ದಶಕದಿಂದ ಪೂರ್ಣಗೊಳ್ಳದ ಭವನ

2011-12ನೇ ಸಾಲಿನಲ್ಲಿ ಯೋಜನೆ ಸಿದ್ದ

Team Udayavani, Apr 5, 2022, 3:00 PM IST

bhavana

ಬಳ್ಳಾರಿ: ಬಾಬು ಜಗಜೀವನ್‌ರಾಮ್‌ ಭವನ ದಶಕ ಕಳೆದರೂ ಕಾಮಗಾರಿ ಪೂರ್ಣಗೊಳ್ಳದೆ ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದ ಅನುದಾನದ ಕೊರತೆಯನ್ನೂ ಎದುರಿಸುತ್ತಿದ್ದು, ಇದೀಗ ಹೆಚ್ಚುವರಿ ಅನುದಾನಕ್ಕಾಗಿ ಜಿಲ್ಲಾಡಳಿತ ಪುನಃ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ.

ಜಿಲ್ಲೆಯ ದಲಿತ ಸಂಘಟನೆಗಳ ಮನವಿಯ ಮೇರೆಗೆ 2010-11ನೇ ಸಾಲಿನಲ್ಲಿ ಕೆರೆಕಟ್ಟೆ ಪ್ರದೇಶದಲ್ಲಿನ ಒಂದುವರೆ ಎಕರೆ ಜಮೀನನ್ನು ಜಿಲ್ಲಾಡಳಿತ ಕಂದಾಯ ಇಲಾಖೆಯಿಂದ ಸಮಾಜ ಕಲ್ಯಾಣ ಇಲಾಖೆಗೆ ನೀಡಿತು. ಭವನ ನಿರ್ಮಾಣದ ಜವಾಬ್ದಾರಿ ವಹಿಸಿಕೊಂಡ ನಿರ್ಮಿತಿ ಕೇಂದ್ರ, ಮೂರು ಕೋಟಿ ರೂ. ವೆಚ್ಚದ ಯೋಜನೆಯನ್ನು ಸಿದ್ಧಪಡಿಸಿ ನೀಡಿತು. ಅದರಂತೆ ಸಮಾಜ ಕಲ್ಯಾಣ ಇಲಾಖೆಯಿಂದ 2 ಕೋಟಿ ರೂ., ಮಹಾನಗರ ಪಾಲಿಕೆಯಿಂದ 1 ಕೋಟಿ ರೂ. ಅನುದಾನ ನೀಡುವಂತೆ ಕೋರಲಾಗಿತ್ತು. ಸಮಾಜ ಕಲ್ಯಾಣ ಇಲಾಖೆಯಿಂದ ನಾಲ್ಕು ಕಂತುಗಳಲ್ಲಿ ತಲಾ 50 ಲಕ್ಷ ರೂ. ಬಿಡುಗಡೆ ಮಾಡಿ ಭವನ ನಿರ್ಮಾಣಕ್ಕೆ ಮುಂದಾಗಿದ್ದು, ಪಾಲಿಕೆಯಿಂದ ನೀಡಬೇಕಿದ್ದ 1 ಕೋಟಿ ರೂ. ಅನುದಾನ ನೀಡಲಿಲ್ಲ.

2014-15ನೇ ಸಾಲಿನಲ್ಲಿ ಪಾಲಿಕೆ ಅಂದಿನ ಆಯುಕ್ತರು, ಪಾಲಿಕೆಯಲ್ಲಿ ಸದ್ಯ ಆರ್ಥಿಕ ಪರಿಸ್ಥಿತಿ ಸರಿಯಿಲ್ಲ. ನೀವು ವಿಶೇಷ ಪ್ರಕರಣವನ್ನಾಗಿ ಪರಿಗಣಿಸಿ ರಾಜ್ಯ ಸರ್ಕಾರದಿಂದಲೇ ಪಡೆಯುವಂತೆ ಅಂದಿನ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದರು. ಅದರಂತೆ ಜಿಲ್ಲಾಧಿಕಾರಿಗಳು ಪುನಃ ಸರ್ಕಾರಕ್ಕೆ ಪತ್ರ ಬರೆದು ಒಂದು ಕೋಟಿ ರೂ. ಬಿಡುಗಡೆ ಮಾಡುವಂತೆ ಕೋರಿದ್ದು, 2016-17ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಗೆ 1 ಕೋಟಿ ರೂ. ಬಿಡುಗಡೆಯಾಗಿದ್ದು, ಇದನ್ನೂ ಸಹ ಭವನ ನಿರ್ಮಾಣ ಕಾಮಗಾರಿಗಾಗಿ ನಿರ್ಮಿತಿ ಕೇಂದ್ರಕ್ಕೆ ನೀಡಲಾಯಿತು. ಕಾಮಗಾರಿ 5 ವರ್ಷ ವಿಳಂಬವಾಗಿದ್ದರಿಂದ ಯೋಜನಾ ವೆಚ್ಚವೂ ಹೆಚ್ಚಳವಾಗಿದ್ದು, 2018-19ನೇ ಸಾಲಿನಲ್ಲಿ ಪುನಃ ಜಿಲ್ಲಾಧಿಕಾರಿಗಳು ಪುನಃ ಸರ್ಕಾರಕ್ಕೆ ಪತ್ರ ಬರೆದಿದ್ದು, ಹೆಚ್ಚುವರಿಯಾಗಿ ಒಂದು ಕೋಟಿ ರೂ. ಅನುದಾನ ಕೋರಿದ್ದಾರೆ. 50 ಲಕ್ಷ ರೂ. ವೆಚ್ಚದಲ್ಲಿ ಕಾಂಪೌಂಡ್‌ ನಿರ್ಮಾಣ ಸೇರಿ ಇನ್ನಿತರೆ ಕಾಮಗಾರಿಗೆ ಬಳಕೆ ಮಾಡಲಾಗುತ್ತದೆ. ಇನ್ನುಳಿದ 50 ಲಕ್ಷ ರೂ. ವೆಚ್ಚದಲ್ಲಿ ಭವನದಲ್ಲಿ ಬಾಕಿ ಕಾಮಗಾರಿಯನ್ನು ನಿರ್ಮಿಸಿ ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತೇಜ್‌ ಆನಂದರೆಡ್ಡಿಯವರು ಸ್ಪಷ್ಟಪಡಿಸಿದ್ದಾರೆ.

ಮೂರು ಅಂತಸ್ತಿನ ಭವನ

ಜಗಜೀವನ್‌ ರಾಮ್‌ ಭವನ ನೆಲಮಹಡಿ ಸೇರಿ ಮೂರು ಅಂತಸ್ತು ಹೊಂದಿದೆ. ಮೂರನೇ ಮಹಡಿಯಲ್ಲಿ ಸಭಾಂಗಣವಿದ್ದು, ಸಭೆ, ಸಮಾರಂಭ, ಮದುವೆ ಸಮಾರಂಭ ಆಯೋಜನೆ ಮಾಡಬಹುದು. ಎರಡನೇ ಮಹಡಿಯಲ್ಲಿ ನಾಲ್ಕು ಕೊಠಡಿಗಳು ಇದ್ದು, ನೆಲಮಹಡಿಯಲ್ಲಿ ಊಟದ ವ್ಯವಸ್ಥೆ ಮಾಡಲು ಅವಕಾಶವಿದೆ. ಕಟ್ಟಡಕ್ಕೆ ಈಗಾಗಲೇ ಬಣ್ಣ ಬಳಿಯಲಾಗಿದ್ದು, ಸಣ್ಣಪುಟ್ಟ ಕಾಮಗಾರಿಗಳು ಬಾಕಿ ಉಳಿದಿದ್ದು, ಅಧಿಕಾರಿಗಳು ಮುತುವರ್ಜಿ ವಹಿಸಿದಲ್ಲಿ ತ್ವರಿತವಾಗಿ ಪೂರ್ಣಗೊಳ್ಳಲಿದೆ.

ಕುಡುಕರ ಅಡ್ಡವಾದ ಭವನ

ದಶಕದಿಂದ ನಿರ್ಮಾಣ ಹಂತದಲ್ಲೇ ಇರುವ ಜಗಜೀವನ್‌ರಾಮ್‌ ಭವನ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಕುಡುಕರ ಅಡ್ಡೆಯಾಗಿದೆ. ರಾತ್ರಿ ವೇಳೆ ಭವನದ ಮೆಟ್ಟಿಲುಗಳ ಮೇಲೆಯೇ ಕಿಡಿಗೇಡಿಗಳು ಮದ್ಯಸೇವಿಸಿ ಬಾಟಲಿಗಳನ್ನು ಎಲ್ಲೆಂದರಲ್ಲಿ ಬಿಸಾಡಿದ್ದಾರೆ. ಕಿಟಕಿ, ಬಾಗಿಲು ಅಳವಡಿಸಿದ್ದರೂ ಬೀಗ ಹಾಕದ ಭವನದೊಳಗೆ ಧೂಳು ಆವರಿಸಿದ್ದು, ದುಷ್ಚಟಗಳ ತಾಣವಾಗಿದೆ.

ಕೆರೆಕಟ್ಟೆ ಪ್ರದೇಶದಲ್ಲಿ ಜಗಜೀವನ್‌ರಾಮ್‌ ಭವನ ನಿರ್ಮಾಣಕ್ಕೆ 2011-12ನೇ ಸಾಲಿನಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಚಾಲನೆ ನೀಡಲಾಯಿತು. ವಿಳಂಬವಾಗಿದ್ದ ಕಾಮಗಾರಿಯನ್ನು ಡಿಎಂಎಫ್‌ ನಿಧಿ ಬಳಸಿ ತ್ವರಿತವಾಗಿ ಪೂರ್ಣಗೊಳಿಸಲು ಚಿಂತನೆ ನಡೆಸಿತ್ತಾದರೂ, ಅದರಲ್ಲಿ ಅವಕಾಶವಿಲ್ಲ. ಹಾಗಾಗಿ ಸರ್ಕಾರದಿಂದಲೇ ಹೆಚ್ಚುವರಿಯಾಗಿ 1 ಕೋಟಿ ರೂ. ಅನುದಾನ ಪಡೆಯಲಾಗುತ್ತಿದ್ದು, ತ್ವರಿತವಾಗಿ ಪೂರ್ಣಗೊಳಿಸಲಾಗುವುದು. – ತೇಜ್‌ಆನಂದ್‌ರೆಡ್ಡಿ, ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬಳ್ಳಾರಿ

-ವೆಂಕೋಬಿ ಸಂಗನಕಲ್ಲು

ಟಾಪ್ ನ್ಯೂಸ್

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.