ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ
Team Udayavani, Dec 6, 2020, 4:07 PM IST
ಸಿರುಗುಪ್ಪ: ವಿವಿಧ ಬೇಡಿಕೆಗಳನ್ನು ಈಡೇರಿಸು ವಂತೆ ಒತ್ತಾಯಿಸಿ ಕರ್ನಾಟಕ ದೇವದಾಸಿಯರ ವಿಮೋಚನ ಸಂಘದ ತಾಲೂಕು ಘಟಕದ ಪದಾಧಿ ಕಾರಿಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಸಂಘದ ತಾಲೂಕು ಅಧ್ಯಕ್ಷೆ ಈರಮ್ಮ ಮಾತನಾಡಿ, ಕಳೆದ 4 ವರ್ಷಗಳಿಂದವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಾ ಪ್ರತಿಭಟನೆ ಮಾಡುತ್ತಲೇ ಇದ್ದೇವೆ. ಆದರೆ ಇಲ್ಲಿಯವರೆಗೆ ಸರ್ಕಾರ ನಮ್ಮ ಯಾವುದೇ ಬೇಡಿಕೆಗಳನ್ನು ಈಡೇರಿಸಲು ಮುಂದಾಗಿಲ್ಲ. ದೇವದಾಸಿಯರಿಗೆ ನೀಡುವ ಮಾಸಿಕ ಸಹಾಯಧನವನ್ನು ಮುಂಬರುವ ಬಜೆಟ್‌ನಲ್ಲಿ ರೂ.1500/ಕ್ಕೆ ಹೆಚ್ಚಿಸ ಬೇಕು, ಗಣತಿ ಪಟ್ಟಿಯಿಂದ ಬಿಟ್ಟು ಹೋದ ದೇವದಾಸಿ ಯರನ್ನು ತಕ್ಷಣವೇ ಸೇರ್ಪಡೆ ಮಾಡಿ ಅವರಿಗೆ ನೆರವು ನೀಡಬೇಕು.
ದೇವದಾಸಿಯರ ಮಕ್ಕಳ ವಿವಾಹಕ್ಕೆ ಪ್ರೋತ್ಸಾಹಧನ ನೀಡುವುದಾಗಿ ಸರ್ಕಾರ ಭರವಸೆ ನೀಡಿದ್ದು, ಇಲ್ಲಿಯವರೆಗೆ ಕೆಲವರಿಗೆ ಮಾತ್ರ ಸಹಾಯಧನವನ್ನು ನೀಡಲಾಗಿದೆ. ಆದ್ದರಿಂದ ಎಲ್ಲರಿಗೂ ಸಹಾಯಧನ ವಿತರಿಸಬೇಕು, ಕನಿಷ್ಠ 5 ಎಕರೆ ನೀರಾವರಿ ಜಮೀನನ್ನು ಕೊಡಬೇಕು, ತಾಲೂಕಿನಲ್ಲಿ ಕನಿಷ್ಠ 100ಜನ ದೇವದಾಸಿ ಫಲಾನುಭವಿಗಳಿಗೆ ಜಮೀನು ದೊರೆಯುವಂತೆ ಕ್ರಮ ಕೈಗೊಳ್ಳಬೇಕು. ದೇವದಾಸಿ ಪುನರ್ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ತಪ್ಪಿಸಲುಫಲಾನುಭವಿ ಗಳ ಆಯ್ಕೆಯನ್ನು ಸಾರ್ವಜನಿಕರ ಸಮ್ಮುಖದಲ್ಲಿ ಲಾಟರಿ ಎತ್ತುವ ಮೂಲಕ ಮಾಡಬೇಕು, ಅದೇ ಮಾದರಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ ನೆರವು ನೀಡಲು ಕ್ರಮ ತೆಗೆದುಕೊಳ್ಳಬೇಕು, ಫಲಾನುಭವಿಗಳ ಆಯ್ಕೆ ಪಟ್ಟಿಯನ್ನು ಜಿಲ್ಲಾ, ತಾಲೂಕು, ಗ್ರಾಪಂಗಳಲ್ಲಿ ಪ್ರಕಟಿಸಬೇಕೆಂದು ಒತ್ತಾಯಿಸಿದರು.
ಉಪಾಧ್ಯಕ್ಷೆ ಅಂಬಮ್ಮ, ಪ್ರಧಾನ ಕಾರ್ಯದರ್ಶಿ ಎಚ್. ದುರುಗಮ್ಮ ಮತ್ತು ಪದಾಧಿಕಾರಿಗಳು ಇದ್ದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444