ಬಳ್ಳಾರಿಯಲ್ಲಿ ಹೊಸ ಪಕ್ಷದ ಪರವಾಗಿ ಪ್ರಚಾರ ಆರಂಭಿಸಿದ ಜನಾರ್ದನ ರೆಡ್ಡಿ ಪತ್ನಿ ಲಕ್ಷ್ಮಿ ಅರುಣಾ

Team Udayavani, Jan 1, 2023, 12:27 PM IST

ಬಳ್ಳಾರಿಯಲ್ಲಿ ಹೊಸ ಪಕ್ಷದ ಪರವಾಗಿ ಪ್ರಚಾರ ಆರಂಭಿಸಿದ ಜನಾರ್ದನ ರೆಡ್ಡಿ ಪತ್ನಿ ಲಕ್ಷ್ಮಿ ಅರುಣಾ

ಬಳ್ಳಾರಿ: ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ಅವರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಘೋಷಿಸಿದ ಬೆನ್ನಲ್ಲೇ  ಅವರ ಪತ್ನಿ ಲಕ್ಷ್ಮಿ ಅರುಣಾ ಅವರು 2023ನೇ ರಾಜ್ಯ ವಿಧಾನಸಭೆ ಚುನಾವಣೆಗೆ ಪಕ್ಷದ ಅಧಿಕೃತ ಪ್ರಚಾರಕ್ಕೆ ಭಾನುವಾರ ಚಾಲನೆ ನೀಡಿದರು.

ತಾಲೂಕಿನ ಬೆಣಕಲ್ ಗ್ರಾಮದಲ್ಲಿ ಕುರುಬ ಸಮುದಾಯದ ಕುರಿ ಗಂಗಾಧರ ಅವರ ಮನೆಯಲ್ಲಿ ಸಾಂಪ್ರದಾಯದಂತೆ ಐದು ದಿನಿಸು ಧಾನ್ಯ, ಉತ್ತುತ್ತಿ, ಕೊಬ್ಬರಿ ಬಟ್ಟಲು, ಅರಿಶಿನ ಕೊಂಬು, ಬೆಳ್ಳುಳ್ಳಿಯನ್ನು ಲಕ್ಷ್ಮಿ ಅರುಣಾ ಅವರಿಗೆ ಉಡಿತುಂಬುವ ಮೂಲಕ ಪಕ್ಷದ ಪ್ರಚಾರಕ್ಕೆ ಚಾಲನೆ ನೀಡಲಾಯಿತು.

ಇದಕ್ಕೂ ಮುನ್ನ ಗ್ರಾಮಕ್ಕೆ ಆಗಮಿಸಿದ ಲಕ್ಷ್ಮಿ ಅರುಣಾ ಅವರನ್ನು ಕುರುಬರ ಸಾಂಪ್ರದಾಯಿಕ ವಾದ್ಯ ಡೊಳ್ಳು, ತಾಷಾ ರಾಮ್ ಡೋಲ್, ಬಾಣ ಬಿರುಸುಗಳ ಮೂಲಕ ಭರ್ಜರಿ ಸ್ವಾಗತ ಕೋರಲಾಯಿತು. ಗ್ರಾಮದ ದೇವತೆ ಮರಿಯಮ್ಮ, ದುರ್ಗಮ್ಮ ದೇವಿಯ ದರ್ಶನ, ಬೀರಪ್ಪ ದೇವರ ದರ್ಶನ ಪಡೆದ ಅರುಣಾ ಅವರಿಗೆ ಗ್ರಾಮದ ಕೆಲ ಕುರುಬ ಸಮುದಾಯದ ಮಹಿಳೆಯರು ಕಂಬಳಿ ಹಾಕಿ, ಕುರಿಮರಿಯನ್ನು ನೀಡಿ ಸನ್ಮಾನಿಸಲಾಯಿತು. ಇದೇ ವೇಳೆವ ಪಕ್ಷದ ಬಾವುಟವನ್ನು ಹಾರಿಸುವ ಮೂಲಕ ಬಿಡುಗಡೆಗೊಳಿಸಿದರು.

ಇದನ್ನೂ ಓದಿ:ಸಾನ್ಯಾ ಅಯ್ಯರ್‌, ಗಡಿನಾಡ ಕನ್ನಡಿಗ, ಹುಲಿವೇಷ…ಮಾತು ಮನರಂಜನೆಯಿಂದಲೇ ಬಿಗ್‌ ಬಾಸ್‌ ಟ್ರೋಪಿ ಗೆದ್ದ ರೂಪೇಶ್  

ಬಳಿಕ ಕುರುಬರ ಕುರಿ ಗಂಗಾಧರ ಮನೆಯಲ್ಲಿ ಕುಟುಂಬದ ಮಹಿಳೆಯರು ಲಕ್ಷ್ಮಿ ಅರುಣಾ ಅವರಿಗೆ ಉಡಿ ತುಂಬಿದರು. ಬಳಿಕ ಲಕ್ಷ್ಮಿ ಅರುಣಾ ಅವರು ಐದು ಜನ ಮಹಿಳೆಯರಿಗೆ ಉಡಿ ತುಂಬಿದರು.

ಈ ವೇಳೆ ಮಾತನಾಡಿದ ಅವರು, ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಕಳೆದ ಡಿ.25 ರಂದು ‘ಕಲ್ಯಾಣರಾಜ್ಯ ಪ್ರಗತಿ ಪಕ್ಷ’ವನ್ನು ಘೋಷಿಸಿದರು. ಕಲ್ಯಾಣ ಕರ್ನಾಟಕವನ್ನು ಅಭಿವೃದ್ಧಿ ಪಡಿಸುವ ಕನಸು ಹೊಂದಿದ್ದರು. ಇಡೀ ರಾಜ್ಯ ಕಲ್ಯಾಣ ರಾಜ್ಯ ಆಗಬೇಕು. ಅದರಲ್ಲೂ ಬಳ್ಳಾರಿ ಜಿಲ್ಲೆ ವಿಶ್ವದ ಭೂಪಟದಲ್ಲಿ ಎದ್ದು ಕಾಣುವಂತೆ ಅಭಿವೃದ್ಧಿ ಆಗಬೇಕೆಂಬುದು ಜನಾರ್ದನ ರೆಡ್ಡಿ ಅವರ ಗುರಿ, ಅವರ ಜೀವನದ ಜೊತೆ ಹೆಜ್ಜೆ ಹಾಕುವ ನಾನು. ಅವರ ಹೊಸ ಪಕ್ಷದ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತ, ಅವರು ಬಳ್ಳಾರಿ ಜಿಲ್ಲೆಗೆ ಬರಲು ಅವಕಾಶ ಇಲ್ಲದ ಕಾರಣ ನಿಮ್ಮ‌ ಗ್ರಾಮಕ್ಕೆ ಬಂದಿರುವೆ.‌ ತಂದೆ ತಾಯಿ ಬಂಧು ಬಳಗ ಎಲ್ಲರೂ ನೀವೇ ನಮಗೆ. ಕಲ್ಯಾಣ ರಾಜ್ಯ ನಿರ್ಮಾಣಕ್ಕಾಗಿ ನಿಮ್ಮ ಸಹಕಾರ ಇರಲಿ ಎಂದರು.

ಬುಡ ಮಾಜಿ ಅಧ್ಯಕ್ಷ ದಮ್ಮೂರು ಶೇಖರ್, ಪಾಲಿಕೆ ಮಾಜಿ ಸದಸ್ಯ ಗೌಳೇರ ಚಂದ್ರ, ಸಂಜಯ್ ಬೆಟಗೇರಿ, ಬಿ.ಕೆ.ಬಿ.ಎನ್ ಮೂರ್ತಿ, ಊರಿನ‌ ಮುಖಂಡ ಬಸವರಾಜ್ ಸ್ವಾಮಿ ಮೊದಲಾದವರು ಇದ್ದರು.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.