ಮಾವುಮೇಳ: 1.15 ಕೋಟಿ ರೂ. ವಹಿವಾಟು

85ಕ್ಕೂ ಹೆಚ್ಚು ಟನ್‌ ಮಾವು ಮಾರಾಟ

Team Udayavani, Jun 2, 2022, 4:06 PM IST

mango

ಬಳ್ಳಾರಿ: ನಗರದ ತಹಶೀಲ್ದಾರ್‌ ಕಚೇರಿ ಆವರಣದಲ್ಲಿ ತೋಟಗಾರಿಕೆ ಇಲಾಖೆಯಿಂದ ಆಯೋಜಿಸಲಾಗಿದ್ದ ‘ಮಾವು ಮೇಳ/ಮಾವು ಜಾತ್ರೆ’ಗೆ ನಗರದ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮೂರು ದಿನಗಳಲ್ಲಿ ಸುಮಾರು 85ಕ್ಕೂ ಹೆಚ್ಚು ಟನ್‌ ವಿವಿಧ ತಳಿಯ ಮಾವುಗಳು ಮಾರಾಟವಾಗಿದ್ದು, ಅಂದಾಜು 1.15 ಕೋಟಿ ರೂ.ಗೂ ಹೆಚ್ಚು ವಹಿವಾಟು ನಡೆದಿದೆ.

ಮಾವು ಮೇಳ/ಮಾವು ಜಾತ್ರೆಯಲ್ಲಿ ರಾಜ್ಯದ ಧಾರವಾಡ, ಕೊಪ್ಪಳ, ಚಿತ್ರದುರ್ಗ, ದಾವಣಗೆರೆ ನೆರೆಯ ಆಂಧ್ರದ ಅನಂತಪುರ ಜಿಲ್ಲೆ ಸೇರಿ ವಿವಿಧ ಜಿಲ್ಲೆಗಳಿಂದ ಸುಮಾರು 55-60 ಮಾವು ಬೆಳೆಯುವ ರೈತರು ಮೇಳದಲ್ಲಿ ಭಾಗವಹಿಸಿದ್ದರು. ಮೇಳದಲ್ಲಿ ವಿವಿಧ ರೀತಿಯ ಸುಮಾರು 308 ಮಾವುಗಳನ್ನು ಪ್ರದರ್ಶನಕ್ಕಿಟ್ಟಿದ್ದು, ಗ್ರಾಹಕರ ಗಮನ ಸೆಳೆಯಲಾಯಿತು. ಈ ಪೈಕಿ ಅಂದಾಜು 10-12 ತಳಿಗಳ ಮಾವುಗಳನ್ನು ಮಾರಾಟಕ್ಕೆ ಇಡಲಾಗಿದ್ದು, ನಗರದ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಶರಣಪ್ಪ ಎಸ್‌.ಭೋಗಿ ತಿಳಿಸಿದರು.

1.15 ಕೋಟಿ ರೂ.ಗೂ ಹೆಚ್ಚು ವಹಿವಾಟು

ಮೇ 30ರಿಂದ ಜೂನ್‌ 1ರವರೆಗೆ ಮೂರು ದಿನಗಳ ಕಾಲ ನಡೆದ ಮಾವು ಮೇಳ/ಮಾವು ಜಾತ್ರೆಯಲ್ಲಿ ನಗರ ಸೇರಿ ನೆರೆಹೊರೆಯ ಗ್ರಾಮ, ಪಟ್ಟಣಗಳ 10 ಸಾವಿರಕ್ಕೂ ಹೆಚ್ಚು ಗ್ರಾಹಕರು ಭೇಟಿ ನೀಡಿ ಪ್ರದರ್ಶನಕ್ಕಿಡಲಾಗಿದ್ದ ವಿವಿಧ ರೀತಿಯ ತಳಿಗಳನ್ನು ವೀಕ್ಷಿಸುವುದರ ಜತೆಗೆ ಹಣ್ಣುಗಳ ಮಾರಾಟಕ್ಕೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಳೆದ ಮೂರು ದಿನಗಳಲ್ಲಿ ಸರಿಸುಮಾರು 1.15 ಕೋಟಿ ರೂ. ಗೂ ಹೆಚ್ಚು ವಹಿವಾಟು ನಡೆದಿದೆ. ನೆರೆಯ ಆಂಧ್ರದ ಅನಂತಪುರದಿಂದ ಮೊದಲ ದಿನ ಬಂದಿದ್ದ ನಾಲ್ಕು ರೈತರು, ತಂದಿದ್ದ ಹಣ್ಣುಗಳೆಲ್ಲವೂ ಖಾಲಿಯಾದ ಹಿನ್ನೆಲೆಯಲ್ಲಿ ಎರಡನೇ ದಿನ ಪುನಃ 6 ರೈತರು ಬಂದಿದ್ದು, ಒಟ್ಟು ಅನಂತಪುರದಿಂದ 10 ರೈತರು ಸುಮಾರು 5-6 ಟನ್‌ಗೂ ಹೆಚ್ಚು ಮಾವಿನ ಹಣ್ಣುಗಳನ್ನು ಮಾರಾಟ ಮಾಡಿದ್ದಾರೆ. ಹಣ್ಣುಗಳನ್ನು ಮಾರಾಟ ಮಾಡಲು ನೇರವಾಗಿ ರೈತರಿಗೆ ಅವಕಾಶ ಕಲ್ಪಿಸಿರುವುದು ಮೇಳಕ್ಕೆ ರೈತರು ಬರಲು ಸಹಕಾರಿಯಾಗಿದೆ. ಮೂರು ದಿನಗಳ ಮೇಳದಲ್ಲಿ 35-40 ಟನ್‌ ಮಾರಾಟವಾಗುವ ನಿರೀಕ್ಷೆಯಿತ್ತಾದರೂ, ಅದನ್ನೂ ಮೀರಿ ಡಬಲ್‌ ಪ್ರಮಾಣದಲ್ಲಿ 85 ಟನ್‌ಗೂ ಹೆಚ್ಚು ಮಾರಾಟವಾಗಿದೆ. ಬೆನೆಶಾನ್‌ ಸೇರಿ ಒಂದೆರಡು ತಳಿಗಳ ಹಣ್ಣಿನ ಸ್ವಾದವನ್ನಷ್ಟೇ ಸವಿದಿದ್ದ ಬಳ್ಳಾರಿ ಜನರಿಗೆ ಮೇಳದಿಂದ ಮಾವಿನ ಇನ್ನಷ್ಟು ತಳಿಗಳ ಪರಿಚಯವಾಗಲು ಮೇಳವು ಸಹಕಾರಿಯಾಗಿದೆ ಎಂದು ಡಿಡಿ ಶರಣಪ್ಪ ತಿಳಿಸಿದರು.

ಜಿಲ್ಲೆಯ ಒಬ್ಬ ರೈತರೂ ಇಲ್ಲ

ಮೂರು ದಿನಗಳ ಮಾವು ಮೇಳಕ್ಕೆ ಗ್ರಾಹಕರು, ನಗರದ ನಾಗರಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿರುವುದು ಒಂದೆಡೆಯಾದರೆ, ರಾಜ್ಯಮಟ್ಟದ ಮೇಳದಲ್ಲಿ ಗಣಿನಾಡು ಬಳ್ಳಾರಿ ಜಿಲ್ಲೆಯ ಐದು ತಾಲೂಕುಗಳಿಂದ ಒಬ್ಬ ರೈತರು ಸಹ ಭಾಗವಹಿಸದಿರುವುದು ಜಿಲ್ಲೆಯ ಮಟ್ಟಿಗೆ ಬೇಸರ ಮೂಡಿಸಿದೆ. ಇನ್ನು ನೆರೆಯ ವಿಜಯನಗರ ಜಿಲ್ಲೆಯಿಂದ ಇಬ್ಬರು ರೈತರು ಬಂದಿದ್ದರಾದರೂ, ಮೂರು ದಿನಗಳಿಗೆ ಬೇಕಾಗುವಷ್ಟು ಹಣ್ಣುಗಳು ಇಲ್ಲದಿರುವುದರಿಂದ ಎರಡನೇ ದಿನಕ್ಕೆ ಖಾಲಿಮಾಡಿಕೊಂಡು ತೆರಳಿದ್ದಾರೆ. ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕು ಮೆನೆದಾಳ ಗ್ರಾಮದ ರೈತ ಗವಿಸಿದ್ದಪ್ಪ ಕೇಸರಿ ತಳಿಯ 2 ಟನ್‌ ಮಾವನ್ನು ಕಿಲೋ 100 ರೂ.ಗೆ ಮಾರಾಟ ಮಾಡಿದ್ದಾರೆ. ಕಮಲಾಪುರದ ರೈತ ಪ್ರಶಾಂತ್‌ ಸಿಂಗ್‌ 8 ಕ್ವಿಂಟಲ್‌ ಮಾರಾಟ ಮಾಡಿದ್ದಾರೆ. ಆದರೆ, ಮೂರು ದಿನಗಳ ಮೇಳದಲ್ಲಿ ಹಣ್ಣುಗಳ ಬಣ್ಣಕ್ಕೆ ಮಾರುಹೋಗಿದ್ದ ಗ್ರಾಹಕರು, ರಸಾಯನಿಕ ಬಣ್ಣರಹಿತ ಹಣ್ಣುಗಳ ಬಗ್ಗೆ ನಿರಾಸಕ್ತಿ ಹೊಂದಿದ್ದು ಗಮನಾರ್ಹ.

ಬಳ್ಳಾರಿಯಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಮೂರು ದಿನಗಳ ಮಾವುಮೇಳ/ಮಾವು ಜಾತ್ರೆಯಲ್ಲಿ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನೆರೆಯ ಆಂಧ್ರದ ಅನಂತಪುರ ಜಿಲ್ಲೆ ಸೇರಿ ರಾಜ್ಯಾದ್ಯಂತ ವಿವಿಧ ಜಿಲ್ಲೆಗಳ 55-60 ರೈತರು ಮೇಳದಲ್ಲಿ ಭಾಗವಹಿಸಿದ್ದು, ಮೂರು ದಿನಗಳಲ್ಲಿ ಸುಮಾರು 85ಕ್ಕೂ ಹೆಚ್ಚು ಟನ್‌ ಮಾರಾಟವಾಗಿದ್ದು, 1.15 ಕೋಟಿ ರೂ.ಗೂ ಹೆಚ್ಚು ವಹಿವಾಟು ನಡೆದಿದೆ. ವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿ ಮಾವು ಬೆಳೆ ಕಡಿಮೆ ಇರುವುದರಿಂದ ರೈತರು ಭಾಗವಹಿಸಿಲ್ಲ. -ಶರಣಪ್ಪ ಎಸ್.ಭೋಗಿ, ಉಪನಿರ್ದೇಶಕರು, ತೋಟಗಾರಿಕೆ ಇಲಾಖೆ, ಬಳ್ಳಾರಿ.

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.