ಬಿಜೆಪಿ ನಾಯಕರ ಭಾವಚಿತ್ರಕ್ಕೆ ಮಸಿ ಬಳಿದು ಪ್ರತಿಭಟನೆ

Team Udayavani, Jan 17, 2019, 7:31 AM IST

ಕಂಪ್ಲಿ: ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸರ್ಕಾರ ಅಭದ್ರಗೊಳಿಸಲು ಮುಂದಾಗಿರುವ ಬಿಜೆಪಿ ನಾಯಕರ ಭಾವಚಿತ್ರಗಳಿಗೆ ಮಸಿ ಬಳಿಯುವ ಮೂಲಕ ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಸಂಸದ ವಿ.ಎಸ್‌.ಉಗ್ರಪ್ಪ, ಜಿಲ್ಲಾ ಕಾಂಗ್ರೆಸ್‌ ಮುಖಂಡರು ಪಟ್ಟಣದ ಬೆಳಗೋಡು ಅಗಸಿಯಲ್ಲಿ ಕಂಪ್ಲಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್‌ ಸಮಿತಿ ಬಿಜೆಪಿ ವಿರುದ್ಧ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಪ್ರಧಾನಿ ನರೇಂದ್ರ ಮೋದಿ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ಭಾವಚಿತ್ರಗಳಿಗೆ ಮಸಿ ಬಳಿಯುವ ಮೂಲಕ ಪ್ರತಿಭಟನೆ ನಡೆಸಿದರು.

ಈ ಸಂದರ್ಭಲ್ಲಿ ಮಾತನಾಡಿದ ಸಂಸದ ವಿ.ಎಸ್‌.ಉಗ್ರಪ್ಪ, ರಾಜ್ಯದ ಬಿಜೆಪಿ ಮುಖಂಡರು ಹಾಗೂ ಶಾಸಕರು ಅಧಿಕಾರಕ್ಕಾಗಿ ಹಪಾಹಪಿಸುತ್ತಿದ್ದು, ಸುಭದ್ರವಾಗಿರುವ ಸಮ್ಮಿಶ್ರ ಸರ್ಕಾರ ಅಭದ್ರಗೊಳಿಸುವ ನೀಚಕೆಲಸಕ್ಕೆ ಕೈಹಾಕಿದ್ದು, ಕಾಂಗ್ರೆಸ್‌ ಶಾಸಕರಿಗೆ ಆಸೆ ಆಮೀಷಗಳಿಂದ ಸೆಳೆಯುವ ಕೆಟ್ಟ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸಿ.ಆರ್‌.ಹನುಮಂತ ಮಾತನಾಡಿದರು. ಜಿಲ್ಲಾ ಯುವ ಕಾಂಗ್ರೆಸ್‌ ಗ್ರಾಮೀಣ ಅಧ್ಯಕ್ಷ ನಾಗರಾಜ, ಕೆ.ತಿಮ್ಮಯ್ಯ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಬಿ.ವಿ.ಶಿವಯೋಗಿ, ಹಬೀಬ್‌ ರೆಹಮಾನ್‌, ಕೆ.ರೇಣುಕಗೌಡ, ಎ.ರೇಣುಕಪ್ಪ, ಎಂ.ಗೋಪಾಲ್‌, ಮೋಹಿನುದ್ದೀನ್‌ ಚೌದರಿ ಇನ್ನಿತರರಿದ್ದರು.


ಈ ವಿಭಾಗದಿಂದ ಇನ್ನಷ್ಟು

  • ಬಳ್ಳಾರಿ: ಕಾನೂನು ಉಲ್ಲಂಘಿಸುವುದೇ ಅಪರಾಧವಾಗಿದ್ದು, ಪ್ರಾಣ ಉಳಿಸಲೆಂದೇ ಇರುವ ಸಂಚಾರಿ ನಿಯಮಗಳನ್ನು ಸಾರ್ವಜನಿಕರು ಪಾಲಿಸಬೇಕು ಎಂದು ಹೆಚ್ಚುವರಿ ಎಸ್‌ಪಿ...

  • ಬಳ್ಳಾರಿ: ತಾಲೂಕಿನ ಇಬ್ರಾಹಿಂಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ರೂಪನಗುಡಿ ಕ್ಲಸ್ಟರ್‌ ಮಟ್ಟದ...

  • ಬಳ್ಳಾರಿ: ಪೊಲೀಸ್‌ ಇಲಾಖೆಯ ಸಿಬ್ಬಂದಿಯವರು ಕರ್ತವ್ಯದ ಜೊತೆಗೆ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಿ ಎಂದು ಜಿಲ್ಲಾಧಿಕಾರಿ ಎಸ್‌.ಎಸ್‌. ನಕುಲ್‌ ಅವರು ಕರೆ...

  • ಸಿರುಗುಪ್ಪ: ತಾಲೂಕಿನ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಭತ್ತ ರಾಶಿ ಮಾಡುವ ಕಾರ್ಯ ಭರದಿಂದ ಸಾಗಿದೆ. ಆದರೆ ಮೋಡಕವಿದ ವಾತಾವರಣ ಆಗಾಗ ಬೀಳುವ ಮಳೆ ರೈತರನ್ನು...

  • ಬಳ್ಳಾರಿ: ಜಿಲ್ಲೆಯಲ್ಲಿರುವ 237 ಗ್ರಾಪಂಗಳಲ್ಲಿ ಮುಂದಿನ ಒಂದು ವರ್ಷದೊಳಗೆ ನಗರದಲ್ಲಿದ್ದಂತೆ ಗ್ರಾಪಂಗಳಲ್ಲಿಯೂ ಮನೆ-ಮನೆಗಳಿಂದ ಕಸ ಸಂಗ್ರಹಿಸುವ ಗುರಿಯನ್ನು...

ಹೊಸ ಸೇರ್ಪಡೆ