ಕೃಷಿ ಹೊಂಡ-ಬದು ನಿರ್ಮಾಣಕ್ಕೆ ಆದ್ಯತೆ ; ನರೇಗಾದಡಿ ಕೃಷಿಗೆ ಹೆಚ್ಚಿನ ಪ್ರೋತ್ಸಾಹ

Team Udayavani, Jun 16, 2020, 11:38 AM IST

ಕೃಷಿ ಹೊಂಡ-ಬದು ನಿರ್ಮಾಣಕ್ಕೆ ಆದ್ಯತೆ

ಸಾಂದರ್ಭಿಕ ಚಿತ್ರ

ಕುರುಗೋಡು: ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ತಾಲೂಕಿನಲ್ಲಿ ಪ್ರಸಕ್ತ ಸಾಲಿನಲ್ಲಿ ಕೃಷಿ ಇಲಾಖೆ ಮತ್ತು ತಾಪಂ ವತಿಯಿಂದ ಕೃಷಿ ಹೊಂಡ ಹಾಗೂ ಬದು ನಿರ್ಮಾಣಕ್ಕೆ ಹೆಚ್ಚಿನ ಒತ್ತು ಕೊಡಲಾಗಿದೆ. ಈಗಾಗಲೇ ಕೃಷಿ ಇಲಾಖೆ ವತಿಯಿಂದ ತಾಲೂಕಿನ ವ್ಯಾಪ್ತಿಯ ಸುತ್ತಮುತ್ತ ಗ್ರಾಮಗಳಲ್ಲಿ ಈ ಎರಡೇ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ಸಿಕ್ಕಿದೆ. ಏಪ್ರಿಲ್‌ನಲ್ಲಿ ಒಟ್ಟು 56 ಬದು ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಅದೇ ರೀತಿ 20 ಕೃಷಿ ಹೊಂಡಗಳು ಮುಕ್ತಾಯಗೊಂಡಿದೆ. ಇನ್ನುಳಿದ ಕಾಮಗಾರಿಗಳು ಪ್ರಗತಿಯಲ್ಲಿವೆ. ಅಲ್ಲದೆ ಬದು ನಿರ್ಮಾಣ ಮತ್ತು ಕೃಷಿ ಹೊಂಡ ನಿರ್ಮಾಣ ಕಾಮಗಾರಿಗಳಲ್ಲಿ ಬಳ್ಳಾರಿ ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ.

ಕಳೆದ ವರ್ಷ ತಾಲೂಕಿನಲ್ಲಿ ಕೆರೆ ಹೂಳೆತ್ತುವುದು, ಚೆಕ್‌ ಡ್ಯಾಂ ನಿರ್ಮಾಣ, ಕಾಲುವೆ ಹೂಳು ತೆಗೆಯುವ ಕೆಲಸವನ್ನೇ ಹೆಚ್ಚಾಗಿ ಕೈಗೆತ್ತಿಕೊಳ್ಳಲಾಗಿತ್ತು. ಅದರೆ ಈ ವರ್ಷ ಇವುಗಳ ಜತೆಯಲ್ಲಿ ಬದು ನಿರ್ಮಾಣ, ಕೃಷಿ ಹೊಂಡಕ್ಕೆ ಒತ್ತು ನೀಡಲಾಗಿದೆ. ಅಂತರ್ಜಲ ಮಟ್ಟ ಹೆಚ್ಚಿಸುವುದು, ಕೃಷಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎನ್ನುವ ಉದ್ದೇಶದಿಂದ ಈ ಸಲ ಬದು ನಿರ್ಮಾಣ, ಕೃಷಿ ಹೊಂಡಕ್ಕೆ ಮೊದಲ ಆದ್ಯತೆ ನೀಡಲಾಗಿದೆ. ಇದರ ಜತೆಗೆ ಕೆರೆ ಹೂಳೆತ್ತುವುದು, ಕಾಲುವೆ ಹೂಳು ತೆಗೆಯುವುದು, ಚೆಕ್‌ ಡ್ಯಾಂ, ಇಂಗು ಗುಂಡಿಗಳ ನಿರ್ಮಾಣವೂ ನಡೆದಿದೆ ಎಂದು ಕೃಷಿ ಇಲಾಖೆ ಅಧಿಕಾರಿ ಎಂ.ದೇವರಾಜ್‌ ಮತ್ತು ತಾಪಂ ಇಒ ಮಡಗಿನ ಬಸಪ್ಪ ತಿಳಿಸಿದರು.

ತಾಲೂಕಿನ ಮುಷ್ಟಗಟ್ಟೆ, ಎಚ್‌. ವೀರಾಪುರ, ಸೋಮಲಾಪುರ, ಒರ್ವಾಯಿ ಬಾದನಹಟ್ಟಿ, ಗ್ರಾಮಗಳ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಬದುಗಳ ನಿರ್ಮಾಣ ಮತ್ತು ಕೃಷಿ ಹೊಂಡಗಳನ್ನು ನಿರ್ಮಿಸಲಾಗುತ್ತಿದೆ. ಕೊರೊನಾ ವೈರಸ್‌ ಹಾವಳಿ ಹೆಚ್ಚಿರುವುದರಿಂದ ಅನೇಕ ಜನರು ಊರುಗಳಿಂದ ಸ್ವಗ್ರಾಮಕ್ಕೆ ವಾಪಸ್‌ ಬಂದಿದ್ದಾರೆ. ಅವರಿಗೂ ಕೆಲಸ ಕೊಡಲಾಗಿದೆ. ಸದ್ಯ 500 ಕೂಲಿ ಕಾರ್ಮಿಕರು ಯೋಜನೆ ಅಡಿ ಕೆಲಸ ನಿರ್ವಹಿಸುತ್ತಿದ್ದಾರೆ. ಸರಕಾರದ ನಿರ್ದೇಶನದಂತೆ ಅಂತರ ಕಾಯ್ದುಕೊಂಡು ಕೆಲಸ ಮಾಡುತ್ತಿದ್ದಾರೆ. ಎಲ್ಲ ಕಾರ್ಮಿಕರಿಗೂ ಇದರ ಬಗ್ಗೆ ಅಧಿ ಕಾರಿಗಳು ತಿಳಿವಳಿಕೆ ಮೂಡಿಸಿದ್ದಾರೆ. ಒಂದೊಂದು ಬದುವಿನಲ್ಲಿ
ಒಬ್ಬೊಬ್ಬರೇ ಕೆಲಸ ನಿರ್ವಹಿಸುವುದರಿಂದ ಅಂತರ ಕಾಯ್ದುಕೊಂಡು ಕೆಲಸ ನಿರ್ವಹಿಸಲು ಅನುಕೂಲವಾಗುತ್ತಿದೆ. ಹೆಚ್ಚಿನ ಬದುಗಳ ನಿರ್ಮಾಣಕ್ಕೆ ಇದು ಕೂಡ ಪ್ರಮುಖ ಅನುಕೂಲವಾಗಲಿದೆ.

ಬದು ನಿರ್ಮಾಣ ಮತ್ತು ಕೃಷಿ ಹೊಂಡ ನಿರ್ಮಾಣ ಮಾಡುವುದರಿಂದ ಮಣ್ಣು ಮತ್ತು ನೀರು ಕೊಚ್ಚಿ ಹೋಗುವುದಿಲ್ಲ. ಭೂಮಿ ಫಲವತ್ತತೆ ಹೆಚ್ಚಾಗುತ್ತದೆ. ಆದ್ದರಿಂದ
ಕೃಷಿ ಚಟುವಟಿಕೆಗೆ ಸರಕಾರ ಆದ್ಯತೆ ನೀಡಿದೆ. ಇನ್ನೂ ಲಾಕ್‌ಡೌನ್‌ ಅಡಿ ಕಾರ್ಮಿಕರಿಗೂ ಕೆಲಸ ನೀಡಲಾಗಿದೆ.
ಎಂ. ದೇವರಾಜ್‌, ಹಿರಿಯ ಕೃಷಿ ಅಧಿಕಾರಿ ಕುರುಗೋಡು

ಸುಧಾಕರ್‌ ಮಣ್ಣೂರು

ಟಾಪ್ ನ್ಯೂಸ್

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.