ಬಳ್ಳಾರಿ: ದರ್ಗಾಕ್ಕೆ ಬಂದ ವಿವಾಹಿತೆಯ ಗ್ಯಾಂಗ್ರೇಪ್,ಕೊಲೆ ಯತ್ನ
Team Udayavani, Jul 26, 2017, 9:42 AM IST
ಬಳ್ಳಾರಿ : ತಾಲೂಕಿನ ರೂಪನಗುಡಿ ಊರುಸ್ ಆಚರಣೆವೇಳೆ ದರ್ಗಾಕ್ಕೆ ಬಂದಿದ್ದ ವಿವಾಹಿತ ಮಹಿಳೆಯೊಬ್ಬಳ ಮೇಲೆ ನಾಲ್ವರು ಕಾಮುಕರು ಅಪಹರಿಸಿ ಗ್ಯಾಂಗ್ರೇಪ್ ಎಸಗಿ ಕೊಲೆಗೆ ಯತ್ನಿಸಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ರಾಯಚೂರಿನಿಂದ ಬಂದಿದ್ದ ಮಹಿಳೆ ಬಹಿರ್ದೆಸೆಗೆಂದು ತೆರಳಿದ್ದ ವೇಳೆ ನಾಲ್ವರು ಕಾಮುಕರು ಹೇಯ ಕೃತ್ಯ ಎಸಗಿದ್ದಾರೆ ಬಳಿಕ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೈಯಲು ಯತ್ನಿಸಿರುವುದಾಗಿ ಹೇಳಲಾಗಿದೆ.
ತೀವ್ರ ಬಳಲಿಕೆಯಿಂದ ಅರೆಪ್ರಜ್ಞಾವಸ್ಥೆಯಲ್ಲಿದ್ದ ಮಹಿಳೆಯನ್ನು ಸ್ಥಳೀಯರು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.ಬಳ್ಳಾರಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಘಟನೆಯ ಬಳಿಕ ಸ್ಥಳೀಯರು ಉದ್ರಿಕ್ತರಾಗಿ ರಸ್ತೆ ತಡೆ ನಡೆಸಿ ಆಕ್ರೋಶ ಹೊರ ಹಾಕಿದರು. ಆರೋಪಿಗಳನ್ನು ಶೀಘ್ರ ವಶಕ್ಕೆ ಪಡೆದು ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ