ಅರಣ್ಯ ಇಲಾಖೆ ಬೋನಿಗೆ ಚಿರತೆ
Team Udayavani, Feb 26, 2019, 6:43 AM IST
ಗಂಗಾವತಿ: ಕೆಲವು ತಿಂಗಳುಗಳಿಂದ ಜನ ಜಾನುವಾರುಗಳಿಗೆ ತೊಂದರೆ ನೀಡುತ್ತಿದ್ದ ಚಿರತೆಯನ್ನು ಸೋಮವಾರ ಬೆಳಗಿನ ಜಾವ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ತಾಲೂಕಿನ ಆನೆಗೊಂದಿ ವಾಲೀಕಿಲ್ಲಾ ತಳವಾರಘಟ್ಟ ಪ್ರದೇಶದಲ್ಲಿ ಆಗಾಗ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದ 7 ವರ್ಷದ ಗಂಡು ಚಿರತೆ ಅರಣ್ಯ ಇಲಾಖೆ ತಳವಾರ ಘಟ್ಟ ಪ್ರದೇಶದಲ್ಲಿ ಇಟ್ಟಿದ್ದ ಬೋನಿಗೆ ಬಿದ್ದಿದೆ. ಆಡು, ಕುರಿ ಹೊತ್ತೂಯ್ದಿತ್ತು. ಇತ್ತೀಚೆಗೆ ಕುದುರೆಯನ್ನು ಕೊಂದು ಹಾಕಿತ್ತು.
ಇದರಿಂದ ಆತಂಕಗೊಂಡ ಜನರು ಅರಣ್ಯ ಇಲಾಖೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ಬೋನ್ ಇರಿಸಲಾಗಿತ್ತು. ಸೋಮವಾರ ಬೆಳಗಿನ ಜಾವದಲ್ಲಿ ಚಿರತೆ ಬೋನಿಗೆ ಬಿದ್ದಿದೆ. ಅರಣ್ಯ ಇಲಾಖೆ ವೀಕ್ಷಕ ರಾಮಣ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ವೈದ್ಯಕೀಯ ಪರೀಕ್ಷೆ ನಂತರ ಮೇಲಾಧಿಕಾರಿಗಳ ಆದೇಶದಂತೆ ದೂರದ ಅರಣ್ಯ ಪ್ರದೇಶಕ್ಕೆ ಬಿಡಲಾಗುತ್ತದೆ ಎಂದು ಅರಣ್ಯ ಇಲಾಖೆಯ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ