ಮುಂಗಾರು ಬೆಳೆಗೆ ಸಿಕ್ಕೀತೆ ಜಲಾಶಯದ ನೀರು?

ಜುಲೈನಲ್ಲಿ ಕೇವಲ 14.30 ಟಿಎಂಸಿ ನೀರು ಸಂಗ್ರಹ •ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆ

Team Udayavani, Jul 18, 2019, 11:27 AM IST

ತುಂಗಭದ್ರಾ ಜಲಾಶಯದಲ್ಲಿ ಸಂಗ್ರಹವಾಗಿರುವ ನೀರು.

ವೆಂಕೋಬಿ ಸಂಗನಕಲ್ಲು
ಬಳ್ಳಾರಿ:
ಅಂತಾರಾಜ್ಯಗಳ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದಿಂದ ಈ ಬಾರಿಯೂ ಮುಂಗಾರು ಹಂಗಾಮು ಬೆಳೆಗೆ ನೀರು ದೊರೆಯುವುದು ಅನುಮಾನವಾಗಿದೆ.

ಜುಲೈ ತಿಂಗಳು ಕಳೆಯುತ್ತಿದ್ದು, ಈ ವರೆಗೂ ಜಲಾನಯನ ಪ್ರದೇಶದಲ್ಲಿ ಸಮರ್ಪಕವಾಗಿ ನಿರಂತರ ಮಳೆಯಾಗದ್ದರಿಂದ ಜಲಾಶಯಕ್ಕೆ ನಿರೀಕ್ಷಿತ ಪ್ರಮಾಣದ ನೀರು ಹರಿದು ಬಂದಿಲ್ಲ. ಅಲ್ಲದೆ ಒಳಹರಿವಿನ ಪ್ರಮಾಣವೂ ಕುಸಿದಿದ್ದು, ಮಳೆ ಬಾರದಿದ್ದಲ್ಲಿ ಸಮಸ್ಯೆ ಉಲ್ಬಣಗೊಳ್ಳಲಿದೆ.

ತುಂಗಭದ್ರಾ ಜಲಾಶಯ ಕರ್ನಾಟಕ, ಆಂಧ್ರ, ತೆಲಂಗಾಣ ರಾಜ್ಯಗಳ 6 ಜಿಲ್ಲೆಗಳ ಒಟ್ಟು 12 ಲಕ್ಷ ಎಕರೆಗೂ ಹೆಚ್ಚು ಜಮೀನುಗಳಿಗೆ ಮತ್ತು ಜನರಿಗೆ ಕುಡಿಯುವ ನೀರು ಪೂರೈಸುತ್ತದೆ. ಜಲಾನಯನ ಪ್ರದೇಶವಾದ ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದು, ತುಂಗಾ ಜಲಾಶಯದಿಂದಲೂ ನದಿಗೆ ಹರಿದುಬರುವ ನೀರಿನ ಪ್ರಮಾಣ ಕುಸಿದಿದೆ. ಜುಲೈ ತಿಂಗಳು ಮುಗಿಯುತ್ತಿದ್ದರೂ ಜಲಾಶಯಕ್ಕೆ ಗರಿಷ್ಠ ಪ್ರಮಾಣದ ನೀರು ಹರಿದು ಬರುತ್ತಿಲ್ಲ. ಹೀಗಾಗಿ ಈ ಬಾರಿ ಮುಂಗಾರು ಬೆಳೆಗೆ ಜಲಾಶಯದಿಂದ ನೀರು ದೊರಕುವುದು ಅನುಮಾನ ಎನ್ನಲಾಗುತ್ತಿದ್ದು ರೈತರನ್ನು ಆತಂಕಕ್ಕೀಡು ಮಾಡಿದೆ.

60-70 ಟಿಎಂಸಿ ಇದ್ದರೆ ಭತ್ತಕ್ಕೆ ನೀರು: ಮೂರು ಜಿಲ್ಲೆಗಳಲ್ಲಿ ಬೆಳೆಯಲಾಗುವ ಭತ್ತಕ್ಕೆ ಕನಿಷ್ಠ 70ರಿಂದ 80 ಟಿಎಂಸಿ ನೀರು ಬೇಕಾಗಲಿದ್ದು, ಕನಿಷ್ಠ 60ಕ್ಕೂ ಹೆಚ್ಚು ಟಿಎಂಸಿ ನೀರು ಸಂಗ್ರಹವಾದಾಗ ಭತ್ತಕ್ಕೆ ನೀರು ಕೊಡಲಾಗುತ್ತದೆ ಎಂದು ಜಲಾಶಯದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಮೊದಲ ಬೆಳೆಗೇ ನೀರಿಲ್ಲ: ತುಂಗಭದ್ರಾ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಮಳೆ ಸುರಿಯುವ ನಿರೀಕ್ಷೆಯಿದ್ದರೂ, ಗಾಳಿಗೆ ಮೋಡಗಳು ಚದುರಿದ್ದರಿಂದ ಮುಂಬೈ, ಗುಜರಾತ್‌ನಲ್ಲಿ ನಿರಂತರ ಮಳೆ ಸುರಿದಿದೆ. ಈ ವರೆಗೆ ಇದ್ದ ಎಲ್ಲ ನಿರೀಕ್ಷೆಗಳು ಹುಸಿಯಾಗಿದ್ದು, ಇದೀಗ ಜುಲೈ 1 ರಿಂದ ಇನ್ನೂ ಎರಡು ಮಳೆ ಸುರಿಯುವ ನಿರೀಕ್ಷೆಯಿದೆ.ಅವೂ ಕೈಕೊಟ್ಟರೆ, ಮೊದಲನೇ ಬೆಳೆಗೆ ನೀರು ಹರಿಸುವುದು ಕಷ್ಟವಾಗಲಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಬಳ್ಳಾರಿ: ಶರಣರ ಜಯಂತಿಗಳು ಕೇವಲ ಆಚರಣೆಗೆ ಸೀಮಿತವಾಗಬಾರದು. ಅವರ ವ್ಯಕ್ತಿತ್ವ ಮತ್ತು ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಜೀವನವನ್ನು ರೂಪಿಸಿಕೊಳ್ಳಬೇಕು...

  • ಬಾಗಲಕೋಟೆ: ಕೂಲಿ ಕಾರ್ಮಿಕರೊಂದಿಗೆ ತಾವು ಸಹ ಕೆಲಸದಲ್ಲಿ ಸಾಥ್‌ ನೀಡುವ ಮೂಲಕ ಜಿಪಂ ಸಿಇಒ ಗಂಗೂಬಾಯಿ ಮಾನಕರ ಕಾರ್ಮಿಕರಿಗೆ ಪ್ರೇರಣೆಯಾದರು. ಜಿಪಂ ಹಾಗೂ ವಾರ್ತಾ...

  • ಹುಣಸಗಿ: ನಾಡಿನ ಕಲೆ-ಸಂಸ್ಕೃತಿ-ಸಾಹಿತ್ಯ ಉಳಿಸುವ ನಿಟ್ಟಿನಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ಶ್ರಮಿಸುತ್ತಿದ್ದು, ಇವುಗಳನ್ನು ಉಳಿಸಿ-ಬೆಳೆಸುವಲ್ಲಿ ಸಮುದಾಯದ ಸಹಕಾರ...

  • ರಾಯಚೂರು: ನಗರದ ಜಿಪಂ ಕಚೇರಿ ಆವರಣದಲ್ಲಿ ಮಹಾತ್ಮ ಗಾಂಧಿ  ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕುರಿತು ಕೂಲಿಕಾರರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಆರಂಭಿಸಿದ...

  • ಬಾಗಲಕೋಟೆ: ಮಹಾ ಶಿವರಾತ್ರಿಯಂದು ದೇಶದೆಲ್ಲೆಡೆ ಶಿವ, ಶಿವಲಿಂಗಕ್ಕೆ ವಿಶೇಷ ಪೂಜೆ ಸಲ್ಲುತ್ತದೆ. ಆದರೆ, ಇಲ್ಲೊಂದು ಸಾವಿರ ತೂಕದ ಬೃಹತ್‌ ಶಿವಲಿಂಗ ಹಲವುವರ್ಷಗಳಿಂದ...

ಹೊಸ ಸೇರ್ಪಡೆ