Udayavni Special

ಕೊಟ್ಟೂರು ರಥೋತ್ಸವ: ಸಕಲ ವ್ಯವಸ್ಥೆಗೆ ಸೂಚನೆ


Team Udayavani, Feb 11, 2019, 8:20 AM IST

gul-6.jpg

ಕೊಟ್ಟೂರು: ಶ್ರೀ ಗುರುಕೊಟ್ಟೂರೇಶ್ವರ ಸ್ವಾಮಿ ರಥೋತ್ಸವ ಫೆ. 28ರಂದು ವಿಜೃಂಭಣೆಯಿಂದ ನಡೆಯುವ ಹಿನ್ನೆಲೆಯಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಕೊಟ್ಟೂರಿಗೆ ಆಗಮಿಸಲಿದ್ದು, ಅವರ ಅನುಕೂಲಕ್ಕಾಗಿ ಸಕಲ ವ್ಯವಸ್ಥೆ ಕೈಗೊಳ್ಳಲಾಗುವುದು ಎಂದು ಶಾಸಕ ಎಸ್‌. ಭೀಮಾನಾಯ್ಕ ಹೇಳಿದರು.

ಶ್ರೀಗುರುಕೊಟ್ಟೂರೇಶ್ವರ ಸ್ವಾಮಿ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವ ನಿಮಿತ್ತ ಕೊಟ್ಟೂರೇಶ್ವರ ದೇವಸ್ಥಾನದ ಎದುರುಗಡೆ ಮುಜರಾಯಿ ಧಾರ್ಮಿಕ ದತ್ತಿ ಇಲಾಖೆವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಫೆಬ್ರವರಿ 28ರಂದು ನಡೆಯುವ ಶ್ರೀಗುರುಕೊಟ್ಟೂರೇಶ್ವರ ಸ್ವಾಮಿ ಮಹಾರಥೋತ್ಸವಕ್ಕೆ ಅತೀ ಹೆಚ್ಚು ಭಕ್ತರು ಆಗಮಿಸುವುದರಿಂದ ಪೊಲೀಸ್‌ ಇಲಾಖೆ ಸೂಕ್ತ ಭದ್ರತೆ ಕೈಗೊಳ್ಳಬೇಕು ಎಂದು ಸೂಚಿಸಿದರು.

ಆರೋಗ್ಯ ಮತ್ತು ತುರ್ತು ಚಿಕಿತ್ಸೆಗಾಗಿ ವೈದ್ಯಕೀಯ ಸಲಕರಣೆಗಳನ್ನು ಒಳಗೊಂಡ ಆಂಬ್ಯುಲೆನ್ಸ್‌ ವಾಹನ ವ್ಯವಸ್ಥೆ ಹಾಗೂ ಬಿಸಿಲಲ್ಲಿ ಬಳಲಿ ಬಂದ ಪಾದಯಾತ್ರಿ ಭಕ್ತಾದಿಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಮೂಲಸೌಲಭ್ಯಗಳನ್ನು ಒದಗಿಸಿಕೊಡಲು ತಾಲೂಕು ಆಡಳಿತ ಕ್ರಮ ಕೈಗೊಳ್ಳಬೇಕು ಎಂದರು.

ರಥೋತ್ಸವಕ್ಕೆ ಆಗಮಿಸುವ ಸುಮಾರು 5-6 ಲಕ್ಷ ಭಕ್ತರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸಿಕೊಡಬೇಕೆಂಬ ಕಾರಣಕ್ಕಾಗಿ ಧಾರ್ಮಿಕ ದತ್ತಿ ಇಲಾಖೆ ಸ್ಥಳೀಯ ಆಡಳಿತ ಪಟ್ಟಣ ಪಂಚಾಯಿತಿ ಸಹಕಾರ ಪಡೆದು ಪಟ್ಟಣದಲ್ಲಿ 2 ದೊಡ್ಡ ಮಟ್ಟದ ತಾತ್ಕಾಲಿಕ ಆರ್‌ಒ ಘಟಕಗಳನ್ನು ಸ್ಥಾಪಿಸಬೇಕು. ಕೊಟ್ಟೂರಿಗೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಈ ಘಟಕಗಳನ್ನು ಕೂಡಲೇ ತೆರೆಯಲು ಕಾರ್ಯಪ್ರವೃತ್ತರಾಗಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಪಪಂ ಮುಖ್ಯಾಧಿಕಾರಿ ಎಚ್.ಎಫ್‌. ಬಿದರಿ ಮಾತನಾಡಿ, ಜಾತ್ರೋತ್ಸವದ ಅವಧಿಯಲ್ಲಿ ಪಟ್ಟಣದ ಜನತೆಗೆ ಯಾವುದೇ ಹಂತದಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಪಟ್ಟಣ ಪಂಚಾಯತ್‌ ಆಡಳಿತ ಕ್ರಮ ಕೈಗೊಂಡಿದೆ. ಜೆಸ್ಕಾಂ ಇಲಾಖೆ ಸಮರ್ಪಕವಾದ ವಿದ್ಯುತ್‌ ನೀಡಿದ್ದಲ್ಲಿ ಪಟ್ಟಣದ ಜನತೆಗೆ ತೊಂದರೆಯಾಗದಂತೆ ನೀರು ಪೂರೈಸಲಾಗುವುದು ಎಂದರು.

ಜಾತ್ರಾ ಮಹೋತ್ಸವದಲ್ಲಿ ಯಾವುದೇ ಬಗೆಯ ವಿದ್ಯುತ್‌ ಅವಘಡ ಮತ್ತು ಭಕ್ತರಿಗೆ ತಕ್ಷಣದ ಚಿಕಿತ್ಸೆ ಒದಗಿಸಲು ಜೆಸ್ಕಾಂ ಹೆಲ್ಪ್ಲೈನ್‌ ಸಂಪರ್ಕ ಕಲ್ಪಿಸಬೇಕು. ಪಟ್ಟಣದ ನಾಲ್ಕೈದು ಕಡೆ ಉಪ ಆರೋಗ್ಯ ಕೇಂದ್ರಗಳನ್ನು ತೆರೆಯಬೇಕು ಎಂದು ಜೆಸ್ಕಾಂ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.

ಆರೋಗ್ಯ ಇಲಾಖೆ ಹೊರತುಪಡಿಸಿ ಖಾಸಗಿಯವರು ರಕ್ತದಾನ ಶಿಬಿರ ನಡೆಸಕೂಡದು. ಈ ಸಂಬಂಧ ತಾಲೂಕು ಆರೋಗ್ಯ ಅಧಿಕಾರಿ ಕ್ರಮ ಕೈಗೊಳ್ಳಬೇಕು. ಕೊಟ್ಟೂರೇಶ್ವರ ಸ್ವಾಮಿಯ ರಥದಲ್ಲಿ ಸ್ವಾಮಿಯೊಂದಿಗೆ ಕೇವಲ 12 ಪೂಜಾಕರ್ತರು ರಥದಲ್ಲಿ ಆಸೀನರಾಗಬೇಕು. 12ಕ್ಕಿಂತ ಒಬ್ಬರು ಹೆಚ್ಚಾದರೂ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ತಹಶೀಲ್ದಾರ್‌ ಮಂಜುನಾಥ ಎಚ್ಚರಿಸಿದರು.

ಈ ವೇಳೆ ಮಾತನಾಡಿದ ಶಾಸಕರು, ಜಾತ್ರಾ ಮಹೋತ್ಸವ ಯಶಸ್ವಿಯಾಗಿ ಪೂರ್ಣಗೊಳ್ಳಲು ಅಧಿಕಾರಿಗಳು ತಮಗೆ ನಿರ್ವಹಿಸಿದ ಕಾರ್ಯವನ್ನು ನಿರ್ಲಕ್ಷ್ಯ ವಹಿಸದೆ ಶೀಘ್ರವಾಗಿ ಮಾಡಬೇಕು ಎಂದು ಸೂಚಿಸಿದರು.

ಹೊಸಪೇಟೆ ಸಹಾಯಕ ಆಯುಕ್ತ ಲೋಕೇಶ, ಧ‌ರ್ಮಕರ್ತ ಸಿ.ಎಚ್.ಎಂ. ಗಂಗಾಧರ, ಕ್ರಿಯಾಮೂರ್ತಿ ಶಂಕರಸ್ವಾಮೀಜಿ, ಎಂ.ಎಂ.ಜೆ. ಹರ್ಷವರ್ಧನ್‌, ಜಿಪಂ ಸದಸ್ಯ ಉಜ್ಜಯಿನಿ, ಡಿವೈಎಸ್‌ಪಿ ಬಸವೇಶ್ವರ, ಸಿಪಿಐ ಎಂ. ರವೀಂದ್ರ ಕುರಬಗಟ್ಟಿ, ಪಿಎಸ್‌ಐ ತಿಮ್ಮಣ್ಣ, ಪಿ.ಎಚ್. ದೊಡ್ಡರಾಮಣ್ಣ, ದ್ವಾರಕೀಶ್‌, ಬೂದಿ ಶಿವಕುಮಾರ್‌, ಪಪಂ ನೂತನ ಸದಸ್ಯರು ಇತರರು ಇದ್ದರು. ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ಎಸ್‌.ಪಿ.ಬಿ. ಮಹೇಶ್‌ ಸ್ವಾಗತಿಸಿದರು. ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಚ್. ಪ್ರಕಾಶ್‌ರಾವ್‌ ವಂದಿಸಿದರು.

ಟಾಪ್ ನ್ಯೂಸ್

ಕೆ.ಜಿ.ಹಳ್ಳಿ: ನಿರ್ಮಾಣದ ಹಂತದ ಕಟ್ಟಡದ ಸಂಪ್ ಗೆ ಬಿದ್ದು 14 ವರ್ಷದ ಬಾಲಕ ಸಾವು

ಕೆ.ಜಿ.ಹಳ್ಳಿ: ನಿರ್ಮಾಣದ ಹಂತದ ಕಟ್ಟಡದ ಸಂಪ್ ಗೆ ಬಿದ್ದು 14 ವರ್ಷದ ಬಾಲಕ ಸಾವು

ಅಸಹಾಯಕತೆಯಿಂದ ಅಸಂಬದ್ಧ ಹೇಳಿಕೆ ನೀಡುತ್ತಿರುವ ಸಿದ್ದರಾಮಯ್ಯ: ಸಚಿವ ಸುನೀಲ್ ಕುಮಾರ್

ಅಸಹಾಯಕತೆಯಿಂದ ಅಸಂಬದ್ಧ ಹೇಳಿಕೆ ನೀಡುತ್ತಿರುವ ಸಿದ್ದರಾಮಯ್ಯ: ಸಚಿವ ಸುನೀಲ್ ಕುಮಾರ್

virat kohli k l rahul ishan kishan

ಇಶಾನ್, ರಾಹುಲ್, ವಿರಾಟ್: ಟಿ20 ವಿಶ್ವಕಪ್ ನಲ್ಲಿ ಭಾರತದ ಆರಂಭಿಕ ಆಟಗಾರ ಯಾರು?

ಕಾರಿನ ದಾಖಲೆ ತೋರಿಸಲು ಕೇಳಿದ ಟ್ರಾಫಿಕ್ ಕಾನ್ಸಟೇಬಲ್ ಅನ್ನೇ ಅಪಹರಿಸಿದ!

ಕಾರಿನ ದಾಖಲೆ ತೋರಿಸಲು ಕೇಳಿದ ಟ್ರಾಫಿಕ್ ಕಾನ್ಸ್ ಟೇಬಲ್ ಅನ್ನೇ ಅಪಹರಿಸಿದ!

ಹಿಂದೂಗಳ ವಿರುದ್ಧ ದ್ವೇಷ: ದೇವಾಲಯ ಧ್ವಂಸ, ಬಾಂಗ್ಲಾ ಪೊಲೀಸರಿಂದ 450 ಮಂದಿ ಬಂಧನ

ಹಿಂದೂಗಳ ವಿರುದ್ಧ ದ್ವೇಷ: ದೇವಾಲಯ ಧ್ವಂಸ, ಬಾಂಗ್ಲಾ ಪೊಲೀಸರಿಂದ 450 ಮಂದಿ ಬಂಧನ

ghfghftyyht

ಬಾಲಿವುಡ್ ನಟಿ ಯುವಿಕಾ ಚೌಧರಿಗೆ ಮಧ್ಯಂತರ ಜಾಮೀನು ಮಂಜೂರು

ms dhoni and n srinivasan

ಎಂ.ಎಸ್.ಧೋನಿ ಇಲ್ಲದ ಚೆನ್ನೈ ಸೂಪರ್ ಕಿಂಗ್ಸ್ ಇಲ್ಲ: ಶ್ರೀನಿವಾಸನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ballari news

ಕರಿಬೇವು ಬೆಳೆದು ಕೈತುಂಬ ಆದಾಯ

ಸತ್ಕಾರ ಪುರುಷ ಸಕ್ಕರೆ ಕರಡೀಶ ಚಿತ್ರೀಕರಣಕ್ಕೆ ಚಾಲನೆ

ಸತ್ಕಾರ ಪುರುಷ ಸಕ್ಕರೆ ಕರಡೀಶ ಚಿತ್ರೀಕರಣಕ್ಕೆ ಚಾಲನೆ

ನಂಬಿದ ಕಂದಮ್ಮಗಳಿಗೆ ಕರಿಕಂಬಳಿ ನೆರಳಾದೀತಲೇ ಪರಾಕ್‌..

ನಂಬಿದ ಕಂದಮ್ಮಗಳಿಗೆ ಕರಿಕಂಬಳಿ ನೆರಳಾದೀತಲೇ ಪರಾಕ್‌..

hampi news

ಹಂಪಿಗೆ ಹರಿದು ಬಂದ ಜನಸಾಗರ!

ಕೊಟ್ಟೂರಿನಲ್ಲಿ ದಸರಾ ಮಹೋತ್ಸವ  

ಕೊಟ್ಟೂರಿನಲ್ಲಿ ದಸರಾ ಮಹೋತ್ಸವ  

MUST WATCH

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

udayavani youtube

ದಾಂಡೇಲಿ ನಗರ ಸಭೆಯಲ್ಲಿ ಮಾಹಿತಿ ಹಕ್ಕು ಅಧಿನಿಯಮ ಉಲ್ಲಂಘನೆ ಅಕ್ರಂ ಖಾನ್ ಆರೋಪ

udayavani youtube

ಸರಕಾರಿ ಆಸ್ತಿ ಸಂರಕ್ಷಿಸದ ಅಧಿಕಾರಿ ವಿರುದ್ದ ಕ್ರಿಮಿನಲ್ ಮೊಕದ್ದಮೆ : ಶಾಸಕ ಎಚ್ಚರಿಕೆ

ಹೊಸ ಸೇರ್ಪಡೆ

ballari news

ಕರಿಬೇವು ಬೆಳೆದು ಕೈತುಂಬ ಆದಾಯ

davanagere news

ಆರೋಗ್ಯ ಜಾಗೃತಿ ಅಭಿಯಾನಕ್ಕೆ ಚಾಲನೆ

26

ಪ್ರಶಸ್ತಿಯಿಂದ ಸಾಧಕನ ಜವಾಬ್ದಾರಿ ವೃದ್ದಿ

davanagere news

ದಣಿವರಿಯದ ಕೊರೊನಾ ಸೇನಾನಿ ಶಾಸಕ ರೇಣುಕಾಚಾರ್ಯ!

chitrdurga news

ಸಾಲ ಸಂಪರ್ಕ ಕಾರ್ಯಕ್ರಮದಲ್ಲಿ ಜನ ಜಾಗೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.