ಮತದಾನ ಮಾಡುವವರೇ ಮಹಾಪ್ರಭುಗಳು


Team Udayavani, Mar 31, 2018, 5:00 PM IST

bella-1.jpg

ಹೊಸಪೇಟೆ: ಮತದಾನದ ಹಕ್ಕು ಹೊಂದಿರುವ ಮತದಾರರು ಚುನಾವಣೆಯಲ್ಲಿ ತಪ್ಪದೇ ಮತ ಚಲಾಯಿಸುವುದರಿಂದ ಉತ್ತಮ ಸರ್ಕಾರವನ್ನು ರಚಿಸಬಹುದಾಗಿದೆ ಎಂದು ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಹಾಗೂ ಸೆಕ್ಟರ್‌ ಅಧಿಕಾರಿ ಕಿಶೋರ್‌ ಹೇಳಿದರು.

ನಗರದ ಕೊಂಡನಾಯಕನಹಳ್ಳಿಯಲ್ಲಿ ಶುಕ್ರವಾರ ನಡೆದ ಮತದಾನದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಜಯನಗರ ವಿಧಾನಸಭಾ ಕ್ಷೇತ್ರದ ಮತದಾರರು ತಮ್ಮ ವ್ಯಾಪ್ತಿಯೊಳಗಿನ ಮತದಾನದ ಬೂತ್‌ಗಳಿಗೆ ತಪ್ಪದೇ ತೆರಳಿ ಮತದಾನ ಮಾಡಬೇಕು. ಚುನಾವಣೆಯಲ್ಲಿ ಮತ ಹಾಕುವುದು ಮತದಾರರ ಹಕ್ಕಾಗಿದೆ ಎಂದರು.

ತಮ್ಮ ಮತದಾನದ ಅಧಿಕಾರಿವನ್ನು ಚುನಾವಣೆಯಲ್ಲಿ ಬಳಸಿಕೊಳ್ಳಬೇಕು. ಮತದಾರರು ತಮ್ಮ ಅಧಿಕಾರವನ್ನು
ಬಳಸಿಕೊಳ್ಳುವುದು ಚುನಾವಣೆ ಸಂದರ್ಭದಲ್ಲಿ ಮಾತ್ರ. ಮತದಾನಕ್ಕೆ ತಾತ್ಸಾರ ತೋರದೆ ತಾವು ಹಾಗೂ ತಮ್ಮೊಂದಿಗೆ ಇರುವ ಮತದಾರರನ್ನು ಬೂತ್‌ಗಳಿಗೆ ಕರೆದೊಯ್ದು ಮತ ಚಲಾಯಿಸಲು ಮನವೊಲಿಸಬೇಕು. ಪ್ರತಿಯೊಬ್ಬರ ಮತದಾನವು ಉತ್ತಮ ಸಮಾಜವನ್ನು ನಿರ್ಮಿಸುವಲ್ಲಿ ಸಹಕಾರಿಯಾಗಲಿದೆ. 

ಪ್ರತಿಯೊಬ್ಬರು ವಿವೇಚನೆಯಿಂದ ಹಾಕಿದ ಮತ, ದೇಶ, ಜನರಿಗೆ ಎಂದೆಂದಿಗೂ ಹಿತವಾಗಿರುತ್ತದೆ. ಮತದಾನದ ದಿನದಂದು ತಮ್ಮೆಲ್ಲಾ ಕೆಲಸಗಳನ್ನು ಬದಿಗಿಟ್ಟು ತಪ್ಪದೇ ಮತದಾನ ಮಾಡಿ. ಮತದಾನ ಮಾಡುವುದು ಕರ್ತವ್ಯವಾಗಿದೆ ಎಂದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವ ಬಗ್ಗೆ ಖಾತರಿಪಡಿಸಿಕೊಂಡು, ಮತ ಹಾಕಲು ಹೋಗುವಾಗ ತಮ್ಮ ಮತದಾರರ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗಬೇಕು. ಜನರಲ್ಲಿ ಮತದಾನದದ ಬಗ್ಗೆ ಜಾಗೃತಿ ಮೂಡಿಸುವಂತ ಕಾರ್ಯಕ್ರಮವನ್ನು ವಿಜಯನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೊಂಡನಾಯಕನಹಳ್ಳಿ, ಅನಂತಶಯನಗುಡಿ, ಎಂ.ಪಿ.ಪ್ರಕಾಶ್‌ ನಗರ, ಸಿದ್ದಲಿಂಗಪ್ಪ ಚೌಕಿ, ಬಸ್‌ಡಿಪೋ ಮುಂಭಾಗದ ಪ್ರದೇಶದ ಜನಸಂದಣಿ ಇರುವಂತಹ ಪ್ರದೇಶದಲ್ಲಿ ಮತದಾರರ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಮತದಾರರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

ಮತದಾನದ ಜಾಗೃತಿಯ ಜೊತೆಗೆ ಚುನಾವಣಾ ಆಯೋಗದ ಘೋಷಣೆಗಳನ್ನು ಪ್ರಚಾರ ಮಾಡುವ ಮೂಲಕ ಮತ್ತು ಕಲಾವಿದ ಯಲ್ಲಪ್ಪ ಭಂಡಾರದಾರ್‌ ಅವರಿಂದ ಮತದಾರರ ಜಾಗೃತಿ ಹಾಡುಗಳ ಮೂಲಕ ಮತದಾರರಿಗೆ ಮತದಾನದ ಬಗ್ಗೆ ಕ್ಷೇತ್ರದಲ್ಲಿ ಪ್ರಚಾರ ನಡೆಸಲಾಯಿತು. ಭೂ ಸೇನೆ ಇಲಾಖೆಯ ಅಧಿಕಾರಿ ವೈಕುಂಠಪತಿ, ನಗರಸಭೆಯ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತರು ಸೇರಿದಂತೆ ಇತರೆ ಸಿಬ್ಬಂದಿಗಳು ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 

ಅಣಕು ಪ್ರದರ್ಶನ
ನಗರದ ಪಾಂಡುರಂಗ ಕಾಲೋನಿಯಲ್ಲಿ ಅಣಕು ಮತದಾನ ಪ್ರದರ್ಶನ ಕಾರ್ಯಕ್ರಮ ನಡೆಯಿತು. ಮತದಾರರು ಎಲೆಕ್ಟ್ರಾನಿಕ್‌ ಮತಯಂತ್ರದಲ್ಲಿ ಮತ ಚಲಾಯಿಸುವುದು ಹೇಗೆ, ಮತ ಚಲಾಯಿಸಿರುವುದು ಖಾತ್ರಿ ಪಡಿಸಿಕೊಳ್ಳುವುದನ್ನು ಮತದಾನ ಖಾತ್ರಿ ಯಂತ್ರದಲ್ಲಿ (ವಿವಿ ಪ್ಯಾಟ್‌) ನೋಡುವುದು ಹೇಗೆ ಎನ್ನುವುದನ್ನು ತಿಳಿಸಿಕೊಡಲಾಯಿತು. 

ಪಾಂಡುರಂಗ ಕಾಲೋನಿಯ ಜನ ಕುತೂಹಲದಿಂದ ಆಲಿಸಿದರು. ಮೆಟ್ರಿಕ್‌ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿಯರು ಮತದಾನದ ಮಹತ್ವ ಸಾರುವ ಬೀದಿ ನಾಟಕ ಪ್ರಸ್ತುತಪಡಿಸಿದರು. ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಹಾಗೂ ಸೆಕ್ಟರ್‌ ಅಧಿಕಾರಿ ಕಿಶೋರ್‌, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಎಸ್‌. ಸಿ.ಬಂಕಾಪುರಮಠ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕು ಅಧಿಕಾರಿ ಯರ್ರಿಸ್ವಾಮಿ, ಭೂಸೇನೆ ಇಲಾಖೆಯ ಅಧಿಕಾರಿ ವೈಕುಂಠಪತಿ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಚಂದ್ರಕಾಂತ, ಬೂತ್‌ಮಟ್ಟದ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.