ನಕಲಿ ಹತ್ತಿ ಬೀಜ ಹಾವಳಿ ತಡೆಗೆ ಒತ್ತಾಯ
Team Udayavani, Jun 29, 2020, 3:44 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಸಿರುಗುಪ್ಪ: ತಾಲೂಕಿನಲ್ಲಿ ನಕಲಿ ಹತ್ತಿ ಬೀಜ ಮಾರಾಟ ಮಾಡುವವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು. ನಕಲಿ ಬೀಜ ಮಾರಾಟವಾಗದಂತೆ ಜಾಗೃತಿ ವಹಿಸಬೇಕೆಂದು ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ಪದಾಧಿಕಾರಿಗಳು ತಾಲೂಕು ಆಡಳಿತಕ್ಕೆ ಮನವಿ ಮಾಡಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಮಳೆಯಾಶ್ರಿತ ಮತ್ತು ನದಿ, ಹಳ್ಳ, ಕೊಳವೆ ಬಾವಿ ನೀರನ್ನು ಬಳಸಿಕೊಂಡು ಸುಮಾರು 21ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಬೆಳೆ ಬೆಳೆಯಲಾಗುತ್ತಿದೆ. ಇದರಿಂದಾಗಿ ತಾಲೂಕಿನಲ್ಲಿ ಹತ್ತಿ ಬೀಜಕ್ಕೆ ಬೇಡಿಕೆ ಹೆಚ್ಚಾಗಿದ್ದು, ನಕಲಿ ಹತ್ತಿ ಬೀಜ ಮಾರಾಟ ಮಾಡುವ ಜಾಲ ತಾಲೂಕಿನಲ್ಲಿ ತನ್ನ ಬಲೆ ಬೀಸಿ ರೈತರಿಗೆ ನಕಲಿ ಹತ್ತಿ ಬೀಜ ಮಾರಾಟ ಮಾಡುತ್ತಿದ್ದಾರೆಂಬ ಆರೋಪ ರೈತರಿಂದ ಕೇಳಿಬರುತ್ತಿವೆ.