ಬೋನಿಗೆ ಬಿತ್ತು ಆರನೇ ಚಿರತೆ

Team Udayavani, Jan 16, 2019, 9:10 AM IST

bell-3.jpg

ಕಂಪ್ಲಿ: ತಾಲೂಕಿನ ದೇವಲಾಪುರ ಗ್ರಾಮದ ರಾಜನಮಟ್ಟಿಯಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ 6ನೇ ಚಿರತೆ ಮಂಗಳವಾರ ಬೆಳಗಿನ ಜಾವ ಸೆರೆಯಾಗಿದ್ದು, ಗ್ರಾಮಸ್ಥರಲ್ಲಿದ್ದ ಆತಂಕ ದೂರ ಮಾಡಿದಂತಾಗಿದೆ.

ದೇವಲಾಪುರದ ಕಾನಮಟ್ಟಿ, ಕರೆಗುಡ್ಡ, ರಾಜನಮಟ್ಟಿ, ಸೋಮಲಾಪುರದ ಎರ್ರದಮಟ್ಟಿ, ದರೋಜಿ, ಮೆಟ್ರಿ ಪ್ರದೇಶದಲ್ಲಿ ಚಿರತೆಗಳು ಜನರ ಕಣ್ಣಿಗೆ ಬಿದ್ದಿದರಿಂದ ಹಾಗೂ ನಾಯಿ, ಮೇಕೆ, ಕಾಡು ಬೆಕ್ಕು ಸೇರಿ ಇತರೆ ಪ್ರಾಣಿ ತಿಂದು ಹಾಕಿದ ಚಿರತೆಗಳ ಸೆರೆಗೆ ಕಾರ್ಯಾಚರಣೆ ಮುಂದುವರಿಸಿದ ಹಿನ್ನ್ನೆಲೆ ಗ್ರಾಮದ ರಾಜನಮಟ್ಟಿಯ ರುದ್ರ ಭೂಮಿಯಲ್ಲಿ ಇಟ್ಟಿದ್ದ ಬೋನ್‌ಗೆ ಇಂದು ಬೆಳಗ್ಗೆ 6.20ಗಂಟೆಗೆ 6 ವರ್ಷದ ಹಾಗೂ ಎರಡು ಮುಕ್ಕಾಲು ಅಡಿ ಎತ್ತರ, 4 ಅಡಿ ಉದ್ದವಿರುವ ಗಂಡು ಚಿರತೆ ಸೆರೆಯಾಗಿದೆ. ಬೋನ್‌ನಲ್ಲಿ ಸೆರೆಯಾದ ಚಿರತೆ ಹೊರ ಬರಲು ಪ್ರಯತ್ನಿಸಿ ಮುಖದ ತುಂಬ ಗಾಯ ಮಾಡಿಕೊಂಡಿದೆ.

ಬಹಿರ್ದೆಸೆಗೆ ಬಂದ ಜನರು ಚಿರತೆ ಬೋನ್‌ಗೆ ಬಿದ್ದಿರುವುದನ್ನು ನೋಡಿದ್ದಾರೆ. ನಂತರ ದೇವಲಾಪುರ ಗ್ರಾಮದ ಜನತೆಗೆ ಚಿರತೆ ಸೆರೆ ಸಿಕ್ಕ ಸುದ್ದಿ ತಿಳಿಯುತ್ತಿದ್ದಂತೆ ಜನರು ತಂಡೋಪ ತಂಡವಾಗಿ ಬಂದು ಚಿರತೆ ನೋಡಲು ಮುಗಿ ಬಿದ್ದಿದ್ದರು. ಇದರಿಂದ ಈ ಭಾಗದ ಜನರ ಆತಂಕ ಸ್ವಲ್ಪ ಮಟ್ಟಿಗೆ ದೂರವಾದರೂ, ಇನ್ನೆರಡು ಚಿರತೆಗಳಿರುವ ಭಯ ಜನರನ್ನು ಕಾಡುತ್ತಿದೆ. ಬಲೆಗೆ ಬಿದ್ದ ಚಿರತೆಯನ್ನು ಕಮಲಾಪುರಕ್ಕೆ ತೆಗೆದುಕೊಂಡು ಹೋಗಲಾಯಿತು.

ಕಳೆದ ಒಂದು ತಿಂಗಳಲ್ಲಿ 5 ಚಿರತೆಗಳು ಸೆರೆ ಸಿಕ್ಕಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಸಿಕ್ಕ ಚಿರತೆಗಳನ್ನು ಬೇರೆ ಕಡೆಗೆ ಸಾಗಿಸದೆ, ಮತ್ತೆ ಈ ಭಾಗದ ಗುಡ್ಡಗಾಡು ಪ್ರದೇಶಗಳಿಗೆ ಬಿಡುವುದರಿಂದ ಚಿರತೆಗಳು ಕಾಣಿಸುವಂತಾಗಿದೆ ಎಂದು ಆರೋಪಗಳು ಕೇಳಿ ಬರುತ್ತಿವೆ.

2018ರ ಡಿ.11 ಮತ್ತು 25ರಂದು ನರಭಕ್ಷಕ ಚಿರತೆಗಳು ಇಬ್ಬರು ಮಕ್ಕಳನ್ನು ಬಲಿ ಪಡೆದು, ಈ ಭಾಗದ ಜನರ ಆತಂಕಕ್ಕೆ ಎಡೆ ಮಾಡಿಕೊಟ್ಟಿದ್ದವು. ಚಿರತೆ ದಾಳಿಗೆ ಮಕ್ಕಳು ಸೇರಿದಂತೆ ಜನರು ಓಡಾಡಲು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ಚಿರತೆ ಸೆರೆಗೆ ಅರಣ್ಯ ಇಲಾಖೆಗೆ ಒತ್ತಡ ಹೆಚ್ಚಾದಂತೆ ಅಧಿಕಾರಿಗಳು ಕಾರ್ಯಾಚರಣೆ ಚುರುಕುಗೊಳಿಸಿ ಡಿಸೆಂಬರ್‌ನಲ್ಲಿ ಮೂರು, ಜ.3ರಂದು ಒಂದು ಸೇರಿ ಒಟ್ಟು ನಾಲ್ಕು ಚಿರತೆ ಸೆರೆ ಹಿಡಿಯಲಾಗಿತ್ತು.

ಈ ಸಂದರ್ಭದಲ್ಲಿ ದರೋಜಿ ಕರಿಡಿಧಾಮದ ವಲಯ ಅಧಿಕಾರಿ ಟಿ.ಭಾಸ್ಕರ್‌, ವಿನೋದಕುಮಾರ್‌, ಹೊಸಪೇಟೆ ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ಎನ್‌.ಬಸವರಾಜ ಹಾಗೂ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.