ಖಾಸಗಿ ಆಸ್ಪತ್ರೆಗಳಲ್ಲೂ ಉಚಿತ ಚಿಕಿತ್ಸೆಗೆ ಒತ್ತಾಯ

ಸರ್ಕಾರಿ ಆಸ್ಪತ್ರೆಗಳಲ್ಲೇ ಚಿಕಿತ್ಸೆಗೆ ಉತ್ತಮ ಸೌಲಭ್ಯ ಕಲ್ಪಿಸಿ

Team Udayavani, Jun 25, 2020, 3:38 PM IST

25-June-15

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸಪೇಟೆ: ಕೋವಿಡ್‌-19ರೋಗಿಗಳ ಚಿಕಿ ತ್ಸೆಗಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರ ದರ ನಿಗದಿ ಪಡಿಸಿರುವುದನ್ನು ಹಿಂಪಡೆಯುವ ಮೂಲಕ ಕಡ್ಡಾಯ ಉಚಿತ ಚಿಕಿತ್ಸೆ ನೀಡಬೇಕು ಎಂದು ಆಗ್ರಹಿಸಿ, ಡಿವೈಎಫ್‌ಐ ತಾಲೂಕು ಸಮಿತಿ ಪದಾಧಿಕಾರಿಗಳು ಬುಧವಾರ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಸರಕಾರಗಳ ನಿರ್ಲಕ್ಷ್ಯ ಧೋರ ಣೆಯಿಂದಾಗಿ ಸರ್ಕಾರಿ ಆಸ್ಪತ್ರೆಗಳು ಅಗತ್ಯ ಡಾಕ್ಟರ್‌-ಸಿಬ್ಬಂದಿ ಕೊರತೆ, ಔಷಧ ಸೇರಿದಂತೆ ಮೂಲ ಭೂತ ಸೌಲಭ್ಯಗಳ ಕೊರತೆಯಿಂದ ಬಳಲುತ್ತಿವೆ. ಇದರಿಂದಾಗಿ ಸಾಮಾನ್ಯ ಜನತೆಗೆ ಉತ್ತಮ ಆರೋಗ್ಯ ಲಭಿಸದೆ ಖಾಸಗಿ ಆಸ್ಪತ್ರೆಗಳ ಧನದಾಹಿಕೊರೆತಕ್ಕೆ ಬಲಿಯಾಗುತ್ತಿದ್ದಾರೆ. ಈ ಸ್ಥಿತಿಯಲ್ಲಿ ಕೋವಿಡ್‌ -19 ರೋಗ ಜನ ಸಾಮಾನ್ಯನ ಪಾಲಿಗೆ ಕಂಟಕ ಪ್ರಾಯವಾಗಿದೆ. ಇಂತಹ ಗಂಭೀರ ಸ್ಥಿತಿಯಲ್ಲಿ ಕೋವಿಡ್‌-19 ಸೋಂಕಿತ ರೋಗಿಗಳಿಗೆ ಸರಿಯಾದ ಚಿಕಿತ್ಸೆ ನೀಡಲು ಸಾರ್ವಜನಿಕ ಆಸ್ಪತ್ರೆಗಳನ್ನು ಡಾಕ್ಟರ್‌, ಸಿಬ್ಬಂದಿ, ಔಷಧ ಇತರೆ ಸಕಲ ರೀತಿಯಲ್ಲಿಯೂ ಸಜ್ಜುಗೊಳಿಸಬೇಕು. ಅಗತ್ಯ ಬಿದ್ದರೆ ಖಾಸಗಿ ಆಸ್ಪತ್ರೆಗಳನ್ನು ವಶಕ್ಕೆ ಪಡೆದು ಎಲ್ಲರಿಗೂ ಉಚಿತ ಚಿಕಿತ್ಸೆ ನೀಡಬೇಕು. ಆದರೆ ಕೋವಿಡ್ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಸಾಮಾನ್ಯ ವಾರ್ಡ್‌ನಲ್ಲಿ 10 ಸಾವಿರ, ಆಮ್ಲಜನಕ ಸಹಿತ ವಾರ್ಡ್‌ನಲ್ಲಿ 12 ಸಾವಿರ ಐಸಿಯು ಹಾಸಿಗೆ 15 ಸಾವಿರ ವೆಂಟಿಲೇಟರ್‌ ಸಹಿತ ಐಸಿಯುಗೆ 25 ಸಾವಿರ ದರ ನಿಗದಿಗೊಳಿಸಿದೆ. ಈ ದರಗಳು ಬಡಜನರಿಗೆ ಹೊರೆಯಾಗಲಿದೆ ಎಂದು ಅಳಲು ತೋಡಿಕೊಂಡರು.

ಆಯುಷ್ಮಾನ್‌ ಭಾರತ-ಆರೋಗ್ಯ ಕರ್ನಾಟಕ ಯೋಜನೆಯಡಿ ಬಿಪಿಎಲ್‌ ಕುಟುಂಬದ ರೋಗಿಗಳಿಗೆ ಸಾಮಾನ್ಯ ವಾರ್ಡ್ ಗೆ 5200 ರೂ ಆಮ್ಲಜನಕ ಸಹಿತ ವಾರ್ಡ್ ಗೆ 7000 ರೂ. ತೀವ್ರ ನಿಗಾ ಘಟಕಕ್ಕೆ 8500 ಹಾಗೂ ವೆಂಟಿಲೇಟರ್‌ ಸಹಿತ ಐಸಿಯುಗೆ 10000 ರೂ ನಿಗದಿಗೊಳಿಸಿದೆ. ಆದರೆ ಗ್ರಾಮೀಣ ನಗರ ಪ್ರದೇಶದ ಬಹುತೇಕ ಜನರಿಗೆ ಆಯುಷ್ಮಾನ್‌ ಭಾರತ ಆರೋಗ್ಯ ಕರ್ನಾಟಕ ಯೋಜನೆಯಿಂದ ದೂರ ಉಳಿದಿದ್ದಾರೆ. ಈಗಾಗಲೇ ಲಾಕ್‌ಡೌನ್‌ ಸಂಕಷ್ಟದಲ್ಲಿರುವ ಬಡ-ಮಧ್ಯಮ, ವರ್ಗದ ಕುಟುಂಬಗಳಿಗೆ ದುಬಾರಿ ಚಿಕಿತ್ಸೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಕೂಡಲೇ ಇದನ್ನು ರದ್ದುಗೊಳಿಸಿ ಕೋವಿಡ್  ಸೋಂಕಿತರೆಲ್ಲರಿಗೂ ಸರಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲು ಬೇಕಾದ ಸಕಲ ವ್ಯವಸ್ಥೆ ಮಾಡಿಕೊಳ್ಳುವುದು ಹಾಗೂ ಅಗತ್ಯ ಬಿದ್ದರೆ ಖಾಸಗಿ ಆಸ್ಪತ್ರೆಗಳನ್ನು ಸರಕಾರದ ವಶಕ್ಕೆ ಪಡೆದು ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಡಿವೈಎಫ್‌ಐ ಮುಖಂಡರು ತಿಳಿಸಿದ್ದಾರೆ.

ರಾಜ್ಯ ಉಪಾಧ್ಯಕ್ಷ ಬಿಸಾಟಿ ಮಹೇಶ್‌, ಜಿಲ್ಲಾಧ್ಯಕ್ಷ ವಿ. ಸ್ವಾಮಿ, ತಾಲೂಕು ಅಧ್ಯಕ್ಷ ಕಿನ್ನಾಳ್‌ ಹನುಮಂತ, ಮುಖಂಡರಾದ ಕೆ.ಎಂ. ಸಂತೋಷ, ಕಲ್ಯಾಣಯ್ಯ, ಈ. ಮಂಜುನಾಥ, ಬಂಡೆ ತಿರುಕಪ್ಪ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಇದ್ದರು.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.