ಪ್ರವಾಹ ಇಳಿಮುಖ: ಪರಿಹಾರವೇ ಸವಾಲು

ಪರಿಹಾರ ಕಾರ್ಯ ಚುರುಕುಗೊಳಿಸಿ•ಸಮನ್ವಯತೆ ಸಾಧಿಸಿ ಸಮಸ್ಯೆ ಆಗದಂತೆ ಎಚ್ಚರ ವಹಿಸಿ

Team Udayavani, Aug 12, 2019, 12:33 PM IST

ಬಾಗಲಕೋಟೆ: ನಗರದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಆರ್‌. ರಾಮಚಂದ್ರನ್‌ ಮಾತನಾಡಿದರು.

ಬಾಗಲಕೋಟೆ: ಪ್ರವಾಹ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ನೀರಿನ ಮಟ್ಟ ಇಳಿಮುಖವಾಗುತ್ತಿರುವ ಹಿನ್ನೆ ಲೆಯಲ್ಲಿ ಪ್ರವಾಹ ನಂತರ ಪರಿಹಾರ ಕಾರ್ಯಗಳು ಅತೀ ಮಹತ್ವದ್ದಾಗಿದೆ. ಅಧಿಕಾರಿಗಳು ಸಮನ್ವಯ, ಸಹಕಾರದಿಂದ ಎಲ್ಲ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌ ತಿಳಿಸಿದರು.

ರವಿವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಎಲ್ಲ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ನಿಯಂತ್ರಣವಾಗುತ್ತಿದ್ದು, ನೀರಿನ ಮಟ್ಟ ಇಳಿಮುಖವಾಗುತ್ತಿದೆ. ಅಪಾರ ಆಸ್ತಿ-ಪಾಸ್ತಿ ಹಾನಿಗಳಾಗಿರುವುದರಿಂದ ಸಂತ್ರಸ್ತರಿಗೂ ಯಾವುದೇ ರೀತಿ ತೊಂದರೆಯಾಗದಂತೆ ಅಧಿಕಾರಿಗಳು ಉದಾರತೆ, ಪ್ರಾಮಾಣಿಕತೆ ಪ್ರದರ್ಶಿಸಿ ಪ್ರವಾಹ ನಂತರದ ಪರಿಹಾರ ಕಾರ್ಯ ಚುರುಕುಗೊಳಿಸಬೇಕು. ಸಂಬಂಧಿಸಿದ ಮೇಲಧಿಕಾರಿಗಳು ಹಾಗೂ ನೋಡಲ್ ಅಧಿಕಾರಿಗಳು ಸಹಕಾರದಿಂದ ಸಮನ್ವಯತೆ ಸಾಧಿಸಿ ಸಂತ್ರಸ್ತರಿಗೆ ಯಾವುದೇ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸುವಂತೆ ತಿಳಿಸಿದರು.

ಪರಿಹಾರ ಕಾರ್ಯಕ್ಕೆ ಅನುದಾನ ಕೊರತೆಯಿಲ್ಲ. ಜಿಲ್ಲೆಯಲ್ಲಿ ಒಟ್ಟು 203 ಪರಿಹಾರ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಸಂತ್ರಸ್ತರಿಗೆ ಹಾಗೂ ಜಾನುವಾರುಗಳಿಗೆ ಅಗತ್ಯ ಸೌಕರ್ಯ ಒದಗಿಸತಕ್ಕದ್ದು. ಪ್ರತಿ ಕೇಂದ್ರದಲ್ಲಿ ಅಗತ್ಯ ಆಹಾರಧಾನ್ಯ ಸಂಗ್ರಹಿಸಲಾಗಿದ್ದು, ಅಕ್ಕಿ, ಗೋಧಿ, ಎಣ್ಣೆ, ತರಕಾರಿ, ಗ್ಯಾಸ, ಸಿಲಿಂಡರ್‌ಗಳನ್ನು ಮುಂಚಿತವಾಗಿಯೇ ಸಂಗ್ರಹಿಸಿ ಯಾವುದೇ ಕೊರತೆಯಾಗದಂತೆ ಕ್ರಮ ವಹಿಸಬೇಕು. ಪ್ರತಿ ಕೇಂದ್ರಕ್ಕೆ ಇಬ್ಬರು ಅಧಿಕಾರಿಗಳು ಹಾಗೂ ಇಬ್ಬರು ಸಹಾಯಕ ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಅಗತ್ಯ ವಸ್ತುಗಳ ಖರೀದಿ ಹಾಗೂ ಖರ್ಚು ವೆಚ್ಚಕ್ಕಾಗಿ ತಕ್ಷಣವೇ ಪ್ರತಿ ಕೇಂದ್ರಕ್ಕೆ 10 ಸಾವಿರ ರೂ. ಬಿಡುಗಡೆ ಮಾಡಲಾಗಿದೆ ಎಂದರು.

ಜಾನುವಾರುಗಳಿಗೆ ತಾತ್ಕಾಲಿಕ ಶೆಡ್‌ ಹಾಗೂ ಮೇವಿನ ಕೊರತೆ ಯಾಗದಂತೆ ಎಚ್ಚರ ವಹಿಸಿ. ರೈತರಿಂದ ಮೇವು ಖರೀದಿಸಿ ಕ್ರಮಕೈಗೊಳ್ಳಿ. ಜಾನುವಾರುಗಳಿಗೆ ಔಷಧಿ ದಾಸ್ತಾನು ಇರಿಸಬೇಕು. ಜಮಖಂಡಿ ಉಪ ವಿಭಾಗಾಧಿಕಾರಿ ಮೊಹಮ್ಮದ ಇಕ್ರಮ್‌ ಅವರು ನಿರ್ಮಿಸಿದ ಗೋಶಾಲೆ ಶೆಡ್‌ ರಾಜ್ಯಕ್ಕೆ ಮಾದರಿಯಾಗಿದ್ದು, ಅವರ ಕಾಳಜಿಯನ್ನು ಜಿಲ್ಲಾಧಿಕಾರಿಗಳು ಶ್ಲಾಘಿಸಿದರು.

ಪರಿಹಾರ ಕೇಂದ್ರಗಳಲ್ಲಿ ಹೊರಗೆ-ಒಳಗೆ ಸ್ವಚ್ಛತೆ ಕಾಪಾಡಿ ಸ್ಥಳೀಯ ಸಂಸ್ಥೆಗಳಲ್ಲಿರುವ ಸುಮಾರು 25 ಫಾಗಿಂಗ್‌ ಮಶೀನ್‌ಗಳನ್ನು ಬಳಸಿ 3 ದಿನಕ್ಕೊಮ್ಮೆ ಕಡ್ಡಾಯವಾಗಿ ಫಾಗಿಂಗ್‌ ಮಾಡುವಂತೆ ಸೂಚಿಸಲಾಯಿತು. ಗಿಡಗಂಟಿ, ಕಸ ತೆಗೆಸಿರಿ. ಖರ್ಚುವೆಚ್ಚದ ಅಗತ್ಯ ದಾಖಲೆ ಒದಗಿಸಿ. ದುಡ್ಡಿಲ್ಲಯೆಂಬ ನೆಪ ಹೇಳಬೇಡಿರಿ. ವಾಟ್ಸ್‌ ಆ್ಯಪ್‌ನಲ್ಲಿ ಮಾಹಿತಿ ರವಾನಿಸಿ. ಯಾವುದೇ ಸಂಕೋಚ ಬೇಡವೆಂದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಪ್ರೊಬೆಷನರಿ ಐಎಎಸ್‌ ಅಧಿಕಾರಿ ಗರಿಮಾ ಪವ್ವಾರ, ಭುವನೇಶ ಪಾಟೀಲ, ಅಪರ ಜಿಲ್ಲಾಧಿಕಾರಿ ದುರ್ಗೆಶ ರುದ್ರಾಕ್ಷಿ ಇದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ