ಕಡ್ಡಾಯವಾಗಿ ಜಾರಿಯಾಗದ ಪ್ಲಾಸ್ಟಿಕ್ ನಿಷೇಧ ಕಾಯ್ದೆ!

ಪಾಸ್ಟಿಕ್‌ ಬಳಸಿ ತಯಾರಿಸುತ್ತಾರೆ ಇಡ್ಲಿ

Team Udayavani, Mar 4, 2020, 12:51 PM IST

4–March-09

ಸಿರುಗುಪ್ಪ: ನಗರಸಭೆಯ ಅಧಿಕಾರಿಗಳು ನಗರದಲ್ಲಿರುವ ಎಲ್ಲಾ ಅಂಗಡಿ ಹೋಟೆಲ್‌ ಗಳಿಗೆ ತೆರಳಿ ಪ್ಲಾಸ್ಟಿಕ್‌ ನಿಷೇಧ ಕುರಿತು ಜಾಗೃತಿ ಮೂಡಿಸಿದ್ದು, ಪ್ಲಾಸ್ಟಿಕ್‌ ಕೈ ಚೀಲ ದೊರೆಯುವುದಿಲ್ಲ, ಪಾರ್ಸಲ್‌ ನೀಡಲಾಗುವುದಿಲ್ಲ ಇತ್ಯಾದಿ ನಾಮಫಲಕಗಳ ಭಿತ್ತಿಪತ್ರಗಳನ್ನು ಅಳವಡಿಸಿದ್ದರೂ ನಗರದಲ್ಲಿ ಪ್ಲಾಸ್ಟಿಕ್‌ ಬಳಕೆ ಎಗ್ಗಿಲ್ಲದೆ ನಡೆಯುತ್ತಿದೆ.

ದೇಶಾದ್ಯಂತ ಪ್ಲಾಸ್ಟಿಕ್‌ ನಿಷೇಧವಾಗಿದೆ. ಕಡಿಮೆ ಸಾಂದ್ರತೆಯ ಪ್ಲಾಸ್ಟಿಕ್‌ ಬಳಕೆ, ಒಮ್ಮೆಯಷ್ಟೇ ಬಳಸಬಹುದಾದ ಪ್ಲಾಸ್ಟಿಕ್‌ನ ಮಾರಾಟ ಮತ್ತು ಬಳಕೆ ನಿಷೇಧಿಸಲಾಗಿದೆ. ಆದರೆ ನಗರದ ತರಕಾರಿ ಮಾರುಕಟ್ಟೆ ಮತ್ತು ಹೋಟೆಲ್‌, ಅಂಗಡಿಗಳಲ್ಲಿ ಪ್ಲಾಸ್ಟಿಕ್‌ ನಿಷೇಧವೇ ಆಗಿಲ್ಲ. ಪ್ಲಾಸ್ಟಿಕ್‌ ನಿಷೇಧದ ಕುರಿತು ನಗರಸಭೆ ಅಲ್ಲಲ್ಲಿ ದೊಡ್ಡದಾದ ಭಿತ್ತಿಪತ್ರಗಳನ್ನು ಅಂಟಿಸಿದೆ.

ಸಂತೆಯಲ್ಲಿ ಮತ್ತು ಹೋಟೆಲ್‌ ಅಂಗಡಿಗಳಲ್ಲಿ ಪ್ಲಾಸ್ಟಿಕ್‌ನ್ನು ಅಧಿಕೃತವಾಗಿ ನಿಷೇಧಿಸಲಾಗಿದೆ. ಅಷ್ಟಲ್ಲದೆ ಎಲ್ಲ ಅಂಗಡಿಗಳು, ಹೋಟೆಲ್‌ಗ‌ಳಿಗೆ ತೆರಳಿ ಈ ಕುರಿತು ಜಾಗೃತಿ ಮೂಡಿಸಿದ್ದು, ಈ ಸ್ಥಳಗಳಲ್ಲಿ ಪ್ಲಾಸ್ಟಿಕ್‌ ಕೈಚೀಲ ದೊರೆಯುವುದಿಲ್ಲ, ಪಾರ್ಸಲ್‌ ನೀಡಲಾಗುವುದಿಲ್ಲ ಇತ್ಯಾದಿ ನಾಮಫಲಕ ಅಳವಡಿಸಲಾಗಿದೆ.

ಬಹುತೇಕ ಹೋಟೆಲ್‌, ಅಂಗಡಿಗಳಲ್ಲಿಯೂ ಸಂತೆ ಮಾರುಕಟ್ಟೆಯಲ್ಲಿಯೂ ಭಿತ್ತಿಪತ್ರಗಳನ್ನು ಹಾಕಿದ್ದರೂ ಅವುಗಳ ಪೈಕಿ ಬಹುತೇಕ ಭಿತ್ತಿಪತ್ರಗಳನ್ನು ಹರಿದು ಹಾಕಲಾಗಿದೆ. ಈಗ ಸಂತೆಯಲ್ಲಿ ಬಹುತೇಕ ವ್ಯಾಪಾರಿಗಳು ಪ್ಲಾಸ್ಟಿಕ್‌ ಚೀಲಗಳನ್ನೇ ನೀಡುತ್ತಿದ್ಧಾರೆ. ಗ್ರಾಹಕರು ಕೈಚೀಲ ಮರೆದು ಬರುತ್ತಿದ್ದಾರೆ. ಇದರಿಂದಾಗಿ ವ್ಯಾಪಾರಿಗಳು ತೆಳ್ಳಗಿನ ಪ್ಲಾಸ್ಟಿಕ್‌ ಚೀಲದಲ್ಲಿಯೇ ವಸ್ತುಗಳನ್ನು ನೀಡುತ್ತಿದ್ದಾರೆ. ತರಕಾರಿ ದಿನಸಿ ಮೊದಲಾದ ಬಹುತೇಕ ವಸ್ತುಗಳನ್ನು ಪ್ಲಾಸ್ಟಿಕ್‌ ಕೈ ಚೀಲದಲ್ಲಿ ನೀಡುವುದರ ಜತೆಗೆ ಪ್ಲಾಸ್ಟಿಕ್‌ ಚೀಲದಲ್ಲಿಯೂ ತುಂಬಿಸಿ ಇಡಲಾಗುತ್ತದೆ. ದಪ್ಪನೆಯ ಪ್ಲಾಸ್ಟಿಕ್‌ ಬಳಕೆಗೆ ನಿಷೇಧ ಅನ್ವಯವಾಗುವುದಿಲ್ಲ. ಆದರೆ ತೆಳ್ಳಗಿನ ಪ್ಲಾಸ್ಟಿಕ್‌ ಅನ್ನೇ ಬಳಸಲಾಗುತ್ತಿದೆ.

ಹೋಟೆಲ್‌ಗ‌ಳಲ್ಲಿ, ರಸ್ತೆ ಬದಿ ಹೋಟೆಲ್‌ ಗಳಲ್ಲಿ ಇಡ್ಲಿ ಮಾಡಲು ಪಾತ್ರೆಗಳಲ್ಲಿ ತೆಳ್ಳಗಿನ ಪ್ಲಾಸ್ಟಿಕ್‌ ಬಳಸಲಾಗುತ್ತಿದೆ. ಅಲ್ಲದೆ ಗ್ರಾಹಕರಿಗೆ ನೀಡುವ ತಿಂಡಿ, ಉಪಾಹಾರ, ಊಟದ ಪ್ಲೇಟ್‌ಗಳಲ್ಲಿ ತೆಳ್ಳಗಿನ ಪ್ಲಾಸ್ಟಿಕ್‌ನ್ನು ಹಾಕಿ ಅದರಲ್ಲಿ ಆಹಾರ ಪದಾರ್ಥಗಳನ್ನು ಇಟ್ಟು ಕೊಡುತ್ತಾರೆ. ಪಾರ್ಸಲ್‌ ತೆಗೆದುಕೊಂಡು ಹೋಗುವ ಗ್ರಾಹಕರಿಗೂ ತೆಳ್ಳನೆಯ ಪ್ಲಾಸ್ಟಿಕ್‌ನ ಹಾಳೆಯಲ್ಲಿಯೇ ಉಪಾಹಾರ, ಟೀ, ಊಟ ಹಾಗೂ ಬೇಕರಿ ತಿನಿಸುಗಳನ್ನು ನೀಡುತ್ತಿದ್ದಾರೆ. ಒಟ್ಟಾರೆ ನಗರದಲ್ಲಿ ಪ್ಲಾಸ್ಟಿಕ್‌ ನಿಷೇಧ ಎನ್ನುವುದು ಕೇವಲ ಕಾಗದದಲ್ಲಿ ಮಾತ್ರ ಆಗಿದೆ. ವಾಸ್ತವವಾಗಿ ಪ್ಲಾಸ್ಟಿಕ್‌ ಬಳಕೆ ನಿಂತಿಲ್ಲ.

ಅಧಿಕಾರಿಗಳು ಸರ್ಕಾರದ ಸುತ್ತೋಲೆ ಬಂದಾಗ ಮಾತ್ರ ಸಾರ್ವಜನಿಕರಿಗೆ, ಅಂಗಡಿ, ಹೋಟೆಲ್‌, ತರಕಾರಿ ವ್ಯಾಪಾರಿಗಳಿಗೆ ಪ್ಲಾಸ್ಟಿಕ್‌ ಬಳಸಿದರೆ ದಂಡ ಮತ್ತು ಪ್ರಕರಣದ ದಾಖಲಿಸುವುದಾಗಿ ಕರಪತ್ರ ನೀಡಿ ತಿಳಿವಳಿಕೆ ನೀಡುತ್ತಾರೆ. ನಂತರದ ದಿನಗಳಲ್ಲಿ ಪ್ಲಾಸ್ಟಿಕ್‌ ಬಳಕೆಯಾಗುತ್ತಿರುವ ಬಗ್ಗೆ ಗಮನ ಹರಿಸುವುದಿಲ್ಲ.
ಅಮರಮ್ಮ, ಸ್ಥಳೀಯರು

ಕಳೆದ ಅ.2ರಿಂದ ನಗರದಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧಿಸುವ ಉದ್ದೇಶದಿಂದ ಸಾರ್ವಜನಿಕರಿಗೆ, ಅಂಗಡಿ, ಹೋಟೆಲ್‌, ಬೇಕರಿ ಮತ್ತು ತರಕಾರಿ ವ್ಯಾಪಾರಿಗಳ ಬಳಿ ಖುದ್ದಾಗಿ ಭೇಟಿ ನೀಡಿ ಪ್ಲಾಸ್ಟಿಕ್‌ ಬಳಸಿದರೆ ದಂಡ ಮತ್ತು ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಎಚ್ಚರಿಸಲಾಗಿತ್ತು. ಇತ್ತೀಚೆಗೆ ಮತ್ತೆ ಪ್ಲಾಸ್ಪಿಕ್‌ ಬಳಕೆ ಹೆಚ್ಚಾಗುತ್ತಿರುವುದರಿಂದ ವ್ಯಾಪಾರಿ ಮಳಿಗೆಗಳ ಮೇಲೆ ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್‌ ವಸ್ತುಗಳನ್ನು ವಶಪಡಿಸಿಕೊಂಡು ಕಾನೂನು ಕ್ರಮ ಜರುಗಿಸಲಾಗುವುದು.
ಪ್ರೇಮ್‌ ಚಾರ್ಲ್ಸ್‌,
ಪೌರಾಯುಕ್ತರು, ನಗರಸಭೆ

ಆರ್‌.ಬಸವರೆಡ್ಡಿ ಕರೂರು

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.