ಸರ್ಕಾರಿ ಪಿಯು ಕಾಲೇಜಿನಲ್ಲಿ ಸಮಸ್ಯೆಗಳದ್ದೇ ಕಾರುಬಾರು!

Team Udayavani, Jun 21, 2018, 12:52 PM IST

ballety-2.jpg

ಕಂಪ್ಲಿ: ಸಮೀಪದ ಎಮ್ಮಿಗನೂರು ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜು ಸಮಸ್ಯೆಗಳ ಸುಳಿಯಿಂದ ಬಳಲುತ್ತಿದ್ದು, ಇಲ್ಲಗಳದ್ದೆ ಕಾರುಬಾರು. ಆದರೆ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಗಮನಹರಿಸುತ್ತಿಲ್ಲ.

ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ, ಕುಡಿಯುವ ನೀರು, ಶೌಚಾಲಯವೂ ಸೇರಿದಂತೆ ಕನಿಷ್ಠ ಮೂಲ ಸೌಲಭ್ಯಗಳು ಕಾಲೇಜಿನಲ್ಲಿಲ್ಲ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳೇ ಅಧಿಕ ಸಂಖ್ಯೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ, ಅವರಿಗೆ ಯಾವುದೇ ಸೂಕ್ತ ಸೌಕರ್ಯಗಳಿಲ್ಲದ ಕಾರಣ ಅವರ ವಿದ್ಯಾಭ್ಯಾಸಕ್ಕೆ ತೀವ್ರ ಹಿನ್ನಡೆಯಾಗಿದೆ.

ಕಾಲೇಜಿನ ಕಲಾ ವಿಭಾಗದ ಪ್ರಥಮ, ದ್ವಿತೀಯ ವರ್ಷದಲ್ಲಿ 133 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 109 ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತ್ತಿದ್ದಾರೆ. ಕಾಲೇಜಿನಲ್ಲಿ ಪ್ರಾಚಾರ್ಯ ಸೇರಿದಂತೆ ಒಟ್ಟು 5 ಜನ ಬೋಧಕ ಸಿಬ್ಬಂದಿಗಳು ಇದ್ದಾರೆ.

ಸಮಜಶಾಸ್ತ್ರ ಮತ್ತು ಅರ್ಥಶಾಸ್ತ್ರದ ಉಪನ್ಯಾಸಕರು ಬಿಇಡಿ ಪದವಿಗಾಗಿ ರಜೆ ಮೇಲೆ ತೆರಳಿದ್ದಾರೆ. ಸದ್ಯ ಕನ್ನಡ ಹಾಗೂ ಇತಿಹಾಸ ವಿಷಯದ ಉಪನ್ಯಾಸಕರಷ್ಟೇ ಇದ್ದಾರೆ.

ಪ್ರಸ್ತುತ ಶೈಕ್ಷಣಿಕ ವರ್ಷ ಆರಂಭಗೊಂಡಿದ್ದು, ಸುಮಾರು ಒಂದೂವರೆ ತಿಂಗಳಿಂದ ತರಗತಿಗಳು ಪ್ರಾರಂಭವಾಗಿವೆ.
ಹೀಗಿದ್ದರೂ ಬಹುತೇಕ ವಿಷಯಗಳ ಉಪನ್ಯಾಸಕರು ಇಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ಅನ್ಯ ವಿಷಯಗಳ
ಬಗ್ಗೆ ತಿಳಿದುಕೊಳ್ಳಲು ಸಮಸ್ಯೆ ಎದುರಾಗುತ್ತಿದೆ. ಕಾಲೇಜಿನಲ್ಲಿ ನೂರಕ್ಕೂ ಅಧಿಕ ವಿದ್ಯಾರ್ಥಿನಿಯರೇ ಇದ್ದಾರೆ. ಅವರಿಗೆ ಶೌಚಾಲಯದ ವ್ಯವಸ್ಥೆ ಇಲ್ಲದ ಕಾರಣ ಸಮೀಪದ ಪ್ರೌಢಶಾಲೆಗೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕಾಲೇಜಿನ ಹಿಂಭಾಗದಲ್ಲಿ ಕಾಂಪೌಂಡ್‌ ಇಲ್ಲದಿರುವುದರಿಂದ ಗ್ರಾಮಸ್ಥರು ತರಗತಿ ಕೊ ಠಡಿಗಳಮಗ್ಗಲಲ್ಲಿಯೇ ಮಲ, ಮೂತ್ರ ವಿರ್ಸಜನೆ ಮಾಡುತ್ತಾರೆ. ಎಲ್ಲೆಂದರಲ್ಲಿ ತಂಬಾಕು ಜಗಿದು ಉಗುಳುತ್ತಾರೆ. ಎಲ್ಲೆಡೆ ದುರ್ವಾಸನೆ ಬೀರುತ್ತಿದ್ದು, ತರಗತಿಗಳಲ್ಲಿ ಕುಳಿತು ಪಾಠ-ಪ್ರವಚನ ಕೇಳಲು ಹಿಂಸೆಯಾಗುತ್ತಿದೆ. ಕಾಲೇಜಿನಲ್ಲಿದ್ದ ನೀರಿನ ಟ್ಯಾಂಕ್‌
ಕಿಡಿಗೇಡಿಗಳು ಒಡೆದು ಹಾಕಿದ್ದಾರೆ. ಕುಡಿವ ನೀರು, ಶೌಚಕ್ಕೆ ಸಮಸ್ಯೆಯಾಗುತ್ತಿದೆ. ಉಪನ್ಯಾಸಕರ ಕೊರತೆ ಇರುವುದರಿಂದ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ ಎಂದು  ವಿದ್ಯಾರ್ಥಿಗಳು ತಮ್ಮ ನೋವು
ವ್ಯಕ್ತಪಡಿಸುತ್ತಾರೆ.

ಕಾಲೇಜಿನಲ್ಲಿ ಹಲವು ಸಮಸ್ಯೆಗಳು ಇವೆ. 55 ಲಕ್ಷ ರೂ. ವೆಚ್ಚದಲ್ಲಿ ಎರಡು ಕೊಠಡಿ, ಶೌಚಾಲಯ ನಿರ್ಮಾಣಕ್ಕೆ
ಅನುದಾನ ಮಂಜೂರಾಗಿದೆ. ಇಷ್ಟೆಲ್ಲ ಸಮಸ್ಯೆಗಳ ನಡುವೆಯೂ ಇರುವ ಉಪನ್ಯಾಸಕರ ಪರಿಶ್ರಮದಿಂದ ಈ ಬಾರಿಕಾಲೇಜಿಗೆ ಶೇ.89ರಷ್ಟು ಫಲಿತಾಂಶ ಬಂದಿದೆ.
ಎ.ಎಂ.ಜಯಶ್ರೀ, ಪ್ರಾಚಾರ್ಯರು, ಸರ್ಕಾರಿ ಕಾಲೇಜು.

ಈಗಾಗಲೇ ಎಮ್ಮಿಗನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿ ಸಮಸ್ಯೆಗಳ ಕುರಿತು ಮಾಹಿತಿ
ಪಡೆದಿದ್ದೇನೆ. ಕಾಲೇಜಿಗೆ ಮಂಜೂರಾಗಿರುವ ಶೌಚಾಲಯ ಶೀಘ್ರ ನಿರ್ಮಿಸುವಂತೆ ಜಿಪಂ ಕಾರ್ಯನಿರ್ವಾಹಕ
ಅಭಿಯಂತರರಿಗೆ ಹಾಗೂ ಕೊಠಡಿಗಳ ನಿರ್ಮಾಣಕ್ಕೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದು, ಇನ್ನುಳಿದಂತೆ
ಉಪನ್ಯಾಸಕರು ಕೊರತೆ, ಕಾಂಪೌಂಡು ನಿರ್ಮಾಣ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ.
 ಜೆ.ಎನ್‌.ಗಣೇಶ್‌, ಶಾಸಕರು.

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.