ಕೋವಿಡ್‌ ಲಸಿಕೆ ಸಂಗ್ರಹ-ಚಿಕಿತ್ಸೆಗೆ ಸಿದ್ಧತೆ ಕೈಗೊಳ್ಳಿ

Team Udayavani, Dec 21, 2020, 6:34 PM IST

Ballary-tdy-1

ಬಳ್ಳಾರಿ: ಕೋವಿಡ್‌ ಮಹಾಮಾರಿಗೆ ಕಡಿವಾಣ ಹಾಕುವ ಕೋವಿಡ್‌ ವ್ಯಾಕ್ಸಿನ್‌ ಶೀಘ್ರದಲ್ಲಿಯೇ ದೇಶದಲ್ಲಿ ಲಭ್ಯವಾಗುವ ಸಾಧ್ಯತೆ ಇದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ಲಸಿಕೆಯನ್ನು ಸಮರ್ಪಕವಾಗಿ ಕೋಲ್ಡ್‌ ಸ್ಟೋರೇಜ್‌ನಲ್ಲಿಸಂಗ್ರಹ, ವಿತರಣೆ ಮತ್ತು ಚಿಕಿತ್ಸೆ ನೀಡುವುದಕ್ಕೆ ಸಂಬಂಧಿಸಿದಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್‌.ಎಸ್‌.ನಕುಲ್‌ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಟಾಸ್ಕ್ಫೋರ್ಸ್‌ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈಗಾಗಲೇ ಜಿಲ್ಲೆಯಲ್ಲಿ ಕೋವಿಡ್‌ ವ್ಯಾಕ್ಸಿನ್‌ ಲಭ್ಯವಾದ ತಕ್ಷಣ ಪ್ರಥಮ ಹಂತವಾಗಿ ಸರ್ಕಾರಿ ಮತ್ತು ಖಾಸಗಿ ವೈದ್ಯರು ಹಾಗೂವೈದ್ಯಕೀಯ ಸಿಬ್ಬಂದಿಗೆ ಲಸಿಕೆ ನೀಡಲು ಉದ್ದೇಶಿಸಲಾಗಿದ್ದು, ಅದರಂತೆ ಜಿಲ್ಲೆಯಲ್ಲಿ17682 ಗುರಿ ನಿಗದಿಪಡಿಸಲಾಗಿದೆ. ಈಗಾಗಲೇ ಸರ್ಕಾರಿ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ 13680 ಮತ್ತು ಖಾಸಗಿ ವೈದ್ಯಕೀಯ ಸಿಬ್ಬಂದಿ4002 ನೋಂದಾಯಿಸಲಾಗಿದ್ದು, ಇನ್ನೂ 281 ಜನ ವೈದ್ಯಕೀಯ ಸಿಬ್ಬಂದಿ ತತ್‌ಕ್ಷಣ ನೋಂದಣಿಗೆ ಕ್ರಮಕೈಗೊಳ್ಳಬೇಕು. ಕೋವಿಡ್‌ವ್ಯಾಕ್ಸಿನ್‌ ನೀಡುವ ಸಂದರ್ಭದಲ್ಲಿ ನಮ್ಮಹೆಸರಿಲ್ಲ. ಉದ್ದೇಶಪೂರ್ವಕವಾಗಿ ಕೈಬಿಟ್ಟಿದ್ದಾರೆ ಎಂಬ ಆರೋಪಗಳಿಗೆ ಅಸ್ಪದ ನೀಡಬಾರದು ಎಂದರು.

ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಡಾ| ಅನಿಲಕುಮಾರ್‌ ಮಾತನಾಡಿ, ಕೋವಿಡ್‌ ಲಸಿಕೆ ಇದೇ ಡಿಸೆಂಬರ್‌ 25ರಂದು ಘೋಷಣೆಯಾಗುವ ಸಾಧ್ಯತೆ ಇದೆ. ಲಸಿಕೆಯನ್ನು ಸಮರ್ಪಕವಾಗಿಸಂಗ್ರಹಿಸುವುದಕ್ಕೆ ಕೋಲ್ಡ್‌ ಸ್ಟೊರೇಜ್‌ ವ್ಯವಸ್ಥಹಾಗೂ ಲಸಿಕೆ ಸಮರ್ಪಕವಾಗಿ ವಿತರಣೆಗೆ ಮತ್ತು ಚಿಕಿತ್ಸೆ ನೀಡುವುದಕ್ಕೂ ವ್ಯವಸ್ಥೆಮಾಡಿಕೊಳ್ಳಲಾಗಿದ್ದು, ಲಸಿಕೆ ಬಂದ ತಕ್ಷಣಮೊದಲ ಹಂತದಲ್ಲಿ ವೈದ್ಯಕೀಯ ಸಿಬ್ಬಂದಿಗೆ 10ದಿನದೊಳಗೆ ಲಸಿಕೆ ನೀಡಲಾಗುವುದು ಎಂದರು.

2ನೇ ಹಂತದಲ್ಲಿ ಪೊಲೀಸ್‌ ಸಿಬ್ಬಂದಿ, ಗೃಹರಕ್ಷಕದಳ, ನಗರ ಸ್ಥಳೀಯ ಸಂಸ್ಥೆಗಳಕಾರ್ಮಿಕರು ಹಾಗೂ ಫ್ರಂಟ್‌ಲೆçನ್‌ ಕೋವಿಡ್‌ ವಾರಿಯರ್ಗಳಿಗೆ ಲಸಿಕೆನೀಡಲು ಉದ್ದೇಶಿಸಲಾಗಿದೆ. 3ನೇ ಹಂತದಲ್ಲಿ 50 ವರ್ಷ ಮೇಲ್ಪಟ್ಟವರಿಗೆ ಹಾಗೂ 50 ವರ್ಷದೊಳಗೆ ಕೋಮೊರ್ಬಿಡಿಟಿ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ಲಸಿಕೆ ನೀಡಲು ಉದ್ದೇಶಿಸಲಾಗಿದೆ ಎಂದು ಅವರು ವಿವರಿಸಿದರು.

ಪೋಲಿಯೋ ಕಾರ್ಯಕ್ರಮ ಯಶಸ್ವಿಗೆ ಸಹಕರಿಸಿ: ಜ. 17ರಂದು ಮೊದಲ ಸುತ್ತಿನ ಪಲ್ಸ್‌ ಪೋಲಿಯೋ ಲಸಿಕಾ ಕಾರ್ಯಕ್ರನಡೆಯಲಿದ್ದು, 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪಲ್ಸ್‌ ಪೋಲಿಯೋ ಲಸಿಕೆ ಹಾಕಿಸುವ ಹಾಗೂ ಯಾವುದೇ ಕಾರಣಕ್ಕೂ ಮಕ್ಕಳು ಇದರಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಇದಕ್ಕೆ ಎಲ್ಲ ಸಿದ್ಧತೆಗಳು ಮಾಡಿಕೊಳ್ಳಬೇಕು. ಇನ್ನಿತರೆ ಇಲಾಖೆಗಳು ಅಗತ್ಯ ಸಹಕಾರವನ್ನು ಆರೋಗ್ಯ ಇಲಾಖೆಗೆ ನೀಡಬೇಕು ಎಂದು ಡಿಸಿ ಎಸ್‌.ಎಸ್‌.ನಕುಲ್‌ ತಿಳಿಸಿದರು.

ವಿವಿಧ ಇಲಾಖೆಗಳು ತಮಗೆ ವಹಿಸಿದ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಿ, ಈ ಪಲ್ಸ್‌ ಪೋಲಿಯೋ ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು. ಈಟ್‌ ರೈಟ್‌ ಇಂಡಿಯಾ(ಬಳ್ಳಾರಿ)ಗೆ ಸಂಬಂಧಿ ಸಿದಂತೆ ಆಹಾರ ಸುರಕ್ಷತೆ ಅಧಿ ಕಾರಿಗಳೊಂದಿಗೆ ಚರ್ಚೆ ನಡೆಸಿದ ಜಿಲ್ಲಾಧಿಕಾರಿ ನಕುಲ್‌ ಅವರು ಅಗತ್ಯ ಸಲಹೆ ಸೂಚನೆಗಳನ್ನು ಈ ಸಂದರ್ಭದಲ್ಲಿ ನೀಡಿದರು.

ಈ ಸಂದರ್ಭದಲ್ಲಿ ವಿಮ್ಸ್‌ ನಿರ್ದೇಶಕ ಡಾ| ದೇವಾನಂದ, ಜಿಲ್ಲಾ ಆರೋಗ್ಯಾಧಿಕಾರಿ ಡಾ| ಜನಾರ್ದನ್‌ ಸೇರಿದಂತೆ ವಿವಿ  ಇಲಾಖೆಗಳ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.