ಮೋದಿ ಸುಳ್ಳು ಭರವಸೆಯ ಸರದಾರ


Team Udayavani, Mar 23, 2018, 10:58 AM IST

bella-2.jpg

ಹಗರಿಬೊಮ್ಮನಹಳ್ಳಿ: ಪ್ರಧಾನಿ ನರೇಂದ್ರ ಮೋದಿ ಕೇವಲ ಸುಳ್ಳು ಭರವಸೆ ನೀಡಿಯೇ ಜನರನ್ನು ಮರುಳು ಮಾಡುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಹೇಳಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎಸ್ಸೆಸ್ಸೆಲ್ಸಿ, ಪದವಿ ಪೂರ್ವ ಮತ್ತು ಪದವಿ ವಿದ್ಯಾರ್ಥಿಗಳಿಗೆ ಖನಿಜ ನಿಧಿ ಶಿಷ್ಯವೇತನ ವಿತರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲಾ ಖನಿಜನಿಧಿ ಯೋಜನೆಯಡಿ ಜಿಲ್ಲಾದ್ಯಂತ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್‌ ವಿತರಿಸಲಾಗುತ್ತಿದೆ. ಆದರೆ, ಈ ಹಿಂದಿನ ಬಿಜೆಪಿ ಸರ್ಕಾರ ಕೇವಲ ಗಣಿ ಉದ್ಯಮಿಗಳಿಂದ ಕಪ್ಪ ಹೊಡೆಯುವುದರಲ್ಲೆ ನಿರತವಾಗಿತ್ತು. 18 ಕೋಟಿ ರೂ. ಖನಿಜ ನಿಧಿಯಿಂದ ಜಿಲ್ಲೆಯ 70 ಸಾವಿರ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಗಿದೆ ಎಂದರು.

 ಖನಿಜ ನಿಧಿಯಿಂದ ಕಳೆದ ಸಾಲಿನಲ್ಲಿ ಬಂದ 300 ಕೋಟಿ ರೂ. ರಾಜಸ್ವದಲ್ಲಿ ಶೇ. 6ರಷ್ಟು ಬಳ್ಳಾರಿ ಜಿಲ್ಲೆಯ ಶೈಕ್ಷಣಿಕ ಅಭಿವೃದ್ಧಿಗಾಗಿ, ಜಿಲ್ಲೆಯ ಶಾಸಕರ ಒತ್ತಾಸೆ ಮೇರೆಗೆ ಸರ್ಕಾರ ಮೀಸಲು ಇಟ್ಟಿತ್ತು. ಒಟ್ಟು 18 ಕೋಟಿ ರೂಪಾಯಿ ಹಣದಲ್ಲಿ ತಾಲೂಕಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ 2 ಸಾವಿರ ಮತ್ತು ಪಿಯುಸಿ, ಐಟಿಐ, ಪಾಲಿಟೆಕ್ನಿಕ್‌,ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ತಲಾ 4 ಸಾವಿರ ರೂ.ನಂತೆ ಪ್ರೋತ್ಸಹ ಧನ ವಿತರಿಸಲಾಗಿದೆ ಎಂದರು.

 ಚೆಕ್‌ ರೂಪದಲ್ಲಿ ಮೊತ್ತ ಪಡೆದು ಜೈಲು ಸೇರಿದ ಮೊದಲ ಮುಖ್ಯಮಂತ್ರಿ ಎಂಬ ಹಿರಿಮೆ ಈ ಹಿಂದಿನ ಸಿಎಂ ಯಡಿಯೂರಪ್ಪ ಅವರಿಗೆ ಸಲ್ಲುತ್ತದೆ. ರಾಜ್ಯ ಸರ್ಕಾರ ಚುನಾವಣೆಗೂ ಮುನ್ನ ನೀಡಿದ ಪ್ರತಿಶತ ಭರವಸೆಗಳನ್ನು ಈಡೇರಿಸಿದೆ. ಪ್ರತಿ ವರ್ಷ ನೀರಾವರಿ ಯೋಜನೆಗಳಿಗಾಗಿ 10ಸಾವಿರ ಕೋಟಿ ರೂ. ಅನುದಾನ ಒದಗಿಸಿ¨ ಎಂದರು.

ಶಾಸಕ ಭೀಮಾನಾಯ್ಕ ಮಾತನಾಡಿ, ಕಳೆದ 35 ವರ್ಷಗಳ ರೈತರ ಕನಸಾದ ಮಾಲವಿ ಜಲಾಶಯಕ್ಕೆ ಶಾಶ್ವತ ನೀರು ತುಂಬಿಸುವ ಯೋಜನೆಯನ್ನು ಸಾಕಾರಗೊಳಿಸಲಾಗಿದೆ. ಈ ಹಿಂದಿನ ಅವಧಿಯಲ್ಲಿ ಕೇವಲ ಪೊಳ್ಳು ಭರವಸೆಗಳಲ್ಲಿ ಕಾಲಾರಹಣ ಮಾಡಿದ ಮಾಜಿ ಶಾಸಕ ನೇಮರಾಜನಾಯ್ಕ ಈ ಹಿಂದೆ ರಾಜಕೀಯ ಇಚ್ಛಾಶಕ್ತಿ ತೋರದೆ ಜಲಾಶಯ ಕುರಿತಂತೆ ಸುಳ್ಳು ಹೇಳಿಕೆ ನೀಡುತ್ತಿರುವುದು ದುರಂತದ ಸಂಗತಿ ಎಂದರು. 

ಜಿಪಂ ಮಾಜಿ ಸದಸ್ಯ ಅಕ್ಕಿ ತೋಟೇಶ ಮಾತನಾಡಿದರು. ಪುರಸಭೆ ಅಧ್ಯಕ್ಷ ಟಿ. ರಾಘವೇಂದ್ರ, ತಾಪಂ ಅಧ್ಯಕ್ಷೆ ಕೆ. ನಾಗಮ್ಮ, ಉಪಾಧ್ಯಕ್ಷೆ ಸುಶೀಲಮ್ಮ ಮಂಜುನಾಥ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಬಾಬುವಲಿ, ಕೆಪಿಸಿಸಿ ಸದಸ್ಯ ಕುರಿ ಶಿವಮೂರ್ತಿ, ಪುರಸಭೆ ಸದಸ್ಯರಾದ ಕನಕಪ್ಪ, ಗುಂಡ್ರು ಹನುಮಂತ, ಜೋಗಿ ಹನುಮಂತ, ಭರತ್‌, ಬಾಲಕೃಷ್ಣ ಬಾಬು, ನೆಲ್ಲುಗುಡಿ ಗಣೇಶ, ರೋಗಾಣಿ ಪ್ರಕಾಶ್‌, ಇದೇ ವೇಳೆ ತಾಲೂಕಿನ 2 ಸಾವಿರಕ್ಕೂ ಹೆಚ್ಚು ವಿವಿಧ ಶಾಲಾ ಕಾಲೇಜ್‌ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕ್ಷೇತ್ರ ಶಿಕ್ಷಣಾಧಿ ಕಾರಿ ಶೇಖರಪ್ಪ ಹೊರಪೇಟೆ, ಪರಮೇಶ್ವರಯ್ಯ ಸೊಪ್ಪಿಮಠ ನಿರೂಪಿಸಿದರು. 

ಕಾಂಗ್ರೆಸ್‌ನಿಂದ ಹೈದರಾಬಾದ್‌ ಕರ್ನಾಟಕ ಅಭಿವೃದ್ಧಿಗೆ 4500 ಕೋಟಿ ರೂ. 
ಕಂಪ್ಲಿ: ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಹೈದರಾಬಾದ್‌ ಕರ್ನಾಟಕ ಅಭಿವೃದ್ಧಿಗೆ 4500 ಕೋಟಿ ರೂ. ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌.ಲಾಡ್‌ ಹೇಳಿದರು.

ಪಟ್ಟಣದ ಪುರಸಭೆ ನೀರು ಶುದ್ಧೀಕರಣ ಘಟಕ ಆವರಣದಲ್ಲಿ 9ಪಟ್ಟಣಗಳ ಕುಡಿಯುವ ನೀರಿನ ಯೋಜನಡಿಯಲ್ಲಿ ಕಂಪ್ಲಿ ಪುರಸಭೆಯ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜು ಅನುಷ್ಠಾನ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. 

 ನೂತನ ತಾಲೂಕು ಕೇಂದ್ರವನ್ನಾಗಿ ಅನುಷ್ಠಾನಕ್ಕೆ ತಂದಿದ್ದು, ಕಂಪ್ಲಿ ಪಟ್ಟಣಕ್ಕೆ 2223.96 ಲಕ್ಷ ರೂ. ಗಳ ಕುಡಿವ ನೀರು ಪೂರೈಕೆ ಮಾಡುವ ಮಹತ್ವದ ಕಾರ್ಯಕ್ಕೆ ಕಾಂಗ್ರೆಸ್‌ ಸರ್ಕಾರ ಹೆಜ್ಜೆ ಇಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜನಪರ ಕಾರ್ಯಕ್ರಮಗಳನ್ನು ಅರಿತು ಕಾಂಗ್ರೆಸ್‌ನ್ನು ಮತ್ತೆ ಅಧಿ ಕಾರಕ್ಕೆ ತರಬೇಕು ಎಂದು ಮನವಿ ಮಾಡಿದರು. ಸೋಮಪ್ಪ ಕೆರೆ ಆಧುನೀಕರಣ ಸೇರಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕಂಪ್ಲಿ ಪಟ್ಟಣಕ್ಕೆ ಕಾಂಗ್ರೆಸ್‌ ಸರ್ಕಾರ ನೀಡಿದೆ. ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ಕ್ರಿಯಾಶೀಲತೆಯಿಂದ ನಗರೋತ್ಥಾನ ಕಾಮಗಾರಿಗಳು ಪ್ರಗತಿಯಲ್ಲಿವೆ. ಕಾಂಗ್ರೆಸ್‌ ಐದು ವರ್ಷಗಳ ಆಡಳಿತ ಅವಧಿಯಲ್ಲಿ ರಾಜ್ಯದ ಜನತೆಗೆ ಹತ್ತು ಹಲವು ಭಾಗ್ಯಾದಿ ಯೋಜನೆಗಳನ್ನು ನೀಡಿದೆ ಎಂದರು.

ಹೈದ್ರಾಬಾದ್‌ ಕರ್ನಾಟಕದ ಜನತೆ ಬಿಜೆಪಿಗೆ ಮತ ಹಾಕಬಾರದು ಯಾಕೆಂದರೆ ಈ ಭಾಗವನ್ನು ಕೇಂದ್ರ ಸರ್ಕಾರ ಸಂಫೂರ್ಣವಾಗಿ ನಿರ್ಲಕ್ಷಿಸಿದ್ದು, ಹೈದರಾಬಾದ್‌ ಕರ್ನಾಟಕ್ಕೆ ಸಂವಿಧಾನದ 371ಜೆ ಸೌಲಭ್ಯಗಳನ್ನು ನೀಡುವಲ್ಲಿ ವಿಫಲವಾಗಿತ್ತು. ವಿಶೇಷ ಸ್ಥಾನಮಾನ ನೀಡಲು ಸಾಧ್ಯವಿಲ್ಲವೆಂದು ಅಂದಿನ ಉಪಪ್ರಧಾನಿ ಲಾಲ್‌ಕೃಷ್ಣ ಅಡ್ವಾಣಿಯವರು ರಾಜ್ಯದ ಮನವಿಯನ್ನು ತಿರಸ್ಕರಿಸಿದ್ದರು. ಆದರೆ ಯುಪಿಎ ಸರ್ಕಾರ ಈ ಭಾಗಕ್ಕೆ 371ನೇ ಜೆ ಸೌಲಭ್ಯ ನೀಡುವ ಮೂಲಕ ಜನತೆಯ ಆಶೋತ್ತರಗಳನ್ನು ಈಡೇರಿಸಿದೆ ಎಂದು ಹೇಳಿದರು.

ಜನರು ಸಿದ್ದರಾಮಯ್ಯನವರ ಕಾರ್ಯಕ್ರಮಗಳ ಕುರಿತು ಅರಿತುಕೊಳ್ಳಬೇಕು. ರಾಜ್ಯದ ಅಭಿವೃದ್ಧಿಗಾಗಿ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರುವಂತೆ ಮನವಿ ಮಾಡಿದರು. ಪುರಸಭೆ ಅಧ್ಯಕ್ಷ ಎಂ.ಸುಧೀರ್‌, ಜಿಲ್ಲಾಧಿಕಾರಿ ಡಾ| ರಾಮಪ್ರಸಾತ್‌ ಮನೋಹರ, ತಹಶೀಲ್ದಾರ್‌ ಬಿ. ರವೀಂದ್ರಕುಮಾರ್‌, ಮುಖ್ಯಾಧಿಕಾರಿ ಎಂ.ವಿಜಯಲಕ್ಷ್ಮೀ , ಜಿಪಂ ಸದಸ್ಯ ಕೆ. ಶ್ರೀನಿವಾಸರಾವ್‌, ಪುರಸಭೆ ಸದಸ್ಯರು ಹಾಗೂ ಬ್ಲಾಕ್‌ ಕಾಂಗ್ರೇಸ್‌ ಅಧ್ಯಕ್ಷ ಸಿ.ಆರ್‌. ಹನುಮಂತ, ಎಸ್‌. ಸುರೇಶ್‌, ಭಟ್ಟ ಪ್ರಸಾದ್‌, ಮರೆಣ್ಣ, ಸರಸ್ವತಮ್ಮ, ಕೆ.ಎಸ್‌. ರಾಜಸಾಬ್‌, ಲಡ್ಡು ಹೊನ್ನೂರವಲಿ, ಎ. ರೇಣುಕಪ್ಪ, ಮುಖಂಡರಾದ ಇಟ್ಗಿ ಬಸವರಾಜಗೌಡ, ಕೆ.ಎಂ. ಹಾಲಪ್ಪ,ಕೆ.ಎಸ್‌.ಎಲ್‌ ಸ್ವಾಮಿ, ಜೆ.ಎನ್‌. ಗಣೇಶ್‌, ಬಿ. ನಾರಾಯಣಪ್ಪ, ಭರತ ಮಾ. ಮಗದೂರ, ರಾಜು ನಾಯಕ, ಮಾಜಿ ಶಾಸಕರ ಟಿ.ಎಂ. ಚಂದ್ರಶೇಖರಯ್ಯಸ್ವಾಮಿ ಇದ್ದರು.

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.