ಪೊಲೀಸರ ಕಾಯಕ ನಿಷ್ಠೆ ಶ್ಲಾಘನೀಯ


Team Udayavani, Oct 22, 2020, 5:54 PM IST

Ballary-tdy-2

ಬಳ್ಳಾರಿ: ಕೋವಿಡ್‌ ಲಾಕ್‌ಡೌನ್‌ ಸಂದರ್ಭದಲ್ಲಿ ಕುಟುಂಬ, ಮಕ್ಕಳೆನ್ನದೇ ಜನರ ಸೇವೆಗಾಗಿ ಕರ್ತವ್ಯದಲ್ಲಿ ನಿರತರಾಗಿದ್ದ ಪೊಲೀಸರ ತ್ಯಾಗ, ಸೇವಾ ಮನೋಭಾವ ಶ್ರೇಷ್ಠವಾದುದಾಗಿದ್ದು, ಅದು ಎಲ್ಲರಿಂದಲೂ ಸಾಧ್ಯವಿಲ್ಲ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಕೃಷ್ಣ ಬಿ.ಅಸೋಡೆ ಹೇಳಿದರು.

ನಗರದ ಡಿಎಆರ್‌ ಮೈದಾನದಲ್ಲಿ ಜಿಲ್ಲಾ ಪೊಲೀಸ್‌ ಇಲಾಖೆ ವತಿಯಿಂದ ಬುಧವಾರ ಏರ್ಪಡಿಸಲಾಗಿದ್ದ ಪೊಲೀಸ್‌ ಹುತಾತ್ಮರ ದಿನಾಚರಣೆ ನಿಮಿತ್ತ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಹುತಾತ್ಮರಾದಪೊಲೀಸರಿಗೆ ಪುಷ್ಪಗುತ್ಛ ಗೌರವ ನಮನ ಸಲ್ಲಿಸಿ ಅವರು ಮಾತನಾಡಿದರು. ಪೊಲೀಸ್‌ ಇಲಾಖೆ ಸಿಬ್ಬಂದಿ ಸಮಯದ ನಿಗದಿ ಇಲ್ಲದಂತೆ ಕೆಲಸ ಮಾಡುತ್ತಾರೆ. ನ್ಯಾಯಾಲಯದಲ್ಲಿ ನಾವು ಹೊರೆ ಇರುವುದನ್ನು ಪಾಲಿಸುವುದು ಪೊಲೀಸರು ಎಂದರು.

ಇದೇ ವೇಳೆ ಪೊಲೀಸರು ಸಹ ನ್ಯಾಯಾಧೀಶರೇ ಎಂದು ಸಂಬೋಧಿಸಿದ ನ್ಯಾಯಾಧಿಧೀಶ ಅಸೋಡೆ ಅವರು ಜನರಿಗೆ ತಮಗೆ ಸಮಸ್ಯೆಯಾದರೆ ಮೊದಲು ಪೊಲೀಸರನ್ನೇ ನೆನಪಿಸಿಕೊಂಡು ಅವರ ಹತ್ತಿರ ಬರುತ್ತಾರೆ ಎಂದರು. ಜನಸಾಮಾನ್ಯರ ಆಸ್ತಿ ಪಾಸ್ತಿ ಸುಭದ್ರವಾಗಿರಲು ಕಾರಣ ಪೊಲೀಸರು. ಜನಸಾಮಾನ್ಯರೂ ಕೂಡ ಪೊಲೀಸರನ್ನು ಗೌರವಿಸಿ, ಅಗತ್ಯ ಸೇವೆಗಳನ್ನು ಪಡೆದುಕೊಳ್ಳಬೇಕು ಎಂದರು.

ಕುಖ್ಯಾತರನ್ನು ಬಂಧಿಸಲು ಬಹಳಷ್ಟು ಬಾರಿ ಪ್ರಾಣ ಕಳೆದುಕೊಂಡ ಪ್ರಸಂಗಗಳು ನಡೆದಿವೆ. ಪೊಲೀಸರ ತ್ಯಾಗ ಮತ್ತು ಬಲಿದಾನಗಳು ಎಂದಿಗೂ ವ್ಯರ್ಥವಾಗಬಾರದು. ಹುತಾತ್ಮರಿಗೆ ಸರಿಯಾದ ಪರಿಹಾರ ನೀಡಿ, ಅವರ ಕುಟುಂಬಕ್ಕೆ ನೆರವಾಗಬೇಕು. ಹಿರಿಯ ಅಧಿಕಾರಿಗಳು ಹುತಾತ್ಮ ಕುಟುಂಬಗಳಿಗೆ ಶೀಘ್ರ ಪರಿಹಾರ ನೀಡಲು ಕ್ರಮವಹಿಸಬೇಕು ಎಂದರು. ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಲಾವಣ್ಯ ಮಾತನಾಡಿ, ಭಾರತದಲ್ಲಿ ಈ ವರ್ಷ 264 ಪೊಲೀಸರು ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿಯೇ ಮರಣಹೊಂದಿದ್ದು, ಅದರಲ್ಲಿ ಕರ್ನಾಟಕದ 17 ಜನರು ಇದ್ದಾರೆ ಎಂದರು.

ಕೋವಿಡ್‌ ಎಂಬ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಕೋವಿಡ್‌ ವಾರಿಯರ್ಸ್‌ ಆಗಿ ತಮ್ಮ ಅಮೂಲ್ಯ ಸೇವೆ ಸಲ್ಲಿಸಿದ್ದಾರೆ. ಅನೇಕರು ಕರ್ತವ್ಯ ಸಂದರ್ಭದಲ್ಲಿಯೇ ಸೋಂಕು ತಗುಲಿ ಮರಣಹೊಂದಿದ್ದಾರೆ. ಬಳ್ಳಾರಿಯಲ್ಲಿಯೂ ಸಹ 9 ಜನ ಪೊಲೀಸ್‌ ಸಿಬ್ಬಂದಿ ಮರಣಹೊಂದಿದ್ದಾರೆ ಎಂದರು. ಇದೇ ವೇಳೆ ಹುತಾತ್ಮರಾದ ಪೊಲೀಸರ ಹೆಸರುಗಳನ್ನು ಸ್ಮರಿಸಲಾಯಿತು. ಈ ಸಂದರ್ಭದಲ್ಲಿ ಪೊಲೀಸ್‌ ಹುತಾತ್ಮರಿಗೆ ಗೌರವ ನಮನ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಡಿವೈಎಸ್ಪಿಗಳು, ಸಿಪಿಐಗಳು ಸೇರಿದಂತೆ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

ರಾಜ್ಯದಲ್ಲಿ ಮತ್ತೆ ಬಿಜೆಪಿ-ಶಿವಸೇನೆ ಸರಕಾರ ಭವಿಷ್ಯ ನುಡಿದ ಅಠಾವಳೆ

ರಾಜ್ಯದಲ್ಲಿ ಮತ್ತೆ ಬಿಜೆಪಿ-ಶಿವಸೇನೆ ಸರಕಾರ: ಭವಿಷ್ಯ ನುಡಿದ ಅಠಾವಳೆ

cm

ಕೋವಿಡ್ ರೂಪಾಂತರ: ರಾಜ್ಯ ಸರಕಾರ ಕೈಗೊಂಡ ಪ್ರಮುಖ ತೀರ್ಮಾನಗಳು ಹೀಗಿವೆ

1-asads

ಕೋವಿಡ್ ರೂಪಾಂತರ: ಮಹಿಳಾ ಏಕದಿನ ವಿಶ್ವಕಪ್‌ ಅರ್ಹತಾ ಪಂದ್ಯಗಳು ರದ್ದು

ಗಂಗಾವತಿ: ಗೃಹಿಣಿಯ ಕೊಲೆ; ಅತ್ಯಾಚಾರದ ಶಂಕೆ

ಗಂಗಾವತಿ: ಗೃಹಿಣಿಯ ಕೊಲೆ; ಅತ್ಯಾಚಾರದ ಶಂಕೆ

1-sr

ಯಾಕೆ ಹೀಗಾಯಿತೋ ಗೊತ್ತಿಲ್ಲ: ಟಿಕೆಟ್ ‘ಕೈ’ ತಪ್ಪಿದ ನೋವಿನಲ್ಲಿ ಎಸ್.ಆರ್. ಪಾಟೀಲ್

dr-sudhakar

ಕೋವಿಡ್ ವೈರಸ್ 25 ಬಗೆಯ ರೂಪಾಂತರಿಗಳನ್ನು ಹೊಂದಿದೆ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ವಿಟ್ಲ: ಕಾರು ಢಿಕ್ಕಿ ಹೊಡೆದು ಬಾಲಕ ಗಂಭೀರ

ವಿಟ್ಲ: ಕಾರು ಢಿಕ್ಕಿ ಹೊಡೆದು ಬಾಲಕ ಗಂಭೀರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಮನೆ ಕುಸಿದು ಮೃತಪಟ್ಟ ವೃದ್ಧೆ ಕುಟುಂಬಕ್ಕೆ ಪರಿಹಾರ ನೀಡಿ

ಹೆದ್ದಾರಿ ತಡೆದು ರೈತರಿಂದ ಪ್ರತಿಭಟನೆ

ಹೆದ್ದಾರಿ ತಡೆದು ರೈತರಿಂದ ಪ್ರತಿಭಟನೆ

ballari news

4 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ದ

28y-sathish

ಈ ಬಾರಿ ವೈ. ಸತೀಶ್ ಗೆಲುವು ನಿಶ್ಚಿತ: ಸಚಿವ ಆನಂದ್ ಸಿಂಗ್

kanakadasa jayanthi

ಸಂತ ಶ್ರೇಷ್ಠ ಕನಕದಾಸ ಜಯಂತಿ ಆಚರಣೆ

MUST WATCH

udayavani youtube

ಎರೆಹುಳು ಸಾಕಾಣಿಕೆ ಮಾಡಿ ಭೂಮಿಯ ಫಲವತ್ತತೆ ಹೆಚ್ಚಿಸಿ, ಕೈತುಂಬಾ ಆದಾಯವೂ ಗಳಿಸಿ

udayavani youtube

ಬೆಂಗಳೂರಿನಿಂದ ಪಾಟ್ನಾಕ್ಕೆ 139 ಪ್ರಯಾಣಿಕರನ್ನು ಹೊತ್ತ ವಿಮಾನ ತುರ್ತು ಭೂಸ್ಪರ್ಶ

udayavani youtube

Shree Chamundeshwari Kshetra Arikodi

udayavani youtube

ಮೈಮೇಲೆ ದೇವರು ಬಂದಿದ್ದಾರೆ ಎಂದು ಲಸಿಕೆ ಹಾಕಲು ಬಂದವರನ್ನೇ ಯಾಮಾರಿಸಿದ ವ್ಯಕ್ತಿ

udayavani youtube

ಕಾರು ಶೋರೂಂ ಒಳಗೆ ನುಗ್ಗಿದ ಕಾಡು ಹಂದಿ!

ಹೊಸ ಸೇರ್ಪಡೆ

ರಾಜ್ಯದಲ್ಲಿ ಮತ್ತೆ ಬಿಜೆಪಿ-ಶಿವಸೇನೆ ಸರಕಾರ ಭವಿಷ್ಯ ನುಡಿದ ಅಠಾವಳೆ

ರಾಜ್ಯದಲ್ಲಿ ಮತ್ತೆ ಬಿಜೆಪಿ-ಶಿವಸೇನೆ ಸರಕಾರ: ಭವಿಷ್ಯ ನುಡಿದ ಅಠಾವಳೆ

cm

ಕೋವಿಡ್ ರೂಪಾಂತರ: ರಾಜ್ಯ ಸರಕಾರ ಕೈಗೊಂಡ ಪ್ರಮುಖ ತೀರ್ಮಾನಗಳು ಹೀಗಿವೆ

ಅಧಿಕಾರಿಗಳು ಒತ್ತಡಕ್ಕೆ ಮಣಿದು ನಿಯಮ ಉಲ್ಲಂಘಿಸಿ ದಾಖಲಾತಿ ನೀಡಿದರೆ ಉಪವಾಸ ಸತ್ಯಾಗ್ರಹ

ಅಧಿಕಾರಿಗಳು ಒತ್ತಡಕ್ಕೆ ಮಣಿದು ನಿಯಮ ಉಲ್ಲಂಘಿಸಿ ದಾಖಲಾತಿ ನೀಡಿದರೆ ಉಪವಾಸ ಸತ್ಯಾಗ್ರಹ

1-asads

ಕೋವಿಡ್ ರೂಪಾಂತರ: ಮಹಿಳಾ ಏಕದಿನ ವಿಶ್ವಕಪ್‌ ಅರ್ಹತಾ ಪಂದ್ಯಗಳು ರದ್ದು

ಸಿಂದಗಿ : ಅಕಾಲಿಕ ಮಳೆಯಿಂದ ಬೆಳೆ ಹಾನಿ, ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ

ಸಿಂದಗಿ ; ಬೆಳೆಹಾನಿ ಪ್ರದೇಶಕ್ಕೆ ಅಧಿಕಾರಿಗಳ ತಂಡ ಭೇಟಿ, ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.