ಸಮಾನ ಕೆಲಸಕ್ಕೆ ಸಮಾನ ವೇತನಕ್ಕೆ ಒತ್ತಾಯ


Team Udayavani, Sep 30, 2020, 6:38 PM IST

Ballary-tdy-2

ಹೊಸಪೇಟೆ: ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ನಾನಾ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ, ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದಿಂದ ನಗರದ ತಹಶೀಲ್ದಾರ್‌ರ ಕಚೇರಿ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ರಾಜ್ಯ ಸರಕಾರದ ಆರೋಗ್ಯ ಕ್ಷೇತ್ರದ ಬಜೆಟ್‌ ಶೇಕಡವಾರು ಹೆಚ್ಚಿಸಬೇಕು ಮತ್ತು ಈ ಕ್ಷೇತ್ರಕ್ಕೆ ಪ್ರಾಮುಖ್ಯತೆ ನೀಡುವ ಜತೆಗೆಅಗತ್ಯವಿರುವ ನೆರವನ್ನು ಕೇಂದ್ರ ಸರಕಾರವು ನೀಡಬೇಕು. ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಅಭಿವೃದ್ಧಿಗೆ ಆದ್ಯತೆ ನೀಡಲು ಕ್ರಮವಹಿಸಬೇಕು. ಗುತ್ತಿಗೆ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆಯನ್ನು ಒದಗಿಸಿ, ಕಾಯಂಗೊಳಿಸಬೇಕು. ಎಲ್ಲಾ ಹುದ್ದೆಗಳಿಗೆ ವೇತನ ಭತ್ಯೆಗಳು ಮತ್ತು ವೇತನ ಶ್ರೇಣಿಯನ್ನು ನೀಡಿ, ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂದು ಆಗ್ರಹಿಸಿದರು.

ಹರಿಯಾಣ ಮಾದರಿಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯು ಜಾರಿ ಮಾಡಿರುವ ಏಕರೂಪ ವೇತನದ ಮಾದರಿಯಲ್ಲಿ ನಮ್ಮ ರಾಜ್ಯದ ಎಲ್ಲ ನೌಕರರಿಗೂ ಜಾರಿಮಾಡಲು ಕ್ರಮ ವಹಿಸಬೇಕು. ಎನ್‌ಎಚ್‌ಎಂ ಅಡಿಯಲ್ಲಿ ಕೆಲಸ ಮಾಡುವ ನೌಕರರಿಗೆ ಕೇಂದ್ರ ಸರಕಾರ ನೀಡುತ್ತಿರುವ ಬೋನಸ್‌ ಹೆಚ್ಚಳವನ್ನು ಕಾರ್ಯಗತಗೊಳಿಸಬೇಕು. ಆರೋಗ್ಯ ಭಾಗ್ಯ ಯೋಜನೆಯನ್ನು ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರಿಗೂ ವಿಸ್ತರಿಸಬೇಕು. ನಮ್ಮ ಸಂಘದ ಅಧಿಕೃತ ಮುಷ್ಕರದ ದಿನಗಳಲ್ಲಿ ಕಡಿತವಾದ ವೇತನವನ್ನು ಪಾವತಿಸಲು ಕ್ರಮ ಕೈಗೊಳ್ಳಬೇಕು ಮತ್ತು ನೌಕರರ ಕಲ್ಯಾಣ ನಿ  ಅಥವಾ ಕಲ್ಯಾಣ ಮಂಡಳಿ ಸ್ಥಾಪಿಸಲು ಕ್ರಮ ಜರುಗಿಸಬೇಕು ಒತ್ತಾಯಿಸಿದರು.

ಸರಕಾರಿ ನೌಕರರು ಹಾಗೂ ಗುತ್ತಿಗೆ ನೌಕರರು ಮಾಡುವ ಕಾರ್ಯವನ್ನು ಯಾಗಿದ್ದರು ವೇತನದಲ್ಲಿ ತಾರತಮ್ಯ ಮಾಡಲಾಗುತ್ತಿದೆ ಹಾಗಾಗಿ ಸಮಾನ ಕೆಲಸಕ್ಕೆ ಸಮಾನ ವೇತನ. ಅರೋಗ್ಯ ಸಹಾಯಕರನ್ನು ಕೋವಿಡ್ ವಾರಿಯರ್ಸ ಎಂದು ಕೂಡಲೇ ಸರಕಾರ ಪರಿಗಣಿಸಬೇಕು ಎಂದು ಒತ್ತಾಯಿಸಿದರು. ಆರೋಗ್ಯ ಇಲಾಖೆಯ ಆರೋಗ್ಯ ಸಹಾಯಕ ಧರ್ಮನಗೌಡ, ಆರೋಗ್ಯ ಶಿಕ್ಷಣಾಧಿ ಕಾರಿ ಎಂ.ಪಿ. ದೊಡ್ಡಮನಿ, ಸಂಘದ ಅಧ್ಯಕ್ಷ ಡಾ| ಪ್ರವೀಣ್‌, ಉಪಾಧ್ಯಕ್ಷೆ ನೀರಾ ಎವಿಲಿನ್‌, ಪದಾ ಧಿಕಾರಿಗಳಾದ ಡಾ| ನಾಗರತ್ನಮ್ಮ, ಡಾ| ಅನುರಾಧ, ಡಾ| ದೀಲಿಪ್‌, ಮಂಜುನಾಥ, ಸಹಾದೇವ, ಜಗದೀಶ್‌, ಓಂಕಾರ, ಮಾರೇಶ್‌, ಉಮಾದೇವಿ, ಸುಧಾ, ಅನಿತಾ, ಶಿವಮೂರ್ತಿ ಮತ್ತಿತರರಿದ್ದರು.

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತುಂಗಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ಹರಿವು; ಕಂಪ್ಲಿ-ಗಂಗಾವತಿ ಸಂಪರ್ಕ ಕಡಿತ

Bellary; ತುಂಗಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ಹರಿವು; ಕಂಪ್ಲಿ-ಗಂಗಾವತಿ ಸಂಪರ್ಕ ಕಡಿತ

Bellary; ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

Bellary; ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Bellary; Indefinite strike by Lorry Owners Association

Bellary; ಲಾರಿ ಮಾಲೀಕರ ಸಂಘದಿಂದ ಅನಿರ್ದಿಷ್ಟಾವಧಿ ಮುಷ್ಕರ

14-siruguppa

Siruguppa: ಅಕ್ರಮ ಗಾಂಜಾ; 2 ದ್ವಿಚಕ್ರ ವಾಹನ ವಶ, 5 ಆರೋಪಿಗಳ ಬಂಧನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.