![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-415x218.jpg)
ಬಿಎಸ್ವೈ ಬದಲಾವಣೆ ಇಲ್ಲ: ಶ್ರೀರಾಮುಲು
Team Udayavani, Apr 15, 2017, 9:14 AM IST
![b-sriramulu.jpg](https://www.udayavani.com/wp-content/uploads/2017/04/15/b-sriramulu.jpg)
ಬಳ್ಳಾರಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರೇ ಮುಂಬರುವ ವಿಧಾನಸಭಾ ಚುನಾವಣೆಯ ನೇತೃತ್ವ ವಹಿಸಲಿದ್ದಾರೆ.ಅವರೇ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಸಂಸದ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ಶ್ರೀರಾಮುಲು ಹೇಳಿದರು.
ಶುಕ್ರವಾರ ಜಿಲ್ಲೆಯ ಭುವನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನ ನಮ್ಮನ್ನು ಆಶೀರ್ವದಿಸಲಿದ್ದಾರೆ. ಮುಂದಿನ ಚುನಾವಣೆಗಳಲ್ಲಿಬಿಜೆಪಿ ಸಾಮರ್ಥ್ಯ ಏನು ಎಂಬುದು ಎಲ್ಲರ ಗಮನಕ್ಕೆ ಬರಲಿದೆ ಎಂದರು.
ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪಚುನಾವಣೆಯನ್ನು ಕಾಂಗ್ರೆಸ್ ಅಧಿಕಾರ ಹಾಗೂ ಹಣ ಬಲದಿಂದ ಗೆದ್ದಿದ್ದು, ಈ ಫಲಿತಾಂಶ ಮುಂಬರುವ 2018ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಅಲ್ಲ ಎಂದರು.
ಟಾಪ್ ನ್ಯೂಸ್
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-415x218.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.