ಸಿರುಗುಪ್ಪ: ಶುದ್ಧ ನೀರಿನ ಘಟಕಗಳಿಗೆ ನಿರ್ವಹಣೆ ಕೊರತೆ!


Team Udayavani, Mar 30, 2024, 5:45 PM IST

ಸಿರುಗುಪ್ಪ: ಶುದ್ಧ ನೀರಿನ ಘಟಕಗಳಿಗೆ ನಿರ್ವಹಣೆ ಕೊರತೆ!

ಉದಯವಾಣಿ ಸಮಾಚಾರ
ಸಿರುಗುಪ್ಪ: ನಗರದಲ್ಲಿ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಉದ್ಧೇಶದಿಂದ ನಿರ್ಮಿಸಲಾಗಿರುವ ಘಟಕಗಳು ನಿರ್ವಹಣೆ ಇಲ್ಲದೆ ಹಾಳಾಗಿವೆ. ನಗರದ 31 ವಾರ್ಡ್‌ಗಳ ಜನರಿಗೆ ಅನುಕೂಲವಾಗುವ ದೃಷ್ಟಿಯಿಂದ ಐದಾರು ವಾರ್ಡ್‌ಗಳಿಗೆ ಒಂದೊಂದರಂತೆ ಒಟ್ಟು 6 ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಮಾಡಲಾಗಿದೆ. ಆದರೆ ಅವುಗಳಲ್ಲಿ ಒಂದು ಮಾತ್ರ ಕಾರ್ಯನಿರ್ವಹಿಸುತ್ತಿದ್ದು, 5 ಘಟಕಗಳು ಸ್ಥಗಿತಗೊಂಡಿವೆ.

ಘಟಕಗಳಿಗೆ ನೀರು ಪೂರೈಕೆ ಮಾಡಲೆಂದು ಹಾಕಲಾಗಿದ್ದ ಬೋರ್‌ವೆಲ್‌ಗ‌ಳಲ್ಲಿಯೇ ಸಂಪೂರ್ಣವಾಗಿ ನೀರು ಬತ್ತಿ ಹೋಗಿದ್ದು,
ಇದೇ ಘಟಕಗಳ ಸ್ಥಗಿತಕ್ಕೆ ಮುಖ್ಯ ಕಾರಣವೆಂದು ಅಧಿಕಾರಿಗಳು ತಿಳಿಸಿದ್ದಾರೆ. ಕಡಿಮೆ ದರದಲ್ಲಿ ಸ್ಥಳಿಯವಾಗಿಯೇ ಶುದ್ಧ ಕುಡಿಯುವ ನೀರೊದಗಿಸುವ ಉದ್ದೇಶದಿಂದ ನಿರ್ಮಾಣವಾದ ಐದು ಘಟಕಗಳು ಸ್ಥಗಿತಗೊಂಡಿದ್ದು, ನಗರದ ನೀಲಕಂಠೇಶ್ವರ ದೇವಸ್ಥಾನದ ಹತ್ತಿರ ಇರುವ ಸರ್ಕಾರಿ ಶುದ್ಧ ಕುಡಿಯುವ ನೀರಿನ ಒಂದು ಘಟಕ ಮಾತ್ರ ಕಾರ್ಯನಿರ್ವಹಿಸುತ್ತಿದೆ.

ನಮ್ಮ ವಾರ್ಡ್‌ನಲ್ಲಿ ಶುದ್ಧ ಕುಡಿಯುವ ನೀರಿನ ಘಟಕವಿದ್ದರೂ ಯಾವುದೇ ಪ್ರಯೋಜನವಿಲ್ಲ, ಸದ್ಯ ಘಟಕ ಸ್ಥಗಿತಗೊಂಡಿದ್ದು, ಕುಡಿಯುವ ನೀರನ್ನು ಬೇರೆಡೆಯಿಂದ ತರುವುದು ಅನಿವಾರ್ಯವಾಗಿದೆ. ಬೇಸಿಗೆಯಲ್ಲಿ ಕುಡಿಯುವ ನೀರಿನ ಬಳಕೆ ಹೆಚ್ಚಾಗಿರುತ್ತದೆ ಎಂದು 23ನೇ ವಾರ್ಡ್‌ ನಿವಾಸಿಗಳಾದ ಮಹಾಲಕ್ಷ್ಮೀ, ಸುಜಾತ, ಸರಳಮ್ಮ, ಬಾಬು, ಬಾಷಾ ಆರೋಪಿಸಿದ್ದಾರೆ.

ದೂರು ಬಂದರೆ ಮಾತ್ರ ರಿಪೇರಿ
ಇರುವ 6 ಶುದ್ಧ ನೀರಿನ ಘಟಕಗಳಲ್ಲಿ 5 ಘಟಕಗಳು ಕಾರ್ಯನಿರ್ವಹಿಸುತ್ತಿಲ್ಲ ಎಂಬುದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಗಮನಕ್ಕಿದೆ. ಆದರೆ, ಸಾರ್ವಜನಿಕರಿಂದ ಯಾವುದೇ ದೂರು ಬಂದಿಲ್ಲ ಎಂಬ ಒಂದೇ ಕಾರಣಕ್ಕೆ ಇಲಾಖೆ ಅಧಿಕಾರಿಗಳು ಸ್ಥಗಿತಕೊಂಡ ಘಟಕಗಳ ದುರಸ್ತಿ ಕುರಿತು ತಲೆಕೆಡಿಸಿಕೊಂಡಿಲ್ಲ ಎಂಬುದು ಆಶ್ಚರ್ಯವಾದರೂ ಸತ್ಯ.

ನಗರದಲ್ಲಿ ಒಟ್ಟು 6 ಶುದ್ಧ ಕುಡಿಯುವ ನೀರನ ವ್ಯಕ್ತಪಡಿಸಿದ್ದಾರೆ. ಘಟಕಗಳಿದ್ದು, ಇದರಲ್ಲಿ 5 ಬೋರ್‌ ನೀರಿನ ಕೊರತೆಯಿಂದ ಸ್ಥಗಿತಗೊಂಡಿವೆ. ನಗರಸಭೆ ವತಿಯಿಂದ ಯಾವುದೇ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಿಲ್ಲ.
ಗಂಗಾಧರಗೌಡ, ಎಇಇ ನಗರಸಭೆ

ಈ ಹಿಂದೆ ನಗರದಲ್ಲಿ ಸರ್ಕಾರದಿಂದ 6 ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಮಾಡಲಾಗಿದೆ. ಇವುಗಳಲ್ಲಿ 5 ಘಟಕಗಳು
ಕಾರ್ಯನಿರ್ವಹಿಸುತ್ತಿಲ್ಲ, ಈ ಬಗ್ಗೆ ಸಾರ್ವಜನಿಕರಿಂದ ಯಾವುದೇ ದೂರು ನಮ್ಮ ಇಲಾಖೆಗೆ ಬಂದಿಲ್ಲ, ದೂರು ನೀಡಿದರೆ
ಪರಿಶೀಲಿಸಲಾಗುವುದು.
ರವೀಂದ್ರ ನಾಯ್ಕ, ಎಇಇ
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ

*ಆರ್‌.ಬಸವರೆಡ್ಡಿ ಕರೂರು

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.