ದೇಶದ ಭಾವೈಕ್ಯ ಮೊದಲ ಧ್ಯೇಯವಾಗಲಿ: ಡಾ| ಸುಬ್ಬರಾವ್‌

Team Udayavani, Jan 19, 2019, 7:37 AM IST

bell-3.jpg

ಬಳ್ಳಾರಿ: ವಿದ್ಯಾರ್ಥಿಗಳು ಉನ್ನತ ಹುದ್ದೆಗಳನ್ನು ಅಲಂಕರಿಸುವ, ಜನಪ್ರತಿನಿಧಿಗಳಾಗುವ ಅವಕಾಶ ಬಂದಾಗ ದೇಶದ ಭಾವೈಕ್ಯತೆ ನಿಮ್ಮ ಮೊದಲ ಧ್ಯೇಯವಾಗಿರಬೇಕು ಎಂದು ರಾಷ್ಟ್ರೀಯ ಯುವ ಯೋಜನೆಯ ದೆಹಲಿಯ ನಿರ್ದೇಶಕ ಡಾ| ಎಸ್‌.ಎನ್‌.ಸುಬ್ಬರಾವ್‌ ಕಿವಿಮಾತು ಹೇಳಿದರು.

ನಗರದ ಕಿತ್ತೂರುರಾಣಿ ಚನ್ನಮ್ಮ ಬಾಲಕಿಯರ ಪ್ರೌಢಶಾಲೆಯಲ್ಲಿ ಭಾರತ ಸೇವಾದಳ, ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ರಾಜ್ಯಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಲ್ಲಿ ಉನ್ನತ ಅಧಿಕಾರಿಗಳಾಗುವ, ಮುಖ್ಯಮಂತ್ರಿ, ಪ್ರಧಾನಮಂತ್ರಿ ಸೇರಿ ಇನ್ನಿತರೆ ಜನಪ್ರತಿನಿಧಿಗಳಾಗುವ ಎಲ್ಲ ಅವಕಾಶಗಳು ಇವೆ. ಅಂತಹ ಸಂದರ್ಭ, ಸನ್ನಿವೇಶಗಳು ಒದಗಿ ಬಂದಾಗ ದೇಶದ ಭಾವೈಕ್ಯತೆ ನಿಮ್ಮ ಧ್ಯೇಯವಾಗಬೇಕು. ದೇಶವನ್ನು ಮುನ್ನಡೆಸುವ, ಶಕ್ತಿ ತುಂಬುವ ಕೆಲಸ ಮಾಡಬೇಕು ಎಂಬ ಉದ್ದೇಶದಿಂದ ಡಾ| ನಾ.ಸು.ಹರ್ಡೀಕರ್‌ ಭಾರತ ಸೇವಾದಳವನ್ನು ಸ್ಥಾಪಿಸಿದ್ದರು. ಅವರ ಆಶಯದಂತೆ ಇಂದು ಸಂಸ್ಥೆಯು ಮುನ್ನಡೆಯುತ್ತಿದೆ ಎಂದು ತಿಳಿಸಿದರು.

ಸ್ವತಂತ್ರ ಭಾರತದ ನಾಗರಿಕರಾದವರು ಸಳ್ಳು, ಮೋಸ ಮಾಡದೆ ಭ್ರಷ್ಟಾಚಾರ ನಡೆಸದೆ ಜನಸೇವೆ ನಡೆಸುವವನೇ ನಿಜವಾದ ದೇಶಭಕ್ತನಾಗಲು ಸಾಧ್ಯ. ಸಮಾಜ ಸೇವೆಗೆ ಜೀವನ ಅರ್ಪಿಸುವಂತೆ ಪ್ರೇರೇಪಿಸುವ ಕೆಲಸವನ್ನು ಭಾರತ ಸೇವಾದಳ ಮಾಡುತ್ತಿದೆ. ಭಾರತ ಸೇವಾದಳ ಶಾಲೆಗಳಲ್ಲಿ ಶಿಸ್ತು, ದೇಶಪ್ರೇಮ, ಸೇವಾ ಮನೋಭಾವ ಕಲಿಸುತ್ತಿದೆ. ಶಿಕ್ಷಕರು ನನಗೆ ಉತ್ತಮ ಮೌಲ್ಯಗಳನ್ನು ಕಲಿಸಿದ ಕಾರಣಕ್ಕೆ ನಾನು ಬಡವರು, ದೀನ ದಲಿತರ ಎಳ್ಗೆಗೆ ಶ್ರಮಿಸುವ ಉತ್ತಮ ಗುಣಗಳನ್ನು ಮೈಗೂಡಿಸಿಕೊಂಡಿದ್ದೇನೆ. ಅದೇರೀತಿ ಹಳೆಯ ವಿದ್ಯಾರ್ಥಿಗಳೆಲ್ಲರೂ ನಾವೆಲ್ಲರೂ ಒಂದು ಎಂಬ ಭಾವನೆಯಿಂದ ಜೀವಿಸಬೇಕು ಎಂದು ಕೋರಿದರು.

ವಿಜ್ಞಾನ, ತಂತ್ರಜ್ಞಾನದ ಹೆಸರಿನಲ್ಲಿ ಸಂಸ್ಕೃತಿ ಮರೆಯುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಇಂಥ ಮೇಳಗಳ ಅಗತ್ಯವಿದೆ. ವಿದ್ಯಾರ್ಥಿಗಳಲ್ಲಿ ಭಾವೈಕ್ಯತೆ ಮೂಡಿಸುವ ಜತೆಗೆ ರಾಷ್ಟ್ರಧ್ವಜ ಸಂಹಿತೆ, ಮಿಲಾಕ್‌ ಶಿಬಿರದ ಮೂಲಕ ಶಿಕ್ಷಕರಿಗೆ ದೇಶ ಪ್ರೇಮದ ಪಾಠವನ್ನು ಹೇಳಿಕೊಡಲಾಗುತ್ತಿದೆ ಎಂದು ತಿಳಿಸಿದರು.

ಸೇವಾದಳ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಂ.ವಿ.ದೇವಿಪ್ರಸಾದ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. ಭಾರತ ಸೇವಾದಳ ಸಂಸ್ಥೆಯು ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ 18 ರಚನಾತ್ಮಕ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಅವರ ತತ್ವಾದರ್ಶಗಳನ್ನು ಜಾರಿಗೆ ತರುವುದಾಗಿದೆ. ಶಾಲಾ-ಕಾಲೇಜು ವಿದ್ಯಾರ್ಥಿನಿಯರನ್ನು ಮತ್ತು ಯುವಜನರನ್ನು ಸಂಘಟಿಸಿ ಅವರಲ್ಲಿ ಶಿಸ್ತು, ಸಂಯಮ, ಧೈರ್ಯ, ಸ್ಥೈರ್ಯ, ತ್ಯಾಗ ಮನೋಭಾವನೆ, ದೇಶಪ್ರೇಮ, ರಾಷ್ಟ್ರೀಯ ಭಾವೈಕ್ಯತೆ, ಕೋಮು ಸೌಹಾರ್ದತೆ, ಅಸ್ಪೃಶ್ಯತಾ ನಿವಾರಣೆ ಸೇರಿದಂತೆ ಮುಂತಾದ ಸದ್ಗುಣಗಳನ್ನು ಮೂಡಿಸಿ ಅವರನ್ನು ದೇಶದ ಸತøಜೆಗಳನ್ನಾಗಿ ರೂಪಿಸಲಾಗುತ್ತಿದೆ ಎಂದರು.

ರಾಷ್ಟ್ರೀಯ ಭಾವೈಕ್ಯತಾ ಮೇಳದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಂದ ತಲಾ 200 ವಿದ್ಯಾರ್ಥಿಗಳು ಸೇರಿ ಸುಮಾರು 3 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಸೇವಾದಳದ ರಾಜ್ಯಾಧ್ಯಕ್ಷ ಗುರುಸಿದ್ದಗೌಡ, ಗಾಂಧಿಭವನದ ಕಾರ್ಯದರ್ಶಿ ಟಿ.ಜಿ.ವಿಠuಲ್‌ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸೇವಾದಳದ ಮುಖ್ಯಸ್ಥರು ಇದ್ದರು.

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.