ತಳದಿಂದಲೇ ತಾಂತ್ರಿಕ ಮೌಲ್ಯಗಳಿರಲಿ

ಪ್ರಾಥಮಿಕ-ಪ್ರೌಢಶಾಲೆ ಹಂತದಲ್ಲಿಯೇ ಆವಿಷ್ಕಾರಗಳ ಬಗ್ಗೆ ಮಾಹಿತಿ ಪಡೆಯುವುದು ಅಗತ್ಯ

Team Udayavani, May 16, 2019, 4:16 PM IST

16-May-29

ಭಾಲ್ಕಿ: ಬಿಕೆಐಟಿ ಕಾಲೇಜಿನಲ್ಲಿ ನಡೆದ ಟಿಬಿಆರ್‌ಪಿ ಸಮಾರೋಪದಲ್ಲಿ ಶಾಸಕ ಈಶ್ವರ ಖಂಡ್ರೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಭಾಲ್ಕಿ: ವಿದ್ಯಾರ್ಥಿಗಳು ತಳಮಟ್ಟದಲ್ಲಿಯೇ ತಾಂತ್ರಿಕ ಮೌಲ್ಯ ಅರಿತುಕೊಂಡಿರಬೇಕು ಎಂದು ಶಾಂತಿ ವರ್ಧಕ ಶಿಕ್ಷಣ ಸಂಸ್ಥೆ ಅಧ್ಯಕ್ಷರೂ ಆದ ಶಾಸಕ ಈಶ್ವರ ಖಂಡ್ರೆ ಪ್ರತಿಪಾದಿಸಿದರು.

ಪಟ್ಟಣದ ಬಿಕೆಐಟಿ ಕಾಲೇಜಿನಲ್ಲಿ ಬೆಂಗಳೂರಿನ ಝೆಬ್ರಾ ಟೆಕ್ನಾಲೋಜಿಸ್‌, ಡಯಟ್ ಬೀದರ ಮತ್ತು ಬಿಕೆಐಟಿ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಗ್ರಾಮೀಣ ಭಾಗದ 9ನೇ ತರಗತಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗಾಗಿ ಬುಧವಾರ ಆಯೋಜಿಸಲಾಗಿದ್ದ ಟಿಬಿಆರ್‌ಪಿ (ಟೆಕ್ನಾಲೊಜಿ ಬ್ಯಾರೀರ್‌ ರಿಡಕ್ಷನ್‌ ಪ್ರೋಗ್ರಾಂ) ಮೇಲ್ತರಗತಿಯಲ್ಲಿ ತಾಂತ್ರಿಕ ಶಿಕ್ಷಣದ ತಗ್ಗುವಿಕೆ ಕುರಿತ ವಿಶೇಷ ಶಿಬಿರದ ಸಮಾರೋಪದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಲ್ಲಿ ತಾಂತ್ರಿಕ ಜ್ಞಾನ ತಳಮಟ್ಟದಿಂದಲೇ ಬೆಳೆದು ಬರಬೇಕು. ಪ್ರಾಥಮಿಕ, ಪ್ರೌಢಶಾಲಾ ಹಂತದಲ್ಲಿಯೇ ವಿವಿಧ ಆವಿಷ್ಕಾರಗಳಬಗ್ಗೆ ಮಾಹಿತಿ ಪಡೆದು ಮುಂದೆ ಉತ್ತಮ ಸಂಶೋಧಕರಾಗಿ ಹೊರ ಹೊಮ್ಮಬೇಕು ಎಂದು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿದರು. ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ವೈಜ್ಞಾನಿಕವಾದ ವಿವಿಧ ಪ್ರಶ್ನೆಗಳನ್ನು ಕೇಳುವುದರೊಂದಿಗೆ ಅವರಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಯುವಲ್ಲಿ ಪ್ರೇರೆಪಣೆ ನೀಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿಕೆಐಟಿ ಕಾಲೇಜಿನ ಪ್ರಾಂಶುಪಾಲ ಡಾ| ನಾಗಶೆಟ್ಟಿ ಬಿರಾದಾರ, ಹೊಸ, ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳುವಲ್ಲಿ ವಿದ್ಯಾರ್ಥಿಗಳಿಗೆ ಸಹಕಾರವಾಗುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ವಿದ್ಯಾರ್ಥಿಗಳು ಇದರ ಲಾಭ ಪಡೆದು ಮುಂದೆ ಬರಬೇಕು ಎಂದು ಹೇಳಿದರು.

ಉಪ ಪ್ರಾಂಶುಪಾಲ ಪ್ರೊ| ಪಿ.ಎನ್‌. ದಿವಾಕರ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಾತ್ಮಾಗಾಂಧಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಜಯರಾಜ ದಾಬಶೆಟ್ಟಿ, ಎಂಆರ್‌ಎಪಿಯೂ ಕಾಲೇಜಿನ ಪ್ರಾಂಶುಪಾಲ ಪ್ರೊ| ಅಶೋಕ ರಾಜೋಳೆ ವಿಶೇಷ ಉಪನ್ಯಾಸ ಮಂಡಿಸಿದರು. ಪ್ರೊ| ಸಂಗೀತಾ ಸ್ವಾಮಿ, ಡಾ| ಅಶೋಕ ಕೋಟೆ, ಡಾ| ಬಿ. ಸೂರ್ಯಕಾಂತ, ಜಿಪ್ಸನ್‌ ಕೋಟೆ ಇದ್ದರು.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.