ಹತ್ರಾಸ್‌ ಘಟನೆ ಖಂಡಿಸಿ ಪ್ರತಿಭಟನೆ


Team Udayavani, Oct 14, 2020, 5:29 PM IST

BALLARY-TDY-1

ಬಳ್ಳಾರಿ: ದೇಶದಾದ್ಯಂತ ಮಹಿಳೆಯರ ಮೇಲಿನ ಅತ್ಯಾಚಾರಗಳನ್ನುನಿಯಂತ್ರಿಸಬೇಕು. ರೈತ -ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿ ನಗರದ ಜಿಲ್ಲಾ ಧಿಕಾರಿ ಕಚೇರಿ ಆವರಣದಲ್ಲಿ ಎಐಡಿಎಸ್‌ಒ ಸಂಘಟನೆ ವತಿಯಿಂದ ಸಂಘರ್ಷ ದಿನದ ಅಂಗವಾಗಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಉತ್ತರಪ್ರದೇಶದ ಹತ್ರಾಸ್‌ನಲ್ಲಿಯುವತಿ ಮೇಲೆ ನಡೆದ ಅತ್ಯಾಚಾರ ಕೊಲೆಯನ್ನು ಆಲ್‌ ಇಂಡಿಯಾ ಡೆಮಾಕ್ರೆಟಿಕ್‌ ಸ್ಟೂಡೆಂಟ್ಸ್‌ ಆರ್ಗನೈಸೇಷನ್‌ (ಎಐಡಿಎಸ್‌ಓ) ಉಗ್ರವಾಗಿ ಖಂಡಿಸುತ್ತದೆ. ಈ ಪೈಶಾಚಿಕ ಕೃತ್ಯವನ್ನು ಎಸಗಿದ ನಾಲ್ವರು ಯುವಕರು ಘಟನೆ ನಡೆದ ನಂತರವೂ ಯಾವುದೇ ಅಳುಕಿಲ್ಲದೆ ಸ್ವತಂತ್ರವಾಗಿ ಓಡಾಡಿಕೊಂಡಿದ್ದು ನಾಗರಿಕ ಸಮಾಜಕ್ಕೆ ಆಘಾತವನ್ನುಂಟು ಮಾಡಿದೆ. ಅತ್ಯಾಚಾರ ಮಾಡಿ, ಬೆನ್ನುಹುರಿಯನ್ನು ಮುರಿದು, ನಾಲಿಗೆ ಕತ್ತರಿಸಿ ಆಕೆಯನ್ನು ಅರೆಜೀವವನ್ನಾಗಿ ಮಾಡಿ ಅತ್ಯಾಚಾರಿಗಳು ಪಲಾಯನ ಮಾಡಿದ್ದರು. ಗಾಯಗೊಂಡು ನರಳುತ್ತಿದ್ದ ಸಂತ್ರಸ್ತೆಯನ್ನು ವೈದ್ಯಕೀಯ ನೆರವನ್ನು ನೀಡದೆ ಪೊಲೀಸ್‌ ಠಾಣೆಯಲ್ಲಿ ಅಮಾನವೀಯವಾಗಿ ಸತಾಯಿಸಿ, ನಂತರ ಪೋಷಕರೇ ಆಕೆಯನ್ನು ಆಸ್ಪತ್ರೆಗೆ ದಾಖಲುಮಾಡುವಂತಹ ಪರಿಸ್ಥಿತಿ ನಿರ್ಮಾಣ ಮಾಡಿದ ಪೋಲಿಸರ ನಡವಳಿಕೆಯನ್ನು ನಾವು ಉಗ್ರವಾಗಿ ಖಂಡಿಸುತ್ತೇವೆ ಎಂದುಪ್ರತಿಭಟನಾಕಾರರು ತಿಳಿಸಿದರು.

ಕೋವಿಡ್‌ ಮಹಾಮಾರಿಯಿಂದ ಈಗಾಗಲೇ ಸಂಕಷ್ಟದಲ್ಲಿರುವ ರೈತ-ಕಾರ್ಮಿಕರಿಗೆ ಕೇಂದ್ರ ಸರ್ಕಾರವು ಜಾರಿಮಾಡಲು ಹೊರಟಿರುವ ಎಪಿಎಂಸಿ ಕಾಯ್ದೆ, ಭೂಸುಧಾರಣೆ ಕಾಯ್ದೆ, ವಿದುತ್ಯ  ಕಾಯ್ದೆ, ಅಗತ್ಯ ವಸ್ತುಗಳ ಕಾಯ್ದೆಗಳುಗಾಯದ ಮೇಲೆ ಬರೆ ಎಳೆದಂತಾಗಿದೆ. ಯಾವುದೇ ಚರ್ಚೆಗಳನ್ನು ನಡೆಸದೆ ಅಪ್ರಜಾತಾಂತ್ರಿಕವಾಗಿ ಜಾರಿಗೊಳಿಸಿರುವ ತಿದ್ದುಪಡಿಗಳು ಕಾರ್ಮಿಕರ ಮುಷ್ಕರದಹಕ್ಕನ್ನೇ ಕಸಿದುಕೊಳ್ಳುತ್ತವೆ. ಈ ಯಾವುದೇ ಕಾಯ್ದೆಗಳು ಜನಪರವಾಗಿರದೆ ಜನವಿರೋಧಿ, ರೈತ-ಕಾರ್ಮಿಕ ವಿರೋಧಿ ಯಾಗಿದ್ದು ಸರ್ಕಾರವು ಕೂಡಲೇ ಈ ಎಲ್ಲ ಕಾಯ್ದೆಗಳು ಕೈಬಿಡಬೇಕು ಎಂದು ಆಗ್ರಹಿಸಿದರು. ಬಳಿಕ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಎಐಡಿಎಸ್‌ಒ ಜಿಲ್ಲಾಧ್ಯಕ್ಷ ಜಿ.ಸುರೇಶ್‌, ಜಿಲ್ಲಾ ಉಪಾಧ್ಯಕ್ಷ ಗುರಳ್ಳಿ ರಾಜ, ಜಿಲ್ಲಾ ಸೆಕ್ರಟರಿಯಟ್‌ ಸದಸ್ಯರಾದ ಕೆ.ಈರಣ್ಣ, ಎಂ.ಶಾಂತಿ ಹಾಗೂ ಸದಸ್ಯರಾದ ಸಿದ್ದು, ಶೇಖರ್‌, ಶ್ರೀನಿವಾಸ್‌ ಇನ್ನಿತರರು ಇದ್ದರು

ಘಟನೆ ಖಂಡಿಸಿ ದಲಿತ ಸಂಘಟನೆಯಿಂದ ಮನವಿ :

ಸಿರುಗುಪ್ಪ: ಉತ್ತರ ಪ್ರದೇಶ ಹತ್ರಾಸ್‌ನಲ್ಲಿ ನಡೆದ ಯುವತಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ಕರ್ನಾಟಕ ರಾಜ್ಯದಲಿತ ಸಂಘರ್ಷ ಸಮಿತಿ (ಡಿ.ಜಿ. ಸಾಗರ್‌ಬಣ) ತಾಲೂಕು ಶಾಖೆ ಪದಾಧಿ ಕಾರಿಗಳುಗ್ರೇಡ್‌-2 ತಹಶೀಲ್ದಾರ್‌ ಮೂಲಕರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ಜಿಲ್ಲಾ ಸಂಘಟನ ಸಂಚಾಲಕ ಎಚ್‌.ಬಿ. ಗಂಗಪ್ಪ ಮಾತನಾಡಿ, ದಿನ ಬೆಳಗಾದರೆ

ದಲಿತರ ಮೇಲೆ ಸಾಮೂಹಿಕ ಕೊಲೆ, ಸುಲಿಗೆಗಳು, ಸಾಮೂಹಿಕ ಅತ್ಯಾಚಾರ, ಬೆತ್ತಲೆ ಮೆರವಣಿಗೆಗಳು ನಡೆಯುತ್ತಿವೆ. ಕಳೆದ ಕೆಲವು ದಿನಗಳ ಹಿಂದೆ ಉತ್ತರ ಪ್ರದೇಶದಲ್ಲಿ ದಲಿತ ಸಮುದಾಯಕ್ಕೆ ಸೇರಿದ ಇಬ್ಬರುಯುವತಿಯರ ಮೇಲೆ ನಡೆದ ಸಾಮೂಹಿಕಅತ್ಯಾಚಾರ ಮತ್ತು ಕಗ್ಗೊಲೆ ಅಮಾನವೀಯ ಕೃತ್ಯವಾಗಿದೆ.

ಅತ್ಯಾಚಾರಕ್ಕೊಳಗಾದ ಕುಟುಂಬಕ್ಕೆ ರಕ್ಷಣೆ ನೀಡದೆ ಅತ್ಯಾಚಾರಕೊಳಗಾದ ಯುವತಿ ಶವವನ್ನು ರಾತ್ರೋರಾತ್ರಿ ದಹನ ಮಾಡಿರುವುದಲ್ಲದೇ ಘಾಸಿಗೊಂಡ ಕುಟುಂಬದವರು ಪ್ರತಿಕ್ರಿಯಿಸದೆ ಮೌನ ವಹಿಸಬೇಕೆಂದು ಫರ್ಮಾನು ಹೊರಡಿಸುತ್ತಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸರ್ಕಾರದ ಕಾರ್ಯವೈಖರಿ ಸರಿಯಾದುದಲ್ಲ. ಘಟನೆಯನ್ನು ವ್ಯವಸ್ಥಿತವಾಗಿ ಮುಚ್ಚಿಹಾಕುವ ಪ್ರಯತ್ನಗಳು ಮೇಲ್ನೋಟಕ್ಕೆ ಸ್ಪಷ್ಟವಾಗಿ ಕಂಡುಬರುತ್ತಿದೆ. ಸ್ವತಃ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರೇ ಬಹಿರಂಗವಾಗಿ ಅತ್ಯಾಚಾರಿಗಳನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಠಾಕೂರ್‌ ಯುವಕರಲ್ಲಿ ಬಿಸಿರಕ್ತ ಇರುವುದರಿಂದ ಸಹಜವಾಗಿ ಇಂಥ ಪ್ರಕರಣಗಳು ನಡೆಯುತ್ತಿವೆ ಎಂಬ ಹೇಳಿಕೆಯು ಒಬ್ಬ ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ತಿ ಬಾಯಿಂದ ಬರುತ್ತದೆ ಎಂದರೆ ಇನ್ನೂ ಮುಂದಿನ ದಿನಗಳಲ್ಲಿ ಇನ್ನಷ್ಟು ಅತ್ಯಾಚಾರಗಳು ನಡೆಯಲಿ ಎಂದು ಬಹಿರಂಗವಾಗಿಯೇ ಪ್ರಚೋದಿಸಿದಂತಾಗುತ್ತದೆ. ಆದ್ದರಿಂದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸರ್ಕಾರವನ್ನು ವಜಾಗೊಳಿಸಬೇಕೆಂದು ಆಗ್ರಹಿಸಿದರು.

ತಾಲೂಕು ಸಂಚಾಲಕ ಎಂ. ದೊಡ್ಡಬಸಪ್ಪ, ಸಂಘಟನಾ ಸಂಚಾಲಕರಾದ ಎಸ್‌. ವೀರೇಶ್‌, ಭೀಮೇಶ್‌, ಎಸ್‌. ರಫಿ, ದಲಿತ ವಿದ್ಯಾರ್ಥಿ ಒಕ್ಕೂಟದ ಸಂಘಟನಾ ಸಂಚಾಲಕರಾದ ಎಚ್‌. ವಿರೇಶ, ಮೂಕಪ್ಪನಡವಿ, ಹನುಮೇಶ, ಮೂಕಪ್ಪಬೆಳಗಲ್‌, ಸಣ್ಣಯ್ಯ, ತಿಮ್ಮಯ್ಯ, ಮಹಾದೇವಪ್ಪ ಇದ್ದರು.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.