ಆತ್ಮ ವಿಶ್ವಾಸ ಹೆಚ್ಚಿಸಲು ಮಹಿಳೆಯರ ಬೈಕ್‌ ರ್ಯಾಲಿ

ರಾಜ್ಯದ 30 ಜಿಲ್ಲೆಗಳಲ್ಲಿ 3500 ಕಿಮೀ ಸಂಚಾರ

Team Udayavani, May 5, 2022, 2:42 PM IST

rally

ಬಳ್ಳಾರಿ: ಮಹಿಳೆಯರ ಮೇಲೆ ದೌರ್ಜನ್ಯ, ದಬ್ಟಾಳಿಕೆ, ಅತ್ಯಾಚಾರಗಳು ನಡೆಯುತ್ತಿರುವ ಪ್ರಸ್ತುತ ದಿನಗಳಲ್ಲಿ ಅವರಿಗೆ ಧೈರ್ಯ ತುಂಬುವ ಸಲುವಾಗಿ ನಾಲ್ಕು ಜನ ಮಹಿಳೆಯರು ರಾಜ್ಯಾದ್ಯಂತ ಬೈಕ್‌ ರ್ಯಾಲಿ ಹಮ್ಮಿಕೊಂಡಿದ್ದು, ಕೆಲ ಗ್ರಾಮಗಳಿಗೆ ತೆರಳಿ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ ಎಂದು ಬಚಪನ್‌ ಶಾಲೆಯ ಮುಖ್ಯಸ್ಥೆ ಪ್ರಿಯಾಕೃಷ್ಣ ಪಿಳ್ಳೈ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ, ದಬ್ಟಾಳಿಕೆ, ಅತ್ಯಾಚಾರಗಳಿಂದ ಎದೆಗುಂದಿರುವ ಮಹಿಳೆಯರು, ಹೊರಬರದೆ ಮನೆಗೆ ಸೀಮಿತವಾಗುತ್ತಿದ್ದಾರೆ. ಅಂಥವರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ರೆಡ್‌ಕ್ರಾಸ್‌, ವಿಸಖೀ ಸಂಸ್ಥೆಗಳ ಸಹಯೋಗದಲ್ಲಿ ಬೆಂಗಳೂರಿನ ಸಖೀ ತಂಡದ ರಾಜಲಕ್ಷ್ಮೀ, ಸ್ವಾತಿ, ಕೀರ್ತಿನಾ, ಅನಿತಾ ಈ ನಾಲ್ವರು ಮಹಿಳೆಯರು ಈ ಬೈಕ್‌ ರ್ಯಾಲಿಯನ್ನು ಹಮ್ಮಿಕೊಂಡಿದ್ದಾರೆ. ಬೆಂಗಳೂರಿನಿಂದ ಏ. 17ರಂದು ಬೈಕ್‌ ರ್ಯಾಲಿಯು ಈಗಾಗಲೇ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದೊಡ್ಡಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹುಬ್ಬಳ್ಳಿ, ಬಾಗಲಕೋಟೆ, ಬೆಳಗಾವಿ, ವಿಜಯಪುರ, ಬೀದರ್‌, ಕಲ್ಬುರ್ಗಿ ಯಾದಗಿರಿ, ರಾಯಚೂರು ಸೇರಿ ಒಟ್ಟು 14 ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು 15ನೇ ಜಿಲ್ಲೆ ಬಳ್ಳಾರಿಗೆ ಆಗಮಿಸಿದೆ. ನಂತರ ಇಲ್ಲಿಂದ ವಿಜಯನಗರ ಜಿಲ್ಲೆಗೆ ತೆರಳಲಿದೆ ಎಂದವರು ತಿಳಿಸಿದರು.

ಸಖೀ ಅಧ್ಯಕ್ಷೆ ರಾಜಲಕ್ಷ್ಮೀ ಮಾತನಾಡಿ, ಜಿಲ್ಲಾ ಕೇಂದ್ರಗಳಲ್ಲಿ ರ್ಯಾಲಿ ನಡೆಸುವುದರ ಜತೆಗೆ, ಕೆಲವೊಂದು ಗ್ರಾಮಗಳಿಗೂ ಭೇಟಿ ನೀಡಲಾಗಿದ್ದು, ಅಲ್ಲಿ ಸ್ಥಳೀಯ ಹಿರಿಯ, ಕಿರಿಯ ಮಹಿಳೆಯರೊಂದಿಗೆ ಕೆಲಹೊತ್ತು ಸಂವಾದ ನಡೆಸಲಾಯಿತು. ಮಹಿಳೆಯರು, ಮನೆಗಳಿಗೆ, ಗ್ರಾಮಗಳಿಗೆ ಸೀಮಿತವಾಗದೆ ಹೊರಗಡೆ ಬಂದು ಕೆಲಸ ಮಾಡಬೇಕು. ಅದಕ್ಕಾಗಿ ಎಲ್ಲ ರೀತಿಯ ಭದ್ರತೆಯನ್ನು ಸಹ ನಾವು ರೂಪಿಸಿಕೊಳ್ಳಬೇಕು. ಅಲ್ಲದೇ, ಮಹಿಳೆಯರು ಉದ್ಯಮಗಳನ್ನು ಹೇಗೆ ಆರಂಭಿಸಬೇಕು. ಮನೆಗಳಲ್ಲೇ ಗುಡಿ ಕೈಗಾರಿಕೆಗಳನ್ನು ಹೇಗೆ ರೂಪಿಸಿಕೊಳ್ಳಬೇಕು. ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂಬಿತ್ಯಾದಿ ವಿಷಯಗಳ ಕುರಿತು ಜಾಗೃತಿ ಮೂಡಿಸಲಾಯಿತು ಎಂದವರು ತಿಳಿಸಿದರು.

ಇದಕ್ಕೂ ಮುನ್ನ ನಗರದ ಕನಕದುರ್ಗಮ್ಮ ದೇವಸ್ಥಾನ ಆವರಣದಲ್ಲಿ ಬೈಕ್‌ ರ್ಯಾಲಿಗೆ ಮಹಿಳಾ ಪೊಲೀಸ್‌ ಅಧಿಕಾರಿ ಗಾಯತ್ರಿ ರೊದ್ದಂ ಚಾಲನೆ ನೀಡಿದರು. ನಗರದ ಪ್ರಮುಖ ವೃತ್ತಗಳಲ್ಲಿ ಸಂಚರಿಸಿದ ರ್ಯಾಲಿಯಲ್ಲಿ ಮಹಿಳೆಯರೇ ಬೈಕ್‌ ಚಲಾಯಿಸಿದ್ದು ವಿಶೇಷವಾಗಿತ್ತು. ಮಹಿಳೆಯರು ತಾವು ಕರ್ತವ್ಯ ನಿರ್ವಹಿಸುವ ಸ್ಥಳದಲ್ಲಿ, ಕಚೇರಿಗಳಲ್ಲಿ ಆತ್ಮಸ್ಥೈರ್ಯದಿಂದ ಕರ್ತವ್ಯ ನಿರ್ವಹಿಸಬೇಕು. ತಪ್ಪುಗಳು ಕಂಡುಬಂದಲ್ಲಿ ಧೈರ್ಯವಾಗಿ ಎದುರಿಸಬೇಕು ಎಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ನಾಲ್ವರು ಮಹಿಳೆಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸುಗುಣಾ, ನಗರಾಧ್ಯಕ್ಷೆ ಜ್ಯೋತಿ ಪ್ರಕಾಶ್‌, ಪುಷ್ಪಲತಾ, ವಿಜಯಲಕ್ಷ್ಮೀ ಇದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.