗೂ ಓಡಿಸಲಿ

ಬಹಿರಂಗ ಸಭೆ: ಜ.29ರಂದು ಪಂಚಮಸಾಲಿ ಸಮಾಜದ ವತಿಯಿಂದ ಹರಿಹರದಲ್ಲಿ ಬೃಹತ್‌ ಸಭೆ ಹಮ್ಮಿಕೊಳ್ಳಲಾಗಿದೆ. ಬೆಳಗಾವಿ, ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಜನ ಸಾಗರೋಪಾದಿಯಲ್ಲಿ ಬರಲಿದ್ದಾರೆ.ವಚನಾನಂದ ಶ್ರೀಗಳು ಭಾಗವಹಿಸಿದರೆ ಸ್ವಾಗತಿಸಲಾಗುವುದು. ಸಮಾಜದ ಶಾಸಕರು, ಸಚಿವರು ಭಾಗವಹಿಸಲಿದ್ದಾರೆ ಎಂದುಶ್ರೀಗಳು ಹೇಳಿದರು.

ಮಾಜಿ ಶಾಸಕ ಹಾಗೂ ಪಂಚಮಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಮಾತನಾಡಿ, ಕೂಡಲಸಂಗಮದಿಂದ ಹೊಸಪೇಟೆಯವರೆಗೂ 206 ಕಿಮೀ ಕ್ರಮಿಸಲಾಗಿದೆ. ಸಮಾಜದ ಶಾಸಕರು ತಮ್ಮ ನಿಲುವನ್ನು ಪ್ರಕಟಿಸಬೇಕು. ಸರ್ಕಾರ ಈ ಹೋರಾಟವನ್ನು ಕಡೆಗಣಿಸಬಾರದು. ಈಗಾಗಲೇ ಹರಿಹರ ಪೀಠದ ಭಕ್ತರು ಕೂಡ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಸಮಾಜದ ಹೋರಾಟದಲ್ಲಿ ಎಲ್ಲರೂ ಪಾಲ್ಗೊಳ್ಳಲಿದ್ದಾರೆ ಎಂದರು. ಮೀಸಲಾತಿಗಾಗಿ ಹಲವು ಹೋರಾಟ ಮಾಡಲಾಗಿದೆ. ಇದು ಮಾಡು ಇಲ್ಲವೇ ಮಡಿ ಎಂಬಂತೆ ಕೊನೆಯ ಪಾದಯಾತ್ರೆ ಆಗಿದೆ. ಮಹಿಳೆಯರು, ಮಕ್ಕಳು ಸಹ ಪಾದಯಾತ್ರೆಯಲ್ಲಿಭಾಗವಹಿಸಿ ಬೆಂಬಲ ನೀಡುತ್ತಿದ್ದಾರೆ. ಸಮಾಜದ ಸ್ವಾಮೀಜಿಗೆ ಏನಾದರೂ ತೊಂದರೆ ಉಂಟಾದರೆ ಮುಖ್ಯಮಂತ್ರಿಗಳೇ ನೇರ ಹೊಣೆಯಾಗುತ್ತಾರೆ ಎಂದು ಎಚ್ಚರಿಸಿದರು. ಮುಖಂಡರಾದ ಅಮರೇಶ್‌ ಕರಡಿ, ಗುಳಗಿ ವೀರೇಂದ್ರ, ಯುವರಾಜ್‌ ಇಂಡಿ, ಮಹಾಬಲೇಶ್ವರ ರೆಡ್ಡಿ, ಶಿವಾನಂದ, ರವಿ ಬಿಡ್ಡಪ್ಪ ಮತ್ತಿತರರಿದ್ದರು.

ಇದನ್ನೂ ಓದಿ : ರಾಜ್ಯದಲ್ಲಿ ಈವರೆಗೆ 1.38 ಲಕ್ಷ ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ: ಡಾ.ಕೆ.ಸುಧಾಕರ್

ಟಾಪ್ ನ್ಯೂಸ್

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.