ಯುವತಿ ಹತ್ಯೆ ಖಂಡಿಸಿ ಕ್ಯಾಂಡಲ್‌ ಮೆರವಣಿಗೆ


Team Udayavani, Oct 6, 2020, 5:05 PM IST

ಯುವತಿ ಹತ್ಯೆ ಖಂಡಿಸಿ ಕ್ಯಾಂಡಲ್‌ ಮೆರವಣಿಗೆ

ಹಗರಿಬೊಮ್ಮನಹಳ್ಳಿ: ಉತ್ತರಪ್ರದೇಶದಲ್ಲಿ ನಿರಂತರವಾಗಿ ಮಹಿಳೆಯರ ಮೇಲೆ ಅತ್ಯಾಚಾರ ಮತ್ತು ದೌರ್ಜನ್ಯಗಳು ನಡೆಯುತ್ತಿದ್ದರೂ ಅಲ್ಲಿಯ ಸರಕಾರ ಮಾತ್ರ ಯಾವುದೇ ಪ್ರಕರಣಗಳನ್ನು ದಾಖಲಿಸದೇ ಮಹಿಳೆಯರನ್ನು ಕೇವಲವಾಗಿ ನೋಡುತ್ತಿದೆ ಎಂದು ಶಾಸಕ ಎಸ್‌. ಭೀಮಾನಾಯ್ಕ ಹರಿಹಾಯ್ದರು.

ಉತ್ತರಪ್ರದೇಶದ ಹತ್ರಾಸ್‌ನಲ್ಲಿ ದಲಿತ ಯುವತಿ ಹತ್ಯೆ ಖಂಡಿಸಿ ನಡೆಸಿದ ಕ್ಯಾಂಡಲ್‌ ಮೆರವಣಿಗೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಇಂಥ ಪ್ರಕರಣಗಳನ್ನು ಖಂಡಿಸುವ ಬದಲಿಗೆ ಸಾಥ್‌ ನೀಡುತ್ತಿರುವುದು ಇಲ್ಲಿಯ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಮಹಿಳೆ ಮತ್ತು ದಲಿತರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಗಳು ನಿರಂತರವಾಗಿದ್ದರೂ ಕೇಂದ್ರ ಸರಕಾರ ಕಣ್ಣುಮುಚ್ಚಿ ಕುಳಿತಿದೆ. ಸಾಂತ್ವನ ಹೇಳಲು ಹೋಗಿದ್ದ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಅವರ ಮೇಲೆ ಪೊಲೀಸರ ದೌರ್ಜನ್ಯ ಮಾಡಿರುವುದು ಖಂಡನೀಯ. ಯುಪಿ ಮತ್ತು ಕೇಂದ್ರ ಸರಕಾರ ನೈತಿಕವಾಗಿ ದಿವಾಳಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆಪಿಸಿಸಿ ಸದಸ್ಯ ಕುರಿ ಶಿವಮೂರ್ತಿ, ಕೆಪಿಸಿಸಿ ಮಾಧ್ಯಮ ವಕ್ತಾರ ಪತ್ರೇಶ್‌ ಹಿರೇಮಠ, ಕಾಂಗ್ರೆಸ್‌ ಬ್ಲಾಕ್‌ ಮಾಜಿ ಅಧ್ಯಕ್ಷರಾದ ಹೆಗಾxಳ್‌ ರಾಮಣ್ಣ, ಮುಟುಗನಹಳ್ಳಿ ಕೊಟ್ರೇಶ್‌, ವಾಲ್ಮೀಕಿ ಸಮಾಜದ ತಾಲೂಕು ಅಧ್ಯಕ್ಷ ಚಿಂತ್ರಪಳ್ಳಿ ದೇವೇಂದ್ರಪ್ಪ, ಉಪಾಧ್ಯಕ್ಷ ಕನ್ನಿಹಳ್ಳಿ ಚಂದ್ರಶೇಖರ, ಮುಖಂಡರಾದ ಪವಾಡಿ ಹನುಮಂತಪ್ಪ, ಡಿಶ್‌ ಮಂಜುನಾಥ, ರಹೇಮಾನ್‌, ಜಂದಿಸಾಹೇಬ್‌, ಸೈಯದ್‌ ಇರ್ಪಾನ, ಅಂಬಾಡಿ ನಾಗರಾಜ, ತೆಲಿಗಿ ನೆಲ್ಲು ಇಸ್ಮಾಯಿಲ್‌, ಭಂಟ್ರಾ ಕುಬೇರ ಇತರರಿದ್ದರು.

ವಾಲ್ಮೀಕಿ ಯುವ ಘಟಕದಿಂದ ಪ್ರತಿಭಟನೆ :

ಹಗರಿಬೊಮ್ಮನಹಳ್ಳಿ: ಉತ್ತರ ಪ್ರದೇಶದ ಯುವತಿ ಮೇಲೆ ಅತ್ಯಾಚಾರವೆಸಗಿ ಹಲ್ಲೆ ನಡೆಸಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ತಾಲೂಕು ವಾಲ್ಮೀಕಿ ಯುವಘಟಕದ ಪದಾಧಿಕಾರಿಗಳು ತಹಶೀಲ್ದಾರ್‌ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಜಿ. ಶಿವಕುಮಾರ್‌ಗೌಡರಿಗೆ ಮನವಿ ಸಲ್ಲಿಸಿದರು.

ಸಂಘಟನೆ ಅಧ್ಯಕ್ಷ ಟಿ.ಮಹೇಂದ್ರ ಮಾತನಾಡಿ, ಈ ಪ್ರಕರಣದಲ್ಲಿ ಯುಪಿ ಸರ್ಕಾರದ ನಡೆಯನ್ನು ಸೂಕ್ಷ್ಮವಾಗಿ ಗಮನಿಸಿದರೆ ಅಪರಾಧ ಕೃತ್ಯಕ್ಕೆ ಬೆಂಬಲ ನೀಡಿರುವುದು ಕಂಡು ಬರುತ್ತಿದೆ. ದಲಿತ ಯುವತಿ ಮೇಲೆ ಅತ್ಯಾಚಾರ, ಕೊಲೆ ಹಾಗೂ ದೈಹಿಕ ಹಿಂಸೆ ಮಾಡಿರುವುದು ಘೋರ ದೌರ್ಜನ್ಯವಾಗಿದೆ. ಮಹಿಳೆಯರಿಗೆ ಗೌರವ ನೀಡಬೇಕಾದ ಸಮಾಜದಲ್ಲಿ ಹೀಗೆ ಮೇಲಿಂದ ಮೇಲೆ ದೌರ್ಜನ್ಯ ಪ್ರಕರಣಗಳು ನಡೆಯುತ್ತಿರುವುದು ನಾಗರಿಕ ಸಮಾಜವೇ ತಲೆತಗ್ಗಿಸುವಂತಾಗಿದೆ. ಕೂಡಲೇ ಅಲ್ಲಿನ ಸರ್ಕಾರ ಪಾರದರ್ಶಕವಾಗಿ ತನಿಖೆ ನಡೆಸಿ ಅಪರಾಧಿಗಳನ್ನು ಗಲ್ಲು ಶಿಕ್ಷೆಗೊಳಪಡಿಸಬೇಕು. ಉತ್ತರ ಪ್ರದೇಶದಲ್ಲಿ ಆಗಾಗ ಮಹಿಳೆಯರ ಮೇಲೆ ದೌರ್ಜನ್ಯಗಳು ನಡೆಯುತ್ತಿರುವುದನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಪುರಸಭೆ ಸದಸ್ಯ ಜೋಗಿ ಹನುಮಂತ, ಸಂಘಟನೆಯ ಚಿಂತ್ರಪಳ್ಳಿ ನಾಗರಾಜ್‌, ಕೊಳ್ಳಿ ಪ್ರಕಾಶ್‌, ಹುಲ್ಮನಿ ಮಂಜುನಾಥ, ಬೆಣ್ಣಿಕಲ್ಲು ಹನುಮಂತಪ್ಪ, ಕುಪ್ಪಿನಕೇರಿ ವಿರೂಪಾಕ್ಷ, ಭಂಟರಕುಬೇರ, ಕನ್ನಿಹಳ್ಳಿ ಜಗದೀಶ್‌, ವಟ್ಟಮ್ಮನಹಳ್ಳಿ ಉದಯ್‌, ದೇವರಮನಿ ನೀಲಪ್ಪ, ಕೋಟೆಪ್ಪ, ದಾದಮ್ಮನವರ ಪ್ರಭು, ಎನ್‌.ಡಿ.ಕೆರೆ ಉಮೇಶ್‌, ಟಿ.ಸೋಮಶೇಖರ್‌, ಟಿ.ಗೌತಮ್‌, ಎ.ಕೆ. ಮಂಜುನಾಥ, ಅಂಜಿನಪ್ಪ, ಬಿ.ಪರಶುರಾಮ,ಕೆಚ್ಚಿನಬಂಡಿ ಸಂತೋಷ, ಪ್ರಭು ವಾಲ್ಮೀಕಿ, ಎಸ್‌ .ಪ್ರವೀಣ ಇತರರಿದ್ದರು.

ಟಾಪ್ ನ್ಯೂಸ್

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.