ಕುಮಾರಸ್ವಾಮಿಯಿಂದ ಸೇಡಿನ ರಾಜಕಾರಣ

Team Udayavani, Oct 28, 2018, 6:00 AM IST

28.jpg

ಬಳ್ಳಾರಿ: ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸೇಡಿನ ರಾಜಕಾರಣ ಮಾಡುತ್ತಿದ್ದಾರೋ, ಏನೋ ಗೊತ್ತಿಲ್ಲ. ಆದರೆ, ಗಣಿನಾಡು ಬಳ್ಳಾರಿ ಜಿಲ್ಲೆಯ ಅಭಿವೃದ್ಧಿಗಾಗಿ ಒಂದು ಪೈಸೆಯನ್ನೂ ಮೀಸಲಿಟ್ಟಿಲ್ಲ ಎಂದು ಯಡಿಯೂರಪ್ಪ ಆರೋಪಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್‌ ಗೆದ್ದಿದೆ. ಉತ್ತರ ಕರ್ನಾಟಕದ ಜನರು ನನಗೆ ಮತ ನೀಡಿಲ್ಲ. ಮತದಾನದ ವೇಳೆ ನಾನು ನೆನಪಾಗಿಲ್ಲ ಎನ್ನುವ ಕುಮಾರಸ್ವಾಮಿಗೆ ಬಳ್ಳಾರಿ ಜಿಲ್ಲೆಯ  ಅಭಿವೃದ್ಧಿ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ರಾಜ್ಯಾದ್ಯಂತ ಎಲ್ಲೂ ಬರ ಕಾಮಗಾರಿಗೆ ಚಾಲನೆ ದೊರಕಿಲ್ಲ. ಜನ ಗುಳೆ ಹೋಗುವುದು ತಪ್ಪಿಲ್ಲ. ಕುಮಾರಸ್ವಾಮಿ ಸೇಡಿನ ರಾಜಕೀಯ ಮಾಡುತ್ತಿದ್ದಾರೋ, ಏನೋ ಗೊತ್ತಿಲ್ಲ. ಜಿಲ್ಲೆಯ ಅಭಿವೃದ್ಧಿಗೆ ಮೈತ್ರಿ ಸರ್ಕಾರ ಒಂದು ಪೈಸೆಯನ್ನೂ ಮೀಸಲಿಟ್ಟಿಲ್ಲ. ಸರ್ಕಾರಕ್ಕೆ ಹಣದ ಕೊರತೆ ಎದುರಾಗಿದ್ದು, ಲೋಕೋಪಯೋಗಿ ಸೇರಿ ವಿವಿಧ ಇಲಾಖೆಗಳಲ್ಲಿ ಒಟ್ಟು 10 ಸಾವಿರ ಕೋಟಿ ರೂ.ಬಿಲ್‌ಗ‌ಳು ಬಾಕಿ ಉಳಿದಿವೆ ಎಂದು ಆರೋಪಿಸಿದರು.

ಇದೇ ವೇಳೆ, ಸಿದ್ದರಾಮಯ್ಯ ವಿರುದಟಛಿ ಹರಿಹಾಯ್ದ ಅವರು, ಶ್ರೀರಾಮುಲು ಬಾದಾಮಿಯಲ್ಲಿ ಹುಟ್ಟಿದ್ದಾರಾ? ಕನ್ನಡ ಭಾಷೆ ಬರಲ್ಲ. ಮೂರು ಬಾರಿ ರಾಜೀನಾಮೆ ನೀಡಿ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ ಎಂದೆಲ್ಲ ಸಿದ್ದರಾಮಯ್ಯ ಹೇಳಿದ್ದಾರೆ.
ಹಾಗಾದರೆ, ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿ ಚಿಕ್ಕಮಗಳೂರಲ್ಲಿ ಹುಟ್ಟಿದ್ದರಾ?, ಸೋನಿಯಾಗಾಂಧಿ ಬಳ್ಳಾರಿಯಲ್ಲಿ, ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಅಮೇಥಿಯಲ್ಲಿ, ಕೇರಳದ ಮಾಜಿ ಸಿಎಂ ಸ್ಟೀಫನ್‌ ಕಲಬುರಗಿಯಲ್ಲಿ ಹುಟ್ಟಿದ್ದಾರಾ? ಎಂದು ಸಿದ್ದರಾಮಯ್ಯರ ವಿರುದಟಛಿ ಗುಡುಗಿದರು.

ಕಾಂಗ್ರೆಸ್‌ನಲ್ಲಿ ಗೊಂದಲ ಸೃಷ್ಟಿಯಾಗಿದ್ದು, ಉಪಚುನಾವಣೆ ಫಲಿತಾಂಶ ಹೊರಬಿದ್ದ ನಂತರ ಸರ್ಕಾರ ಬೀಳುವ ಸಾಧ್ಯತೆಯಿದೆ. ನಾವು ಯಾವುದೇ ಆಪರೇಷನ್‌ ಮಾಡಿಲ್ಲ. ಸರ್ಕಾರ ಅದಾಗಿ ಬಿದ್ದರೆ ಅದಕ್ಕೆ ನಾವು ಜವಾಬ್ದಾರರಲ್ಲ.
● ಬಿ.ಎಸ್‌. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ

ಡಿಕೆಶಿ ನಮ್ಮ ಪರ: ಬಿಎಸ್‌ವೈ ವ್ಯಂಗ್ಯ 
ಸಂಡೂರು:
“ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್‌ ನಮ್ಮ  ಪರವಾಗಿದ್ದಾರಪ್ಪಾ. ನೀವ್ಯಾಕೆ ಅವರ ಬಗ್ಗೆ ಮಾತಾಡ್ತೀರಾ’ ಎಂದು ಯಡಿಯೂರಪ್ಪನವರು ಶ್ರೀರಾಮುಲುಗೆ ಹೇಳುವ ಮೂಲಕ ಪರೋಕ್ಷವಾಗಿ ಡಿಕೆಶಿಯನ್ನು ಟೀಕಿಸಿದರು. ಬಿಜೆಪಿ ಅಭ್ಯರ್ಥಿ ಜೆ.ಶಾಂತಾ ಪರ ಪ್ರಚಾರ ಭಾಷಣ ಮಾಡಿದ ಅವರು, “ಸಚಿವ ಡಿಕೆಶಿಯವರನ್ನು ಯಾಕೆ ಬೈತಿರಪ್ಪಾ. ಅವರು ನಮ್ಮೊರಪ್ಪಾ. ನಮ್ಮ ಅಭ್ಯರ್ಥಿ ಸಹೋದರಿ ಶಾಂತಕ್ಕನವರ ಪರವಾಗಿಯೇ ಕೆಲ್ಸ ಮಾಡುತ್ತಿದ್ದಾರಪ್ಪಾ. ಹಾಗೆಲ್ಲ ಬೈಬಾರದಪ್ಪಾ ಎಂದಾಗ, ವೇದಿಕೆ ಮೇಲಿದ್ದ ಶಾಸಕ ಬಿ.ಶ್ರೀರಾಮುಲು ಮುಗುಳ್ನಕ್ಕರು. ಅವರು ಈ ಜಿಲ್ಲೆಗೆ ಆಕಸ್ಮಿಕವಾಗಿ ಉಸ್ತುವಾರಿಯಾಗಿ ಬಂದಿದ್ದಾರೆ. ಅವರತ್ತ ಹಣವಿದೆ ಅಂತಾ ಇಲ್ಲಿಗೆ ಬಂದಿದ್ದಾರೆ. ಅವರು ನಮ್ಮ ಅಭ್ಯರ್ಥಿ ಶಾಂತಕ್ಕನವರ ಪರ ಖರ್ಚು ಮಾಡೋದಕ್ಕೇ ಇಲ್ಲಿಗೆ ಬಂದಿದ್ದಾರೆ. ಹೀಗಾಗಿ ಅವರ ಬಗ್ಗೆ ಮಾತನಾಡುವ ಅಗತ್ಯವಿಲ್ಲ. ಉಪಚುನಾವಣೆ ಫಲಿತಾಂಶ ಪ್ರಕಟಗೊಂಡ ಬಳಿಕ ಸಿಎಂ ಕುಮಾರಸ್ವಾಮಿ,
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪರಸ್ಪರ ಮುಖ ನೋಡೋದಿಲ್ಲ. ಇದನ್ನು ಬರೆದಿಟ್ಟುಕೊಳ್ಳಿ ಎಂದು ಭವಿಷ್ಯ ನುಡಿದರು.

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.