ರೈತರಿಗೆ ನರೇಗಾ ಯೋಜನೆ ಮಾಹಿತಿ ತಿಳಿಸಿ

ಅಧಿಕಾರಿಗಳಿಗೆ ಶಾಸಕ ಎಂ.ಎಸ್‌. ಸೋಮಲಿಂಗಪ್ಪ ಸೂಚನೆ

Team Udayavani, May 30, 2020, 5:40 PM IST

30-May-16

ಸಾಂದರ್ಭಿಕ ಚಿತ್ರ

ಸಿರುಗುಪ್ಪ: ಅಧಿಕಾರಿಗಳು ನರೇಗಾ ಯೋಜನೆ ಸೌಲಭ್ಯಗಳ ಬಗ್ಗೆ ರೈತರಿಗೆ ಮಾಹಿತಿ ನೀಡಿ ರೈತರಿಗೆ ಅವಶ್ಯವಿರುವ ಬದು ನಿರ್ಮಾಣ, ಕೃಷಿಹೊಂಡ, ತೋಟಗಾರಿಕೆ ಮುಂತಾದ ಸೌಲಭ್ಯಗಳನ್ನು ಪಡೆದು ಆರ್ಥಿಕವಾಗಿ ಅಭಿವೃದ್ಧಿ ಹೊಂದುವಂತೆ ಪ್ರರೇಪಿಸಬೇಕೆಂದು ಶಾಸಕ ಎಂ.ಎಸ್‌. ಸೋಮಲಿಂಗಪ್ಪ ತಿಳಿಸಿದರು.

ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ತಾಪಂ ಸಾಮಾನ್ಯ ಸಭೆಯಲ್ಲಿ ಮಾತನಾಡಿ, ತಾಲೂಕಿನಲ್ಲಿ ಕೃಷಿ ಹೊಂಡ ಹೊಂದಿದ ರೈತರು ತೋಟಗಾರಿಕೆ ಬೆಳೆಗಳಾದ ಅಂಜೂರ, ಪಪ್ಪಾಯಿ, ದಾಳಿಂಬೆ ಮುಂತಾದ ಬೆಳೆಗಳನ್ನು ಅಧಿಕವಾಗಿ ಬೆಳೆಯಲು ತೋಟಗಾರಿಕೆ ಅಧಿಕಾರಿಗಳು ಮಾರ್ಗದರ್ಶನ ನೀಡಬೇಕೆಂದು ತೋಟಗಾರಿಕೆ ಅಧಿಕಾರಿ ವಿಶ್ವನಾಥರಿಗೆ ತಿಳಿಸಿದರು.

2019-20 ನೇ ಸಾಲಿನಲ್ಲಿ 120 ಹೆಕ್ಟೇರ್‌ ಪ್ರದೇಶದಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ವಿವಿಧ ತರದ ಹಣ್ಣುಗಳನ್ನು ಬೆಳೆಯಲು ರೈತರಿಗೆ ಅನುಕೂಲ ಮಾಡಿಕೊಟ್ಟಿದ್ದು, 2020-21ನೇ ಸಾಲಿನಲ್ಲಿ ಅಂದಾಜು 150 ಹೆಕ್ಟೇರ್‌ ಪ್ರದೇಶದಲ್ಲಿ ಹಣ್ಣಿನ ಬೆಳೆಯನ್ನು ಬೆಳೆಯಲು ರೈತರನ್ನು ಪ್ರರೇಪಿಸಲಾಗಿದೆ. ಅಂಜೂರ, ಪಪ್ಪಾಯ, ದಾಳಿಂಬೆ ಮುಂತಾದ ಹಣ್ಣಿನ ಬೆಳೆಗಳಿಗೆ ಶೇ. 90ರಷ್ಟು ಪ್ರೋತ್ಸಾಹ ದನವನ್ನು ನೀಡಲಾಗುತ್ತಿದೆ. ನಮ್ಮ ತೋಟಗಾರಿಕೆ ಇಲಾಖೆಯಿಂದಲೂ, ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕೃಷಿಹೊಂಡ, ಗಿಡನೆಡುವ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಕೋವಿಡ್‌-19ಗೆ ಸಂಬಂಧಿಸಿದಂತೆ ವಿವಿಧ ಭಾಗಗಳಿಂದ ತಾಲೂಕಿಗೆ ಬಂದಿದ್ದ 1120 ಜನರನ್ನು ಕ್ವಾರಂಟೈನ್‌ ಮಾಡಲಾಗಿತ್ತು. ಅದರಲ್ಲಿ 777ಜನರ ಆರೋಗ್ಯ ಪರೀಕ್ಷೆಯಲ್ಲಿ ನೆಗೆಟಿವ್‌ ವರದಿ ಬಂದಿದ್ದರಿಂದ ಅವರ ಮನೆಗಳಿಗೆ ಕಳುಹಿಸಲಾಗಿದೆ. ಇನ್ನುಳಿದ 343 ಜನರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ನಮ್ಮ ಕಂದಾಯ, ಆರೋಗ್ಯ, ಆಶಾ, ಅಂಗನವಾಡಿ ಕಾರ್ಯಕರ್ತರು ಹೊರಗಿನಿಂದ ಬಂದವರ ಮಾಹಿತಿಯನ್ನು ಕಲೆಹಾಕುವ ಕಾರ್ಯಮಾಡುತ್ತಿದ್ದಾರೆ ಎಂದು ಟಿ.ಎಚ್‌.ಒ. ಸುರೇಶಗೌಡ ತಿಳಿಸಿದರು.

ತಾಪಂ ಸದಸ್ಯ ಪಿಡ್ಡಯ್ಯ, ತಾಪಂ ಅಧ್ಯಕ್ಷೆ ದೇವಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ಶಂಕ್ರಪ್ಪ, ತಾಪಂ ಇ.ಒ. ಶಿವಪ್ಪ ಸುಬೇದಾರ್‌, ಜಿಪಂ ಸದಸ್ಯ ಕೋಟೇಶ್ವರರೆಡ್ಡಿ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ತಾಪಂ ಸದಸ್ಯರು, ಗ್ರಾಪಂ ಪಿಡಿಒಗಳು ಇದ್ದರು.

ಟಾಪ್ ನ್ಯೂಸ್

21school

ಊಟಕ್ಕಾಗಿ 1ಕಿ.ಮೀ ನಡೆಯುತ್ತಿದ್ದ ಮಕ್ಕಳು: ಕೊನೆಗೂ ಬಂತು ಬಿಸಿಯೂಟ

Tesla’s market cap crosses $1 trillion

ಟೆಸ್ಲಾ ಮಾರುಕಟ್ಟೆ ಮೌಲ್ಯ 1ಲಕ್ಷ ಕೋಟಿ ರೂ. ದಾಟಿದೆ..!

111111111

ನವೆಂಬರ್ ನಲ್ಲಿ ತೆರೆಯ ಮೇಲೆ ಮೂಡಿ ಬರಲಿದೆ ‘ಟಾಮ್ ಅಂಡ್ ಜೆರ್ರಿ’

siddaramaiah

ಜನತಾ ನ್ಯಾಯಾಲಯದ ಮುಂದೆ ಚರ್ಚೆಗೆ ಭಯವೇಕೆ : ಸಿಎಂಗೆ ಸಿದ್ದರಾಮಯ್ಯ ಪ್ರಶ್ನೆ

WS_Jazz 4

ಕನ್ನಡದಲ್ಲೇ ಮೊದಲ ಪ್ರಯೋಗ : ವಿಂಡೋಸೀಟ್ ನಲ್ಲಿ ಮೂಡಿ ಬಂತು ಜಾಝ್ ಸಾಂಗ್

ಸದಾಶಿವ ಆಯೋಗ ವರದಿ ಜಾರಿಗೆ ಬಿಜೆಪಿ ಬದ್ದವಾಗಿದೆ : ಸಚಿವ ನಾರಾಯಣಸ್ವಾಮಿ

ಸದಾಶಿವ ಆಯೋಗ ವರದಿ ಜಾರಿಗೆ ಬಿಜೆಪಿ ಬದ್ದವಾಗಿದೆ : ಸಚಿವ ನಾರಾಯಣಸ್ವಾಮಿ ಹೇಳಿಕೆ

ತರುಣ್ ತೇಜ್ ಪಾಲ್ ಕೇಸ್: ವಿಚಾರಣಾಧೀನ ಕೋರ್ಟ್ ತೀರ್ಪು, 5ನೇ ಶತಮಾನಕ್ಕೆ ಸೂಕ್ತ: ಗೋವಾ

ತರುಣ್ ತೇಜ್ ಪಾಲ್ ಕೇಸ್: ವಿಚಾರಣಾಧೀನ ಕೋರ್ಟ್ ತೀರ್ಪು, 5ನೇ ಶತಮಾನಕ್ಕೆ ಸೂಕ್ತ: ಗೋವಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ballari news

ಬೇಡಿಕೆ ಈಡೇರಿಕೆಗಾಗಿ ಶಿಕ್ಷಕರ ಸಂಘ ಪ್ರತಿಭಟನೆ

16 ಪದವಿ ಕಾಲೇಜುಗಳ ಬಿಕಾಂ ಫಲಿತಾಂಶಕ್ಕೆ ತಡೆ

16 ಪದವಿ ಕಾಲೇಜುಗಳ ಬಿಕಾಂ ಫಲಿತಾಂಶಕ್ಕೆ ತಡೆ

ballari news

ನಾಲ್ಕು ದಿನಗಳ ಆಮರಣಾಂತ ಸತ್ಯಾಗ್ರಹ ಅಂತ್ಯ

23-bly-1

ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ಒತ್ತಾಯ: ನಾಲ್ಕು ದಿನಗಳ ಆಮರಣಾಂತ ಸತ್ಯಾಗ್ರಹ ಅಂತ್ಯ

12m

ಡಿಸಿ ಕಚೇರಿ ಎದುರು 3ನೇ ದಿನ ಮುಂದುವರಿದ ಸತ್ಯಾಗ್ರಹ

MUST WATCH

udayavani youtube

ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ : ಆರ್. ಅಶೋಕ್

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

ಹೊಸ ಸೇರ್ಪಡೆ

21school

ಊಟಕ್ಕಾಗಿ 1ಕಿ.ಮೀ ನಡೆಯುತ್ತಿದ್ದ ಮಕ್ಕಳು: ಕೊನೆಗೂ ಬಂತು ಬಿಸಿಯೂಟ

ಮೈಸೂರು ಆರ್ಟಿಸ್ಟ್‌ ಅಸೋಸಿಯೇಷನ್‌ನಿಂದ ಸಾಮೂಹಿಕ ನಾಡಗೀತೆ

ಅನಂತಸ್ವಾಮಿ ಗೀತೆಯನ್ನೇ ನಾಡಗೀತೆಯಾಗಿ ಘೋಷಿಸಿ

20lake

ಇನ್ನೂ ತುಂಬಿಲ್ಲ ನಿಡಶೇಸಿ ಕೆರೆಯಂಗಳ

Tesla’s market cap crosses $1 trillion

ಟೆಸ್ಲಾ ಮಾರುಕಟ್ಟೆ ಮೌಲ್ಯ 1ಲಕ್ಷ ಕೋಟಿ ರೂ. ದಾಟಿದೆ..!

111111111

ನವೆಂಬರ್ ನಲ್ಲಿ ತೆರೆಯ ಮೇಲೆ ಮೂಡಿ ಬರಲಿದೆ ‘ಟಾಮ್ ಅಂಡ್ ಜೆರ್ರಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.