ನರೇಗಾ ಕಾಮಗಾರಿ-ಬೆಳೆ ವೈಫಲ್ಯ ವೀಕ್ಷಣೆ


Team Udayavani, Mar 1, 2019, 11:36 AM IST

bell-1.jpg

ಹೂವಿನಹಡಗಲಿ: ತಾಲೂಕಿನ ಹಗರನೂರು ಗ್ರಾಮಕ್ಕೆ ಗುರುವಾರ ಕೇಂದ್ರ ಬರ ಅಧ್ಯಯನ ತಂಡ ಭೇಟಿ ನೀಡಿ ನರೇಗಾದಡಿ ಕೈಗೊಂಡಿರುವ ಕಾಮಗಾರಿ ಹಾಗೂ ಬೆಳೆ ವೈಫಲ್ಯ ಕುರಿತು ಜಿಲ್ಲಾಡಳಿತದಿಂದ ಸಂಪೂರ್ಣ ಮಾಹಿತಿ ಪಡೆದುಕೊಂಡಿತು.

ಕೇಂದ್ರ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣದ ಜಂಟಿ ನಿರ್ದೇಶಕ ಡಾ| ಅಭಿಲಾಷ್‌ ಲಿಖೀ, ತೈಲಬೀಜ ಅಭಿವೃದ್ಧಿ ನಿರ್ದೇಶನಾಲಯದ ಬಿ.ಕೆ.ಶ್ರೀವಾಸ್ತವ್‌ ಹಾಗೂ ಕುಡಿಯುವ ನೀರು ಮತ್ತು ನೈರ್ಮಲ್ಯ ನಿರ್ದೇಶನಾಲಯದ ಎಸ್‌.ಸಿ.ಶರ್ಮಾ ನೇತೃತ್ವದ ತಂಡ ತಾಲೂಕಿನ ಹಗರನೂರು ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಂಡಿದ್ದ ಕಾಮಗಾರಿಗಳು ಹಾಗೂ ಬೆಳೆ ವೈಫಲ್ಯವನ್ನು ವೀಕ್ಷಿಸಿತು.

ಜಿಲ್ಲೆಯಲ್ಲಿ ಬರಗಾಲ ಎದುರಾಗಿರುವ ಹಿನ್ನೆಲೆಯಲ್ಲಿ 100 ದಿನಕ್ಕೆ ನಿಗದಿಯಾಗಿದ್ದ ನರೇಗಾ ಕಾಮಗಾರಿಯನ್ನು 150 ದಿನಕ್ಕೆ ನಿಗದಿ ಮಾಡಲಾಗಿದ್ದು, ಫೆಬ್ರವರಿ 1ನೇ ತಾರೀಕಿನವರೆಗೆ ನರೇಗಾ ಕಾಮಗಾರಿಯಲ್ಲಿ ಭಾಗವಹಿಸಿದ್ದ ಕಾರ್ಮಿಕರಿಗೆ ಹಣ ಸಂದಾಯವಾಗಿರುವ ಕುರಿತು ಮಾಹಿತಿ ಪಡೆದುಕೊಂಡಿತು.

ಈ ಸಂದರ್ಭದಲ್ಲಿ ರೈತ ಚರಣಗುಂಡಿ, ತಾಲೂಕಿನಲ್ಲಿ ಬರಗಾಲ ಎದುರಾಗಿದೆ. ಆದರೆ ಈವರೆಗೂ ಬೆಳೆನಷ್ಟ ವಿಮೆಯಾಗಲಿ ಅಥವಾ ಬೆಳೆ ನಷ್ಟ ಪರಿಹಾರವಾಗಲಿ ಯಾವುದೇ ಹಣ ರೈತರಿಗೆ ಸಂದಾಯವಾಗಿಲ್ಲ. ಹೀಗಾದರೆ ರೈತರು ಜೀವನ ನಡೆಸುದಾದರೂ ಹೇಗೆ ಎಂದು ಬರ ಅಧ್ಯಯನ ತಂಡದ ಅಧಿಕಾರಿಗಳನ್ನು ಪ್ರಶ್ನಿಸಿದರು. ರೈತರ ಸಮಸ್ಯೆ ಆಲಿಸಿದ ಬರ ಅಧ್ಯಯನ ತಂಡದ ಅಧಿಕಾರಿಗಳು, ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿತು.  

ಬಳಿಕ ಕೇಂದ್ರ ಬರ ಅಧ್ಯಯನ ತಂಡ ಬೆಳೆ ವೈಫಲ್ಯ ವೀಕ್ಷಿಸಿ ಹಿಂದಿರುಗಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಡಾ| ರಾಮ್‌ ಪ್ರಸಾತ್‌ ಮನೋಹರ್‌, ಈಗಾಗಲೇ ಜಿಲ್ಲೆಯಲ್ಲಿ ಹಿಂಗಾರು ಮಳೆ ಸಾಕಷ್ಟು ಪ್ರಮಾಣದಲ್ಲಿ ಕೊರತೆಯಾಗಿದೆ. ವಾಡಿಕೆಯಂತೆ ಜಿಲ್ಲೆಯಲ್ಲಿ 150 ಮಿ.ಮೀ. ಮಳೆ ಆಗಬೇಕಿತ್ತು. ಆದೆರ ಕೇವಲ 92 ಮಿ.ಮೀ. ಮಳೆಯಾಗಿದ್ದು, ಸುಮಾರು 72 ಮಿ.ಮೀ.ನಷ್ಟು ಮಳೆ ಕೊರತೆಯಾಗಿದೆ. ಹೀಗಾಗಿ ಜಿಲ್ಲೆಯಲ್ಲಿ 35 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಕರಿ ಕಡ್ಲೆ, 9 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಸೂರ್ಯಕಾಂತಿ ಹಾಗೂ 11 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಜೋಳದ ಬೆಳೆ ನಷ್ಟವಾಗಿದೆ. ಒಟ್ಟು 37.55 ಕೋಟಿ ರೂ. ಬೆಳೆ ನಷ್ಟ ಪರಿಹಾರಕ್ಕೆ ಪ್ರಸ್ತಾವನೆಯನ್ನು ಕೇಂದ್ರ ಬರ ಅಧ್ಯಯನ ತಂಡಕ್ಕೆ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು. 

ಇನ್ನು ಜಿಲ್ಲೆಯಲ್ಲಿ 218 ಹೆಕ್ಟೇರ್‌ ಪ್ರದೇಶದಲ್ಲಿ ದಾಳಿಂಬೆ ನಷ್ಟವಾಗಿದ್ದು, ಸುಮಾರು 1.16 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಲಾಗಿದೆ. ಜಿಲ್ಲೆಯ 116 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, 22 ಹಳ್ಳಿಗಳಿಗೆ ಟ್ಯಾಂಕರ್‌ ಮೂಲಕ ಕುಡಿಯುವ ನೀರಿನ ವ್ಯವಸ್ತೆ ಕಲ್ಪಿಸಲಾಗಿದೆ. ಇನ್ನುಳಿದ 65 ಹಳ್ಳಿಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು. ಇನ್ನೂ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಬರಗಾಲ ಹಿನ್ನೆಲೆಯಲ್ಲಿ ಸುಮಾರು 509 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಅವುಗಳಲ್ಲಿ ಈಗಾಗಲೇ 455 ಪೂರ್ಣಗೊಂಡಿವೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಮೇವಿನ ಸಮಸ್ಯೆ ಆಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಂಡು ಬಂದಿಲ್ಲ. ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ಜನರ ಬೇಡಿಕೆ ಮೇರಿಗೆ 1 ಗೋಶಾಲೆ ಪ್ರಾರಂಭ ಮಾಡಲಾಗಿದೆ. ಮೇವು ಸಮಸ್ಯೆ ನೀಗಿಸಲು ರೈತರಿಂದ ನೇರವಾಗಿ ಮೇವು ಖರೀದಿ ಮಾಡಲಾಗಿದ್ದು, ಅಲ್ಲದೆ, ಜಿಲ್ಲೆಯಲ್ಲಿಯೇ ಸುಮಾರು 8 ಸಾವಿರ ಮೆಟ್ರಿಕ್‌ ಟನ್‌ ಮೇವು ಉತ್ಪಾದನೆ ಮಾಡಲಾಗಿದೆ.

ಇನ್ನೂ ಬರಗಾಲಕ್ಕೆ ಸಂಬಂಧ ಪಟ್ಟಂತೆ ಕುಡಿಯುವ ನೀರಿನ ಕಾಮಗಾರಿಗೆ ಒತ್ತು ಕೊಡಲಾಗಿದ್ದು, ವೈಯಕ್ತಿಕ ಕಾಮಗಾರಿಗಳಿಗೂ ಸಹ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.

ರಾಷ್ಟ್ರೀಯ ಉದ್ಯೋಗ ಯೋಜನೆಯಡಿ ಫೆ.1ರ ನಂತರದಲ್ಲಿ ಕೂಲಿ ಕಾರ್ಮಿಕರ ಹಣ ಸುಮಾರು 5.5 ಕೋಟಿ ರೂ. ಬಾಕಿ ಇದ್ದು, ಇಷ್ಟರಲ್ಲಿಯೇ ಸರ್ಕಾರದಿಂದ ಹಣ ಪಾವಾತಿಯಾಗಲಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್‌ ಕೆ.ರಾಘವೇಂದರಾವ್‌, ತಾಪಂ ಇಒ ಯು.ಎಚ್‌. ಸೋಮಶೇಖರ್‌, ಸಿದ್ದೇಶ್‌, ಚಿದಾನಂದಪ್ಪ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಜಿಲ್ಲೆಯಲ್ಲಿ 35 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಕರಿ ಕಡ್ಲೆ, 9 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಸೂರ್ಯಕಾಂತಿ ಹಾಗೂ 11 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಜೋಳದ ಬೆಳೆ ನಷ್ಟವಾಗಿದೆ. ಒಟ್ಟು 37.55 ಕೋಟಿ ರೂ. ಬೆಳೆ ನಷ್ಟ ಪರಿಹಾರಕ್ಕೆ ಪ್ರಸ್ತಾವನೆಯನ್ನು ಕೇಂದ್ರ ಬರ ಅಧ್ಯಯನ ತಂಡಕ್ಕೆ ಸಲ್ಲಿಸಲಾಗಿದೆ. 
 ಡಾ| ರಾಮ್‌ ಪ್ರಸಾತ್‌ ಮನೋಹರ್‌, ಜಿಲ್ಲಾಧಿಕಾರಿ.

ತಡವಾಗಿ ಬಂದ ಅಧ್ಯಯನ ತಂಡ ತಾಲೂಕಿನ ಹಗರನೂರು ಗ್ರಾಮಕ್ಕೆ ಬೆಳಗ್ಗೆ 11 ಗಂಟೆಗೆ ಬರ ವೀಕ್ಷಣೆಗೆ ಆಗಮಿಸಬೇಕಾಗಿದ್ದ ಕೇಂದ್ರ ಬರ ಅಧ್ಯಯನ ತಂಡ, ಸುಮಾರು ಎರಡು ತಾಸು ತಡವಾಗಿ ಆಗಮಿಸಿತು. ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ನರೇಗಾ ಕೂಲಿ
ಕಾರ್ಮಿಕರು ತಂಡ ಆಗಮನಕ್ಕಾಗಿ ಕಾದು ಕುಳಿತ್ತಿದ್ದರು.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.