ಜಿಂದಾಲ್ ವಿರುದ್ಧ ಸಿಡಿದೆದ್ದ ಲಾಡ್‌-ಸಿಂಗ್‌!

Team Udayavani, Jun 18, 2019, 10:44 AM IST

balary-tdy-1..

ಬಳ್ಳಾರಿ: ಮಾಜಿ ಶಾಸಕ ಅನಿಲ್ ಲಾಡ್‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಶಾಸಕ ಆನಂದ್‌ಸಿಂಗ್‌ ಸೇರಿದಂತೆ ಇತರರು ಹಾಜರಿದ್ದರು.

ಬಳ್ಳಾರಿ: ಜಿಂದಾಲ್ ಸಂಸ್ಥೆ ಸಂಡೂರು ತಾಲೂಕಿನಲ್ಲಿ ಸಾಕಷ್ಟು ಜಮೀನು ವಶಪಡಿಸಿಕೊಂಡಿದೆ. ಇದಕ್ಕೆ ಅಲ್ಲಿನ ಶಾಸಕರು ಧ್ವನಿ ಎತ್ತಬೇಕು. ಜಿಂದಾಲ್ ಸಂಸ್ಥೆಯಲ್ಲಿ ಉದ್ಯೋಗ ನೀಡುವಂತೆ ಹಲವಾರು ಬಾರಿ ಶಿಫಾರಸು ಪತ್ರ ಕಳುಹಿಸಲಾಗಿದೆ. ಒಂದು ಪತ್ರಕ್ಕೂ ಪ್ರತಿಕ್ರಿಯೆ ನೀಡಿಲ್ಲ ಎಂದು ವಿಜಯನಗರ ಶಾಸಕ ಆನಂದ್‌ಸಿಂಗ್‌ ಆರೋಪಿಸಿದರು.

ಸೋಮವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಡೂರು ಶಾಸಕ, ಸಚಿವ ತುಕಾರಾಂ ಪತ್ರ ಕೊಟ್ಟರೂ ಆಗಲ್ಲ. ಖುದ್ದಾಗಿ ಹೋಗಿ ಭೇಟಿಯಾದರೆ ಮಾತ್ರ ಕೆಲಸಗಳು ಆಗುತ್ತವೆ ಎಂದು ಹೇಳಿದರು.

ಮಾಜಿ ಶಾಸಕ ಅನಿಲ್ ಲಾಡ್‌ ಮಾತನಾಡಿ, ಜಿಂದಾಲ್ ಸಂಸ್ಥೆಗೆ ಜಮೀನು ಪರಭಾರೆ ಮಾಡಲು ಹೊರಟಿರುವ ರಾಜ್ಯ ಸರ್ಕಾರ ಎಕರೆ ಜಮೀನಿಗೆ ಕೇವಲ 1.22 ಲಕ್ಷ ರೂ. ನಿಗದಿಪಡಿಸಿದೆ. ಒಟ್ಟು 3667 ಎಕರೆಗೆ ಕೇವಲ 43.99 ಕೋಟಿ ರೂ. ಆಗಲಿದೆ. ಆದರೆ, ಇದೇ ಜಮೀನನ್ನು ಜಿಂದಾಲ್ಗೆ ಪರಭಾರೆಯಾಗಿ ಜಿಂದಾಲ್ನವರು ಬ್ಯಾಂಕ್‌ನಲ್ಲಿ ಅಡವಿಟ್ಟು ಸಾಲ ಪಡೆದರೆ ಸಾವಿರಾರು ಕೋಟಿ ರೂ. ಸಾಲ ದೊರೆಯಲಿದೆ. 3667 ಎಕರೆ ಜಮೀನು ವಾಣಿಜ್ಯಕ್ಕೆಂದು ಪರಿವರ್ತಿಸಲಾಗಿರುವ ಹಿನ್ನೆಲೆಯಲ್ಲಿ ಜಿಂದಾಲ್ನವರು ಕೊಲೆಟ್ರಾಲ್ ಜಮೀನನ್ನಾಗಿ ಎಕರೆಗೆ 50 ಲಕ್ಷ ರೂ. ಬೆಲೆ ನಿಗದಿಪಡಿಸಿ ಬ್ಯಾಂಕ್‌ನಲ್ಲಿ ಅಡವಿಟ್ಟರೆ 1866 ಕೋಟಿ ರೂ. ಸಾಲ ದೊರೆಯಲಿದೆ. ಲೆಕ್ಕಪರಿಶೋಧಕರಿಂದ ಆಡಿಟಿಂಗ್‌ ಮಾಡಿಸಿ ಎಕರೆಗೆ 1 ಕೋಟಿ ರೂ. ಬೆಲೆ ನಿಗದಿಪಡಿಸಿ ಬ್ಯಾಂಕ್‌ನಲ್ಲಿ ಅಡವಿಟ್ಟರೂ 3667 ಕೋಟಿ ರೂ. ಸಾಲ ಲಭ್ಯವಾಗಲಿದೆ. ಜಿಂದಾಲ್ ಸಂಸ್ಥೆಗೆ ಲಾಭ ಒದಗಿಸಿಕೊಡಲು ರಾಜ್ಯ ಸರ್ಕಾರವೇ ಪರೋಕ್ಷವಾಗಿ ಬೆಂಬಲಿಸುತ್ತಿದೆ. ಆದ್ದರಿಂದ ಹಣಕಾಸು ಇಲಾಖೆ ಕಾರ್ಯದರ್ಶಿಗಳು ಜಮೀನು ಪರಭಾರೆ ಮಾಡದೆ ಲೀಜ್‌ ಮುಂದುವರಿಸಬೇಕು. ಯಾವುದೇ ಬ್ಯಾಂಕ್‌ನಲ್ಲಿ ಸಾಲಕ್ಕಾಗಿ ಅಡಮಾನವಿಡಬಾರದೆಂಬ ಷರತ್ತು ವಿಧಿಸಬೇಕೆಂದು ಒತ್ತಾಯಿಸಿದರು.

ಪಾಲಿಕೆ ಸದಸ್ಯೆ ಪರ್ವಿನ್‌ಬಾನು, ಲಾರಿ ಮಾಲೀಕರ ಸಂಘದ ಅಧ್ಯಕ್ಷ ವೆಂಕಟರಾವ್‌, ಹರ್ಷದ್‌, ವೆಂಕಟೇಶ್‌ ಹೆಗಡೆ, ರಾಮಕೃಷ್ಣ, ಸೋಮಶೇಖರ್‌ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿ ಇದ್ದರು.

ಜಿಲ್ಲೆಯ ಸಂಡೂರು ತಾಲೂಕು ವ್ಯಾಪ್ತಿಯಲ್ಲಿನ ಜಿಂದಾಲ್ ಸಂಸ್ಥೆ ಸುತ್ತಮುತ್ತಲಿನ ಹಳ್ಳಿಗಳಲ್ಲಿ ‘ರಿಪಬ್ಲಿಕ್‌ ಆಫ್‌ ಜಿಂದಾಲ್ SNG-QTS ಆಗಿದೆ. ಸುತ್ತಮುತ್ತಲ ಹಳ್ಳಿಗಳಲ್ಲಿ ಯಾವುದೇ ಸಭೆ-ಸಮಾರಂಭಗಳು ನಡೆಯುವಂತಿಲ್ಲ. ಒಂದು ವೇಳೆ ನಡೆದರೂ ಯಾರೊಬ್ಬರೂ ಮಾತನಾಡುವಂತಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಮಾತನಾಡುವ ಹಕ್ಕಿದೆ. ಜಿಂದಾಲ್ ಸುತ್ತಮುತ್ತ ಮಾತನಾಡಲು ಸ್ಥಳೀಯರೇ ಆಗಿರಬೇಕು. ಒಂದು ವೇಳೆ ಬೇರೆಯವರು ಮಾತನಾಡಿದರೆ ಅಲ್ಲಿನ ಪೊಲೀಸರೇ ಮೊದಲು ನೀನಾರು? ಎಲ್ಲಿಂದ ಬಂದಿದ್ದೀಯಾ? ಎಂದು ಬೆದರಿಸಿ ಕಳುಹಿಸುತ್ತಾರೆ. ಬೇರೆಯವರಿಗೆ ಮಾತನಾಡಲು ಅವಕಾಶವೇ ಇಲ್ಲ. ಅಲ್ಲಿನ ಪೊಲೀಸರೇ ಜಿಂದಾಲ್ ಸಂಸ್ಥೆ ರಕ್ಷಣೆಗೆ ನಿಂತಿದ್ದಾರೆ. •ಬಿ.ಎಸ್‌.ಆನಂದ್‌ಸಿಂಗ್‌, ಶಾಸಕರು, ವಿಜಯನಗರ (ಹೊಸಪೇಟೆ) ಕ್ಷೇತ್ರ.

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.