ಕೋವಿಡ್ ಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ

ಬಳ್ಳಾರಿ ಜಿಲ್ಲೆಯ 8 ಆಸ್ಪತ್ರೆಗಳ ನೋಂದಣಿ

Team Udayavani, Jun 24, 2020, 9:20 AM IST

ಕೋವಿಡ್ ಗೆ ಖಾಸಗಿ ಆಸ್ಪತ್ರೆಗಳಲ್ಲಿ  ಚಿಕಿತ್ಸೆ

ಬಳ್ಳಾರಿ: ದಿನೇದಿನೇ ಹೆಚ್ಚುತ್ತಿರುವ ಕೋವಿಡ್ ಸೋಂಕನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಈಗಾಗಲೇ ಅಗತ್ಯ ಕ್ರಮಕೈಗೊಂಡಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ನೀಡುತ್ತಿರುವ ಚಿಕಿತ್ಸೆಯಿಂದಾಗಿ ಬಹುತೇಕರು ಗುಣಮುಖರಾಗಿದ್ದಾರೆ. ಈ ನಡುವೆ ಸೋಂಕು ನಿಯಂತ್ರಣಗೊಳ್ಳದೆ ಮತ್ತಷ್ಟು ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಆಯ್ದ ಖಾಸಗಿ ಆಸ್ಪತ್ರೆಗಳಲ್ಲೂ ಚಿಕಿತ್ಸೆ ನೀಡಲು ಮುಂದಾಗುತ್ತಿದೆ.

ಕೋವಿಡ್ ಎಂಬುದು ಹೊಸದೊಂದು ರೋಗವಾಗಿದೆ. ದೇಹದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ರೋಗ ನಿರೋಧಕ ಶಕ್ತಿ ಉಳ್ಳವರಿಗೆ ಈ ರೋಗ ಬಂದಿದ್ದೇ ಗೊತ್ತಾಗುವುದಿಲ್ಲ. ರೋಗ ನಿರೋಧಕ ಶಕ್ತಿ ಕಡಿಮೆಯುಳ್ಳ ವೃದ್ಧರು, ಚಿಕ್ಕ ಮಕ್ಕಳಲ್ಲಿ ಈ ರೋಗ ಕಾಣಿಸಿಕೊಂಡಲ್ಲಿ ಕೂಡಲೇ ದುಷ್ಪರಿಣಾಮ ಬೀರುತ್ತದೆ. ಹೀಗೆ ಜ್ವರ, ಶೀತ, ನೆಗಡಿ, ಕೆಮ್ಮು, ವಿಪರೀತ ಸುಸ್ತಾದ ಲಕ್ಷಣಗಳುಳ್ಳ ಕೋವಿಡ್ ವೈರಸ್‌ ರೋಗನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿ ಕಾಣಿಸಿಕೊಂಡು ಹಲವರು ಸಾವಿಗೀಡಾಗುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಿಭಾಗ ತೆರೆದು ವೈರಸ್‌ ಸೋಂಕಿತರಿಗೆ ಚಿಕಿತ್ಸೆ ನೀಡುವ ಮೂಲಕ ನಿಯಂತ್ರಿಸುವುದರ ಜತೆಗೆ ಹೆಚ್ಚಿನ ಪ್ರಮಾಣದಲ್ಲಿ ಗುಣಪಡಿಸುತ್ತಿದೆ. ಆದರೂ, ಕೋವಿಡ್ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಗುರುತಿಸಿದ ಖಾಸಗಿ ಆಸ್ಪತ್ರೆಗಳಲ್ಲೂ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಎಂಟು ಆಸ್ಪತ್ರೆಗಳಲ್ಲಿ ಚಿಕಿತ್ಸೆ: ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಸುವರ್ಣಾ ಆರೋಗ್ಯ ಟ್ರಸ್ಟ್‌ ಅಡಿ ಒಪ್ಪಂದ ಮಾಡಿಕೊಂಡಿದ್ದ ಆರೋಗ್ಯಧಾಮ ಆಸ್ಪತ್ರೆ, ಜಿಲ್ಲೆಯ ತೋರಣಗಲ್ಲುನಲ್ಲಿರುವ ಜಿಂದಾಲ್‌ ಸಂಸ್ಥೆ ಸಂಜೀವಿನಿ ಆಸ್ಪತ್ರೆ, ಹೊಸಪೇಟೆಯ ಡ್ಯಾಮ್‌ ರಸ್ತೆಯ ಸಿಟಿ ಆಸ್ಪತ್ರೆ, ಹೊಸಪೇಟೆಯ ದೀಪಾಲಿ ಆಸ್ಪತ್ರೆ, ಹರಪನಹಳ್ಳಿಯ ಮಹೇಶ್‌ ನರ್ಸಿಂಗ್‌ ಹೋಂ, ಹೊಸಪೇಟೆಯ ಉಮಾಕಾಂತ್‌ ಕಣ್ಣಿನ ಆಸ್ಪತ್ರೆ, ಕೆಎಲ್‌ಎಸ್‌ ಆಸ್ಪತ್ರೆ, ಕಂಪ್ಲಿಯ ಅಭಯ್‌ ಆಸ್ಪತ್ರೆ ಸೇರಿ ಒಟ್ಟು 8 ಆಸ್ಪತ್ರೆಗಳಲ್ಲಿ ಅವಕಾಶ ಕಲ್ಪಿಸಲಾಗಿದೆ.

ಜಿಲ್ಲಾಡಳಿತಕ್ಕೆ ಮಾಹಿತಿ ಕಡ್ಡಾಯ: ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಗುರುತಿಸಲಾಗಿರುವ ಖಾಸಗಿ ಆಸ್ಪತ್ರೆಗಳು, ಜಿಲ್ಲಾಡಳಿತ, ಆರೋಗ್ಯ ಇಲಾಖೆಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು. ಖಾಸಗಿ ಆಸ್ಪತ್ರೆಯಲ್ಲಿನ ರೋಗಿಗೆ ಕೋವಿಡ್‌ ಟೆಸ್ಟ್ ನ್ನು ಸರ್ಕಾರಿ ಆಸ್ಪತ್ರೆಯಲ್ಲೇ ಮಾಡಿಸಬೇಕು. ಕೋವಿಡ್ ಸೋಂಕಿತರೆಂದು ಜಿಲ್ಲಾಡಳಿತ, ಆರೋಗ್ಯ ಇಲಾಖೆಯೇ ನಿರ್ಧರಿಸಿ ಸೂಚಿಸಿದಾಕ್ಷಣ ರೋಗಿಗೆ ಚಿಕಿತ್ಸೆ ಆರಂಭಿಸಬೇಕು. ರಾಜ್ಯ ಸರ್ಕಾರದ ಆದೇಶದಂತೆ ಬದಲಾಗುವ ನಿಯಮಾವಳಿ ಪ್ರಕಾರ ಚಿಕಿತ್ಸೆ ನೀಡಬೇಕು ಎಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ.

ಸೋಂಕು ಆಯುಷ್ಮಾನ್‌ ಕಾರ್ಡ್‌ ವ್ಯಾಪ್ತಿಗೆ: ಕೋವಿಡ್ ಸೋಂಕನ್ನು ಕೇಂದ್ರ ಸರ್ಕಾರದ ಆಯುಷ್ಮಾನ್‌ ಭಾರತ್‌ ಮತ್ತು ಆರೋಗ್ಯ ಕರ್ನಾಟಕ ಯೋಜನೆ ವ್ಯಾಪ್ತಿಗೆ ಒಳಪಡಿಸಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುವ ರೋಗಿಗಳಿಗೆ ಒಂದುವೇಳೆ ಕೋವಿಡ್ ಸೋಂಕು ಇರುವುದು ದೃಢವಾದಲ್ಲಿ ಯೋಜನೆಯಡಿ ಚಿಕಿತ್ಸೆ ಪಡೆದುಕೊಳ್ಳಬಹುದಾಗಿದೆ. ಕೋವಿಡ್‌-19 ನಿರ್ವಹಣಾ ಪ್ಯಾಕೇಜ್‌ ವತಿಯಿಂದ ಚಿಕಿತ್ಸೆ ನೀಡಿದ ಖಾಸಗಿ ಆಸ್ಪತ್ರೆಗಳಲ್ಲಿ ಹಣ ಮರುಪಾವತಿಯಾಗಲಿದೆ. ಅಲ್ಲದೇ, ಈ ಕುರಿತು ದರಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಸೂಕ್ತ ಮಾರ್ಗದರ್ಶನ ಬರಬೇಕಿದೆ.

ಸುವರ್ಣ ಆರೋಗ್ಯ ಟ್ರಸ್ಟ್‌ನಲ್ಲಿ ಒಪ್ಪಂದ ಮಾಡಿಕೊಂಡಿದ್ದ ಜಿಲ್ಲೆಯ 8 ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾಕ್ಕೆ ಚಿಕಿತ್ಸೆ ನೀಡಲಾಗುತ್ತದೆ. ಒಂದುವೇಳೆ ಖಾಸಗಿ ಆಸ್ಪತ್ರೆಗಳಲ್ಲಿ ಆಗಲ್ಲ ಎಂದಾದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲೇ ನೀಡಲಾಗುವುದು. ಈ ಕುರಿತು ದರಗಳ ಕುರಿತು ಸರ್ಕಾರದಿಂದ ನಿರ್ದೇಶನ ಬರಬೇಕಿದೆ. – ಎಸ್‌.ಎಸ್‌. ನಕುಲ್‌, ಜಿಲ್ಲಾಧಿಕಾರಿ 

-ವೆಂಕೋಬಿ ಸಂಗನಕಲ್ಲು

ಟಾಪ್ ನ್ಯೂಸ್

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.