ಅಕ್ರಮ ಶಾಲಾ ಕಟ್ಟಡ ತೆರವುಗೊಳಿಸಲು ಒತ್ತಾಯ

Team Udayavani, Jul 22, 2020, 12:01 PM IST

ಅಕ್ರಮ ಶಾಲಾ ಕಟ್ಟಡ ತೆರವುಗೊಳಿಸಲು ಒತ್ತಾಯ

ಹಗರಿಬೊಮ್ಮನಹಳ್ಳಿ: ಪಟ್ಟಣದಲ್ಲಿ ಅಕ್ರಮವಾಗಿ ಸರಕಾರಿ ಜಮೀನಿನಲ್ಲಿ ಶಾಲೆ ನಿರ್ಮಿಸಿರುವುದನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್‌ ಮುಖಂಡರು, ಜನಪ್ರತಿನಿಧಿ ಗಳು ಸೇರಿದಂತೆ ವಿವಿಧ ಸಂಘಟನೆಯ ಪದಾಧಿಕಾರಿಗಳು ತಹಶೀಲ್ದಾರ್‌ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್‌ ಬ್ಲಾಕ್‌ ಮಾಜಿ ಅಧ್ಯಕ್ಷ ಮುಟುಗನಹಳ್ಳಿ ಕೊಟ್ರೇಶ್‌ ಮಾತನಾಡಿ, ಪಟ್ಟಣದ ನೋಬೆಲ್‌ ಎಜ್ಯುಕೇಷನ್‌ ಟ್ರಸ್ಟ್‌ 44 ಸೆಂಟ್ಸ್‌ ಸರಕಾರಿ ಜಮೀನಿನ ಜಾಗದಲ್ಲಿ ಅತಿಕ್ರಮವಾಗಿ ಕಟ್ಟಡ ನಿರ್ಮಿಸಿದ್ದು, ಕೂಡಲೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಜರುಗಿಸಿ ತೆರವುಗೊಳಿಸಬೇಕು. ಚಿಂತ್ರಪಳ್ಳಿಗೆ ಸೇರಿದ ಸ.ನಂ.409/ಎ.ನ ಒಟ್ಟು 5.92 ಎಕರೆ ಪ್ರದೇಶದಲ್ಲಿ 44 ಸೆಂಟ್ಸ್‌ನಷ್ಟು ಜಮೀನು ಪಹಣಿಯಲ್ಲಿ ಗ್ರಾಮನತ್ತು ಎಂದೇ ಇದೆ. ಆದರೆ, ಸಂಸ್ಥೆಯ ಅಧ್ಯಕ್ಷ ಮಾಜಿ ಶಾಸಕ ಸಿರಾಜ್‌ಶೇಖ್‌ ಸೋನಿಯಾಗಾಂಧಿ ನಗರದಲ್ಲಿ ಉದ್ಯಾನಕ್ಕೆ ಮೀಸಲಿರಿಸಿದ್ದ ನಿವೇಶನದಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಿಸಿದ್ದಾರೆ. ಕೂಡಲೇ ಸಿರಾಜ್‌ಶೇಖ್‌ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.

ತಾಪಂ ಸಾಮಾಜಿಕ ನ್ಯಾಯಸಮಿತಿ ಅಧ್ಯಕ್ಷ ಬುಡ್ಡಿ ಬಸವರಾಜ ಮಾತನಾಡಿ, ಮಾಜಿ ಶಾಸಕ ಸಿರಾಜ್‌ಶೇಕ್‌ ಸರಕಾರಕ್ಕೆ ವಂಚಿಸಿ ಶಾಲಾ ಕಟ್ಟಡ ನಿರ್ಮಿಸಿದರ ವಿರುದ್ಧ ಕೂಡಲೇ ಕ್ರಮ ಜರುಗಿಸಬೇಕು. ಪುರಸಭೆ ಪರವಾನಗಿ ಪಡೆಯದೆ ಕುಡಿಯುವ ನೀರನ್ನು ಅಕ್ರಮವಾಗಿ ಪಡೆದುಕೊಂಡಿದ್ದಾರೆ. ಯಾವುದೇ ವ್ಯಕ್ತಿ ಸರಕಾರಿ ಜಮೀನನ್ನು ಅಕ್ರಮವಾಗಿ ಹೊಂದುವುದು ಸೂಕ್ತವಲ್ಲ. ಸರಕಾರಿ ಜಮೀನಿನಲ್ಲಿ ಅಕ್ರಮವಾಗಿ ನಿರ್ಮಿಸಿದ ಕಟ್ಟಡವನ್ನು ಕೂಡಲೇ ತೆರವುಗೊಳಿಸಬೇಕು ಎಂದು ಆಗ್ರಹಿಸಿದರು.

ಜಿಪಂ ಮಾಜಿ ಸದಸ್ಯ ಅಕ್ಕಿ ತೋಟೇಶ್‌ ತಹಶೀಲ್ದಾರ್‌ ಆಶಪ್ಪ ಪೂಜಾರ್‌, ಪುರಸಭೆ ಮುಖ್ಯಾಧಿಕಾರಿ ಕೃಷ್ಣನಾಯ್ಕಗೆ ಮನವಿ ಸಲ್ಲಿಸಿದರು. ಮಾಜಿ ಸದಸ್ಯ ಹೆಗ್ಗಾಳ್‌ ರಾಮಣ್ಣ, ವಾಲ್ಮೀಕಿ ಮಹಾಸಭಾದ ತಾಲೂಕು ಉಪಾಧ್ಯಕ್ಷ ಕನ್ನಿಹಳ್ಳಿ ಚಂದ್ರಶೇಖರ, ಕೆಪಿಸಿಸಿ ಎಸ್ಟಿ ಘಟಕದ ಉಪಾಧ್ಯಕ್ಷ ಪವಾಡಿ ಹನುಮಂತಪ್ಪ ಮಾತನಾಡಿದರು.

ಜಿಪಂ ಮಾಜಿ ಸದಸ್ಯ ಎಚ್‌. ಭೀಮಪ್ಪ, ವಿಎಸ್‌ಎಸ್‌ಎನ್‌ ನಿರ್ದೇಶಕ ಹುಡೇದ್‌ ಗುರುಬಸವರಾಜ, ರೈತ ಸಂಘದ ಅಧ್ಯಕ್ಷ ಹತ್ತಿ ಅಡಿವೆಪ್ಪ, ಪುರಸಭೆ ಸದಸ್ಯ ಹಂಚಿನಮನಿ ಹನುಮಂತಪ್ಪ, ಮರಿಯಮ್ಮನಹಳ್ಳಿ ಪಪಂ ಅಧ್ಯಕ್ಷ ವಿಷ್ಣುನಾಯ್ಕ, ಸದಸ್ಯ ಹಾದಿಮನಿ, ತಾಪಂ ಮಾಜಿ ಸದಸ್ಯ ಶಿವಕುಮಾರ, ವಕೀಲ ಗೋಣಿಬಸಪ್ಪ, ಮುಖಂಡರಾದ ತೆಲಿಗಿ ನೆಲ್ಲು ಇಸ್ಮಾಯಿಲ್‌, ಗೌರಜ್ಜನವರ ಗಿರೀಶ್‌, ಸೋಗಿ ಕೊಟ್ರೇಶ, ಆನಂದೇವನಹಳ್ಳಿ ಪ್ರಭು, ಸೈಯದ್‌ ಇರ್ಪಾನ್‌, ಬುಡೇನ್‌ಸಾಬ್‌, ಸತ್ಯಣ್ಣ, ರಮೇಶ ಇತರರಿದ್ದರು.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.