ಯೋಗದಿಂದ ರೋಗ ನಿರೋಧಕ ಶಕ್ತಿ ವೃದ್ಧಿ


Team Udayavani, Jun 22, 2018, 10:51 AM IST

ballery-2.jpg

ಬಳ್ಳಾರಿ: ಯೋಗವನ್ನು ಪ್ರತಿಯೊಬ್ಬರೂ ನಿತ್ಯ ಜೀವನದಲ್ಲಿ ಅಳವಡಿಸಿಕೊಂಡರೆ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ವೃದ್ಧಿಯಾಗಲಿದೆ ಎಂದು ಎಸ್ಪಿ ಅರುಣ್‌ ರಂಗರಾಜನ್‌ ಹೇಳಿದರು.

ನಗರದ ಮುನಿಸಿಪಲ್‌ ಮೈದಾನದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆಯುಷ್‌ ಇಲಾಖೆ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸಹಯೋಗದಲ್ಲಿ ಗುರುವಾರ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನ
ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೇವಲ ದೈಹಿಕವಾಗಿ ಸದೃಢವಾಗಿದ್ದರೆ ಒಳ್ಳೆಯ ಆರೋಗ್ಯವಲ್ಲ. ಮನುಷ್ಯ ಮಾನಸಿಕವಾಗಿಯೂ ಮನೋಲ್ಲಾಸದಿಂದ ಇದ್ದಾಗ ಮಾತ್ರ ಮನುಷ್ಯ ಅತ್ಯುತ್ತಮ ಆರೋಗ್ಯ ಸ್ಥಿತಿ ಹೊಂದಿರಲು ಸಾಧ್ಯವಾಗಲಿದೆ. ಹೀಗಾಗಿ ಪ್ರತಿಯೊಬ್ಬರೂ ಯೋಗಾಭ್ಯಾಸದಲ್ಲಿ ತೊಡಗಿಸಿಕೊಂಡು ಸದೃಢರಾಗಬೇಕೆಂದು ಕರೆ ನೀಡಿದರು.

ಪ್ರತಿನಿತ್ಯ ಯೋಗಾಭ್ಯಾಸದಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಲಿದೆ. ಯೋಗಾಭ್ಯಾಸವನ್ನು ಜೀವನದಲ್ಲಿ
ಅಳವಡಿಸಿಕೊಂಡಲ್ಲಿ ಆರೋಗ್ಯದ ಬಗ್ಗೆ ನಿರ್ಭಿತಿಯಿಂದ ಜೀವನ ನಡೆಸಲು ಈ ಯೋಗವು ಸಹಕಾರಿಯಾಗಲಿದೆ. ಹೀಗಾಗಿ ಆರೋಗ್ಯ ಪೂರ್ಣ ಬದುಕಿಗೆ ಯೋಗ ಅತ್ಯುತ್ತಮ ಸಾಧನವಾಗಲಿದೆ ಎಂದರು.

ಅಂತಾರಾಷ್ಟ್ರೀಯ ಯೋಗ ದಿನ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ| ರಾಮ್‌ ಪ್ರಸಾತ್‌ ಮನೋಹರ್‌, ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಸಬೇಕಾದರೆ ಯೋಗವೊಂದೇ ಬಹುದೊಡ್ಡ ಸಾಧನವಾಗಿದೆ ಎಂದರು.

ಜಿಪಂ ಸಿಇಒ ಡಾ| ಕೆ.ವಿ.ರಾಜೇಂದ್ರ ಮಾತನಾಡಿ, ಯೋಗಾಭ್ಯಾಸದಲ್ಲಿ ತೊಡಗಿಸಿಕೊಳ್ಳುವ ಪ್ರತಿಯೊಬ್ಬ ವ್ಯಕ್ತಿಯು ಅತ್ಯಂತ ಲವಲವಿಕೆಯಿಂದ ಇರುತ್ತಾನೆ. ಹೀಗಾಗಿ ಎಲ್ಲರೂ ನಿರಂತರವಾಗಿ ಯೋಗಾಭ್ಯಾಸದಲ್ಲಿ ತೊಡಗಿಸಿಕೊಳ್ಳಬೇಕು. ಸದೃಢ ಆರೋಗ್ಯಕ್ಕೆ ಯೋಗ ಸಾಧನವು ಬಹುಮುಖ್ಯವಾಗಿದೆ ಎಂದರು. ಜಿಪಂ ಅಧ್ಯಕ್ಷೆ ಸಿ.ಭಾರತಿ ಮಾತನಾಡಿದರು.

ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ನಿರ್ಮಲಾಜಿಯವರು ಯೋಗಾಭ್ಯಾಸದ ಕುರಿತು ಉಪನ್ಯಾಸ ನೀಡಿದರು. ನಂತರ ಮೈದಾನದಲ್ಲಿ ಕೆಲಹೊತ್ತು  ಯೋಗಾಭ್ಯಾಸ ನಡೆಯಿತು. ಶಿಬಿರದಲ್ಲಿ ಡಿಸಿ, ಎಸ್ಪಿ, ಸಿಇಒ, ಜಿಪಂ ಅಧ್ಯಕ್ಷೆ, ಉಪಾಧ್ಯಕ್ಷರು ಮೇಯರ್‌, ಉಪಮೇಯರ್‌ ಸೇರಿದಂತೆ ಈಶ್ವರೀಯ ವಿವಿಯ ನೂರಾರು ಯೋಗ ಸಾಧಕರು, ವಿದ್ಯಾರ್ಥಿಗಳೊಂದಿಗೆ ಕುಳಿತು ಯೋಗಾಭ್ಯಾಸದಲ್ಲಿ ತೊಡಗಿದ್ದರು. 

ಉಪಾಧ್ಯಕ್ಷೆ ಪಿ.ದೀನಾ ಮಂಜುನಾಥ್‌, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಎನ್‌.ಬಸರೆಡ್ಡಿ, ಮೇಯರ್‌ ಆರ್‌.ಸುಶೀಲಾಬಾಯಿ, ಉಪಮೇಯರ್‌ ಉಮಾದೇವಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕಿ ಪಿ.ಶೋಭಾ, ಯುವಜನ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಹಮತ್‌ ಉಲ್ಲಾ, ಡಾ| ಅನಿಲಕುಮಾರ್‌, ಜಿಲ್ಲಾ ಆಯುಷ್‌ ಇಲಾಖೆ ಅಧಿಕಾರಿ ಡಾ|
ವಂದನಾ ಗಾಳಿ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ರಾಜಯೋಗಿ ಬಿ.ಕೆ.ನಿರ್ಮಲಾಜಿ, ಜಿಲ್ಲೆಯ ಆಯಾ ತಾಲೂಕಿನ ನೋಡಲ್‌ ಅಧಿಕಾರಿಗಳಾದ ಡಾ| ವಿಜಯಕುಮಾರ, ಡಾ| ರೂಪಸಿಂಗ್‌ ರಾಥೋಡ, ಡಾ| ವಿಜಯೇಂದ್ರಚಾರ್‌, ಡಾ| ಕೊಟ್ರೇಶ, ಡಾ| ಶಶಿಧರ ರಾಮದುರ್ಗ, ಡಾ| ರಾಜೇಶ್ವರಿ, ಡಾ| ಗುರುಬಸವರಾಜ, ಡಾ| ಉಮೇಶ ಕಾಖಂಡಕಿ ಇದ್ದರು. 

ಯೋಗ ತರಬೇತುದಾರರಾದ ರಾಜೇಂದ್ರರೆಡ್ಡಿ, ಉಷಾ ಹಾಗೂ ಜಗದೀಶ ಅವರು ನಾನಾ ಭಂಗಿಯ ಯೋಗಾಭ್ಯಾಸ ತಿಳಿಸಿಕೊಟ್ಟರು. ನಂತರ ಮೈದಾನದಲ್ಲಿ ಯೋಗ ಜಾಗೃತಿ ಶಿಬಿರದ ಮೆರವಣಿಗೆಗೆ ಚಾಲನೆ ನೀಡಲಾಯಿತು. ಜಾಥಾವು ಮೈದಾನದಿಂದ ಡಾ| ರಾಜ್‌ ರಸ್ತೆ, ಗಡಿಗಿ ಚನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ಕೆ.ಸಿ.ರಸ್ತೆ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತಲುಪಿತು.

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; poor food supply; Protest in SC, ST hostel

Bellary; ಕಳಪೆ ಆಹಾರ ಪೂರೈಕೆ; ಎಸ್‌ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Ballari: ಕೊನೆಗೂ ನಟ ದರ್ಶನ್‌ ಸೆಲ್‌ಗೆ ಟಿವಿ: ಡಿಡಿ ಚಾನೆಲ್‌ ಮಾತ್ರ

Ballari: ಕೊನೆಗೂ ನಟ ದರ್ಶನ್‌ ಸೆಲ್‌ಗೆ ಟಿವಿ; ಡಿಡಿ ಚಾನೆಲ್‌ ಮಾತ್ರ

Online Fraud; 1.21 ಕೋಟಿ ರೂ. ವಶ, ಮಧ್ಯಪ್ರದೇಶದ ಆರೋಪಿ ಬಂಧನ

Online Fraud; 1.21 ಕೋಟಿ ರೂ. ವಶ, ಮಧ್ಯಪ್ರದೇಶದ ಆರೋಪಿ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.