ತಿಪ್ಪೇಸ್ವಾಮಿಗೆ ಅನ್ಯಾಯವಾಗೋಕೆ ಬಿಡಲ್ಲ


Team Udayavani, Apr 13, 2018, 12:38 PM IST

bell-.jpg

ಬಳ್ಳಾರಿ: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಶಾಸಕ ತಿಪ್ಪೇಸ್ವಾಮಿಯವರಿಗೂ ಅವಕಾಶ ಕಲ್ಪಿಸಿಕೊಡಲಾಗುವುದು. ಅವರಿಗೆ ಅನ್ಯಾಯವಾಗಲೂ ಬಿಡುವುದಿಲ್ಲ. ಈ ನಿಟ್ಟಿನಲ್ಲಿ ಶೀಘ್ರದಲ್ಲೇ ಅವರನ್ನು ಮನೆಗೆ ಕರೆಯಿಸಿ ಮಾತುಕತೆ ನಡೆಸಲಾಗುವುದು ಎಂದು ಸಂಸದ ಬಿ. ಶ್ರೀರಾಮುಲು ಹೇಳಿದರು.

ನಗರದ ಡಿಸಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊಳಕಾಲ್ಮೂರು ಶಾಸಕ ತಿಪ್ಪೇಸ್ವಾಮಿ ಅವರ ಬಗ್ಗೆ ನನಗೆ ಬಹಳಷ್ಟು ಗೌರವವಿದೆ. ಕಳೆದ 2013ರ ಚುನಾವಣೆಯಲ್ಲಿ ನಮ್ಮ (ಬಿಎಸ್‌ಆರ್‌) ಪಕ್ಷದಿಂದಲೇ ಸ್ಪರ್ಧಿಸಿ ಶಾಸಕರಾಗಿದ್ದರು. ಹೀಗಾಗಿ ಕೂಡಲೇ ಅವರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಇತ್ಯರ್ಥ ಪಡಿಸಲಾಗುವುದು ಎಂದರು. 

ಅವರು ನನಗೆ ಹಲವು ವರ್ಷಗಳಿಂದ ಚಿರಪರಿಚಿತ. ಕಳೆದ ಪರಿವರ್ತನಾ ಯಾತ್ರೆಯಲ್ಲಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಹೇಳಿ ನಾನೇ ಟಿಕೆಟ್‌ ಘೋಷಣೆ ಮಾಡಿಸಿದ್ದೆ. ಅವರು ಯಾವುದೇ ಕಾರಣಕ್ಕೂ ಗಾಬರಿಯಾಗುವುದು ಬೇಡ ಎಂದರು. 

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಸಹ ಬಿ.ಎಸ್‌. ಯಡಿಯೂರಪ್ಪ ಹೊರತುಪಡಿಸಿ ಸಂಸದರಿಗೆ ಯಾರಿಗೂ ಟಿಕೆಟ್‌ ಇಲ್ಲ ಎಂದು ಹೇಳಿದ್ದರಿಂದ ನಾನು ಸಹ ಎಲ್ಲಿಯೂ ಸ್ಪರ್ಧಿಸುವುದಾಗಿ ಹೇಳಿರಲಿಲ್ಲ. ಆದರೆ, ರಾಜಕೀಯ ಲೆಕ್ಕಾಚಾರ ಪ್ರಕಾರ ರಾಜ್ಯದ 15 ಎಸ್‌ಟಿ ಮೀಸಲು ಕ್ಷೇತ್ರದಲ್ಲಿ ಬಿಜೆಪಿಗೆ ಒಳ್ಳೆಯ ವಾತಾವರಣವಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕಾದರೆ ರಾಮುಲು ಅವರಿಗೂ ಸ್ಪರ್ಧಿಸಲು ಅವಕಾಶ ಕಲ್ಪಿಸಬೇಕೆಂಬ ಉದ್ದೇಶದಿಂದ ಮೊಳಕಾಲ್ಮೂರು ಕ್ಷೇತ್ರದಿಂದ ಸ್ಪರ್ಧಿಸುವಂತೆ ಟಿಕೇಟ್‌ ಘೋಷಿಸಲಾಗಿದೆ. ಇದರಿಂದ ಚಿತ್ರದುರ್ಗ, ದಾವಣಗೆರೆ ಮತ್ತು ಬಳ್ಳಾರಿ ಜಿಲ್ಲೆಗೂ ಅನುಕೂಲವಾಗಲಿದೆ ಎಂದರು.

ಎಲ್ಲ ಕ್ಷೇತ್ರಗಳಲ್ಲೂ ರಾಮುಲು ನಿಲ್ಲಬೇಕು ಎನ್ನುವುದಿದೆ. ಆದರೆ, ಪಕ್ಷ ನಿರ್ಣಯ ಕೈಗೊಂಡು ಎರಡು ಕಡೆ ನಿಲ್ಲುವಂತೆ ಸೂಚಿಸಿದರೆ ಸ್ಪರ್ಧಿಸಲು ನಾನು ಸಿದ್ಧನಿದ್ದೇನೆ ಎಂದರು. ಮಾಜಿ ಶಾಸಕ ಜಿ. ಸೋಮಶೇಖರ ರೆಡ್ಡಿ, ಮಾಜಿ ಸಂಸದರಾದ ಜೆ.ಶಾಂತಾ, ಸಣ್ಣ ಪಕ್ಕೀರಪ್ಪ, ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಎಸ್‌. ಗುರುಲಿಂಗನಗೌಡ, ಪಾಲಿಕೆ ಸದಸ್ಯರಾದ ಎಸ್‌. ಮಲ್ಲನಗೌಡ, ಶ್ರೀನಿವಾಸ ಮೋತ್ಕರ್‌, ಕೆ.ಎ. ರಾಮಲಿಂಗಪ್ಪ, ಮುರುಹರಗೌಡ, ಕೆ. ಶಶಿಕಲಾ, ಎಂ. ಶಿವರುದ್ರಪ್ಪ ಇತರರು ಇದ್ದರು.  

ಉಪಮುಖ್ಯಮಂತ್ರಿ ಸ್ಥಾನ ಕಾರ್ಯಕರ್ತರ ಅಭಿಪ್ರಾಯ
ಬಳ್ಳಾರಿ: ನನಗೆ ಉಪಮುಖ್ಯಮಂತ್ರಿ ಸ್ಥಾನಮಾನ ನೀಡಬೇಕೆಂಬುದು ಕಾರ್ಯಕರ್ತರ ಅಭಿಪ್ರಾಯ ಹಾಗೂ ಪರಿಶಿಷ್ಟ ಪಂಗಡದ ಕೂಗು ಸಹ ಇದೆ. ಆದರೆ, ಪಕ್ಷದ ವರಿಷ್ಠರು ಕೈಗೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ. ನಾನೂ ಸಹ ಉಪಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದು ಸಂಸದ ಬಿ. ಶ್ರೀರಾಮುಲು ಪರೋಕ್ಷವಾಗಿ ಹೇಳಿದರು. ನಗರದ ಡಿಸಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ನೆರೆಯ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ. ಇದರಲ್ಲಿ ಯಾವುದೇ ಬದಲಾವಣೆಯಿಲ್ಲ. ಅದರೆ, ಒಂದುವೇಳೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ನನಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕಾರ್ಯಕರ್ತರು ಕೋರುತ್ತಿದ್ದಾರೆ. ವಾಲ್ಮೀಕಿ ಸಮುದಾಯಕ್ಕೂ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬ ಕೂಗು ಸಹ ಕೇಳಿಬರುತ್ತಿದೆ. ಹೀಗಾಗಿ ಪಕ್ಷ ಕೈಗೊಳ್ಳುವ ನಿರ್ಣಯಕ್ಕೆ ಬದ್ಧ ಎಂದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.