ವಿಜಯನಗರ ಸಾಮ್ರಾಜ್ಯಕ್ಕೆ ಆನಂದ್‌ ಲೆಕ್ಕಾಚಾರ!

•ಪ್ರತ್ಯೇಕ ಜಿಲ್ಲೆ ಕೂಗಿಗೆ ಮತ್ತೆ ಬಲ•ಉಜ್ಜಯಿನಿ ಶ್ರೀಗಳ ಬೆಂಬಲ ಕೋರಿದ ಆನಂದ ಸಿಂಗ್‌•ಸಿಎಂ ಭೇಟಿಗೆ ಸಿದ್ಧತೆ

Team Udayavani, Sep 16, 2019, 11:15 AM IST

Sepctember-2

ಬಳ್ಳಾರಿ: ಅನರ್ಹ ಶಾಸಕ ಬಿ.ಎಸ್‌. ಆನಂದ್‌ಸಿಂಗ್‌ ಅವರು ವಿಜಯನಗರ ಜಿಲ್ಲೆಯನ್ನಾಗಿಸುವ ಸಲುವಾಗಿ ಉಜ್ಜಯಿನಿ ಶ್ರೀಗಳನ್ನು ಭೇಟಿಯಾಗಿ ಬೆಂಬಲ ಕೋರಿದರು.

•ವೆಂಕೋಬಿ ಸಂಗನಕಲ್ಲು
ಬಳ್ಳಾರಿ:
ವಿಜಯನಗರ ಜಿಲ್ಲೆ ರಚನೆಗಾಗಿ ಬೇಡಿಕೆಯಿಟ್ಟು ಇದಕ್ಕೆ ಮೈತ್ರಿ ಸರ್ಕಾರದಿಂದ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದ ಅನರ್ಹ ಶಾಸಕ ಬಿ.ಎಸ್‌. ಆನಂದ್‌ಸಿಂಗ್‌ ಈಗ ಮತ್ತೆ ತಮ್ಮ ಪ್ರಯತ್ನ ಮುಂದುವರಿಸಿದ್ದಾರೆ.

ಬಿಜೆಪಿ ಸರ್ಕಾರ ರಚನೆಗೆ ತೆರೆಮರೆಯಲ್ಲಿದ್ದು ಬೆಂಬಲಿಸಿದ್ದ ಸಿಂಗ್‌ ಈಗ ಹೊಸಪೇಟೆ ತಾಲೂಕು ಜಿಲ್ಲೆಯಾಗಿಸುವ ನಿಟ್ಟಿನಲ್ಲೂ ಸದ್ದಿಲ್ಲದೇ ತಮ್ಮ ಕಾರ್ಯ ಮುಂದುವರಿಸಿದ್ದು, ಇದರ ಹಿಂದೆ ರಾಜಕೀಯ ಹಿತಾಸಕ್ತಿ ಅಡಗಿದೆಯೇ ಎಂಬ ಪ್ರಶ್ನೆಯೂ ಮೂಡಿದೆ. ತಮ್ಮ ಬೇಡಿಕೆ ಮುಂದಿಟ್ಟು ಆನಂದ್‌ ಸಿಂಗ್‌ ಸಿಎಂ ಯಡಿಯೂರಪ್ಪ ಬಳಿಗೆ ನಿಯೋಗ ತೆರಳಲು ಸಿದ್ಧತೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಉಜ್ಜಯಿನಿ ಪೀಠದ ಶ್ರೀಗಳ ಬೆಂಬಲ ಕೋರಿದ್ದು, ತಾಲೂಕಿನ ಮುಖಂಡರನ್ನು ಸಹ ಸಂಘಟನೆಯಲ್ಲಿ ತೊಡಗಿಸಿದ್ದಾರೆ.

ಹೊಸಪೇಟೆ ತಾಲೂಕನ್ನು ವಿಜಯನಗರ ಜಿಲ್ಲೆಯನ್ನಾಗಿ ಮಾಡಬೇಕೆಂಬ ಕೂಗು ಕಳೆದ ಒಂದು ದಶಕದಿಂದ ಕೇಳಿಬರುತ್ತಿದೆ. ಇದಕ್ಕಾಗಿ ಹೊಸಪೇಟೆಯಲ್ಲಿ ಹಲವಾರು ಹೋರಾಟಗಳು ನಡೆದಿವೆ. ಆದರೆ ಕೆಲ ವರ್ಷಗಳಿಂದ ಕ್ಷೀಣಿಸಿದ್ದ ಈ ಕೂಗಿಗೆ ಇದೀಗ ಶಾಸಕ ಆನಂದ್‌ಸಿಂಗ್‌ ಮತ್ತೆ ಬಲ ತುಂಬುತ್ತಿದ್ದಾರೆ.

ಪ್ರತ್ಯೇಕ ಜಿಲ್ಲೆ ಬೇಡಿಕೆ ಇಟ್ಟಿದ್ದ ಆನಂದ ಸಿಂಗ್‌ ಇದಕ್ಕೆ ಸ್ಪಂದನೆ ದೊರೆತಿಲ್ಲ ಎಂಬ ಕಾರಣಕ್ಕೆ ಇತ್ತೀಚೆಗಷ್ಟೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಮೈತ್ರಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಪರೋಕ್ಷವಾಗಿ ಸಹಕರಿಸಿರುವ ಸಿಂಗ್‌ ಈಗ ಮತ್ತೆ ತಮ್ಮ ಬೇಡಿಕೆಯನ್ನು ಸರ್ಕಾರದ ಮುಂದಿಡಲು ಮುಂದಾಗಿದ್ದು, ಇದರ ಭಾಗವಾಗಿ ಸೆ.18ರಂದು ಮುಖ್ಯಮಂತ್ರಿಗಳ ಬಳಿಗೆ ನಿಯೋಗ ತೆರಳಲು ಸಿದ್ಧತೆ ನಡೆಸಿದ್ದಾರೆ. ಅದಕ್ಕಾಗಿ ಉಜ್ಜಯಿನಿ ಪೀಠದ ಶ್ರೀಗಳನ್ನು ಭೇಟಿಯಾಗಿ ಬೆಂಬಲ ಕೋರಿದ್ದಾರೆ. ಇದಕ್ಕೆ ಶ್ರೀಗಳಿಂದಲೂ ಸಕಾರಾತ್ಮಕ ಸ್ಪಂದನೆ ಲಭಿಸಿದೆ ಎನ್ನಲಾಗುತ್ತಿದೆ. ವಿಜಯನಗರ ಜಿಲ್ಲೆಯಾದರೆ ಇದರ ವ್ಯಾಪ್ತಿಗೆ ಬರುವ ಹಗರಿಬೊಮ್ಮನಹಳ್ಳಿ ಮಾಜಿ ಶಾಸಕ ನೇಮಿರಾಜ ನಾಯ್ಕ, ಹಡಗಲಿ ಮಾಜಿ ಶಾಸಕ ಚಂದ್ರನಾಯ್ಕ ಸೇರಿದಂತೆ ರಾಜಕೀಯ ಮುಖಂಡರು, ಜನರನ್ನು ಸಹ ಸಂಘಟನೆಯಲ್ಲಿ ತೊಡಗಿಸಿದ್ದಾರೆ.

ಬಳ್ಳಾರಿಯಿಂದ ಮುಕ್ತಿ; ರಾಜಕೀಯ ಹಿತಾಸಕ್ತಿ? ಬಳ್ಳಾರಿ ಎಂದಾಕ್ಷಣ ಸಚಿವ ಬಿ. ಶ್ರೀರಾಮುಲು, ರೆಡ್ಡಿ ಸಹೋದರರದ್ದೇ ಹವಾ. ವಿಜಯನಗರ ಕ್ಷೇತ್ರದ ಅನರ್ಹ ಶಾಸಕ ಬಿ.ಎಸ್‌.ಆನಂದ್‌ಸಿಂಗ್‌ ಸಹ ರೆಡ್ಡಿ ಪಾಳಯದಲ್ಲೇ ಬೆಳೆದ ಪ್ರಭಾವಿ ರಾಜಕಾರಣಿ. ಆದರೆ ಸದ್ಯಕ್ಕೆ ಆನಂದ್‌ಸಿಂಗ್‌ ರಾಜಕೀಯವಾಗಿ ಮತ್ತಷ್ಟು ಬೆಳೆಯಲು ರೆಡ್ಡಿ ಸಹೋದರರು ಮತ್ತು ಶ್ರೀರಾಮುಲು ಅವರ ವರ್ಚಸ್ಸು ಅಡ್ಡಿಯಾಗುತ್ತಿದೆ. ವಿಜಯನಗರ ಕ್ಷೇತ್ರ ಬಳ್ಳಾರಿ ಜಿಲ್ಲೆ ವ್ಯಾಪ್ತಿಯಲ್ಲೇ ಇರುವುದರಿಂದ ಸ್ವತಂತ್ರವಾಗಿ ರಾಜಕೀಯದಲ್ಲಿ ಬೆಳೆಯುವುದು ಅಷ್ಟು ಸುಲಭವಲ್ಲ. ಈ ತಾಂತ್ರಿಕ ಸಮಸ್ಯೆ ಆನಂದ್‌ಸಿಂಗ್‌ ಅವರಿಗೆ ಅಡ್ಡಿಯಾಗುತ್ತಿದೆ. ಹಾಗಾಗಿ ಹೊಸಪೇಟೆಯನ್ನು ವಿಜಯನಗರ ಜಿಲ್ಲೆಯನ್ನಾಗಿಸಿ ಬಳ್ಳಾರಿ ಜಿಲ್ಲೆಯಿಂದ ಬೇರ್ಪಟ್ಟರೆ ರೆಡ್ಡಿ, ರಾಮುಲು ಪಾಳಯದಿಂದ ಹೊರಬಂದು ಜಿಲ್ಲೆಯಲ್ಲಿ ತನ್ನದೇ ವರ್ಚಸ್ಸು ಹೆಚ್ಚಿಸಿಕೊಳ್ಳಬಹುದು ಎಂಬುದು ಆನಂದ್‌ಸಿಂಗ್‌ ರಾಜಕೀಯ ಲೆಕ್ಕಾಚಾರ. ಆದ್ದರಿಂದ ಹಲವು ವರ್ಷಗಳ ಹಿಂದೆ ನನೆಗುದಿಗೆ ಬಿದ್ದಿದ್ದ ವಿಜಯನಗರ ಜಿಲ್ಲೆ ರಚನೆ ಹೋರಾಟದ ಕೂಗಿಗೆ ಧ್ವನಿ ಗೂಡಿಸಿದ್ದಾರೆ ಎನ್ನಲಾಗುತ್ತಿದೆ.

ಹೊಸಪೇಟೆ ತಾಲೂಕನ್ನು ವಿಜಯನಗರ ಜಿಲ್ಲೆಯನ್ನಾಗಿ ಮಾಡುವಲ್ಲಿ ಅನರ್ಹ ಶಾಸಕ ಬಿ.ಎಸ್‌.ಆನಂದ್‌ಸಿಂಗ್‌ ಅವರ ರಾಜಕೀಯ ಲೆಕ್ಕಾಚಾರವೂ ಇದೆ ಎನ್ನುವುದು ಗುಟ್ಟಾಗಿ ಉಳಿದಿಲ್ಲ. ವಿಜಯನಗರ ವಿಧಾನಸಭೆ ಕ್ಷೇತ್ರಕ್ಕೆ ಶೀಘ್ರದಲ್ಲೇ ನಡೆಯಲಿರುವ ಉಪಚುನಾವಣೆಗೂ ಮುನ್ನವೇ ವಿಜಯನಗರ ಜಿಲ್ಲೆ ಘೋಷಣೆಯಾದರೆ ಉಪಚುನಾವಣೆಯಲ್ಲಿ ಆನಂದ್‌ ಸಿಂಗ್‌ಗೆ ಗೆಲುವು ಸುಲಭವಾಗಲಿದೆ. ಜತೆಗೆ ಸಚಿವರಾದರೂ ಅಚ್ಚರಿ ಇಲ್ಲ. ಅದಕ್ಕಾಗಿಯೇ ಉಪಚುನಾವಣೆ ಮುನ್ನವೇ ವಿಜಯನಗರ ಜಿಲ್ಲೆ ರಚನೆಗೆ ಹೋರಾಟದ ಕಿಚ್ಚು ಹೆಚ್ಚಿಸುವ ಉದ್ದೇಶ ಆನಂದ್‌ ಸಿಂಗ್‌ ಅವರದ್ದು ಎಂಬ ಮಾತುಗಳೂ ಕೇಳಿಬರುತ್ತಿವೆ. ಆನಂದ್‌ ಪ್ರಯತ್ನ ಎಷ್ಟರ ಮಟ್ಟಿಗೆ ಯಶಸ್ವಿಯಾಗಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಸರ್ಕಾರದ ಮೇಲೆ ಒತ್ತಡ
ಸೆ.18ರಂದು ನಿಯೋಗದೊಂದಿಗೆ ಸಿಎಂ ಭೇಟಿಯಾಗಲು ಸಜ್ಜಾಗುತ್ತಿರುವ ಅನರ್ಹ ಶಾಸಕ ಆನಂದ್‌ಸಿಂಗ್‌, ಜಿಲ್ಲೆಯ ಎಲ್ಲ ಕ್ಷೇತ್ರಗಳ ಸಂಘಟನೆಗಳ ಮೂಲಕ ಮನವಿ ಪತ್ರ ಬರೆಸಲು ಪ್ರಯತ್ನಿಸುತ್ತಿದ್ದಾರೆ. ಈ ಜನಾಭಿಪ್ರಾಯದ ಪತ್ರ ಸಿಎಂಗೆ ಸಲ್ಲಿಸಿ ಹೊಸಪೇಟೆಯನ್ನು ವಿಜಯನಗರ ಜಿಲ್ಲೆಯನ್ನಾಗಿ ರಚಿಸುವಂತೆ ಒತ್ತಡ ಹೇರಲಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಟಾಪ್ ನ್ಯೂಸ್

ವೃದ್ಧರೇ ಅಂತರಾಷ್ಟ್ರೀಯ ಪ್ರಯಾಣ ಮುಂದೂಡಿ : ವಿಶ್ವ ಆರೋಗ್ಯ ಸಂಸ್ಥೆಯಿಂದಲೇ ಎಚ್ಚರಿಕೆ

ವೃದ್ಧರೇ ಅಂತರಾಷ್ಟ್ರೀಯ ಪ್ರಯಾಣ ಮುಂದೂಡಿ : ವಿಶ್ವ ಆರೋಗ್ಯ ಸಂಸ್ಥೆಯಿಂದಲೇ ಎಚ್ಚರಿಕೆ

ಬಿಹಾರದ ದೇಗುಲಗಳಿಗೆ ಶೇ. 4 ತೆರಿಗೆ! ರಾಜ್ಯ ಸರ್ಕಾರದ ನಿರ್ಧಾರ

ಬಿಹಾರದ ದೇಗುಲಗಳಿಗೆ ಶೇ. 4 ತೆರಿಗೆ! ರಾಜ್ಯ ಸರ್ಕಾರದ ನಿರ್ಧಾರ

ಅಮೆರಿಕ : ಶಾಲಾ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ಗುಂಡಿನ ದಾಳಿ , 3 ಸಾವು

ಅಮೆರಿಕ : ಶಾಲಾ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ಗುಂಡಿನ ದಾಳಿ , 3 ಸಾವು

ಕಾಶಿ ವಿಶ್ವನಾಥನ “ಸುಗಮ ದರ್ಶನ’ದ ಅಡ್ಡಿ ನಿವಾರಣೆ

ಕಾಶಿ ವಿಶ್ವನಾಥನ “ಸುಗಮ ದರ್ಶನ’ದ ಅಡ್ಡಿ ನಿವಾರಣೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್‌ ಬೆಲೆ 8 ರೂ. ಇಳಿಕೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್‌ ಬೆಲೆ 8 ರೂ. ಇಳಿಕೆ

ಶಬರಿಮಲೆಯಲ್ಲಿ ಇ-ಹುಂಡಿ : ಭಕ್ತಾದಿಗಳು ಗೂಗಲ್‌ ಪೇ ಮೂಲಕವೂ ಕಾಣಿಕೆ ಸಲ್ಲಿಸಬಹುದು

ಶಬರಿಮಲೆಯಲ್ಲಿ ಇ-ಹುಂಡಿ : ಭಕ್ತಾದಿಗಳು ಗೂಗಲ್‌ ಪೇ ಮೂಲಕವೂ ಕಾಣಿಕೆ ಸಲ್ಲಿಸಬಹುದು

ಟ್ವಿಟರ್‌ ಸಂಸ್ಥೆಯಿಂದ ಟಫ್ ರೂಲ್ಸ್‌ ಜಾರಿ : ವೈಯಕ್ತಿಕ ಫೋಟೋ, ವಿಡಿಯೋಕ್ಕೆ ಕಡಿವಾಣ

ಟ್ವಿಟರ್‌ ಸಂಸ್ಥೆಯಿಂದ ಟಫ್ ರೂಲ್ಸ್‌ ಜಾರಿ : ವೈಯಕ್ತಿಕ ಫೋಟೋ, ವಿಡಿಯೋಕ್ಕೆ ಕಡಿವಾಣಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಜ್ಜಿ

ಬಸ್ ನಿಲ್ದಾಣದಲ್ಲಿ ಮನೆ ಮಂದಿ ಬರುವಿಕೆಗಾಗಿ ಕಾಯುತ್ತಿರುವ ವಯೋವೃದ್ದೆ..!

fight

ತಹಶೀಲ್ದಾರ್ ಕಚೇರಿ ಆವರಣದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ

ಸುಧೀರ್‌ ಶೆಟ್ಟಿ

ಹಾಲಿನ ವ್ಯಾಪಾರದಲ್ಲಿ ಯಶಸ್ಸು ಕಂಡ ಸ್ನಾತಕೋತ್ತರ ಪದವೀಧರ

ಡಿ.13ಕ್ಕೆ ನಮ್ಮನೆ ಹಬ್ಬಕ್ಕೆ ದಶಮಾನೋತ್ಸವ, ‘ವಂಶೀವಿಲಾಸ’ ಲೋಕಾರ್ಪಣೆ

ಡಿ.13ಕ್ಕೆ ನಮ್ಮನೆ ಹಬ್ಬಕ್ಕೆ ದಶಮಾನೋತ್ಸವ, ‘ವಂಶೀವಿಲಾಸ’ ಲೋಕಾರ್ಪಣೆ

ಹಿಲ್ಲೂರು ಯಕ್ಷಮಿತ್ರ ಬಳಗ ಉದ್ಘಾಟನೆ

ಹಿಲ್ಲೂರು ಯಕ್ಷಮಿತ್ರ ಬಳಗ ಉದ್ಘಾಟನೆ

MUST WATCH

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

udayavani youtube

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

udayavani youtube

ತುಂಗಭದ್ರಾ ನದಿಯಿಂದ ಹಳ್ಳಗಳಿಗೆ ಬಂದ ಮೊಸಳೆ! ಜನರಲ್ಲಿ ಆತಂಕ

udayavani youtube

ದಾಂಡೇಲಿ :ತಹಶೀಲ್ದಾರ್ ಕಚೇರಿ ಆವರಣದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ

udayavani youtube

ಮನೆ ಮಂದಿ ಬರುವಿಕೆಗಾಗಿ ದಾಂಡೇಲಿಯ ಬಸ್ ನಿಲ್ದಾಣದಲ್ಲಿ ಕಾಯುತ್ತಿರುವ ವಯೋವೃದ್ದೆ

ಹೊಸ ಸೇರ್ಪಡೆ

ವೃದ್ಧರೇ ಅಂತರಾಷ್ಟ್ರೀಯ ಪ್ರಯಾಣ ಮುಂದೂಡಿ : ವಿಶ್ವ ಆರೋಗ್ಯ ಸಂಸ್ಥೆಯಿಂದಲೇ ಎಚ್ಚರಿಕೆ

ವೃದ್ಧರೇ ಅಂತರಾಷ್ಟ್ರೀಯ ಪ್ರಯಾಣ ಮುಂದೂಡಿ : ವಿಶ್ವ ಆರೋಗ್ಯ ಸಂಸ್ಥೆಯಿಂದಲೇ ಎಚ್ಚರಿಕೆ

ಬಿಹಾರದ ದೇಗುಲಗಳಿಗೆ ಶೇ. 4 ತೆರಿಗೆ! ರಾಜ್ಯ ಸರ್ಕಾರದ ನಿರ್ಧಾರ

ಬಿಹಾರದ ದೇಗುಲಗಳಿಗೆ ಶೇ. 4 ತೆರಿಗೆ! ರಾಜ್ಯ ಸರ್ಕಾರದ ನಿರ್ಧಾರ

ಅಮೆರಿಕ : ಶಾಲಾ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ಗುಂಡಿನ ದಾಳಿ , 3 ಸಾವು

ಅಮೆರಿಕ : ಶಾಲಾ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ಗುಂಡಿನ ದಾಳಿ , 3 ಸಾವು

ಕಾಶಿ ವಿಶ್ವನಾಥನ “ಸುಗಮ ದರ್ಶನ’ದ ಅಡ್ಡಿ ನಿವಾರಣೆ

ಕಾಶಿ ವಿಶ್ವನಾಥನ “ಸುಗಮ ದರ್ಶನ’ದ ಅಡ್ಡಿ ನಿವಾರಣೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್‌ ಬೆಲೆ 8 ರೂ. ಇಳಿಕೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್‌ ಬೆಲೆ 8 ರೂ. ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.