ಸುಕೋ ಬ್ಯಾಂಕ್‌ಗೆ 4.93 ಕೋಟಿ ನಿವ್ವಳ ಲಾಭ: ಮಸ್ಕಿ

ಆರ್ಥಿಕ ವರ್ಷ ದಲ್ಲಿ ಭರ್ಜರಿ ಸಾಧನೆಬೆಳ್ಳಿ ಹಬ್ಬದ ಆಚರಣೆಗೆ ಶುಭಸುದ್ದಿ669 ಕೋಟಿ ಠೇವಣಿ- 453 ಕೋಟಿ ಸಾಲ ವಿತರಣೆ ಶೇ.40 ಪ್ರಗತಿ

Team Udayavani, Apr 4, 2019, 12:46 PM IST

4-April-9

ಬಳ್ಳಾರಿ: ಸುಕೋ ಬ್ಯಾಂಕ್‌ನಲ್ಲಿ ಬ್ಯಾಂಕ್‌ ಅಧ್ಯಕ್ಷ ಮೋಹಿತ್‌ ಮಸ್ಕಿ ಮಾತನಾಡಿದರು.

ಬಳ್ಳಾರಿ: ಸಹಕಾರಿ ಕ್ಷೇತ್ರದಲ್ಲಿ ವಿಶ್ವಾಸಾರ್ಹವಾಗಿ ಬೆಳೆಯುತ್ತಿರುವ ‘ಸುಕೋ ಬ್ಯಾಂಕ್‌ ‘ಬೆಳ್ಳಿ ಹಬ್ಬದ ಆಚರಣೆ ಸಂದರ್ಭದಲ್ಲಿ 2018-19ರ ಆರ್ಥಿಕ ಸಾಲಿನಲ್ಲಿ ಒಟ್ಟು 1122 ಕೋಟಿ ರೂ. ವಹಿವಾಟು ನಡೆಸಿದ್ದು, ಶೇ.40 ರಷ್ಟು ಪ್ರಗತಿ ಸಾಧಿಸಿದೆ. ಒಟ್ಟು 9 ಕೋಟಿ ರೂ. ಲಾಭಗಳಿಸಿದ್ದು, ತೆರಿಗೆ ಪಾವತಿ ಬಳಿಕ 4.93 ಕೋಟಿ ರೂ. ನಿವ್ವಳ ಲಾಭಗಳಿದೆ ಎಂದು ಸುಕೋ ಬ್ಯಾಂಕ್‌ ಅಧ್ಯಕ್ಷ ಮೋಹಿತ್‌ ಮಸ್ಕಿ ತಿಳಿಸಿದರು.

ನಗರದ ಸುಕೋ ಬ್ಯಾಂಕ್‌ ಕೇಂದ್ರ ಕಚೇರಿ ಸಭಾಂಗಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಹಕಾರಿ ಕ್ಷೇತ್ರದಲ್ಲಿ ಸುಕೋ ಬ್ಯಾಂಕ್‌ ಭದ್ರವಾಗಿ ತಳವೂರಿ, ಪ್ರತಿವರ್ಷ ತನ್ನ ವ್ಯವಹಾರ ವೃದ್ಧಿಗೊಳಿಸಿಕೊಳ್ಳುತ್ತಿದ್ದು, ಇದು ಸಂತಸ ಮೂಡಿಸಿದೆ ಎಂದರು.

ರಾಜ್ಯದ 16 ಜಿಲ್ಲೆಗಳಲ್ಲಿ ನಾನಾ ಕಡೆ 28 ಶಾಖೆಗಳನ್ನು ಹೊಂದಿದ್ದು, ಗ್ರಾಹಕರ ಜನಸ್ನೇಹಿಯಾಗಿ ಕೆಲಸ ನಿರ್ವಹಿಸುತ್ತಿದೆ. ಶೇ.40ರಷ್ಟು ಪ್ರಗತಿ ಸಾಧಿಸಿದ ನಮ್ಮ ಬ್ಯಾಂಕ್‌, ಒಟ್ಟು 669 ಕೋಟಿ ರೂ. ಠೇವಣಿ ಹೊಂದಿದ್ದು, ಒಟ್ಟು 453 ಕೋಟಿ ರೂ.ಸಾಲ ವಿತರಣೆ ಮಾಡಿದೆ ಎಂದು ತಿಳಿಸಿದರು.ಬ್ಯಾಂಕ್‌ನ ಎನ್‌ಪಿಎ (ನಿವ್ವಳ ಅನುತ್ಪಾದಕ ಆಸ್ತಿ) ಶೇ.1.97 ರಷ್ಟಿದ್ದು, ಇದು ಸುಕೋ ಬ್ಯಾಂಕ್‌ನ ಆರ್ಥಿಕ ಭದ್ರತೆ ಮತ್ತು ಆರೋಗ್ಯವನ್ನು ಸೂಚಿಸುತ್ತದೆ. ಸುಕೋ ಬ್ಯಾಂಕ್‌ನ ಬೆಳ್ಳಿಹಬ್ಬದ ಸಂಭ್ರಮಾಚರಣೆ ನಿಮಿತ್ತ ಹೊಸದಾಗಿ ‘ಸುಕೋ ಸೋಲಾರ್‌ ಶಕ್ತಿ ಯೋಜನೆ ಜಾರಿಗೊಳಿದ್ದು, 25 ಸಾವಿರ ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದಿಸುವ ಗುರಿ ಹೊಂದಿದೆ. ಅತಿ ಕಡಿಮೆ ಮಾಸಿಕ ಕಂತುಗಳಲ್ಲಿ ಸೋಲಾರ್‌ ತಂತ್ರಜ್ಞಾನ ಅಳವಡಿಸಿಕೊಂಡು ವಿದ್ಯುತ್‌ ಉತ್ಪಾದಿಸುವ ಮಹತ್ವದ ಯೋಜನೆ ಇದಾಗಿದೆ. ಈ ಯೋಜನೆಯಡಿ 300ಕ್ಕೂ ಹೆಚ್ಚು ಜನರು ಹೆಸರನ್ನು ನೋಂದಾಯಿಸಿದ್ದು, ಸೋಲಾರ್‌ ತಂತ್ರಜ್ಞಾನದ ಮೂಲಕ ವಿದ್ಯುತ್‌ ಉತ್ಪಾದನೆಗೆ ಆಸಕ್ತಿ ತೋರಲು ಮುಂದೆ ಬಂದಿದ್ದಾರೆ ಎಂದು ಮಾಹಿತಿ ನೀಡಿದರು.

ಯುಪಿಐ ಹಣ ಪಾವತಿ ತಂತ್ರಜ್ಞಾನ: ಕೇಂದ್ರ ಸರ್ಕಾರದ ಯುಪಿಐ ಹಣ ಪಾವತಿ ತಂತ್ರಜ್ಞಾನದ ವ್ಯವಸ್ಥೆಗೆ ಒಳಪಟ್ಟ ರಾಜ್ಯದ ಮೊದಲ ಸಹಕಾರಿ ಬ್ಯಾಂಕ್‌ ಎನ್ನುವ ಕೀರ್ತಿ ಸುಕೋ ಬ್ಯಾಂಕ್‌ ಹೊಂದಿದೆ. ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳುವಲ್ಲಿ ಅನೇಕ ಪ್ರಥಮಗಳ ಗೌರವಕ್ಕೆ ಪ್ರಾಪ್ತಿಯಾಗಿದೆ ಎಂದರು.

ರುಪೇ ಪ್ಲಾಟಿನಂ ಕಾರ್ಡ್‌ ವಿತರಣೆ ಮಾಡುತ್ತಿರುವ ರಾಜ್ಯದ ಮೊದಲ ಸಹಕಾರಿ ಬ್ಯಾಂಕ್‌ ನಮ್ಮದಾಗಿದೆ. ಬ್ಯಾಂಕ್‌ನ ಯಾವುದೇ ಖಾತೆದಾರರು ಈ ಕಾರ್ಡ್‌ ಪಡೆಯಲು ಅರ್ಹರು. ಬ್ಯಾಂಕ್‌ನ ರುಪೇ ಪ್ಲಾಟಿನಂ ಕಾರ್ಡ್‌ ಮೂಲಕ ಆನ್‌ಲೈನ್‌ ಶಾಪಿಂಗ್‌ ಮಾಡುವವರಿಗೆ ವಿವಿಧ ಬಗೆಯ ರಿಯಾಯಿತಿ, ಆಕರ್ಷಕ ಕೊಡುಗೆಗಳು ಹಾಗೂ ಕ್ಯಾಶ್‌ಬ್ಯಾಕ್‌ ಸೌಲಭ್ಯ ಸಿಗಲಿದೆ. ಈ ಕಾರ್ಡ್‌ ಪಡೆಯುವ ಖಾತೆದಾರರು ಕನಿಷ್ಠ ಹಣವನ್ನು ಖಾತೆಯಲ್ಲಿ ಹೊಂದಿರಬೇಕಾದ ಅನಿವಾರ್ಯತೆ ಇಲ್ಲ. ಎಲ್ಲ ಗ್ರಾಹಕರು ಈ ಕಾರ್ಡ್‌ ಸೌಲಭ್ಯ ಪಡೆಯಬಹುದು. ಸುಕೋ ಬ್ಯಾಂಕ್‌ನ ಅಭಿವೃದ್ಧಿ ಮತ್ತು ಸಾಧನೆಯಲ್ಲಿ ಸಹಕಾರ ತೋರಿದ ನಮ್ಮೆಲ್ಲಾ ಗ್ರಾಹಕರಿಗೆ ಹಾಗೂ ಷೇರುದಾರರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಪರಿಮಳಾಚಾರ್ಯ ಎಸ್‌. ಅಗ್ನಿಹೋತ್ರಿ, ಆಡಳಿತ ಮಂಡಳಿ ಕಾರ್ಯದರ್ಶಿ ವೆಂಕಟೇಶ್‌ರಾವ್‌ ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.