ಹೊಸಪೇಟೆ: ಹಂಪಿಯಲ್ಲಿ ಜಿ20 ಶೃಂಗಸಭೆ- ಅಧಿಕಾರಿಗಳ ಸಭೆ

ಜಿಲ್ಲಾಡಳಿತದ ಸಹಕಾರದೊಂದಿಗೆ ಸಭೆ ಆಯೋಜನೆಗೊಳ್ಳುತ್ತಿದೆ

Team Udayavani, Jul 3, 2023, 6:26 PM IST

ಹೊಸಪೇಟೆ: ಹಂಪಿಯಲ್ಲಿ ಜಿ20 ಶೃಂಗಸಭೆ- ಅಧಿಕಾರಿಗಳ ಸಭೆ

ಹೊಸಪೇಟೆ: ಜಿ.20 ಶೃಂಗಸಭೆಗೆ ಈ ಬಾರಿ ಅಧ್ಯಕ್ಷೀಯ ರಾಷ್ಟ್ರ ಭಾರತವಾಗಿದ್ದು,ಅತೀ ಮುಖ್ಯವಾದ ಜಿ20 ಶೃಂಗಸಭೆಯ
ಮೂರನೇ ಪ್ರಮುಖ ಸಭೆ ವಿಶ್ವಪಾರಂಪರಿಕ ತಾಣ ಹಂಪಿಯಲ್ಲಿ ಜು.9ರಿಂದ 16ರವರೆಗೆ ನಡೆಯಲಿದೆ ಎಂದು ಜಿ20 ಶೆರ್ಪಾದ
ಮುಖ್ಯಸ್ಥ ಅಮಿತಾಭ್‌ ಕಾಂತ್‌ ತಿಳಿಸಿದರು.

ವಿಶ್ವವಿಖ್ಯಾತ ವಿಶ್ವಪಾರಂಪರಿಕ ತಾಣ ಹಂಪಿಯಲ್ಲಿ ನಡೆಯಲಿರುವ ಶೆರ್ಪಾ ಸಭೆಗೆ ಸಂಬಂಧಿಸಿದಂತೆ ಭಾನುವಾರ
ಖಾಸಗಿ ಹೊಟೇಲ್‌ನಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ಜೊತೆಗೆ ಕೈಗೊಂಡ ಸಿದ್ಧತಾ ಸಭೆಯ ನಂತರ ಸುದ್ದಿಗಾರರೊಂದಿಗೆ
ಮಾತನಾಡಿದರು. ಸಿದ್ಧತಾ ಸಭೆಗೂ ಮುನ್ನ ಭಾರತದ ಜಿ-20 ಉನ್ನತ ಮಟ್ಟದ ಅಧಿಕಾರಿಗಳ ತಂಡ ಬೆಳಿಗ್ಗೆ ವಿಶ್ವವಿಖ್ಯಾತ ಹಂಪಿಗೆ ತೆರಳಿ ಜಿ20 ಸಭೆಯಲ್ಲಿ ಭಾಗವಹಿಸುವ ಪ್ರತಿನಿಧಿಗಳು ಭೇಟಿ ನೀಡಲಿರುವ ಸ್ಥಳಗಳ ಪರಿಶೀಲಿಸಿ, ಮಾಹಿತಿ ಪಡೆದರು.

ಜಾಗತಿಕ ಮಟ್ಟದ ಒಟ್ಟು ಜಿ20 ಶೃಂಗಸಭೆಯ 20 ಸದಸ್ಯ ರಾಷ್ಟ್ರಗಳು, 9 ಆಹ್ವಾನಿತ ರಾಷ್ಟ್ರಗಳು ಸೇರಿದಂತೆ ಒಟ್ಟು 43 ರಾಷ್ಟ್ರಗಳು ಈ ಸಭೆಯಲ್ಲಿ ಭಾಗವಹಿಸಲಿವೆ. ಈಗಾಗಲೇ ರಾಜಸ್ಥಾನದ ಉದಯಪುರ, ಅಸ್ಸಾಂನ ಕುಮಾರ್ಗಮ್‌ನಲ್ಲಿ ಶೆರ್ಪಾ ಸಭೆಗಳು ನಡೆದಿದೆ. ಜಾಗತಿಕ ಮಟ್ಟದಲ್ಲಿ ಕರ್ನಾಟಕ ರಾಜ್ಯದ ಪ್ರವಾಸೋದ್ಯಮ ಹಾಗೂ ಸಾಂಸ್ಕೃತಿಕ ಹಿರಿಮೆ ಮತ್ತು ಉತ್ಪನ್ನಗಳನ್ನು ಉನ್ನತೀಕರಿಸಲು 3ನೇ ಶೆರ್ಪಾ ಸಭೆ ವಿಶ್ವವಿಖ್ಯಾತ ವಿಶ್ವಪಾರಂಪರಿಕ ತಾಣ ಹಂಪಿಯಲ್ಲಿ ನಡೆಯಲಿದೆ ಎಂದರು.

ಈಗಾಗಲೇ ಹಂಪಿ ಪಾರಂಪರಿಕ ಪ್ರದೇಶದಲ್ಲಿ ಶೆರ್ಪಾ ಸಭೆಗಾಗಿ ಅಂತಿಮ ಹಂತದ ಸಿದ್ಧತೆ ಕೈಗೊಳ್ಳಲಾಗುತ್ತಿದೆ. ಈ ಶೆರ್ಪಾ ಸಭೆಯು “ವಸುದೆ„ವ ಕುಟುಂಬಕಂ’ ಎಂಬ ಧ್ಯೇಯದಡಿ, “ಒಂದು ಭೂಮಿ, ಒಂದು ಕುಟುಂಬ, ಒಂದೇ ಭವಿಷ್ಯ’ಎಂಬ
ಘೋಷವಾಕ್ಯದಡಿ ಶೃಂಗಸಭೆ ಆಯೋಜನೆ ಮಾಡಲಾಗುತ್ತಿದೆ. ಇಲ್ಲಿ 43 ದೇಶಗಳ ಉನ್ನತಮಟ್ಟದ ಅಧಿಕಾರವುಳ್ಳ ಪ್ರತಿನಿಧಿಗಳು
ಭಾಗವಹಿಸಲಿದ್ದು,ಅಂತಾರಾಷ್ಟ್ರೀಯ ಮಟ್ಟದ ಹಲವಾರು ಉನ್ನತ ಸಭೆಗಳು ನಡೆಯಲಿದೆ ಎಂದು ತಿಳಿಸಿದರು.

ರಾಜ್ಯದ ಪ್ರವಾಸೋದ್ಯಮ ಉನ್ನತೀಕರಣ ಜೊತೆಗೆ ಇಲ್ಲಿನ ಕಲೆ, ಸಂಸ್ಕೃತಿ ಐತಿಹಾಸಿಕ ಸ್ಮಾರಕಗಳ ಪ್ರಸ್ತುತಿ ಸೇರಿದಂತೆ ರಾಜ್ಯದ
ಕರಕುಶಲತೆ, ಕೈಮಗ್ಗ, ಸಾಂಪ್ರದಾಯಿಕತೆ ಹಾಗೂ ಒಂದು ಜಿಲ್ಲೆ ಒಂದು ಉತ್ಪನ್ನ ಅದರಲ್ಲೂ ವಿಶೇಷವಾಗಿ ಸಿರಿಧಾನ್ಯಗಳ
ಮಹತ್ವ ಸಾರುವ ಜೊತೆಗೆ ಇವುಗಳ ಜಾಗತಿಕ ಪರಿಚಯ ಹಾಗೂ ಮಾರುಕಟ್ಟೆ ಕಂಡುಕೊಳ್ಳಲು ವಿಪುಲ ಅವಕಾಶ
ಜಿ20ಯಿಂದ ದೊರೆಯುತ್ತದೆ ಎಂದರು.

ಶೃಂಗಸಭೆ ವೇಳೆ ಹಂಪಿಯ ಐತಿಹಾಸಿಕ ಮಹತ್ವ ಸಾರಲಾಗುತ್ತದೆ.ಸಾಂಸ್ಕೃತಿಕ ಪ್ರದರ್ಶನದ ಮೂಲಕ ಗತವೈಭವ ಸಾರುವ ಸಿದ್ಧತೆ ನಡೆಯಲಾಗುತ್ತದೆ. ಕೇರಳದಲ್ಲಿ ಇರುವ ಪ್ರವಾಸೋದ್ಯಮ, ನೈಸರ್ಗಿಕತೆಯಂತೆ ಕರ್ನಾಟಕ ರಾಜ್ಯದಲ್ಲಿ ಸಹ ಅತ್ಯಧಿಕ ಪ್ರವಾಸಿ ತಾಣಗಳು ಇದ್ದು, ಇವುಗಳೂ ಸಹ ರಾಜ್ಯವನ್ನು ಒಗ್ಗೂಡಿಸಲು ಸಾಧ್ಯವಾಗುತ್ತಿದೆ ಎಂದರು.

ಸಭೆಯ ಜೊತೆಗೆ ತೆರೆದ ವಸ್ತು ಸಂಗ್ರಹಾಲಯವಾಗಿರುವ ಹಂಪಿಯ ಐತಿಹಾಸಿಕ ಮಹತ್ವವನ್ನು ಪ್ರತಿನಿಧಿಗಳಿಗೆ ಸಾರಲಾಗುತ್ತದೆ. ಜೊತೆಗೆ ಸಾಂಸ್ಕೃತಿಕ ಕಲಾ ಪ್ರದರ್ಶನದ ಮೂಲಕ ಗತವೈಭವ ಪ್ರಸ್ತುತಪಡಿಸಲು ಸಿದ್ಧತೆ ಸಹ ಕೈಗೊಳ್ಳಲಾಗುತ್ತಿದೆ ಎಂದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪ್ರವಾಸೋದ್ಯಮ ಹಾಗೂ ಸಂಸ್ಕೃತಿ ಇಲಾಖೆ ಸೇರಿದಂತೆ ಜಿಲ್ಲಾಡಳಿತದ ಸಹಕಾರದೊಂದಿಗೆ ಸಭೆ ಆಯೋಜನೆಗೊಳ್ಳುತ್ತಿದೆ ಎಂದರು.

ಪ್ರವಾಸೋದ್ಯಮ ಹಾಗೂ ಸಂಸ್ಕೃತಿಯ ಜಾಗತೀಕರಣಕ್ಕೆ ಶೆರ್ಪಾ ಸಭೆಯು ಅತ್ಯಂತ ಹೆಚ್ಚಿನ ಮಟ್ಟದಲ್ಲಿ ಅವಕಾಶ
ದೊರಕಿಸಿಕೊಡಲಿದ್ದು,ಕರ್ನಾಟಕ ರಾಜ್ಯ ಹಾಗೂ ಹಂಪಿ ವಿಶ್ವ ಭೂಪಟದಲ್ಲಿ ಕರ್ನಾಟಕದಲ್ಲಿ ಮೂಡಿಬರುತ್ತದೆ. ಜಾಗತಿಕ
ಮಟ್ಟದಲ್ಲಿ ಅನಾವರಣ ಶೆರ್ಪಾಸಭೆಯ ಮೂಲಕ ಹೆಚ್ಚಿನ ಅವಕಾಶ ಕಲ್ಪಿಸಲಿದೆ ಎಂದರು. ಜಂಟಿ ಕಾರ್ಯದರ್ಶಿ ಆಶಿಶ್‌ ಸಿನ್ಹಾ, ಜಂಟಿ ಕಾರ್ಯದರ್ಶಿ (ಭದ್ರತೆ) ಭಾವನಾ ಸಕ್ಸೇನಾ, ಅಧೀನ ಕಾರ್ಯದರ್ಶಿ ಆಸಿಮ್‌ ಅನ್ವರ್‌ ಅವರು ಸ್ಥಳ ಪರಿಶೀಲನೆ ನಡೆಸಿದರು.

ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕಪಿಲ್‌ ಮೋಹನ್‌, ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ರಾಮಪ್ರಸಾತ್‌
ಮನೋಹರ್‌ ವಿ., ವಿಜಯನಗರ ಜಿಲ್ಲಾಧಿಕಾರಿ ವೆಂಕಟೇಶ್‌ ಟಿ., ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿ.ಎಲ್‌.,
ಜಿಪಂ ಸಿಇಒ ಸದಾಶಿವಪ್ರಭು ಇತರರು ಇದ್ದರು.

ಹೊಸಪೇಟೆ: ಜುಲೈ ತಿಂಗಳ 3ನೇ ವಾರ ನಡೆಯಲಿರುವ ಜಿ20 ಶೃಂಗಸಭೆಗೆ ಸಂಬಂಧಿಸಿದಂತೆ ವಿಶ್ವವಿಖ್ಯಾತ ಹಂಪಿಯಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿರುವ ಸ್ಥಳಗಳನ್ನು ಉನ್ನತ ಮಟ್ಟದ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಭಾನುವಾರ ಬೆಳಗ್ಗೆ ವಿಶ್ವಪಾರಪಂರಿಕ ಪ್ರದೇಶ ಹಂಪಿಯ ಚಕ್ರತೀರ್ಥ ಬಳಿಯ ನದಿ ದಂಡೆಯಲ್ಲಿ ಜಿ20 ಸಭೆಗೆ ಆಗಮಿಸುವ ಪ್ರತಿನಿ ಧಿಗಳು ಕೈಗೊಳ್ಳಲಿರುವ ಹರಿಗೋಲು ಸವಾರಿಯ(ಕೊರಾಕಲ್‌ ರೈಡ್‌) ಪ್ರಾರಂಭಿಕ ಸ್ಥಳದ ಪರಿಶೀಲನೆ ನಡೆಸಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.