ಕೆಆರ್‌ಡಿಐಎಲ್‌ ಕಾಮಗಾರಿ ಅಪೂರ್ಣಕ್ಕೆ ಆಕ್ಷೇಪ

ತಾಪಂ ಸಾಮಾನ್ಯ ಸಭೆ ಅಧಿಕಾರಿಗಳ ಬೇಜವಾಬ್ದಾರಿ ಹೇಳಿಕೆಗೆ ತಾಪಂ ಸದಸ್ಯರ ಅಸಮಾಧಾನ

Team Udayavani, Dec 6, 2019, 3:27 PM IST

6-December-17

ಭಾಲ್ಕಿ: ಪಟ್ಟಣದಲ್ಲಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ಮೀರಾಬಾಯಿ ಜನಾರ್ದನ ಕಣಜೆ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ ನಡೆಯಿತು.

ಸಭೆ ಆರಂಭವಾಗುತ್ತಲೇ ಸದಸ್ಯರು ಕೆಆರ್‌ಡಿಐಎಲ್‌ ಇಲಾಖೆಯ ಕಾರ್ಯವೈಖರಿ ಹಾಗೂ ಅಧಿಕಾರಿಗಳ ಬೇಜವಾಬ್ದಾರಿ ಹೇಳಿಕೆ ವಿರುದ್ಧ ಅಸಮಾಧಾನ ಹೊರ ಹಾಕಿದರು. ಕೆಆರ್‌ಡಿಐಎಲ್‌ನಿಂದ ಮೇಹಕರ್‌, ಖಟಕ್‌ ಚಿಂಚೋಳಿಯಲ್ಲಿ ನಿರ್ಮಾಣಗೊಂಡ ವಸತಿ ನಿಲಯದ ಕಟ್ಟಡಗಳನ್ನು ಹಸ್ತಾಂತರ ಮಾಡದಿರುವುದು, ತಾಲೂಕಿನ ನಾನಾ ಕಡೆಗಳಲ್ಲಿ ಅಂಗನವಾಡಿ ಕಟ್ಟಡಗಳು ಅಪೂರ್ಣವಾಗಿರುವುದು, ಇನ್ನೂ ಕೆಲವು ಕಡೆಗಳಲ್ಲಿ ಕಟ್ಟಡ ಕಳಪೆಯಾಗಿ ನಿರ್ಮಾಣವಾಗುತ್ತಿರುವ ಬಗ್ಗೆ ಸದಸ್ಯರು ಪ್ರಶ್ನಿಸಿದರು.

ಈ ವೇಳೆ ಕೆಆರ್‌ಡಿಐಎಲ್‌ನ ಅಧಿಕಾರಿ ಸಮಜಾಯಿಸಿ, ಉತ್ತರ ನೀಡುವ ಪ್ರಯತ್ನ ಮಾಡಿದರು. ಇದರಿಂದ ಗರಂ ಆದ ಹಲಬರ್ಗಾ,
ಜ್ಯಾಂತಿ, ಖಟಕ್‌ ಚಿಂಚೋಳಿ, ಮದಕಟ್ಟಿ ಕ್ಷೇತ್ರ ಸೇರಿದಂತೆ ಮುಂತಾದ ಸದಸ್ಯರು ಧ್ವನಿಗೂಡಿಸಿ, ಕೆಆರ್‌ಡಿಐಎಲ್‌ನ ಅಧಿಕಾರಿ ಬೇಜವಾಬ್ದಾರಿ ಹೇಳಿಕೆ ನೀಡುತ್ತಿರುವುದು ಸರಿಯಲ್ಲ. ಪ್ರತಿಸಲ ನಡೆಯುವ ಸಭೆಗೆ ಸರಿಯಾದ ಮಾಹಿತಿ ನೀಡುವುದಿಲ್ಲ.

ಸಭೆಯಲ್ಲಿ ಹೆಚ್ಚಾಗಿ ಗೈರಾಗಿರುವುದು ಕಂಡು ಬರುತ್ತಿದೆ. ತಾಲೂಕಿನ ನಾನಾ ಕಡೆಗಳಲ್ಲಿ ಕೆಆರ್‌ ಡಿಐಎಲ್‌ನಿಂದ ನಡೆಯುತ್ತಿರುವ ಕಾಮಗಾರಿ ತೃಪ್ತಿ ತಂದಿಲ್ಲ. ಕೆಆರ್‌ಡಿಐಎಲ್‌ ಅಧಿಕಾರಿ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಖಟಕ್‌ ಚಿಂಚೋಳಿ ಕ್ಷೇತ್ರದ ಸದಸ್ಯ ವಿಜಯಕುಮಾರ ಗಡಗಂಚಿ ಮಾತನಾಡಿ, ಖಟಕ್‌ ಚಿಂಚೋಳಿ ಗ್ರಾಮದಲ್ಲಿ ವಸತಿ ನಿಲಯದ ಹೆಚ್ಚುವರಿ ಕೋಣೆಯನ್ನು ಕೆಆರ್‌ಡಿಐಎಲ್‌ನಿಂದ ನಿರ್ಮಿಸಿ ಮೂರು ವರ್ಷ ಕಳೆಯುತ್ತ ಬಂದರೂ ಇದುವರೆಗೂ ಹಸ್ತಾಂತರವಾಗದಿರುವ ಬಗ್ಗೆ ಪ್ರಶ್ನಿಸಿದರು. ಹಲಬರ್ಗಾ ಕ್ಷೇತ್ರದ ಸದಸ್ಯ ಸುಧಾಕರ ಮಾತನಾಡಿ, ಕೋಸಂ ಗ್ರಾಮದಲ್ಲಿ ಕೆಆರ್‌ ಡಿಐಎಲ್‌ನಿಂದ ನಿರ್ಮಿಸಿರುವ ಸಮುದಾಯ ಭವನ ಅರ್ಧಕ್ಕೆ ನಿಂತಿದೆ. ಹಾಲಹಿಪ್ಪರ್ಗಾದಲ್ಲಿ ಅಂಗನವಾಡಿ ಕಟ್ಟಡಗಳು ಅಪೂರ್ಣವಾಗಿವೆ ಎಂದು ದೂರಿದರು.

ಈ ಸಂದರ್ಭದಲ್ಲಿ ತಾಪಂ ಉಪಾಧ್ಯಕ್ಷ ಮಾರುತಿರಾವ್‌ ಮಗರ್‌, ಕಾರ್ಯನಿರ್ವಾಹಕ ಅಧಿಕಾರ ಬಸವರಾಜ ನಾಯ್ಕರ್‌ ಸೇರಿದಂತೆ ತಾಲೂಕು ಅನುಷ್ಠಾನ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.