Udayavni Special

ಬಿಸಿಲ ತಾಪ: ಕಲ್ಲಂಗಡಿಗೆ ಹೆಚ್ಚಿದ ಬೇಡಿಕೆ

ಕೈ ಬೀಸಿ ಕರೆವ ಕಲ್ಲಂಗಡಿ: ವ್ಯಾಪಾರಿಗಳ ಸಂತಸ ಇಮ್ಮಡಿತಿಂಗಳಿಗೆ 3 ಲಾರಿ ಲೋಡ್‌ ಮಾರಾಟ

Team Udayavani, Feb 21, 2020, 12:39 PM IST

21-February-9

ಸಿರುಗುಪ್ಪ: ಬೆಳಗ್ಗೆ ಚುಮುಚುಮು ಚಳಿ, ಮಧ್ಯಾಹ್ನವಾಗುತ್ತಲೇ ಬಿಸಿಲಿನ ಝಳಕ್ಕೆ ಜನರು ದಾಹ ತಣಿಸಿಕೊಳ್ಳಲು ಕಲ್ಲಂಗಡಿ ಹಣ್ಣಿನ ಮೊರೆ ಹೋಗುತ್ತಿದ್ದಾರೆ. ಇದರಿಂದಾಗಿ ನಗರದಲ್ಲಿ ಕಲ್ಲಂಗಡಿ ಹಣ್ಣಿಗೆ ಉತ್ತಮ ಬೇಡಿಕೆ ಬಂದಿದೆ. ಈಗಾಗಲೇ ನಗರದೆಲ್ಲೆಡೆ ಸಾಕಷ್ಟು ಕಲ್ಲಂಗಡಿ ಆಮದು ಆಗಿದ್ದು, ಅಷ್ಟೇ ಪ್ರಮಾಣದಲ್ಲಿ ಗ್ರಾಹಕರಿರುವುದು ವ್ಯಾಪಾರಿಗಳಲ್ಲಿ ಸಂತಸ ಇಮ್ಮಡಿಗೊಳಿಸಿದೆ.

ತಾಲೂಕಿನಲ್ಲಿ ಬೆಳಗ್ಗೆ ಚಳಿ ಪ್ರಮಾಣ ಹೆಚ್ಚಿದ್ದರೂ ಮಧ್ಯಾಹ್ನದ ಹೊತ್ತಿಗೆ ತಾಪಮಾನ 30ರಿಂದ 32 ಡಿಗ್ರಿ ಸೆಲ್ಸಿಯಸ್‌ಗೆ ಏರಿ ಜನರು ಹೈರಾಣಾಗುತ್ತಿದ್ದಾರೆ. ಹೀಗಾಗಿ ಬೇಸಿಗೆ ಆರಂಭಕ್ಕೂ ಮುನ್ನವೇ ಕಲ್ಲಂಗಡಿ ಹಣ್ಣಿಗೆ ಬೇಡಿಕೆ ಹೆಚ್ಚಾಗಿದ್ದು, ಬಿಸಿಲಿನ ತಾಪದ ದಾಹ ತಣಿಸಲು ಜನರು ಕಲ್ಲಂಗಡಿ ಮೊರೆ ಹೋಗುತ್ತಿದ್ದಾರೆ. ನಗರಕ್ಕೆ ಲೋಡ್‌ಗಟ್ಟಲೇ ಕಲ್ಲಂಗಡಿ ಹಣ್ಣು ಬರುತ್ತಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ಕಲ್ಲಂಗಡಿ ಹಣ್ಣಿನ ಅಂಗಡಿಗಳು ತೆರೆದಿವೆ. ಸೀಮಾಂಧ್ರ ಪ್ರದೇಶ ಮತ್ತು ಬೆಂಗಳೂರಿನ ಸುತ್ತಮುತ್ತಲಿನಿಂದ ಕಲ್ಲಂಗಡಿ ಹಣ್ಣುಗಳು ಮಾರುಕಟ್ಟೆಗೆ ಬರುತ್ತಿವೆ. ಕಲ್ಲಂಗಡಿ ಹಣ್ಣು ಒಂದು ಕೆಜಿ ಲೆಕ್ಕದಲ್ಲಿ ಮಾರಾಟವಾಗುತ್ತಿದ್ದು, ಒಂದು ಕೆಜಿಗೆ ರೂ. 35ರಿಂದ 40ರವರೆಗೆ ಇದೆ. ಒಂದು ಪ್ಲೇಟ್‌ ಅಥವಾ ಹಣ್ಣಿನ ಒಂದು ಪೀಸ್‌ ರೂ. 10ಕ್ಕೆ ಮಾರಾಟವಾಗುತ್ತಿದೆ. ಒಟ್ಟಾರೆ ಒಂದು ತಿಂಗಳಿಗೆ 2ರಿಂದ 3 ಲಾರಿ ಲೋಡ್‌ ಕಲ್ಲಂಗಡಿ ಹಣ್ಣುಗಳು ಮಾರಾಟಮಾಡುತ್ತಿರುವುದಾಗಿ ಕಲ್ಲಂಗಂಡಿ ಹಣ್ಣಿನ ವ್ಯಾಪಾರಿಗಳು ತಿಳಿಸಿದ್ದಾರೆ.

ಬೇಸಿಗೆ ದಿನಗಳಲ್ಲಿ ಉಷ್ಣಾಂಶ ಹೆಚ್ಚಿರುವುದರಿಂದ ಮನುಷ್ಯನ ದೇಹ, ದೇಹದ ನೀರಿನ ಸಮತೋಲನ ಕಾಯ್ದುಕೊಳ್ಳಬೇಕಾಗುತ್ತದೆ. ಜೊತೆಗೆ ಮನುಷ್ಯನ ದೇಹದಲ್ಲಿನ ನೀರಿನ ಪ್ರಮಾಣ ಬಿಸಿಲಿನ ಝಳಕ್ಕೆ ಕಡಿಮೆಯಾಗುವುದರಿಂದ ನಿರ್ಜಲೀಕರಣ, ಅಜೀರ್ಣದಂಥ ಅನಾರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಇಂಥ ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಕಲ್ಲಂಗಡಿ ಸಹಾಯ ಮಾಡುತ್ತದೆ. ಕಲ್ಲಂಗಡಿ ಹಣ್ಣಿನಲ್ಲಿ ವಿಟಮಿನ್‌ ಸಿ ಇದ್ದು, ಮಾನವ ದೇಹಕ್ಕೆ ಹೆಚ್ಚಿನ ಪೌಷ್ಠಿಕಾಂಶ ಸಿಗುತ್ತದೆ. ಬಿಸಿಲಿನಲ್ಲಿ ದಾಹ ನೀಗಿಸುವ ಜೊತೆಗೆ ದೇಹದ ಆರೋಗ್ಯ ಕಾಪಾಡುವಲ್ಲಿ ಕಲ್ಲಂಗಡಿ ಹಣ್ಣು ಮುಖ್ಯವಾಗಿದೆ.

ಎಳನೀರಿನ ಮಾರಾಟವು ಜೋರಾಗಿ ನಡೆದಿದ್ದು, ರೂ.35ಕ್ಕೆ ಒಂದು ಎಳೆನೀರು ಮಾರಾಟವಾಗುತ್ತಿದೆ. ಪ್ರತಿದಿನ ನಗರದಲ್ಲಿರುವ ಎಳೆನೀರು ವ್ಯಾಪಾರಿಗಳು ಸುಮಾರು 500ರಿಂದ 700ಕ್ಕೂ ಹೆಚ್ಚು ಎಳೆನೀರು ಮಾರಾಟ ಮಾಡುತ್ತಿದ್ದಾರೆ. ರಾಸಾಯನಿಕ ಮಿಶ್ರಿತ ತಂಪುಪಾನೀಯ ಕುಡಿದು ಆರೋಗ್ಯ ಹಾಳುಮಾಡಿಕೊಳ್ಳುವ ಬದಲು ರೈತರ ನೈಸರ್ಗಿಕ ಉತ್ಪನ್ನಗಳನ್ನು ಸೇವಿಸಿ, ರೈತರಿಗೂ ಪ್ರೋತ್ಸಾಹ ನೀಡಲು ಬೇಸಿಗೆ ಒಳ್ಳೆಯ ಸಮಯವಾಗಿದೆ.

ದಾಹ ತಣಿಸಲು ಕಲ್ಲಂಗಡಿ ಅಷ್ಟೇ ಅಲ್ಲದೇ ಎಳೆನೀರು, ಕಬ್ಬಿನ ಹಾಲು, ನಿಂಬೆರಸ, ಹಣ್ಣಿನ ರಸಕ್ಕೂ ಬೇಡಿಕೆ ಹೆಚ್ಚಾಗಿದೆ. ಒಂದು ಎಳೆನೀರು ರೂ. 35, ಒಂದು ಲೋಟ ಕಬ್ಬಿನ ಹಾಲಿಗೆ ರೂ. 10, ನಿಂಬೆ ಷರಬತ್ತು ಮತ್ತು ಸೋಡಾಕ್ಕೆ ರೂ.10 ಬೆಲೆ ಇದೆ. ಬಿಸಿಲು ಹೆಚ್ಚಿದಂತೆ ಕಲ್ಲಂಗಡಿ ಹಣ್ಣಿಗೆ ಬೇಡಿಕೆ ಹೆಚ್ಚು, ಮಾರ್ಚ್‌, ಏಪ್ರಿಲ್‌ನಲ್ಲಿ ಮಾರಾಟ ಜೋರಾಗಿರುತ್ತದೆ. ಈಗ ಇನ್ನೂ ಪೂರ್ಣಪ್ರಮಾಣದ ಬೇಸಿಗೆ ಆರಂಭವಾಗಿಲ್ಲ. ಆದರೆ ವ್ಯಾಪಾರ ಜೋರಾಗಲಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಲಿದೆ.
ವ್ಯಾಪಾರಿ

ಒಟ್ಟಾರೆ ಬೇಸಿಗೆ ಮುನ್ನವೇ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಾಗುವ ಲಕ್ಷಣಗಳು ಕಾಣುತ್ತಿವೆ.ಜನರ ದಾಹ ನೀಗಿಸಿಕೊಳ್ಳಲು ರಾಸಾಯನಿಕ ತಂಪುಪಾನಿಯ ಸೇವಿಸುವ ಬದಲು ನೈಸರ್ಗಿಕವಾಗಿರುವ ಕಲ್ಲಂಗಡಿ ಹಣ್ಣು ಮತ್ತು ಎಳೆನೀರು ಸೇವಿಸಿದರೆ ಆರೋಗ್ಯ ಉತ್ತಮವಾಗಿರುತ್ತದೆ. ರೈತರಿಗೂ ವ್ಯಾಪಾರವಾಗುತ್ತದೆ.
ಡಾ| ಬಸವರಾಜ, ವೈದ್ಯರು

ಆರ್‌. ಬಸವರೆಡ್ಡಿ ಕರೂರು

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಏ.15ರ ನಂತರ ರೈಲು ಸಂಚಾರ ವರದಿ ಸತ್ಯಕ್ಕೆ ದೂರ: ಭಾರತೀಯ ರೈಲ್ವೆ ಇಲಾಖೆ

ಏ.15ರ ನಂತರ ರೈಲು ಸಂಚಾರ ವರದಿ ಸತ್ಯಕ್ಕೆ ದೂರ: ಭಾರತೀಯ ರೈಲ್ವೆ ಇಲಾಖೆ

ಸಚಿವರು, ಶಾಸಕರ ವೇತನದಲ್ಲಿ ಶೇ.30ರಷ್ಟು ಕಡಿತ; ಸುಗ್ರಿವಾಜ್ಞೆ ಮೂಲಕ ಆದೇಶ

ಸಚಿವರು, ಶಾಸಕರ ವೇತನದಲ್ಲಿ ಶೇ.30ರಷ್ಟು ಕಡಿತ; ಸುಗ್ರಿವಾಜ್ಞೆ ಮೂಲಕ ಆದೇಶ

ಮೂವರು ಮಕ್ಕಳಿಗೆ ಕೋವಿಡ್-19 ಸೋಂಕು; ರಾಜ್ಯದಲ್ಲಿ 191ಕ್ಕೇರಿದ ಸೋಂಕಿತರ ಸಂಖ್ಯೆ

ಮೂವರು ಮಕ್ಕಳಿಗೆ ಕೋವಿಡ್-19 ಸೋಂಕು; ರಾಜ್ಯದಲ್ಲಿ 191ಕ್ಕೇರಿದ ಸೋಂಕಿತರ ಸಂಖ್ಯೆ

ಕೋವಿಡ್ 19 ವಿರುದ್ಧ ಹೋರಾಟ; ಏ.30ರವರೆಗೆ ಲಾಕ್ ಡೌನ್ ಮುಂದುವರಿಕೆ: ಒಡಿಶಾ ಸಿಎಂ

ಕೋವಿಡ್ 19 ವಿರುದ್ಧ ಹೋರಾಟ; ಏ.30ರವರೆಗೆ ಲಾಕ್ ಡೌನ್ ಮುಂದುವರಿಕೆ: ಒಡಿಶಾ ಸಿಎಂ ಘೋಷಣೆ

ನೀರು ತರಲು ಹೋಗಿ ಕಾಲು ಜಾರಿ ಕೆರೆಗೆ ಬಿದ್ದು ಮೂರು ಮಕ್ಕಳ ದುರ್ಮರಣ

ನೀರು ತರಲು ಹೋಗಿ ಕಾಲು ಜಾರಿ ಕೆರೆಗೆ ಬಿದ್ದು ಮೂರು ಮಕ್ಕಳ ದುರ್ಮರಣ

Leopard-climbs-tree

ವಿಡಿಯೋ: ಬೇಟೆಯೊಂದಿಗೆ ಅನಾಯಾಸವಾಗಿ ದೈತ್ಯಗಾತ್ರದ ಮರ ಏರಿದ ಚಿರತೆ, ನೆಟ್ಟಿಗರು ಫುಲ್ ಫಿದಾ

ಲಾಕ್ ಡೌನ್ ಜೊತೆ ನೋ ಮ್ಯಾನ್ ಝೋನ್

ಲಾಕ್ ಡೌನ್ ಜೊತೆ ನೋ ಮ್ಯಾನ್ ಝೋನ್: ಮಂಗನ ಕಾಯಿಲೆ ತಡೆಗೆ ಮಲೆನಾಡಿನಲ್ಲಿ ಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಳ್ಳಾರಿಯಲ್ಲಿ ವಿನಾಕಾರಣ ಓಡಾಡಿದ 800 ದ್ವಿಚಕ್ರ ವಾಹನಗಳು, 50 ಆಟೋ ವಶಕ್ಕೆ: ಎಸ್ ಪಿ ಮಾಹಿತಿ

ಬಳ್ಳಾರಿಯಲ್ಲಿ ವಿನಾಕಾರಣ ಓಡಾಡಿದ 800 ದ್ವಿಚಕ್ರ ವಾಹನಗಳು, 50 ಆಟೋ ವಶಕ್ಕೆ: ಎಸ್ ಪಿ ಮಾಹಿತಿ

09-April-11

ಮಳೆಗೆ ಮಾವು-ಟೊಮೆಟೋ ಬೆಳೆ ನಷ್ಟ

08-April-38

ಸಾರ್ವಜನಿಕರಿಗೆ ಬಾಳೆಗೊನೆ ಉಚಿತ ಹಂಚಿಕೆ

08-April-12

ಕೊರೊನಾ ಹೆಚ್ಚದಂತೆ ಎಚ್ಚರ ವಹಿಸಿ

07-April-24

ಗ್ರಾಮಲೆಕ್ಕಾಧಿಕಾರಿಗಳ ಲೊಕೇಶನ್‌ ಪಡೆಯಿರಿ

MUST WATCH

udayavani youtube

Coronavirus Lockdown : ಮಟ್ಟುಗುಳ್ಳ ಮಂದಗತಿಯ ಮಾರುಕಟ್ಟೆ Saddens Muttugulla Growers

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

ಹೊಸ ಸೇರ್ಪಡೆ

“ಸ್ಮಾರ್ಟ್‌ ಮಾರುಕಟ್ಟೆ’ ನಿರ್ಮಾಣಕ್ಕೆ ಸಜ್ಜು

“ಸ್ಮಾರ್ಟ್‌ ಮಾರುಕಟ್ಟೆ’ ನಿರ್ಮಾಣಕ್ಕೆ ಸಜ್ಜು

09-April-18

ಅಧಿಕಾರಿಗಳ ಕಾರ್ಯವೈಖರಿಗೆ ಬೇಸರ

ಆರ್ಥಿಕತೆ ಪುನಶ್ಚೇತನಕ್ಕೆ ಜರ್ಮನಿ ಚಿಂತನೆ

ಆರ್ಥಿಕತೆ ಪುನಶ್ಚೇತನಕ್ಕೆ ಜರ್ಮನಿ ಚಿಂತನೆ

ಏ.15ರ ನಂತರ ರೈಲು ಸಂಚಾರ ವರದಿ ಸತ್ಯಕ್ಕೆ ದೂರ: ಭಾರತೀಯ ರೈಲ್ವೆ ಇಲಾಖೆ

ಏ.15ರ ನಂತರ ರೈಲು ಸಂಚಾರ ವರದಿ ಸತ್ಯಕ್ಕೆ ದೂರ: ಭಾರತೀಯ ರೈಲ್ವೆ ಇಲಾಖೆ

09-April-17

ನಗರದಲ್ಲೇ ಸಿದ್ಧಗೊಳ್ಳುತ್ತಿವೆ ವೈದ್ಯರಿಗೆ ಪಿಪಿಇ ಕಿಟ್‌