ಮಕ್ಕಳ ಜೀವಕ್ಕೆ ಕಂಟಕವಾದ ಶೌಚಾಲಯ ಗುಂಡಿ!

ಶೌಚಾಲಯ ನಿರ್ಮಾಣಕ್ಕೆ ಗುಂಡಿ ತೆಗೆದು ಬಿಟ್ಟಿರುವುದಕ್ಕೆ ಅಧಿಕಾರಿಗಳ ವಿರುದ್ಧ ಆಕ್ರೋಶ

Team Udayavani, Mar 22, 2020, 3:43 PM IST

22-March-12

ಸಿರುಗುಪ್ಪ: ತಾಲೂಕಿನ ಅಗಸನೂರು ಗ್ರಾಮದಲ್ಲಿರುವ 2ನೇ ಅಂಗನವಾಡಿ ಕೇಂದ್ರದಲ್ಲಿ ಸ್ವಚ್ಛ ಭಾರತ್‌ ಅಭಿಯಾನ ಯೋಜನೆಯಡಿಯಲ್ಲಿ ರೂ. 40ಸಾವಿರ ವೆಚ್ಚದಲ್ಲಿ ನಿರ್ಮಾಣವಾಗಿರುವ ಶೌಚಾಲಯದ ಗುಂಡಿಯನ್ನು ಮುಚ್ಚದೆ ಬಿಟ್ಟಿರುವುದು ಅಂಗನವಾಡಿಗೆ ಬರುವ ಮಕ್ಕಳಿಗೆ ಕಂಟಕವಾಗಿ ಪರಿಣಮಿಸಿದೆ.

ಪ್ರತಿಯೊಂದು ಸರ್ಕಾರಿ ಕಚೇರಿಯಲ್ಲಿ ಶೌಚಾಲಯ ಹೊಂದಬೇಕು ಎನ್ನುವ ಉದ್ದೇಶದಿಂದ ಸರ್ಕಾರವು ಸ್ವತ್ಛಭಾರತ್‌ ಅಭಿಯಾನ ಯೋಜನೆಯಡಿ ಈ ಅಂಗನವಾಡಿ ಕೇಂದ್ರದ ಪಕ್ಕದಲ್ಲಿಯೇ ಶೌಚಾಲಯವನ್ನು ನಿರ್ಮಾಣ ಮಾಡಿದೆ. ಆದರೆ ಶೌಚಾಲಯಕ್ಕೆ ಗುಂಡಿಯನ್ನು ತೆಗೆದು ಹಾಗೆ ಬಿಟ್ಟಿರುವುದರಿಂದ ಅಂಗನವಾಡಿ ಮಕ್ಕಳು ಇಲ್ಲಿ ನಿತ್ಯವೂ ಓಡಾಡುವುದರಿಂದ ಈ ಗುಂಡಿಯು ಮಕ್ಕಳ ಪಾಲಿಗೆ ಅಪಾಯ ತರಲಿದೆ.

ಅಂಗನವಾಡಿ ಸುತ್ತಮುತ್ತಲಿನ ಪರಿಸರವನ್ನು ಸ್ವತ್ಛವಾಗಿಟ್ಟುಕೊಳ್ಳಬೇಕು. ಮಕ್ಕಳು ಕಡ್ಡಾಯವಾಗಿ ಶೌಚಾಲಯವನ್ನು ಬಳಕೆ ಮಾಡಬೇಕು ಎನ್ನುವ ಉದ್ದೇಶದಿಂದ ಸರ್ಕಾರ ಈ ಅಂಗನವಾಡಿ ಕೇಂದ್ರದಲ್ಲಿ ಶೌಚಾಲಯವನ್ನು ನಿರ್ಮಾಣ ಮಾಡಿದೆ. ಆದರೆ ಶೌಚಾಲಯದ ಬಳಕೆ ಮಾಡಿಕೊಳ್ಳಬೇಕಾದ ಅಂಗನವಾಡಿ ಸಿಬ್ಬಂದಿ ನಿರ್ಲಕ್ಷéದಿಂದ ಶೌಚಾಲಯದ ಗುಂಡಿಯನ್ನು ಮುಚ್ಚದೆ ಹಾಗೆಯೇ ಬಿಟ್ಟಿರುವುದರಿಂದ ಅಂಗನವಾಡಿಗೆ ಬರುವ ಮಕ್ಕಳು ಎಲ್ಲೆಂದರಲ್ಲಿ ಶೌಚ ಕಾರ್ಯವನ್ನು ಮಾಡುವುದು ಸಾಮಾನ್ಯವಾಗಿದೆ. ಇಲ್ಲಿ ಶೌಚಾಲಯ ಕಟ್ಟಿದ್ದರೂ ಇಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಯಾಗಲಿ ಅಥವಾ ಮಕ್ಕಳಿಗಾಗಲಿ ಯಾವುದೇ ರೀತಿಯಲ್ಲಿ ಉಪಯೋಗವಾಗುತ್ತಿಲ್ಲ.

ಶೌಚಾಲಯದ ಗುಂಡಿಯಲ್ಲಿ ಕಸಕಡ್ಡಿ ಹಾಕಲಾಗುತ್ತಿದೆ. ಆಯತಪ್ಪಿ ಮಕ್ಕಳು ಈ ಗುಂಡಿಗೆ ಬಿದ್ದರೆ ಮಕ್ಕಳ ಜೀವಕ್ಕೆ ಅಪಾಯ ತರಲಿದೆ. ಆದರೂ ಸಂಬಂಧಿಸಿದ ಅಧಿಕಾರಿಗಳು ಗುಂಡಿಯನ್ನು ಮುಚ್ಚಿಸದೇ ನಿರ್ಲಕ್ಷ್ಯ ತೋರಿಸುತ್ತಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಗುರಿಯಾಗಿದೆ.

ಪರಿಸರವನ್ನು ಮಲೀನ ಮಾಡದೆ ಸ್ವಚ್ಛವಾಗಿಟ್ಟುಕೊಳ್ಳಬೇಕು ಎನ್ನುವ ಉದ್ದೇಶದಿಂದ ಅಂಗನವಾಡಿ ಕೇಂದ್ರದಲ್ಲಿ ಶೌಚಾಲಯ ನಿರ್ಮಾಣ ಮಾಡಲಾಗಿದೆ. ಆದರೆ ಶೌಚಾಲಯದ ಗುಂಡಿಯನ್ನು ಮುಚ್ಚದೆ ಇರುವುದರಿಂದ ಮಕ್ಕಳಿಗೆ ಅಪಾಯವಾಗಲಿದೆ. ಆದ್ದರಿಂದ ಶೌಚಾಲಯ ಗುಂಡಿ ಮುಚ್ಚಿಸಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕು.
ಹುಸೇನಿ, ಗ್ರಾಮಸ್ಥ

ಅಗಸನೂರು ಅಂಗನವಾಡಿ ಕೇಂದ್ರದಲ್ಲಿ ಸ್ವತ್ಛಭಾರತ್‌ ಅಭಿಯಾನ ಯೋಜನೆಯಡಿಯಲ್ಲಿ ನಿರ್ಮಿಸಿರುವ ಶೌಚಾಲಯದ ಗುಂಡಿಯನ್ನು ಮುಚ್ಚದಿರುವ ಬಗ್ಗೆ ಗ್ರಾಮಸ್ಥರಿಂದ ಮಾಹಿತಿ ಬಂದಿದ್ದು, ತಕ್ಷಣವೇ ಗುಂಡಿಯನ್ನು ಮುಚ್ಚಿಸಲು ಕ್ರಮ ತೆಗೆದುಕೊಳ್ಳಲಾಗುವುದು.
ರಾಮಕೃಷ್ಣನಾಯಕ, ಸಿಡಿಪಿಒ

ಟಾಪ್ ನ್ಯೂಸ್

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ

Supreme Court

State-Governor ಕದನ: ಕೇಂದ್ರ ಸರಕಾರಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತುಂಗಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ಹರಿವು; ಕಂಪ್ಲಿ-ಗಂಗಾವತಿ ಸಂಪರ್ಕ ಕಡಿತ

Bellary; ತುಂಗಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ಹರಿವು; ಕಂಪ್ಲಿ-ಗಂಗಾವತಿ ಸಂಪರ್ಕ ಕಡಿತ

Bellary; ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

Bellary; ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Bellary; Indefinite strike by Lorry Owners Association

Bellary; ಲಾರಿ ಮಾಲೀಕರ ಸಂಘದಿಂದ ಅನಿರ್ದಿಷ್ಟಾವಧಿ ಮುಷ್ಕರ

14-siruguppa

Siruguppa: ಅಕ್ರಮ ಗಾಂಜಾ; 2 ದ್ವಿಚಕ್ರ ವಾಹನ ವಶ, 5 ಆರೋಪಿಗಳ ಬಂಧನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.