ವಿಕಲಚೇತನರು ಗುರಿ ಸಾಧಿಸಿ ಮಾದರಿಯಾಗಿ

ಸರ್ಕಾರದ ಯೋಜನೆ ಪಡೆದುಕೊಳ್ಳಲು ಮುಂದಾಗಿ ವಿಶ್ವ ವಿಕಲಚೇತನರ ದಿನಾಚರಣೆ

Team Udayavani, Dec 4, 2019, 4:09 PM IST

4-December-20

ಬಳ್ಳಾರಿ: ವಿಕಲಚೇತನರು ಯಾವುದೇ ರೀತಿಯಲ್ಲಿ ನೊಂದುಕೊಳ್ಳದೇ ತಾವು ಅತ್ಯಂತ ಆತ್ಮಸ್ಥೈರ್ಯದಿಂದ ತಾವಂದುಕೊಂಡ ಗುರಿಯನ್ನು ಸಾಧಿ ಸಬೇಕು ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ತೋರಿದ ವಿಕಲಚೇತನರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಪಂ ಅಧ್ಯಕ್ಷೆ ಸಿ. ಭಾರತಿ ತಿಮ್ಮಾರೆಡ್ಡಿ ಹೇಳಿದರು.

ನಗರದ ಡಾ| ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ, ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಅಂಗವಿಕಲರು ತಾವು ಅಂದುಕೊಂಡಿರುವ ಗುರಿಯನ್ನು ಛಲದಿಂದ ಸಾಧಿಸಬೇಕು. ನಿಮ್ಮ ಸಾಧನೆ ಇತರರಿಗೆ ಮಾದರಿಯಾಗಬೇಕು ಎಂದು ಹೇಳಿದ ಅವರು ಸರ್ಕಾರದ ಯೋಜನೆಗಳನ್ನು ಪಡೆದುಕೊಳ್ಳಲು ಮುಂದಾಗಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಡಿ.ಎಸ್‌. ಮಂಜುನಾಥ್‌ ಮಾತನಾಡಿ, ವಿಕಲಚೇತನರಿಗೆ ಅನುಕಂಪದ ಅವಶ್ಯಕತೆ ಇಲ್ಲ. ಅವರಿಗೆ ಸೂಕ್ತ ಅವಕಾಶ, ವೇದಿಕೆ ನಿರ್ಮಾಣ ಮಾಡಬೇಕು. ಡಿಎಂಎಫ್‌ ಯೋಜನೆಯಡಿ ವಿಕಲಚೇತನರಿಗೆ ಸ್ವಯಂ ಉದ್ಯೋಗ, ವಿವಿಧ ಕ್ಷೇತ್ರಗಳಲ್ಲಿ ಪರಿಣಿತಿ ಹೊಂದಲು ಕೌಶಲ್ಯ ತರಬೇತಿಯನ್ನು ನೀಡಲಾಗುತ್ತದೆ. ಸ್ಮಾರ್ಟ್‌ ಕ್ಲಾಸ್‌ ಎಂಬ ಯೋಜನೆಯು ಸಹ ಕಲ್ಪಿಸಲಾಗಿದೆ.

ಡಿಎಂಎಫ್‌ ಯೋಜನೆಯಡಿ ವಿಕಲಚೇತನರಿಗೆ ಸಲಕರಣೆಗಳನ್ನು ನೀಡಲಾಗುತ್ತದೆ ಎಂದ ಅವರು, ದೃಷ್ಟಿದೋಶವಿರುವ ಕೆಂಪಯ್ಯ ಎಂಬುವವರು ಇಂದು ಐಎಎಸ್‌ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಉದಾಹರಣೆ ಸಮೇತ ವಿವರಿಸಿದರು.

ಅಂಗವಿಕಲರಲ್ಲಿ ಆತ್ಮಸ್ಥೈರ್ಯದಿಂದ ತಮ್ಮ ಗುರಿಯನ್ನು ತಲುಪಬೇಕು. ಜಿಲ್ಲೆಯಲ್ಲಿನ ಅಂಗವಿಕಲತೆ ಹೊಂದಿರುವ ವಿಕಲಚೇತನರು ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದು ಗುರುತಿಸಿಕೊಂಡು ಜಿಲ್ಲೆಗೆ ಕೀರ್ತಿ ತರಬೇಕು ಎಂದರು.

ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ಜಿಲ್ಲಾ ಕಾನೂನು ಸೇವೆಗಳ ಪ್ರಾ ಧಿಕಾರದ ಸದಸ್ಯ ಕಾರ್ಯದರ್ಶಿ ಅರ್ಜುನ್‌ ಎಸ್‌. ಮಲ್ಲೂರ್‌ ಮಾತನಾಡಿ, ಸರ್ಕಾರವು ವಿಕಲಚೇತನರಿಗೆ ಹಲವು ಯೋಜನೆಗಳನ್ನು ರೂಪಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಗಣ್ಯರಿಂದ ಕ್ರೀಡಾ ವಿಜೇತರಿಗೆ ಬಹುಮಾನ ವಿತರಣೆ, ವಿಕಲಚೇತನರಿಗೆ ಸಾಧನ ಸಲಕರಣೆ ವಿತರಣೆ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ವಿಕಲಚೇತನರಿಗೆ ಸನ್ಮಾನಿಸಲಾಯಿತು. ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಲ್ಯಾಣಾಧಿ ಕಾರಿ ಕೆ. ಮಹಾಂತೇಶ್‌ ಪ್ರಾಸ್ತಾವಿಕವಾಗಿ ಮಾತನಾಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಉಷಾ. ಎಸ್‌ ಸ್ವಾಗತಿಸಿದರು. ಈ ಸಂದರ್ಭದಲ್ಲಿ ನಗರ ಶಾಸಕ ಜಿ. ಸೋಮಶೇಖರ ರೆಡ್ಡಿ, ವಕೀಲರ ಸಂಘದ ಅಧ್ಯಕ್ಷ ಎಚ್‌.ಎಂ. ಅಂಕಲಯ್ಯ ಸೇರಿದಂತೆ ಗೋಪಾಲಕೃಷ್ಣ, ಉಮಾಪತಿ ಸೇರಿದಂತೆ ಇತರೆ ಗಣ್ಯವ್ಯಕ್ತಿಗಳು ಇದ್ದರು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.