ಸಮರ್ಪಕವಾಗಿ ಬಸ್ ಕಲ್ಪಿಸುವಂತೆ ಕಾಲೇಜ್ ವಿದ್ಯಾರ್ಥಿಗಳಿಂದ ದಿಡೀರ್ ಪ್ರತಿಭಟನೆ.!

Team Udayavani, Sep 1, 2022, 7:09 PM IST

17-bus

ಕುರುಗೋಡು: ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಕಾಲೇಜು ವಿದ್ಯಾರ್ಥಿಗಳು ಬಸ್‌ಗಳನ್ನು ತಡೆ ಹಿಡಿದು ಪ್ರತಿಭಟನೆ ನಡೆಸಿದ ಘಟನೆ  ಗುರುವಾರ ಸೋಮಸಮುದ್ರ ಗ್ರಾಮದಲ್ಲಿ ನಡೆದಿದೆ.

ಈ ವೇಳೆ ಮಾತನಾಡಿದ ಪ್ರತಿಭಟನಾನಿರತ ವಿದ್ಯಾರ್ಥಿಗಳು, ಬಳ್ಳಾರಿ ಜಿಲ್ಲೆಗೆ ಕಾಲೇಜು ವ್ಯಾಸಂಗಕ್ಕೆ ಸೋಮಸಮುದ್ರ, ಏರಂಗಳ್ಳಿ, ಶ್ರೀನಿವಾಸ್ ಕ್ಯಾಂಪ್ ಸೇರಿದಂತೆ ಸುಮಾರು 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ದಿನ ನಿತ್ಯ ಸರಕಾರಿ ಬಸ್‌ಗಳನ್ನು ಅವಲಂಬಿಸಬೇಕಿದೆ. ಆದರೆ ಈ ಮಾರ್ಗದಲ್ಲಿ ಸಂಚರಿಸುವ ಸರಕಾರಿ ಬಸ್‌ಗಳು ಸೂಕ್ತ ಸಮಯಕ್ಕೆ ಬಾರದಿರುವುದರಿಂದ ಸರಿಯಾಗಿ ಕಾಲೇಜಿಗೆ ತೆರಳಲಾಗುತ್ತಿಲ್ಲ. ಅಲ್ಲದೇ, ವಿಳಂಬವಾಗಿ ತೆರಳುವ ವಿದ್ಯಾರ್ಥಿಗಳನ್ನು ತರಗತಿಗಳಿಗೆ ಬಿಡದ ಕಾರಣ ಪಾಠಪ್ರವಚನಗಳಿಂದ ವಂಚಿತರಾಗುವಂತಾಗಿದೆ ಎಂದು ಅಳಲು ತೋಡಿಕೊಂಡರು. ಈ ಕುರಿತಂತೆ ಅಧಿಕಾರಿಗಳಿಗೆ ದೂರು ನೀಡಿದರೂ ಸ್ಪಂಧಿಸುತ್ತಿಲ್ಲ ಎಂದು ದೂರಿದರು.

ಕಾಲೇಜು ವಿದ್ಯಾರ್ಥಿಗಳ ಅನೂಕೂಲಕ್ಕೆಂದಿರುವ ಬಸ್‌ನ ಸಿಬ್ಬಂದಿ ಸೂಕ್ತವಾಗಿ ಸಮಯ ಪಾಲನೆ ಮಾಡದೆ ಬೇಕಾಬಿಟ್ಟಿಯಾಗಿ ವರ್ತಿಸುತ್ತಿದ್ದು, 8 ಗಂಟೆಗೆ ಬರಬೇಕಾದ ಬಸ್ 8.40ಕ್ಕೆ ಬರುತ್ತದೆ. ಒಂದು ವೇಳೆ ಬೆಳಿಗ್ಗೆ ಬೇಗ ಬಂದು ಬಿಡುತ್ತದೆ ಇವರ ಬೇಜವಬ್ದಾರಿಯಿಂದ ಸುಮಾರು 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ತರಗತಿಯಿಂದ ವಂಚಿತರಾಗುತ್ತಿದ್ದಾರೆ.

ಇನ್ನೂ ಒಂದು ಬಸ್ ಬರುವುದರಿಂದ ಎರಡು ಗ್ರಾಮದ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತಿಲ್ಲ. ಬಳ್ಳಾರಿಯಿಂದ ಬಂದು ಸೋಮಸಮುದ್ರ ಮಾರ್ಗವಾಗಿ ಎರಂಗಳ್ಳಿ ಗೆ ತೆರಳಿ ಮರಳಿ ಸೋಮಸಮುದ್ರಕ್ಕೆ ಬಂದು ಹೋಗುತ್ತದೆ ಆದರೆ ಎರಂಗಳ್ಳಿ ವಿದ್ಯಾರ್ಥಿಗಳೆ ಹೆಚ್ಚು ಇರುವುದರಿಂದ ಬಸ್ ತುಂಬಾ ಎರಂಗಳ್ಳಿ ವಿದ್ಯಾರ್ಥಿಗಳಿಗೆ ಸರಿಯಾಗುತ್ತದೆ. ಸೋಮಸಮುದ್ರ ವಿದ್ಯಾರ್ಥಿಗಳಿಗೆ ಅನಾನುಕೂಲವಾಗುತ್ತಿದೆ. ಆದ್ದರಿಂದ ಬೆಳಿಗ್ಗೆ 8 ಗಂಟೆ ಸರಿಯಾಗಿ ಎರಡು ಬಸ್ ಗಳನ್ನು ಬಿಟ್ರೆ ಎಲ್ಲ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ಆದ್ದರಿಂದ ಎರಡು ಬಸ್ ಬಿಡವಂತೆ ಅಗ್ರಹಿಸಿದರು.

ಇದನ್ನೂ ಓದಿ:ವೈರಲ್‌ ವಿಡಿಯೋ: ಗಗನಸಖಿ ಅಮ್ಮನಿಗೆ ಮಗನೇ ವಿಐಪಿ ಪ್ರಯಾಣಿಕ!

ಅಲ್ಲದೇ, ಬೆಳಿಗ್ಗೆ ಬಸ್ ಕಳೆದುಕೊಂಡರೆ ಸೋಮಸಮುದ್ರ ಹೈವೇ ರಸ್ತೆ ಪಕ್ಕದಲ್ಲಿ ಇರುವುದರಿಂದ ಕೆಲವೊಂದು ಬಸ್ ಗಳು ಗ್ರಾಮದ ನಿಲ್ದಾಣದಲ್ಲಿ ನಿಲ್ಲಿಸುವುದಿಲ್ಲ. ಜೊತೆಗೆ ಸಂಜೆ ಕೂಡ ಇದೆ ಪರಿಸ್ಥಿತಿ ಇದ್ದು ಇದರಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದರು.

ಇನ್ನೂ ಬಳ್ಳಾರಿ ಉಸ್ತುವಾರಿ ಸಚಿವ ಹಾಗೂ ಸಾರಿಗೆ ಸಚಿವ ಬಿ. ಶ್ರೀರಾಮುಲು ವಿದ್ಯಾರ್ಥಿಗಳು ಪ್ರತಿಭಟನೆ ಮಾಡುವ ಮಾರ್ಗದಲ್ಲಿ ಏತ ನೀರಾವರಿ ಯೋಜನೆಯನ್ನು ಉದ್ಘಾಟನೆ ಮಾಡಲು ಬರುವ ಸುದ್ದಿ ಕೇಳಿ ಡಿಪೋ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ಮಾಡುವುದನ್ನು ಕೈ ಬಿಡಿ ಇನ್ಮುಂದೆ ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆ ಕಲ್ಪಿಸುತ್ತೇವೆ ಎಂದು ವಿದ್ಯಾರ್ಥಿಗಳನ್ನು ಮನವೊಲಿಸಲು ಹರಸಾಹಸ ಪಟ್ಟರು.

ವಿದ್ಯಾರ್ಥಿಗಳನ್ನು ಮನವೊಲಿಸಲು ಪ್ರಯತ್ನಿಸಿದರೂ ಪಟ್ಟುಬಿಡದೆ ಪ್ರತಿಭಟನೆ ಮುಂದುವರೆಸಿದರು. ನಂತರ ಹೆಚ್ಚುವರಿ ಬಸ್ ಕರೆ ತಂದ ನಂತರ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಹಿಂಪಡೆದರು.

ಸುಮಾರು ಅರ್ಧಗಂಟೆ ಕಾಲ ಬಳ್ಳಾರಿ ಮುಖ್ಯ ರಸ್ತೆಯಲ್ಲಿ ಸಿರುಗುಪ್ಪ ಕಡೆಯಿಂದ ಹಾಗೂ ಬಳ್ಳಾರಿ ಕಡೆಯಿಂದ ಬರುವ ವಾಹನಗಳು ಟ್ರಾಫಿಕ್ ಜಾಮ್‌ ಆದ ಹಿನ್ನಲೆ ಪ್ರಯಾಣಿಕರು ಪರದಾಡಬೇಕಾಯಿತು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಾದ ಕೆ.ಕೆಂಚ, ಚಂದ್ರ, ಮಾರುತಿ, ಅಜಯ, ಮಣಿಕಂಠ, ಶಾಸ್ತ್ರೀ, ಮನೋಜ, ಮನಮೋಹನ್, ದೇವರಾಜ್, ಉದಯ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಇದ್ದರು.

ಟಾಪ್ ನ್ಯೂಸ್

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.