ಸ್ವಯಂ ಪ್ರೇರಣೆಯಿಂದ ನೋಂದಣಿ ಕಚೇರಿ ಸೀಲ್ಡೌನ್
Team Udayavani, Jul 1, 2020, 5:58 PM IST
ಕುರುಗೋಡು: ಉಪ ನೋಂದಣಾಧಿಕಾರಿಗಳ ಕಚೇರಿ ಮುಂದೆ ಬ್ಯಾರಿಕೇಡ್ ಅಳವಡಿಸಿರುವುದು.
ಕುರುಗೋಡು: ಪಟ್ಟಣದ ಉಪ ನೋಂದಣಾಧಿಕಾರಿಗಳ ಕಚೇರಿಯನ್ನು ಅದರಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮಂಗಳವಾರ ಬೆಳಗ್ಗೆ 44 ಗಂಟೆಗಳ ಕಾಲ ಸ್ವಯಂ ಪ್ರೇರಿತವಾಗಿ ಸೀಲ್ಡೌನ್ ಮಾಡಿ ಕಚೇರಿ ಮುಂಭಾಗದಲ್ಲಿ ಬ್ಯಾರಿಕೇಡ್ ಅಳವಡಿಸಿದ್ದಾರೆ.
ಬಳ್ಳಾರಿ ನಿವಾಸದ ವ್ಯಕ್ತಿಯು ಪಟ್ಟಣದ ಉಪ ನೋಂದಣಾಧಿಕಾರಿಗಳ ಕಚೇರಿಗೆ ಕಂಪ್ಯೂಟರ್ ರಿಪೇರಿ ಮಾಡಲು ಬಂದು ಹೋಗಿದ್ದು, ಆ ವ್ಯಕ್ತಿಗೆ ಕೋವಿಡ್ ಸೋಂಕು ಇರುವುದು ದೃಢವಾಗಿರುವ ಹಿನ್ನೆಲೆಯಲ್ಲಿ ಕಚೇರಿಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಸ್ವಯಂ ಪ್ರೇರಿತದಿಂದ 44 ಗಂಟೆಗಳ ಕಾಲ ಸೀಲ್ಡೌನ್ ಮಾಡಿದ್ದಾರೆ. ಇನ್ನು ಕಚೇರಿ ಮುಂಭಾಗದಲ್ಲಿ ಬ್ಯಾರಿಕೇಡ್ ಅಳವಡಿಸಿ ಸ್ಯಾನಿಟೈಸರ್ ಸಿಂಪಡಣೆ ಮಾಡಿದ್ದಾರೆ.
ಕಚೇರಿ ಸೀಲ್ಡೌನ್ ಮಾಡಿರುವ ಹಿನ್ನೆಲೆ ಅಧಿಕಾರಿಗಳು ಮಂಗಳವಾರ ಬೆಳಗ್ಗೆಯಿಂದ ಸಂಜೆವರೆಗೆ ಕಚೇರಿ ಹೊರಗಡೆ ಇದ್ದು ಮರಳಿದ್ದಾರೆ. ಪಟ್ಟಣದ 7ನೇ ವಾರ್ಡಿನಲ್ಲಿ ಕೋವಿಡ್ ಮೊದಲ ಪ್ರಕರಣ ಪತ್ತೆಯಾದ ಹಿನ್ನೆಲೆ ಕಚೇರಿ ಸೀಲ್ಡೌನ್ ಅಗಿದ್ದು, ಪಟ್ಟಣದ ಸಾರ್ವಜನಿಕರಲ್ಲಿ ಆತಂಕದ ಮನೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
Dublin; ಆಸೀಸ್ ಸರಣಿ ಮುಂದೂಡಿದ ಐರ್ಲೆಂಡ್
T20 Cricket: “ವಿಂಡೀಸ್ ಪರ ಟಿ20 ವಿಶ್ವಕಪ್ ಆಡಲ್ಲ’: ಸುನೀಲ್ ನಾರಾಯಣ್ ಸ್ಪಷ್ಟ ನುಡಿ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Tapi River; ಸಲ್ಮಾನ್ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!