ಬಾಲ್ಯವಿವಾಹ ಕಾಯ್ದೆ ಪರಿಣಾಮಕಾರಿಯಾಗಲಿ

Team Udayavani, Nov 10, 2019, 12:54 PM IST

ballary-tdy-2

ಬಳ್ಳಾರಿ: ಬಾಲ್ಯ ವಿವಾಹದ ಪ್ರಕರಣಗಳನ್ನು ಕಾಟಾಚಾರಕ್ಕೆ ದಾಖಲು ಮಾಡದೆ, ಹೆಚ್ಚಿನ ಪ್ರಮಾಣದಲ್ಲಿ ಜಾಗೃತಿ ಮೂಡಿಸಿ ಪರಿಣಾಮಕಾರಿಯಾಗಿ ಕ್ರಮಕೈಗೊಳ್ಳಬೇಕು ಎಂದು 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರನ್ಯಾಯಾಧೀಶ ಎಂ. ಖಾಸಿಂ ಚೂರಿಖಾನ್‌ ಹೇಳಿದರು.

ನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಬಾಲ್ಯ ವಿವಾಹ ನಿಷೇಧ ಕಾಯ್ದೆ-2006, ಬಾಲ್ಯ ವಿವಾಹ ನಿಷೇಧ(ಕರ್ನಾಟಕತಿದ್ದುಪಡಿ) ಕಾಯ್ದೆ-2006, ಬಾಲ್ಯ ವಿವಾಹ ನಿಷೇಧ ಕರ್ನಾಟಕ ನಿಯಮಾವಳಿ-2014 ಕುರಿತು ಬಾಲ್ಯವಿವಾಹ ನಿಷೇಧಾ ಕಾರಿಗಳ ಮತ್ತು ನ್ಯಾಯಾಧೀಶರುಗಳಿಗೆ ಒಂದು ದಿನದ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ಪ್ರತಿ 20 ಮದುವೆಯಲ್ಲಿ 5 ಬಾಲ್ಯವಿವಾಹಗಳು ನಡೆಯುತ್ತಿವೆ. ಬಾಲ್ಯವಿವಾಹ ಸಮಾಜವನ್ನು ಪಿಡುಗಾಗಿ ಕಾಡುತ್ತಿದೆ. ಕಾನೂನು ಇದ್ದರು ಪರಿಣಾಮಕಾರಿ ಕ್ರಮಕೈಗೊಳ್ಳುತ್ತಿಲ್ಲ. ಇಲಾಖೆಗಳು, ಸಂಘ-ಸಂಸ್ಥೆ ನಾನಾ ಜಾಗೃತಿ ಮೂಡಿಸಿದರೂ, ಸಮಾಜದಲ್ಲಿ ಹೆಣ್ಣು ಎಂದರೆ ಭಾರ ಎನ್ನುವ ಮನೋಭಾವ, ಬಡತನ, ಆಸೆ ಆಮಿಷ, ಅಸಮರ್ಥನೆ ಸೇರಿ ನಾನಾ ಕಾರಣಗಳಿಂದ ಇನ್ನೂ ಜೀವಂತವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು. ಬಾಲ್ಯವಿವಾಹ ನಿಷೇಧ ಕಾಯ್ದೆಯು ಮೊದಲಿನಿಂದಲೂ ಜಾರಿಯಲ್ಲಿದೆ ಎಂದ ಅವರು, ಬಾಲ್ಯ ವಿವಾಹಗಳು ಮೊದಲಿಗಿಂತಲೂ ಕಡಿಮೆ ಎನಿಸಿದರೂ ಕಾಯ್ದೆಯು ಪರಿಣಾಮಕಾರಿಯಾಗಿ ಜಾರಿಯಾಗುತ್ತಿಲ್ಲ. ವರ್ಷಕ್ಕೊಂದು ಪ್ರಕರಣ ದಾಖಲಿಸುವುದು, ಕಾಟಾಚಾರಕ್ಕೆ ಪ್ರಕರಣ ದಾಖಲು ಮಾಡುವುದು ಅಲ್ಲ. ಅದನ್ನು ಸಂಪೂರ್ಣವಾಗಿ ತಡೆಯಲು ಅ ಧಿಕಾರಿಗಳು ಯಾವುದೇ ಒತ್ತಡಕ್ಕೆ ಒಳಗಾಗದೇ, ಕ್ರಮಕೈಗೊಳ್ಳಬೇಕು. ಒಂದು ಗ್ರಾಮದಲ್ಲಿ ಪ್ರಕರಣ ದಾಖಲಾದರೆ, ಪಕ್ಕದ ಗ್ರಾಮಗಳಲ್ಲಿನ ಜನರು ಸಹ ಜಾಗೃತರಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಧ್ಯಕ್ಷತೆ ವಹಿಸಿದ್ದ ಜಿಪಂ ಸಿಇಒ ಕೆ.ನಿತೀಶ್‌, ಬಾಲ್ಯವಿವಾಹದ ಬಗ್ಗೆ ಎಸ್‌ಸಿ, ಎಸ್‌ಟಿ, ಕೆಳವರ್ಗದ ಜನರಿಗೆ ಹೆಚ್ಚಿನ ಜಾಗ್ರತಿ ಮೂಡಿಸಬೇಕಾಗಿದೆ. ಕಾನೂನಿನ ಪ್ರಕಾರ ಪ್ರಕರಣ ದಾಖಲಾಗುತ್ತದೆ. ಆದ್ದರಿಂದ ಮಹಿಳಾ ಮತ್ತುಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್‌ ಇಲಾಖೆ ಹೆಚ್ಚಿನ ಸಹಕಾರ ನೀಡಬೇಕು. ಪ್ರಕರಣ ದಾಖಲಿಸಿ ಕಾನೂನಿಗೆ ಹೆಚ್ಚು ಬಲ ನೀಡಿದರೆ ತಪ್ಪಿತಸ್ಥರಿಗೆ ಖಂಡಿತ ಶಿಕ್ಷೆಯಾಗುತ್ತದೆ. ಜತೆಗೆ ಜಾಗೃತಿಯೂ ಮೂಡುತ್ತದೆ. ಅಲ್ಲದೇ, ಬಾಲ್ಯವಿವಾಹದ ಬಗ್ಗೆ ಜನರಿಗೆ ಜಾಗೃತಿ ಮೂಡಿಸಲು ಜನಪ್ರತಿನಿಧಿ ಗಳು ಸಹ ಮುಂದಾಗಬೇಕು. ಜತೆಗೆ ಸ್ಥಳೀಯರು ಪ್ರೋತ್ಸಾಹ ನೀಡಿದಲ್ಲಿ ಅದನ್ನು ಸಂಪೂರ್ಣವಾಗಿ ನಿಯಂತ್ರಿಸಬಹುದು ಎಂದು ತಿಳಿಸಿದರು.

ಜಿ.ಪಂ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ, ಉಪಾಧ್ಯಕ್ಷೆ ದಿನಾ ಮಂಜುನಾಥ ಮಾತಮಾಡಿದರು. ನ್ಯಾಯಾಂಗ ದಂಡಾಧಿಕಾರಿ ಸುಜಾತಾ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರ್ಜುನ್‌ ಎಸ್‌.ಮಲ್ಲೂರ್‌, ಕಾನೂನು ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ| ಉಡೇದ ಷಡಾಕ್ಷರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಎಸ್‌.ಉಷಾ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.