ಕೋವಿಡ್ ದಿಂದ ಮೃತಪಟ್ಟವರಿಗೆ “ಸಂಪ್ರದಾಯದ ಸಂಸ್ಕಾರ’


Team Udayavani, Oct 5, 2020, 7:10 PM IST

ಕೋವಿಡ್ ದಿಂದ ಮೃತಪಟ್ಟವರಿಗೆ “ಸಂಪ್ರದಾಯದ ಸಂಸ್ಕಾರ’

ಸಿರುಗುಪ್ಪ: ತಾಲೂಕಿನಲ್ಲಿ ಕೋವಿಡ್ ಸೋಂಕಿತ ಶವಗಳಿಗೆ ಮತ್ತು ಅನಾಥ ಶವಗಳಿಗೆ ಗೌರವದ ಅಂತ್ಯಕ್ರಿಯೆ ಮಾಡುವ ಕಾರ್ಯವನ್ನು ಪಾಪುಲರ್‌ ಫ್ರಂಟ್‌ ಆಫ್‌ ಇಂಡಿಯಾ ಸಂಘಟನೆ ಕಾರ್ಯಕರ್ತರು ನಡೆಸುತ್ತಿದ್ದಾರೆ.

ಮಹಾಮಾರಿ ಕೋವಿಡ್ ದಿಂದ ಮೃತಪಟ್ಟವರ ಅಂತ್ಯಕ್ರಿಯೆಯನ್ನು ಗೌರವಯುತವಾಗಿ ನಡೆಸಲು ಪ್ರತಿಯೊಬ್ಬ ಕುಟುಂಬದ ಸದಸ್ಯರು ಇಚ್ಛೆಪಡುತ್ತಾರೆ. ಆದರೆ ಕೋವಿಡ್ ಸೋಂಕು ಹರಡುತ್ತದೆ ಎನ್ನುವ ಭಯದಿಂದ ಸರ್ಕಾರವು ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಅಂತ್ಯ ಸಂಸ್ಕಾರ ಮಾಡಲು ಪಾರ್ಥಿವ ಶರೀರವನ್ನು ಕುಟುಂಬದವರಿಗೆ ಒಪ್ಪಿಸದೇ ತಾವೇ ಬೇಕಾಬಿಟ್ಟಿಯಾಗಿ ಅಂತ್ಯ ಸಂಸ್ಕಾರ ಮಾಡುತ್ತಿದ್ದರು. ಈ ಹಿಂದೆ ಕೋವಿಡ್ ದಿಂದ ಮೃತಪಟ್ಟರೆ ಜೆಸಿಬಿಯಿಂದ ಶವವನ್ನು ತಂದು ಗುಂಡಿಗಳಿಗೆ ಎಳೆದು ತಂದು ಬಿಸಾಕುವ ಮೂಲಕ ಅತ್ಯಂತ ನಿರ್ಲಕ್ಷ್ಯವಾಗಿ ಅಂತ್ಯಕ್ರಿಯೆ ಮಾಡಲಾಗುತ್ತಿತ್ತು. ಇದರಿಂದಾಗಿ ಮೃತರ ಕುಟುಂಬದವರು ತಮ್ಮವರ ಅಂತ್ಯ ಸಂಸ್ಕಾರ ಗೌರವಯುತವಾಗಿ ನಡೆಯುತ್ತಿಲ್ಲ ಎನ್ನುವ ಸಂಕಟ ಅನುಭವಿಸುತ್ತಿದ್ದರು. ಆದರೆ ತಾಲೂಕಿನಲ್ಲಿ ಕೋವಿಡ್ ರೋಗಿಗಳಿಗೆ ಮರ್ಯಾದೆಯ ಅಂತ್ಯಸಂಸ್ಕಾರವನ್ನು ಪಿಎಫ್‌ಐ ತಂಡದ ಯುವಕರು ಮಾಡಲು ಮುಂದಾಗಿದ್ದು ಇಲ್ಲಿಯವರೆಗೆ 19ಕ್ಕೂ ಹೆಚ್ಚು ಕೋವಿಡ್ ಸೋಂಕಿತ ವ್ಯಕ್ತಿಗಳ ಅಂತ್ಯಸಂಸ್ಕಾರವನ್ನು ಅವರವರ ಧರ್ಮದ ವಿಧಿಧಾನಗಳೊಂದಿಗೆ ಗೌರವಯುತವಾಗಿ ಮಾಡಿದ್ದಾರೆ.

ಈ ತಂಡದ ಸದಸ್ಯರು ಮಾಡುತ್ತಿರುವ ಕೆಲಸವನ್ನು ನೋಡಿದರೆ ಭಯವು ಆವರಿಸುತ್ತದೆ. ಮನಸ್ಸು ಭಾರವಾಗುತ್ತದೆ. ಕೋವಿಡ್ ದಿಂದ ಸಾವನ್ನಪ್ಪಿದರೆ ಮನೆಯವರೇ ಹತ್ತಿರ ಬಾರದ ಪರಿಸ್ಥಿತಿಯನ್ನು ಅಪರಿಚಿತ ಶವಕ್ಕೆ ಹೆಗಲು ಕೊಡುವ ಕೆಲಸವನ್ನು ಮಾಡುತ್ತಿದ್ದಾರೆ. ಕೋವಿಡ್ ಮುನ್ನೆಚ್ಚರಿಕೆಯೊಂದಿಗೆ ಪಿಪಿಇ ಕಿಟ್‌ ಧರಿಸಿ ಸೋಂಕಿತರ ಅಂತ್ಯಕ್ರಿಯೆ ಮಾಡುತ್ತಿದ್ದಾರೆ.

ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೋವಿಡ್ ಸೊಂಕಿತರ ಅಂತ್ಯ ಸಂಸ್ಕಾರವನ್ನು ಈ ತಂಡದ ಸದಸ್ಯರು ಆರೋಗ್ಯ ಇಲಾಖೆಯ ಸಮ್ಮುಖದಲ್ಲಿ ವೈಜ್ಞಾನಿಕವಾಗಿ ಮಾಡುವ ಮೂಲಕ ಮಾನವೀಯತೆ ಇನ್ನೂ ಇದೆ ಎನ್ನುವುದನ್ನು ಜಗತ್ತಿಗೆ ತೋರಿಸಿದ್ದಾರೆ.

ಪಿಎಫ್‌ಐ ಸಂಘಟನೆಯ 12 ಜನ ಸದಸ್ಯರು ನುರಿತ ವೈದ್ಯರಿಂದ ತರಬೇತಿ ಪಡೆದು ಮೃತಪಟ್ಟ ಕೋವಿಡ್ ಸೋಂಕಿತರ ಅಂತ್ಯಸಂಸ್ಕಾರ ಯಾವ ರೀತಿಯ ಮುನ್ನೆಚ್ಚರಿಕೆ ವಹಿಸಿ ಮಾಡಬೇಕೆನ್ನುವುದು ಅರಿತು, ಆಯಾ ಧರ್ಮದ ವಿಧಿಧಾನಗಳಂತೆ ಅಂತ್ಯಸಂಸ್ಕಾರ ಮಾಡಲಾಗುತ್ತಿದೆ. –ಖಾಜ ಕಿಜರ್‌, ಸಂಘಟನೆ ಸದಸ್ಯ

ಪಿಎಫ್‌ಐ ಸಂಘಟನೆಯ ಕಾರ್ಯಕರ್ತರು ಮಾಡುತ್ತಿರುವ ಕಾರ್ಯ ಮಾನವೀಯತೆಗೆ ಹಿಡಿದ ಕೈಗನ್ನಡಿಯಾಗಿದೆ. ಕೋವಿಡ್ ಸೋಂಕಿತರನ್ನು ಮುಟ್ಟಿ ಅಂತ್ಯ ಸಂಸ್ಕಾರ ಮಾಡುವ ಕಾರ್ಯವನ್ನು ಈ ಸಂಘಟನೆಯ ಕಾರ್ಯಕರ್ತರು ಆಯಾ ಧರ್ಮಕ್ಕೆ ಅನುಗುಣವಾಗಿ ಮಾಡುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ. –ಡಾ| ದೇವರಾಜ್‌,100 ಹಾಸಿಗೆಗಳ ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ

 

-ಆರ್‌.ಬಸವರೆಡ್ಡಿ ಕರೂರು

ಟಾಪ್ ನ್ಯೂಸ್

crime (2)

Loan ವ್ಯಾಜ್ಯ: ತೆಲಂಗಾಣದಲ್ಲಿ ಆದಿವಾಸಿ ಮಹಿಳೆ ಮೇಲೆ ಹಲ್ಲೆ

1-saddsad

Ram Setu ಚಿತ್ರ ಸೆರೆಹಿಡಿದ ಯುರೋಪಿಯನ್‌ ಉಪಗ್ರಹ

pinarayi

Kerala ಹೆಸರು ಕೇರಳಂ ಎಂದು ಬದಲಾಯಿಸಲು ವಿಧಾನಸಭೆ ಸಮ್ಮತಿ

ಕನ್ನಡದ ಶಾಲು ಧರಿಸಿ ಗಮನ ಸೆಳೆದ ಕೋಟ ಶ್ರೀನಿವಾಸ ಪೂಜಾರಿ

ಕನ್ನಡದ ಶಾಲು ಧರಿಸಿ ಗಮನ ಸೆಳೆದ ಕೋಟ ಶ್ರೀನಿವಾಸ ಪೂಜಾರಿ

tree

Belthangady ರಸ್ತೆಗೆ ಬಿದ್ದ ಮರ; ವಾಹನಗಳಿಗೆ ಹಾನಿ

ಓವರ್‌ ಡ್ರಾಫ್ಟ್‌ ಗುರಿ ಸಾಧನೆಯಲ್ಲಿ ಹಿನ್ನಡೆ: ಜಿ.ಪಂ.ಸಿಇಒ ಅಸಮಾಧಾನ

ಓವರ್‌ ಡ್ರಾಫ್ಟ್‌ ಗುರಿ ಸಾಧನೆಯಲ್ಲಿ ಹಿನ್ನಡೆ: ಜಿ.ಪಂ.ಸಿಇಒ ಅಸಮಾಧಾನ

ರಾಜ್ಯ ಧಾರ್ಮಿಕ ಪರಿಷತ್‌ ಸಭೆ: ಕುಕ್ಕೆ ಸುಬ್ರಹ್ಮಣ್ಯ ಪ್ರಾಧಿಕಾರ ರಚನೆಗೆ ನಿರ್ಧಾರರಾಜ್ಯ ಧಾರ್ಮಿಕ ಪರಿಷತ್‌ ಸಭೆ: ಕುಕ್ಕೆ ಸುಬ್ರಹ್ಮಣ್ಯ ಪ್ರಾಧಿಕಾರ ರಚನೆಗೆ ನಿರ್ಧಾರ

ರಾಜ್ಯ ಧಾರ್ಮಿಕ ಪರಿಷತ್‌ ಸಭೆ: ಕುಕ್ಕೆ ಸುಬ್ರಹ್ಮಣ್ಯ ಪ್ರಾಧಿಕಾರ ರಚನೆಗೆ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

Khandre

KIOCL ಗೆ ದೇವದಾರಿ ಗಣಿಗಾರಿಕೆ ಭೂಮಿ ಹಸ್ತಾಂತರಿಸದಂತೆ ಸಚಿವ ಖಂಡ್ರೆ ಪತ್ರ

Bellary ಜಿಲ್ಲಾ ಉಸ್ತುವಾರಿ ಹೊಣೆ ಜಮೀರ್‌ ಅಹ್ಮದ್‌ ಖಾನ್‌ ಹೆಗಲಿಗೆ

Bellary ಜಿಲ್ಲಾ ಉಸ್ತುವಾರಿ ಹೊಣೆ ಜಮೀರ್‌ ಅಹ್ಮದ್‌ ಖಾನ್‌ ಹೆಗಲಿಗೆ

25

ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆ ಬಗ್ಗೆ 24ಕ್ಕೆ ಸಭೆ: ಸಿಎಂ

ದೇವದಾರಿ ಗಣಿಗಾರಿಕೆಗೆ ಪರಿಶೀಲಿಸಿ ಕ್ರಮ: ಸಿಎಂ

ದೇವದಾರಿ ಗಣಿಗಾರಿಕೆಗೆ ಪರಿಶೀಲಿಸಿ ಕ್ರಮ: ಸಿಎಂ

MUST WATCH

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

ಹೊಸ ಸೇರ್ಪಡೆ

crime (2)

Loan ವ್ಯಾಜ್ಯ: ತೆಲಂಗಾಣದಲ್ಲಿ ಆದಿವಾಸಿ ಮಹಿಳೆ ಮೇಲೆ ಹಲ್ಲೆ

1-saddsad

Ram Setu ಚಿತ್ರ ಸೆರೆಹಿಡಿದ ಯುರೋಪಿಯನ್‌ ಉಪಗ್ರಹ

police USA

Russia; ಚರ್ಚ್‌ಗೆ ದಾಳಿ: 19 ಜನ ಸಾವು, 5 ಉಗ್ರರ ಹತ್ಯೆ

robbers

ಪ್ರವಾದಿ ನಿಂದನೆ: ಪಾಕ್‌ನಲ್ಲಿ ವ್ಯಕ್ತಿಯ ಕೊಂದ ಬಾಲಕ!

congress

ತೆಲಂಗಾಣ; ಬಿಆರ್‌ಎಸ್‌ನ 5ನೇ ಶಾಸಕ ಕಾಂಗ್ರೆಸ್‌ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.