ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕರಿಗೆ ಅಪಘಾತ ಸಂಭಿವಿಸಿದರೆ ಸೂಕ್ತ ಪರಿಹಾರ ನೀಡಿ

Team Udayavani, Mar 14, 2022, 1:37 PM IST

ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕರಿಗೆ ಅಪಘಾತ ಸಂಭಿವಿಸಿದರೆ  ಸೂಕ್ತ ಪರಿಹಾರ ನೀಡಿ

ಕುರುಗೋಡು: ಉದ್ಯೋಗ ಖಾತ್ರಿಯಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರಿಗೆ ಸುರಕ್ಷಿತ ವ್ಯವಸ್ಥೆಗೆ ಮತ್ತು ಅಪಘಾತ ಸಂಭಿವಿಸಿದರೆ ಅಂತವರಿಗೆ ಸರಕಾರದಿಂದ ಸೂಕ್ತ ಪರಿಹಾರ ನೀಡಲು 22 ಶಾಸಕರಿಂದ ಒಪ್ಪಿಗೆ ಪತ್ರ ನೀಡಬೇಕು ಎಂದು ಕೂಲಿ ಕಾರ್ಮಿಕರು ಅಧಿಕಾರಿಗಳಿಗೆ ತಿಳಿಸಿದರು.

ಸಮೀಪದ ಏಳುಬೆಂಚೆ ಗ್ರಾಮದಲ್ಲಿ ನಡೆದ ಗ್ರಾಮಸಭೆಯಲ್ಲಿ ಮಾತನಾಡಿದರು.

ಅಲ್ಲದೆ ಈ ಹಿಂದೆ ಉದ್ಯೋಗ ಖಾತ್ರಿಯಲ್ಲಿ ಕೆಲಸ ಮಾಡುವ ವೇಳೆ ಮತ್ತು ಗ್ರಾಮ ತೊರೆದು ಬೇರೆ ಕಡೆ ಕೆಲಸ ಮಾಡಲು ತೆರಳಿದ ಸಂದರ್ಭದಲ್ಲಿ ಅಪಘಾತಕ್ಕೆ ಹಿಡಾಗಿದ್ದ ಕಾರ್ಮಿಕರಿಗೆ ಸರಕಾರದಿಂದ ನೆರೆವು ಹಾಗೂ ಸುರಕ್ಷಿತ ವ್ಯವಸ್ಥೆ ಕಲ್ಪಿಸಿಲ್ಲ ಆದ್ದರಿಂದ ಅದನ್ನು ಜಾರಿಗೆ ಮಾಡಬೇಕು ಎಂದು ಅಗ್ರಹಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪಿಡಿಓ ಮಂಜುನಾಥ್, ಈಗಾಗಲೇ ಸರಕಾರದ ಮಟ್ಟದಲ್ಲಿ ಚರ್ಚೆ ನಡೆದಿದ್ದು, ಕೂಲಿ ಕಾರ್ಮಿಕರಿಗೆ ಇನ್ಸೂರೆನ್ಸ್ ವ್ಯವಸ್ಥೆ ಮಾಡಲಾಗಿದೆ,ಇದರಲ್ಲಿ 13 ರೂ ಖಾತೆ, 330 ರೂ ಖಾತೆ ಇದ್ದು ಒಟ್ಟು 2 ಲಕ್ಷ ವೆಚ್ಚದ ಇನ್ಶೂರೆನ್ಸ್ ಒದಗಿಸಲಾಗಿದೆ.ಇದನ್ನು ಪ್ರತಿಯೊಬ್ಬ ಕೂಲಿ ಕಾರ್ಮಿಕರು ಮಾಡಿಸಬೇಕಾಗಿದೆ ಎಂದರು.

ನಂತರ ಗ್ರಾಮಸ್ಥರು ಮಾತನಾಡಿ, ಏಳುಬೆಂಚಿ ಗ್ರಾಮದ ಎದುರು ಬಸವಣ್ಣ ನಿಂದ  ಚನ್ನಯ್ಯ ನ ಅಂಗಡಿ ವರೆಗೆ ಚರಂಡಿ ದುರಸ್ಥಿಯಲ್ಲಿದ್ದು, ಅದನ್ನು ಆದಷ್ಟು ಬೇಗಾ ದುರಸ್ಥಿ ಮಾಡಬೇಕು ಇದರಿಂದ ನಿತ್ಯ ಜನರಿಗೆ ತೊಂದ್ರೆ ಆಗುತ್ತಿದೆ ಎಂದರು.

ಗ್ರಾಪಂ ಪಿಡಿಒ ಮತ್ತು ಅಧ್ಯಕ್ಷ ಮಾತನಾಡಿ, ಸ್ಥಳವನ್ನು ಪರಿಶೀಲನೆ ಮಾಡಿ ಎಸ್ಟುಮೆಂಟ್ ಮಾಡಿ ಮುಂದಿನ ದಿನಗಳಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು.

ತಿಮ್ಮಲಾಪುರ ಗ್ರಾಮದಲ್ಲಿ ಕುಡಿಯುವ ನೀರಿನ ಬೋರ್ ವೆಲ್ ಗಳು ನಿನಗುದಿಗೆ ಬಿದ್ದು ಹೋಗಿವೆ. ಬೇಸಿಗೆ ಸಮೀಪಸುತ್ತಿದ್ದು, ಬೋರ್ ವೆಲ್ ವ್ಯವಸ್ಥೆ ಮಾಡಿಕೊಡಬೇಕೆಂದು ಸಭೆಯಲ್ಲಿ ಗ್ರಾಮಸ್ಥರು ಪ್ರಸ್ತಾಪಿಸಿದರು.

ಈಗಾಗಲೇ ತಿಮ್ಮಲಾಪುರ ಗ್ರಾಮಕ್ಕೆ 4 ಬೋರ್ ವೆಲ್ ಮಂಜೂರು ಮಾಡಲಾಗಿದೆ. ಅದಕ್ಕೆ ಬೇಕಾದ ಸಾಮಗ್ರಿಗಳು ಬಂದಿದ್ದು ಶೀಘ್ರವೇ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

ಏಳುಬೆಂಚಿ ಗ್ರಾಪಂ ಯಲ್ಲಿ ಕೆರೆ ನಿರ್ಮಾಣ ಗೊಂಡು 3 ರಿಂದ 4 ವರ್ಷ ಕಳೆದರೂ ಕರೆಯಿಂದ ಗ್ರಾಮಗಳಿಗೆ ಇನ್ನೂ ನೀರು ಸರಬರಾಜು ಆಗುತ್ತಿಲ್ಲ ಕೆಲ ಪ್ರದೇಶಗಳಿಗೆ ಮಾತ್ರ ತಲುಪುತ್ತಿವೆ ಆದ್ದರಿಂದ ಕೆಲ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿದೇನಾ ಕೆರೆ ಎಂದು ಗ್ರಾಮದ ಮುಖಂಡರು ಪ್ರಶ್ನಿಸಿದರು.

ಇದಲ್ಲದೆ ಗ್ರಾಪಂ ಗೆ ತ್ಯಾಜ್ಯ ವಿಲೇವಾರಿ ವಾಹನಗಳು ನೇಮಕಗೊಂಡು ತಿಂಗಳುಗಳೇ ಗತಿಸಿದರು ಗ್ರಾಮದಲ್ಲಿ ವಾಹನಗಳು ತ್ಯಾಜ್ಯ ವಿಲೇವಾರಿ ಮಾಡಲು ಮುಂದಾಗದೆ ಎಲ್ಲಂದರಲ್ಲಿ ಬಿದ್ದು ಗಬ್ಬು ನಾರುತ್ತಿವೆ ಎಂದು ಆರೋಪಿಸಿದರು.

ಸಭೆಯ ಕೊನೆಯದಲ್ಲಿ 2021-22 ನೇ ಸಾಲಿನಲ್ಲಿ ವಸತಿ ರಹಿತ 40 ಪಲಾನುಭವಿಗಳಿಗೆ ಆಶ್ರಮ ಮನೆಗಳನ್ನು ಆಯ್ಕೆ ಮಾಡಲಾಯಿತು. ಇದರಲ್ಲಿ ಅಂಬೇಡ್ಕರ್ ಯೋಜನೆ ಅಡಿಯಲ್ಲಿ 10 ಹಾಗೂ ಬಸವ ವಸತಿ ಯೋಜನೆ ಅಡಿಯಲ್ಲಿ 30 ಮನೆಗಳನ್ನು ಆಯ್ಕೆ ಪ್ರಕ್ರಿಯೆ ನಡೆಯಿತು.

ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಪಿಡಿಒ, ಸರ್ವ ಗ್ರಾಪಂ ಸದಸ್ಯರು, ಗ್ರಾಮದ ಮುಖಂಡರು, ಸಂಘ ಸಂಸ್ಥೆಯ ಮುಖಂಡರು ಸಭೆಯಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.